Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಚತುರ್ಥಿ ತಿಥಿ, ಗುರುವಾರದ ಈ ದಿನ ಆಶ್ಲೇಷಾ ನಕ್ಷತ್ರ, ವೈಧೃತಿ ಯೋಗ, ಕೌಲವ ಕರಣ. ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ. 


COMMERCIAL BREAK
SCROLL TO CONTINUE READING

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ಅನುಕೂಲಕರ ದಿನವನ್ನು ಆನಂದಿಸುವಿರಿ. ಕೆಲಸದ ಸ್ಥಳದಲ್ಲಿ ನೀವು ಕಷ್ಟಪಟ್ಟು ಮಾಡುವ ಕೆಲಸಗಳಿಗೆ ಮನ್ನಣೆ ದೊರೆಯಲಿದೆ. ನಿಮ್ಮ ಸಾಧನೆಗಳಿಗೆ ಕುಟುಂಬಸ್ಥರು ಹೆಮ್ಮೆ ಪಡುತ್ತಾರೆ. ಮಕ್ಕಳಿಗಾಗಿ ಹೊಸ ವಿವಾಹ ಸಂಬಂಧ ಬರಬಹುದು. 


ವೃಷಭ ರಾಶಿಯವರ ಭವಿಷ್ಯ (Taurus Horoscope):  
ಈ ದಿನ ನೀವು ಹಣಕ್ಕೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳನ್ನು ಬಗೆಹರಿಸುವಿರಿ. ಮನೆಗೆ ವಿಶೇಷ ಬಂಧುಗಳ ಆಗಮನವು ಸಂತಸದ ವಾತಾವರಣವನ್ನು ನಿರ್ಮಿಸಲಿದೆ. ಕಠಿಣ ಪರಿಶ್ರಮದ ಮೇಲೆ ಸಂಪೂರ್ಣ ಗಮನ ಕೇಂದ್ರೀಕರಿಸುವುದರಿಂದ ಉತ್ತಮ ಫಲ. 


ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ನಿಮಗೆ ಗುರು ರಾಘವೇಂದ್ರರ ಆಶೀರ್ವಾದದಿಂದ ವ್ಯಾಪಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಲಾಭವನ್ನು ಗಳಿಸುವಿರಿ. ಮಕ್ಕಳ ವೃತ್ತಿ ಜೀವನಕ್ಕಾಗಿ ವಾಸ ಸ್ಥಳವನ್ನು ಬದಲಾಯಿಸಬೇಕಾಗಬಹುದು. ಗುತ್ತಿಗೆದಾರರಿಗೆ ಉತ್ತಮ ಲಾಭದಾಯಕ ದಿನ. 


ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಇಂದು ನಿಮಗೆ ಅನುಕೂಲಕರ ದಿನವಾಗಿದೆ. ವ್ಯಾಪಾರವನ್ನು ವಿಸ್ತರಿಸಲು ಸಮಯ ತುಂಬಾ ಚೆನ್ನಾಗಿದೆ. ವೃತ್ತಿಪರರಿಗೆ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ದೊರೆಯಲಿದೆ. ಮನೆಗೆ ಹೊಸ ಅತಿಥಿಗಳ ಆಗಮನವು ನಿಮ್ಮ ಉತ್ಸಾಹವನ್ನೂ ಹೆಚ್ಚಿಸಲಿದೆ. 


ಇದನ್ನೂ ಓದಿ- ಜನವರಿಯಲ್ಲಿ ಪವರ್ಫುಲ್ ಯೋಗಗಳ ನಿರ್ಮಾಣ: 3 ರಾಶಿಯವರಿಗೆ ಹೆಗಲೇರುವುದು ಅದೃಷ್ಟ, ಬಂಪರ್ ಲಾಭ!


ಸಿಂಹ ರಾಶಿಯವರ ಭವಿಷ್ಯ (Leo Horoscope):  
ಇಂದು ನಿಮಗೆ ಉತ್ತಮ ದಿನ. ಹೊಸ ವ್ಯವಹಾರದಲ್ಲಿ ಹೂಡಿ,ಎ ಮಾಡಲು ಕ್ಷೇತ್ರ ತಜ್ಞರ ಸಲಹೆ ಪಡೆಯುವುದು ಮುಖ್ಯವಾಗಿರುತ್ತದೆ. ಕುಟುಂಬದಲ್ಲಿ ಮೂಡಿರುವ ಬಿರುಕುಗಳು ಕೊನೆಗೊಳ್ಳುವುದರಿಂದ ಸಂತಸ. ಮನೆಯಲ್ಲಿ ಕೆಲಸ ಮಾಡುವವರಿಗೆ ಶುಭ ಸುದ್ದಿ. 


ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಈ ರಾಶಿಯ ವ್ಯಾಪಾರಸ್ಥರಿಗೆ ಇಂದು ದಿನ ಅತ್ಯುತ್ತಮವಾಗಿದೆ. ರಾಜಕೀಯ ಜೀವನದಲ್ಲಿರುವವರಿಗೆ ಸ್ಥಾನಮಾನದಲ್ಲಿ ಪ್ರಗತಿ ಕಂಡು ಬರಲಿದೆ. ಆರೋಗ್ಯವೂ ಉತ್ತಮವಾಗಿರಲಿದೆ. ಸಮಾಜದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮುಕ್ತವಾಗಿ ಮಾತನಾಡುವ ಅವಕಾಶ ಪಡೆಯುವಿರಿ. 


ತುಲಾ ರಾಶಿಯವರ ಭವಿಷ್ಯ (Libra Horoscope): 
ಇಂದು ನಿಮಗೆ ತುಂಬಾ ಸಂತೋಷದ ದಿನವಾಗಿರುತ್ತದೆ. ವೃತ್ತಿ ಜೀವನದಲ್ಲಿ ಹೊಸ ಆಯಾಮವನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗುತ್ತೀರಿ. ಕುಟುಂಬದಲ್ಲಿ ಮೂಡಿರುವ ಭಿನ್ನಾಭಿಪ್ರಾಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ನಡೆಸಿ. ವ್ಯಾಪಾರದಲ್ಲಿ ಲಾಭಕ್ಕಾಗಿ ಶ್ರಮಿಸಬೇಕಾಗುತ್ತದೆ. 


ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಇಂದು ನಿಮಗೆ ಅದೃಷ್ಟದ ದಿನವಾಗಿದೆ. ವೃತ್ತಿ ಜೀವನದಲ್ಲಿ ಕೆಲವು ಸಕಾರಾತ್ಮಕಿಯ ಬದಲಾವಣೆಗಳನ್ನು ಕಾಣಬಹುದು. ಬಹಳ ದಿನಗಳಿಂದ ಪ್ರಯತ್ನಿಸುತ್ತಿರುವ ಕೆಲಸಗಳಲ್ಲಿ ಯಶಸ್ಸು. ಇದರಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗುತ್ತದೆ. ಹೊಸ ವಾಹನ ಖರೀದಿಸುವ ಸಾಧ್ಯತೆ ಇದೆ. 


ಇದನ್ನೂ ಓದಿ- 2025ರಲ್ಲಿ ಈ ರಾಶಿಯವರಿಗೆ ಗುರು ಬಲ: ಕೂಡಿ ಬರಲಿದೆ ಕಂಕಣ ಭಾಗ್ಯ, ಸುಖ ಸಂಪತ್ತಿಗೆ ಕೊರತೆಯೇ ಇಲ್ಲ..! 


ಧನು ರಾಶಿಯವರ ಭವಿಷ್ಯ (Sagittarius Horoscope):  
ಇಂದು ನಿಮ್ಮ ಜೀವನದಲ್ಲಿ ಹೊಸ ಬದಲಾವಣೆಗಳನ್ನು ಕಾಣಬಹುದು. ಮನೆಯಲ್ಲಿ ಮಕ್ಕಳಿಂದ ಸಂತಸದ ವಾತಾವರಣ ಇರುತ್ತದೆ. ಮನೆಯ ಅಲಂಕಾರಿಕ ವಸ್ತುಗಳಿಗಾಗಿ ಹೆಚ್ಚಿನ ಹಣವನ್ನು ವ್ಯಯಿಸುವಿರಿ. ವ್ಯಾಪಾರದಲ್ಲಿ ಉತ್ತಮ ಲಾಭಕ್ಕಾಗಿ ಹೊಸ ತಂತ್ರಗಳನ್ನು ಅಳವಡಿಸಿಕೊಳ್ಳಿ. 


ಮಕರ ರಾಶಿಯವರ ಭವಿಷ್ಯ (Capricorn Horoscope):  
ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನ. ಹಣಕಾಸಿನ ಹರಿವು ಉತ್ತಮಗೊಳ್ಳಲಿದೆ. ಪಾಲುದಾರಿಕೆ ವ್ಯವಹಾರಗಳಲ್ಲಿ ಬಂಪರ್ ಲಾಭವನ್ನು ನಿರೀಕ್ಷಿಸಬಹುದು. ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ. ಕಚೇರಿಯಲ್ಲಿ ಹೊಸ ಉಪಕ್ರಮ ತೆಗೆದುಕೊಳ್ಳುವುದು ಉತ್ತಮವಾಗಿದೆ. 


ಕುಂಭ ರಾಶಿಯವರ ಭವಿಷ್ಯ (Aquarius Horoscope):  
ನಿಂದು ನಿಮಗೆ ಶುಭ ಸುದ್ದಿಗಳು ಕೇಳಿಬರಬಹುದು. ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುವುದು. ಇದರಿಂದಾಗಿ ನಿಮ್ಮ ಸೃಜನಾತ್ಮಕ ಕೆಲಸಗಳು ಇತರರನ್ನು ನಿಮ್ಮತ್ತ ಆಕರ್ಷಿಸಲಿವೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಗುಡ್ ನ್ಯೂಸ್ ಒಂದು ಬರಬಹುದು. 


ಮೀನ ರಾಶಿಯವರ ಭವಿಷ್ಯ (Pisces Horoscope): 
ಇಂದು ನಿಮ್ಮ ಸಂಪತ್ತು ಹೆಚ್ಚಾಗಲಿದೆ. ಸ್ನೇಹಿತರೊಂದಿಗೆ ಹೊರಗಡೆ ಹೋಗುವ ಯೋಜನೆ ರದ್ದಾಗಲಿದೆ. ಆದರೆ, ಸಂಜೆ ಕುಟುಂಬಸ್ಥರೊಂದಿಗೆ ಉತ್ತಮ ಸಮಯವನ್ನು ಆನಂದಿಸುವಿರಿ. ದಾಂಪತ್ಯ ಜೀವನದಲ್ಲಿ ಮಾಧುರ್ಯತೆ ಉಳಿಯಲಿದೆ. 


ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.