Yuva Nidhi Scheme: ‘ಯುವನಿಧಿ’ ಪಡೆಯುವುದು ಹೇಗೆ..? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಕರ್ನಾಟಕದಲ್ಲಿ ವಾಸಿಸುವ ಕನ್ನಡಿಗ ಅಭ್ಯರ್ಥಿಗಳು 2023ರ ವರ್ಷದಲ್ಲಿ ತೇರ್ಗಡೆಯಾಗಿದ್ದು, ಉತೀರ್ಣರಾಗಿ 180 ದಿನಗಳು ಕಳೆದರೂ ಉದ್ಯೋಗ ಸಿಗದವರು ಮಾತ್ರ ‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ದಿನದಿಂದ ಉದ್ಯೋಗ ಸಿಗುವವರೆಗೆ ಮಾತ್ರ ಅಥವಾ 2 ವರ್ಷಗಳ ಗರಿಷ್ಠ ಅವಧಿವರೆಗೆ ಮಾತ್ರ ‘ಯುವನಿಧಿ’ ಭತ್ಯೆ ಸಿಗಲಿದೆ.
‘ಸೇವಾಸಿಂಧು’ ಪೋರ್ಟಲ್ ಮೂಲಕವೇ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಭತ್ಯಯನ್ನು ಡಿಬಿಟಿ ಮೂಲಕ ನೀಡಲಾಗುವುದು.
ಅಭ್ಯರ್ಥಿಗಳು ನಿರುದ್ಯೋಗ ಸ್ಥಿತಿ ಬಗ್ಗೆ ನಿಜವಾದ ಮಾಹಿತಿ ನೀಡಬೇಕು. ಉದ್ಯೋಗ ಪಡೆದ ನಂತರ ತಪ್ಪು ಮಾಹಿತಿ ನೀಡಿ ಸರ್ಕಾರಕ್ಕೆ ವಂಚಿಸಲು ಪ್ರಯತ್ನಿಸಿದರೆ ದಂಡ ವಿಧಿಸಲಾಗುವುದು.
ಅಭ್ಯರ್ಥಿಗಳು ಅರ್ಜಿ ಹಾಕುವ ವೇಳೆ ತಾವು ಉತೀರ್ಣರಾದ ದಿನದಿಂದ 6 ತಿಂಗಳವರೆಗಿನ ತಮ್ಮ ಬ್ಯಾಂಕ್ ಖಾತೆಯ ವಹಿವಾಟು ಪ್ರತಿ ನೀಡಬೇಕು. ಪದವಿ, ಡಿಪ್ಲೊಮಾ ಬಳಿಕ ಉನ್ನತ ಶಿಕ್ಷಣ ಮುಂದುವರಿಸಿದರೆ ಈ ಭತ್ಯೆಗೆ ಅರ್ಹರಾಗಿರುವುದಿಲ್ಲ.