ಯುವರಾಜ್ ಸಿಂಗ್ ಅವರನ್ನು ಬಂಧಿಸಿದ್ದ ಹಂಸಿ ಠಾಣಾ ಪೊಲೀಸರು ವಿಚಾರಣೆ ನಡೆಸಿದ್ದರು, ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಸಿಕ್ಸರ್ ಕಿಂಗ್ ಖ್ಯಾತಿಯ ಯುವರಾಜ್ ಸಿಂಗ್ (Yuvraj Singh) ಅವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಕಳೆದ ವರ್ಷ ಇನ್‌ಸ್ಟಾಗ್ರಾಮ್ ಚಾಟ್‌ನಲ್ಲಿ ಯುವರಾಜ್ ಸಿಂಗ್ ಅವರು ಪರಿಶಿಷ್ಟ ಜಾತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹಂಸಿ ನಗರ ಪೊಲೀಸ್ ಠಾಣೆಯಲ್ಲಿ ಯುವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಯುವರಾಜ್ ಸಿಂಗ್ ಅವರನ್ನು ಬಂಧಿಸಿದ್ದ ಹಂಸಿ ಠಾಣಾ ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಹೈಕೋರ್ಟ್ ಆದೇಶದ ಮೇರೆಗೆ ಅವರನ್ನು ಔಪಚಾರಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ತಮ್ಮ ಜೀವನದಲ್ಲಿ ಯುವರಾಜ್ ಸಿಂಗ್ ಅನೇಕ ಬಾರಿ ವಿವಾದಕ್ಕೆ ತುತ್ತಾಗಿ ಸುದ್ದಿಯಲ್ಲಿದ್ದರು. ಅವರ ದೊಡ್ಡ ವಿವಾದ(Biggest Controversies)ಗಳ ಬಗೆಗಿನ ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ನಿಷೇಧಿತ ಮಾದಕವಸ್ತುಗಳನ್ನು ಸೇವಿಸುತ್ತಾರೆ ಎಂದು ಅವರ ಮಾಜಿ ಅತ್ತಿಗೆ ಆಕಾಂಕ್ಷಾ ಶರ್ಮಾ ಆರೋಪ ಮಾಡಿದ್ದರು. ಬಿಗ್ ಬಾಸ್ ಹಿಂದಿ ಆವೃತ್ತಿಯ 10ರ ಸ್ಪರ್ಧಿಯಾಗಿದ್ದ ಆಕಾಂಕ್ಷಾ ಅವರು ಬಿಗ್ ಬಾಸ್ ನಿಂದ ಹೊರಬಂದ ಬಳಿಕ ಮಾಧ್ಯಮಗಳ ಬಳಿ ಹೇಳಿಕೆ ನೀಡಿದ್ದರು. ಯುವಿ ಕುಟುಂಬದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದ ಆಕಾಂಕ್ಷಾ ಯುವಿ ಓರ್ವ ಮಾದಕ ವ್ಯಸನಿ. ಅವರು ಗಾಂಜಾ ಸೇವಿಸಿದ್ದಾರೆ ಎಂದು ಹೇಳಿಕೊಂಡಿದ್ದರು.
2017ರಲ್ಲಿ ಪಾಕಿಸ್ತಾನ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತ್ತು. ಈ ವೇಳೆ ಮಾಜಿ ಕೇಂದ್ರ ಸಚಿವ ರಾಮದಾಸ್ ಅಠವಾಲೆ ಅವರು ಯುವರಾಜ್ ಸಿಂಗ್ ಮತ್ತು ವಿರಾಟ್ ಕೊಹ್ಲಿಯಂತಹ ಟೀಮ್ ಇಂಡಿಯಾ ಸದಸ್ಯರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.
ಎಂ.ಎಸ್.ಧೋನಿ ಟೀಂ ಇಂಡಿಯಾ ನಾಯಕನಾಗಿದ್ದಾಗ ಬೇಕಂತಲೇ ಯುವರಾಜ್ ಸಿಂಗ್ರನ್ನು ತಂಡದಿಂದ ಕೈಬಿಡುತ್ತಿದ್ದರು. ಯುವರಾಜ್ ಕ್ರಿಕೆಟ್ ಕರಿಯರ್ ಮುಗಿಸಿದ್ದೇ ಧೋನಿ ಅಂತೆಲ್ಲಾ ಯುವಿ ತಂದೆ ಯೋಗರಾಜ್ ಆರೋಪ ಮಾಡಿದ್ದರು. ಈ ಬಗ್ಗೆ ಸ್ವತಃ ಯುವರಾಜ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಬಂದು ಸ್ಪಷ್ಟೀಕರಣ ನೀಡಿದ್ದರು.
ಯುಜ್ವೇಂದ್ರ ಚಹಾಲ್ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಭಾನುವಾರ (ಅ.17) ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಈ ಘಟನೆಯು ಜೂನ್ 2020ರಂದು ನಡೆದಿತ್ತು. ಯುವರಾಜ್ ಅವರು ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರೊಂದಿಗಿನ ಇನ್‌ಸ್ಟಾಗ್ರಾಮ್ ಲೈವ್ ಸೆಶನ್‌ನಲ್ಲಿ ಚಹಾಲ್ ವಿರುದ್ಧ ತಮಾಷೆಯಾಗಿ ಟೀಕೆ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ಎನ್‌ಜಿಒಗೆ ಬೆಂಬಲ ನೀಡಿದ್ದಕ್ಕಾಗಿ ಯುವರಾಜ್ ಸಿಂಗ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಲಾಗಿತ್ತು. ಅಫ್ರಿದಿ ಅವರ ಎನ್‌ಜಿಒಗೆ ಯುವರಾಜ್ ಬೆಂಬಲ ನೀಡಿದ ಕೆಲವು ವಾರಗಳ ನಂತರ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಿ ಟೀಕಿಸಿದ್ದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಬಳಿಕ ‘ಪಾಕಿಸ್ತಾನದ ಸಹವರ್ತಿಗೆ ಎಂದಿಗೂ ಸಹಾಯ ಮಾಡುವುದಿಲ್ಲ’ ಎಂದು ಯುವರಾಜ್ ಭರವಸೆ ನೀಡಿದ್ದರು.