Budhavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ, ಅಷ್ಟಮಿ ತಿಥಿಯ ಈ ದಿನ ಬುಧವಾರ ಆರ್ದ್ರಾ ನಕ್ಷತ್ರ ವರೀಯಾನ್ ಯೋಗ ದ್ವಾದಶ ರಾಶಿಗಳ ಫಲಾಫಲ ಏನು? 


COMMERCIAL BREAK
SCROLL TO CONTINUE READING

ಮೇಷ ರಾಶಿಯವರ ಭವಿಷ್ಯ (Aries Horoscope):  
ಲಾಭದ ಯೋಜನೆಗಳತ್ತ ಗಮನ ಹರಿಸಿದರೆ ಇಂದು ಉತ್ತಮವಾದ ದಿನ. ವೃತ್ತಿ ಬದುಕಿನಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ನಿಮ್ಮ ಕೆಲಸಕ್ಕೆ ಸಂಬಂಧಿಸಿದಂತೆ ಹಿರಿಯರ ಸಲಹೆಗಳನ್ನು ಪಾಲಿಸುವುದರಿಂದ ಶುಭ ಫಲವನ್ನು ಕಾಣಬಹುದು. 


ವೃಷಭ ರಾಶಿಯವರ ಭವಿಷ್ಯ (Taurus Horoscope):  
ಇಂದು ನಿಮಗೆ ಹೆಚ್ಚು ಶ್ರಮದಾಯಕವಾದ ದಿನ. ಈ ದಿನ ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ನೀವು ಪಡೆಯುತ್ತೀರಿ. ಉದ್ಯೋಗಸ್ಥರಿಗೆ ಬಡ್ತಿ ಸಂಭವವಿದೆ. ಸ್ವಂತ ವ್ಯವಹಾರ ಮಾಡುವವರಿಗೆ ಬಂಪರ್ ಲಾಭ ಲಭಿಸಲಿದೆ. 


ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಹಣಕಾಸಿನ ದೃಷ್ಟಿಯಿಂದ ಇಂದು ಉತ್ತಮವಾದ ದಿನ. ಕೌಟುಂಬಿಕ ವ್ಯವಹಾರಗಳಲ್ಲಿ ಮೂಡಿದ್ದ ಬಿರುಕುಗಳು ಸರಿ ಹೋಗಲಿವೆ. ಕೆಲಸದಲ್ಲಿ ಉತ್ತಮ ಫಲಿತಾಂಶಕ್ಕಾಗಿ ನಿಮ್ಮ ಮಾತು ಮತ್ತು ನಡವಳಿಕೆಯನ್ನು ನಿಯಂತ್ರಿಸುವುದು ಒಳ್ಳೆಯದು. 


ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಈ ರಾಶಿಯ ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಇಂದು ಉತ್ತಮ ದಿನವಾಗಲಿದೆ. ಯಾವುದೇ ದೊಡ್ಡ ವ್ಯವಹಾರವನ್ನು ಇಂದು ಅಂತಿಮಗೊಳಿಸಬಹುದು. ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಲು ಯೋಜಿಸಬಹುದು. 


ಇದನ್ನೂ ಓದಿ- ಮುಂದಿನ 18 ದಿನಗಳ ಕಾಲ ಈ ರಾಶಿಯವರಿಗೆ ಶುಕ್ರ ದೆಸೆ: ಮುಟ್ಟಿದ್ದೆಲ್ಲಾ ಚಿನ್ನ


ಸಿಂಹ ರಾಶಿಯವರ ಭವಿಷ್ಯ (Leo Horoscope):  
ಈ ರಾಶಿಯವರು ಇಂದು ಸ್ವಲ್ಪ ಯೋಚಿಸಿ ಕೆಲಸ ಮಾಡುವುದರಿಂದ ಆಗಬಹುದಾದ ಅನಾಹುತವನ್ನು ತಪ್ಪಿಸಬಹುದು. ಹಣಕಾಸಿನ ಸಂಬಂಧಿತ ವಿಷಯಗಳು ಬಗೆಹರಿಯುವುವು. ಹೊಸ ವಾಹನ ಖರೀದಿ ಯೋಗವೂ ಇದೆ. ಕುಟುಂಬದಿಂದ ಶುಭ ಸುದ್ದಿ ನಿರೀಕ್ಷಿಸಬಹುದು. 


ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಈ ರಾಶಿಯವರಿಗೆ ಇಂದು ಪ್ರೀತಿ ಜೀವನದಲ್ಲಿ ಸಂಘರ್ಷದ ದಿನ. ಯಾವುದೇ ಪ್ರತೀಕೂಲ ಪರಿಸ್ಥಿತಿಯಲ್ಲಿ ನೀವು ತಾಳ್ಮೆಯನ್ನು ಕಾಪಾಡಿಕೊಳ್ಳುವುದು ಅಗತ್ಯ. ಇಲ್ಲವೇ ಪರಿಸ್ಥಿತಿ ಕೈಮೀರಿ ಹೋಗಬಹುದು. ಸರ್ಕಾರಿ ಯೋಜನೆಗಳು ಇಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. 


ತುಲಾ ರಾಶಿಯವರ ಭವಿಷ್ಯ (Libra Horoscope): 
ನೀವು ಇಷ್ಟು ದಿನಗಳಿಂದ ಎದುರಿಸುತ್ತಿದ್ದ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದಾದ ದಿನ. ಅದೃಷ್ಟದ ಬೆಂಬಲದಿಂದ ಸರ್ಕಾರಿ ಕೆಲಸಗ್ಲೌ ಕೈಗೂಡುವುವುದು. ಮನೆಯಲ್ಲಿ ಸಂತೋಷದ ವಾತಾವಾರಣ ಇರಲಿದ್ದು ಮನಸ್ಸಿಗೆ ನೆಮ್ಮದಿ ದೊರೆಯಲಿದೆ. 


ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ವ್ಯವಹಾರದಲ್ಲಿ ನಿಮ್ಮ ಯೋಜನೆಗಳು ಕಾರ್ಯರೂಪಕ್ಕೆ ಬರುತ್ತವೆ ಮತ್ತು ಯಾವುದೇ ಸರ್ಕಾರಿ ಕೆಲಸದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಹಿಂದಿನ ಸಾಲಗಳನ್ನು ಮರುಪಾವತಿ ಮಾಡಲು ಅವಕಾಶ ದೊರೆಯಲಿದೆ. ಹಳೆಯ ತಪ್ಪಿನಿಂದ ಪಾಠ ಕಲಿತು ಮುನ್ನಡೆಯಿರಿ. 


ಇದನ್ನೂ ಓದಿ- ಷಡಾಷ್ಟಕ ಯೋಗ: ಶನಿ ವಕ್ರದೃಷ್ಟಿ- ಈ ರಾಶಿಯವರಿಗೆ ಭಾರೀ ನಷ್ಟ, ಎಚ್ಚರಿಕೆ ಅಗತ್ಯ


ಧನು ರಾಶಿಯವರ ಭವಿಷ್ಯ (Sagittarius Horoscope):  
ಈ ರಾಶಿಯವರಿಗೆ ಇಂದು ಮಿಶ್ರ ಫಲಗಳಿಂದ ಕೂಡಿದ ದಿನ. ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ಸ್ನೇಹಿತರ ಸಹಕಾರದಿಂದ ವ್ಯವಹಾರದಲ್ಲಿ ಏಳ್ಗೆಯನ್ನು ಕಾಣುವಿರಿ. ಆದಾಗ್ಯೂ, ಇಂದು ನಿಮ್ಮ ಮಕ್ಕಳ ಆರೋಗ್ಯವು ಕಾಳಜಿಯ  ವಿಷಯವಾಗಿದೆ. 


ಮಕರ ರಾಶಿಯವರ ಭವಿಷ್ಯ (Capricorn Horoscope):  
ಈ ರಾಶಿಯವರಿಗೆ ಇಂದು ಸಂಪತ್ತು ಹೆಚ್ಚಾಗಲಿದೆ. ಹಣಕ್ಕೆ ಸಂಬಂಧಿಸಿದ ಯಾವುದೇ ವಿವಾದಗಳು ಬಗೆಹರಿಯಲಿವೆ. ಸಂಜೆ ವೇಳೆಗೆ ಮನೆಗೆ ಅತಿಥಿಗಳ ಆಗಮನದಿಂದ ಸಂತೋಷ. ನೀವು ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡರೆ, ಅದರಿಂದ ನಷ್ಟ ಸಾಧ್ಯತೆ ಇದೆ. 


ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಈ ರಾಶಿಯ ಜನರಿಗೆ ಇಂದು ಲಾಭದಾಯಕ ದಿನವಾಗಿದೆ. ನಿಮ್ಮ ಕೆಲಸದಲ್ಲಿ ಕುಟುಂಬದ ಸದಸ್ಯರು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ವಿದ್ಯಾರ್ಥಿಗಳು ಹೊಸ ಕೋರ್ಸ್‌ಗೆ ಪ್ರವೇಶ ಪಡೆಯಬಹುದು. ಆದಾಗ್ಯೂ, ನಿಮ್ಮ ಜೀವನಶೈಲಿಯನ್ನು ಸುಧಾರಿಸಲು ಪ್ರಯತ್ನಿಸುತ್ತಿರಬೇಕು.


ಮೀನ ರಾಶಿಯವರ ಭವಿಷ್ಯ (Pisces Horoscope): 
ಈ ರಾಶಿಯವರಿಗೆ ಇಂದು ಶುಭ ದಿನ. ವೃತ್ತಿ ಸಂಬಂಧಿತ ಕೆಲಸಗಳಿಗಾಗಿ ಪ್ರವಾಸ ಕೈಗೊಳ್ಳಬೇಕಾಗಬಹುದು. ಪ್ರವಾಸವು ಲಾಭದಾಯಕವಾಗಿರುತ್ತದೆ. ಸಂಜೆ ವೇಳೆಗೆ ಸಂಗಾತಿಯಿಂದ ಶುಭ ಸುದ್ದಿಯನ್ನು ಕೇಳಬಹುದು. ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳು ಲಾಭದಾಯಕವಾಗಿರುತ್ತವೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.