ನವದೆಹಲಿ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಶ್ರೀರಾಮನ ಪ್ರತಿಮೆಯನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಅವರು ಇದ್ದಕ್ಕಿದ್ದಂತೆ ಬೆಳಕಿಗೆ ಬಂದಿದ್ದಾರೆ. ಇದಕ್ಕೂ ಮುನ್ನ ಅರುಣ್ ಯೋಗಿರಾಜ್ ಅವರು ದೇಶದ ಹಲವು ಪ್ರಮುಖ ಸ್ಥಳಗಳು ಮತ್ತು ದೇವಾಲಯಗಳಿಗೆ ಪ್ರತಿಮೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ಕೂಡ ಯೋಗಿರಾಜ್ ಭೇಟಿ ಮಾಡಿದ್ದು, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೈಸೂರಿ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಇಂಡಿಯಾ ಗೇಟ್‌ನಲ್ಲಿರುವ ಅಮರ್ ಜವಾನ್ ಜ್ಯೋತಿಯ ಹಿಂಭಾಗದ ಭವ್ಯವಾದ ಮೇಲಾವರಣದಲ್ಲಿ ಸ್ಥಾಪಿಸಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿಯವರ ಕೊಡುಗೆಯನ್ನು ಗೌರವಿಸಲು ಅವರ 125ನೇ ಜನ್ಮ ವಾರ್ಷಿಕೋತ್ಸವದ ಮೊದಲು ಈ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಪ್ರಧಾನಿ ಮೋದಿ ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದ್ದರು.
ಹಿಂದೂಗಳ ನಂಬಿಕೆಯ ಕೇಂದ್ರವಾದ ಕೇದಾರನಾಥ ಧಾಮದಲ್ಲಿ ಸ್ಥಾಪಿಸಲಾದ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ್ದಾರೆ. ಈ ವಿಗ್ರಹವು ಸುಮಾರು 30 ಟನ್ ತೂಕವಿದೆ. ಈ ಮೂರ್ತಿಯನ್ನು ಕಪ್ಪು ಗ್ರಾನೈಟ್ ಕಲ್ಲಿನಿಂದ ಮಾಡಲಾಗಿದೆ.
ಮೈಸೂರು ಜಿಲ್ಲೆಯ ಚುಂಚನಕಟ್ಟೆಗೆ ಅರುಣ್ ಯೋಗಿರಾಜ್ 21 ಅಡಿ ಎತ್ತರದ ಹನುಮಾನ್ ಪ್ರತಿಮೆ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 15 ಅಡಿ ಎತ್ತರದ ಪ್ರತಿಮೆ, ಮೈಸೂರಿನಲ್ಲಿ ಸ್ವಾಮಿ ರಾಮಕೃಷ್ಣ ಪರಮಹಂಸರ ಶ್ವೇತ ಅಮೃತಶಿಲಾ ಪ್ರತಿಮೆ, 6 ಅಡಿ ಎತ್ತರದ ಏಕಶಿಲಾ ನಂದಿ ಪ್ರತಿಮೆ, 6 ಅಡಿ ಎತ್ತರದ ಬನಶಂಕರಿ ದೇವಿಯ ಪ್ರತಿಮೆ ಮತ್ತು ಮೈಸೂರಿನ ರಾಜ ಜಯಚಾಮರಾಜೇಂದ್ರ ಒಡೆಯರ್ ಅವರ 14.5 ಅಡಿ ಎತ್ತರದ ಬಿಳಿ ಅಮೃತಶಿಲಾ ಪ್ರತಿಮೆ ಸೇರಿದಂತೆ ಹಲವು ಪ್ರತಿಮೆಗಳನ್ನು ರಚಿಸಿದ್ದಾರೆ.
ಮೈಸೂರಿನ ಪ್ರಸಿದ್ಧ ಶಿಲ್ಪಿಗಳ ಕುಟುಂಬದ 5ನೇ ತಲೆಮಾರಿನವರು ಅರುಣ್ ಯೋಗಿರಾಜ್. ಇವರು ತಯಾರಿಸಿದ ಶಿಲ್ಪಗಳನ್ನು ದೇಶದ ವಿವಿಧ ರಾಜ್ಯಗಳಲ್ಲಿ ಸ್ಥಾಪಿಸಲಾಗಿದೆ.
ಅರುಣ್ ಯೋಗಿರಾಜ್ ಅವರ ರಕ್ತದಲ್ಲಿ ಕಸುಬುದಾರಿಕೆ ಇದ್ದರೂ, ಅವರು ತಮ್ಮ ವೃತ್ತಿಜೀವನವನ್ನು ಉದ್ಯೋಗದಿಂದ ಪ್ರಾರಂಭಿಸಿದರು. ಎಂಬಿಎ ಮಾಡಿದ ಬಳಿಕ ಎಂಎನ್‍ಸಿಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು.