Harsha Sai case : ಯೂಟ್ಯೂಬರ್ ಹರ್ಷ ಸಾಯಿ ಹಣ ಪಡೆದು ವಂಚಿಸಿದ್ದಾರೆ ಎಂಬ ಬಿಗ್ ಬಾಸ್ ಸ್ಪರ್ಧಿಯ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪ್ರಕರಣದ ಸುದ್ದಿ ತಿಳಿದ ತಕ್ಷಣ ಹರ್ಷಸಾಯಿ ಮತ್ತು ಅವರ ಕುಟುಂಬಸ್ಥರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಬಡವರಿಗೆ ಹಣ ಹಂಚುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ನೆಟ್ಟಿಗರ ಮನಸೆಳೆದಿರುವ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ಯುವತಿಯೊಬ್ಬಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಆದರೆ ಹರ್ಷಾ ಯುವತಿಯ ಆರೋಪಗಳನ್ನು ನಿರಾಕರಿಸಿದ್ದಾರೆ. ಆ ಯುವತಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೆಲ್ಲವೂ ಆಧಾರ ರಹಿತ ಆರೋಪವನ್ನು ತಳ್ಳಿ ಹಾಕಿದ್ದಾರೆ. ಅಲ್ಲದೆ, ಶೀಘ್ರದಲ್ಲೇ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.
ಬಿಗ್ ಬಾಸ್ ಖ್ಯಾತಿಯ ಮಿತ್ರ ಶರ್ಮಾ ಅವರು ಹರ್ಷಸಾಯಿ ಮದುವೆಯಾಗುವುದಾಗಿ ನಂಬಿಸಿ 2 ಕೋಟಿ ರೂ. ವಂಚಿಸಿದ್ದಾರೆ ಎಂದು ರಂಗಾರೆಡ್ಡಿ ಜಿಲ್ಲೆಯ ರಾಜೇಂದ್ರನಗರದಲ್ಲಿರುವ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹರ್ಷಾ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಹರ್ಷಸಾಯಿ ತಂದೆ ರಾಧಾಕೃಷ್ಣ ವಿರುದ್ಧ ನರಸಿಂಗ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಷಯ ತಿಳಿದ ಹರ್ಷಸಾಯಿ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರಿ ಮೂಲಕ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
'ಹಣಕ್ಕಾಗಿ ಸುಳ್ಳು ಆರೋಪ. ನಾನು ಏನು ಅಂತ ನಿಮಗೆ ಗೊತ್ತಿದೆ. ಶೀಘ್ರದಲ್ಲೇ ಸತ್ಯ ಹೊರಬರಲಿದೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ನನ್ನ ವಿರುದ್ಧದ ಆರೋಪಗಳಿಗೆ ನನ್ನ ವಕೀಲರು ಉತ್ತರಿಸುತ್ತಾರೆ ಎಂದು ಹರ್ಷಾ ಹೇಳಿಕೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಕೀಲರು ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಇನ್ನು ಪ್ರಕರಣದ ಸುದ್ದಿ ತಿಳಿದ ತಕ್ಷಣ ಹರ್ಷಸಾಯಿ ಮತ್ತು ಅವರ ಕುಟುಂಬಸ್ಥರು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಪರಾರಿಯಾಗಿರುವ ಹರ್ಷಸಾಯಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಜೊತೆಗೆ ಅವರ ಕುಟುಂಬಸ್ಥರು ತಮ್ಮ ಫೋನ್ ಸ್ವಿಚ್ ಆಫ್ ಮಾಡಿದ್ದಾರೆ ಎನ್ನಲಾಗಿದೆ.
ಸಂತ್ರಸ್ತೆಯ ದೂರಿನಲ್ಲಿ ಪ್ರಮುಖ ಅಂಶಗಳು ಬೆಳಕಿಗೆ ಬಂದಿವೆ. ‘ಮೆಗಾ’ ಚಿತ್ರದ ಕಾಪಿ ರೈಟ್ಸ್‌ಗಾಗಿ ಹರ್ಷ ಹೀಗೆ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಅಲ್ಲದೆ, ಸಂತ್ರಸ್ತೆ ಮೆಗಾ ಚಿತ್ರದ ನಿರ್ಮಾಪಕರು. ಇಷ್ಟೇ ಅಲ್ಲ, ಹರ್ಷ ಮಾದಕ ವಸ್ತು ನೀಡಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.