Year Ender 2023: ಈ ವರ್ಷ ವಿಶ್ವದಲ್ಲಿ ಸಂಭವಿಸಿದ 5 ಭೀಕರ ಭೂಕಂಪಗಳು
ಫೆಬ್ರವರಿ 6ರಂದು ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಭೂಕಂಪವು ಅತ್ಯಂತ ಭಯಾನಕ ಭೂಕಂಪಗಳಲ್ಲಿ ಒಂದಾಗಿದೆ. ಈ ದುರ್ಘಟನೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ನೇಪಾಳದಲ್ಲಿ ವರ್ಷದ ಮೊದಲ ತಿಂಗಳಲ್ಲಿ ಅಂದರೆ ಜನವರಿ 24ರಂದು ಭೂಕಂಪ ಸಂಭವಿಸಿದೆ. ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡದಲ್ಲೂ ಈ ಭೂಕಂಪನದ ಅನುಭವವಾಗಿದೆ. ಆದರೆ ಈ ಭೂಕಂಪದಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಹೆಚ್ಚಿನ ಆಸ್ತಿ-ಪಾಸ್ತಿಗೆ ಹಾನಿಯಾಗಿಲ್ಲ.
ಮಾರ್ಚ್ 21ರಂದು ಅಫ್ಘಾನಿಸ್ತಾನದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ರಾಜಸ್ಥಾನದಲ್ಲೂ ಈ ಕಂಪನದ ಅನುಭವವಾಗಿದೆ. ಈ ದುರಂತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.
ಅಕ್ಟೋಬರ್ 3ರಂದು ನೇಪಾಳದಲ್ಲಿ 4.6 ಮತ್ತು 6.2 ತೀವ್ರತೆಯ 2 ಭೂಕಂಪಗಳು ಸಂಭವಿಸಿದವು. ದೆಹಲಿ-ಎನ್‌ಸಿಆರ್‌ನಲ್ಲಿ ಈ ಕಂಪನಗಳು ಸಂಭವಿಸಿದವು. ಈ ಭೂಕಂಪದಲ್ಲಿ 17 ಮಂದಿ ಗಾಯಗೊಂಡಿದ್ದು, ಹಲವು ಮನೆಗಳು ಮತ್ತು ರಸ್ತೆಗಳು ಹಾನಿಗೊಳಗಾಗಿದ್ದವು.
ನವೆಂಬರ್ 3ರಂದು ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತು. ನಂತರ ಹಲವಾರು ಭೂಕಂಪದ ಘಟನೆಗಳು ಸಂಭವಿಸಿದವು. ಈ ಭೂಕಂಪದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಭೂಕಂಪದಲ್ಲಿ ಹಲವು ಕಟ್ಟಡಗಳು ಕುಸಿದು ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿತ್ತು.