Yuvraj Singh: ಸಿಕ್ಸರ್ ಕಿಂಗ್ ಯುವರಾಜ್ ಸಿಂಗ್ ಅತಿದೊಡ್ಡ ವಿವಾದಗಳ ಬಗ್ಗೆ ತಿಳಿದುಕೊಳ್ಳಿ
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸಮನ್ ಯುವರಾಜ್ ಸಿಂಗ್ ನಿಷೇಧಿತ ಮಾದಕವಸ್ತುಗಳನ್ನು ಸೇವಿಸುತ್ತಾರೆ ಎಂದು ಅವರ ಮಾಜಿ ಅತ್ತಿಗೆ ಆಕಾಂಕ್ಷಾ ಶರ್ಮಾ ಆರೋಪ ಮಾಡಿದ್ದರು. ಬಿಗ್ ಬಾಸ್ ಹಿಂದಿ ಆವೃತ್ತಿಯ 10ರ ಸ್ಪರ್ಧಿಯಾಗಿದ್ದ ಆಕಾಂಕ್ಷಾ ಅವರು ಬಿಗ್ ಬಾಸ್ ನಿಂದ ಹೊರಬಂದ ಬಳಿಕ ಮಾಧ್ಯಮಗಳ ಬಳಿ ಹೇಳಿಕೆ ನೀಡಿದ್ದರು. ಯುವಿ ಕುಟುಂಬದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದ ಆಕಾಂಕ್ಷಾ ಯುವಿ ಓರ್ವ ಮಾದಕ ವ್ಯಸನಿ. ಅವರು ಗಾಂಜಾ ಸೇವಿಸಿದ್ದಾರೆ ಎಂದು ಹೇಳಿಕೊಂಡಿದ್ದರು.
2017ರಲ್ಲಿ ಪಾಕಿಸ್ತಾನ ವಿರುದ್ಧ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿತ್ತು. ಈ ವೇಳೆ ಮಾಜಿ ಕೇಂದ್ರ ಸಚಿವ ರಾಮದಾಸ್ ಅಠವಾಲೆ ಅವರು ಯುವರಾಜ್ ಸಿಂಗ್ ಮತ್ತು ವಿರಾಟ್ ಕೊಹ್ಲಿಯಂತಹ ಟೀಮ್ ಇಂಡಿಯಾ ಸದಸ್ಯರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು.
ಎಂ.ಎಸ್.ಧೋನಿ ಟೀಂ ಇಂಡಿಯಾ ನಾಯಕನಾಗಿದ್ದಾಗ ಬೇಕಂತಲೇ ಯುವರಾಜ್ ಸಿಂಗ್ರನ್ನು ತಂಡದಿಂದ ಕೈಬಿಡುತ್ತಿದ್ದರು. ಯುವರಾಜ್ ಕ್ರಿಕೆಟ್ ಕರಿಯರ್ ಮುಗಿಸಿದ್ದೇ ಧೋನಿ ಅಂತೆಲ್ಲಾ ಯುವಿ ತಂದೆ ಯೋಗರಾಜ್ ಆರೋಪ ಮಾಡಿದ್ದರು. ಈ ಬಗ್ಗೆ ಸ್ವತಃ ಯುವರಾಜ್ ಸಿಂಗ್ ಸೋಷಿಯಲ್ ಮೀಡಿಯಾದಲ್ಲಿ ಬಂದು ಸ್ಪಷ್ಟೀಕರಣ ನೀಡಿದ್ದರು.
ಯುಜ್ವೇಂದ್ರ ಚಹಾಲ್ ವಿರುದ್ಧ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ಯುವರಾಜ್ ಸಿಂಗ್ ಅವರನ್ನು ಭಾನುವಾರ (ಅ.17) ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಈ ಘಟನೆಯು ಜೂನ್ 2020ರಂದು ನಡೆದಿತ್ತು. ಯುವರಾಜ್ ಅವರು ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರೊಂದಿಗಿನ ಇನ್‌ಸ್ಟಾಗ್ರಾಮ್ ಲೈವ್ ಸೆಶನ್‌ನಲ್ಲಿ ಚಹಾಲ್ ವಿರುದ್ಧ ತಮಾಷೆಯಾಗಿ ಟೀಕೆ ಮಾಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ಎನ್‌ಜಿಒಗೆ ಬೆಂಬಲ ನೀಡಿದ್ದಕ್ಕಾಗಿ ಯುವರಾಜ್ ಸಿಂಗ್ ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡಲಾಗಿತ್ತು. ಅಫ್ರಿದಿ ಅವರ ಎನ್‌ಜಿಒಗೆ ಯುವರಾಜ್ ಬೆಂಬಲ ನೀಡಿದ ಕೆಲವು ವಾರಗಳ ನಂತರ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಿ ಟೀಕಿಸಿದ್ದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಬಳಿಕ ‘ಪಾಕಿಸ್ತಾನದ ಸಹವರ್ತಿಗೆ ಎಂದಿಗೂ ಸಹಾಯ ಮಾಡುವುದಿಲ್ಲ’ ಎಂದು ಯುವರಾಜ್ ಭರವಸೆ ನೀಡಿದ್ದರು.