Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ಉತ್ತಾಯನ, ಸೌರ ಶಿಶಿರ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಸಪ್ತಮಿ ತಿಥಿಯ ಈ ದಿನ ಸೋಮವಾರ, ಉ.ಭಾ. ನಕ್ಷತ್ರ, ಪರಿಘ ಯೋಗ, ಗರಜ ಕರಣ. ಇಂದಿನ ಎಲ್ಲಾ ರಾಶಿಗಳ ಭವಿಷ್ಯ ಹೇಗಿದೆ ತಿಳಿಯಿರಿ. 


COMMERCIAL BREAK
SCROLL TO CONTINUE READING

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ಅತಿಯಾದ ಖರ್ಚು ನಿಮ್ಮನ್ನು ಬಾಧಿಸಬಹುದು. ಹೂಡಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳುವುದು ಹೆಚ್ಚು ಪ್ರಯೋಜನಕಾರಿ. ವೃತ್ತಿ ವ್ಯವಹಾರದಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಬಾಕಿ ಉಳಿದಿರುವ ಕೆಲಸಗಳನ್ನು ಮುಗಿಸಲು ಕಾರ್ಯಪ್ರವೃತ್ತರಾಗಿ. 


ವೃಷಭ ರಾಶಿಯವರ ಭವಿಷ್ಯ (Taurus Horoscope):  
ಇಂದು ಹೊಸ ಹೊಸ ಹಣಕಾಸಿನ ಅವಕಾಶಗಳನ್ನು ಪಡೆಯಬಹುದು. ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿಯ ಅವಕಾಶಗಳನ್ನು ಪಡೆಯಬಹುದು. ಸ್ಥಿರ ಲಾಭವನ್ನು ಪಡೆಯುವಿರಿ. ನಿಮ್ಮ ಬಹುಮುಖ ಪ್ರತಿಭೆಯನ್ನು ಬೆಳೆಸಲು ಸೂಕ್ತ ವೇದಿಕೆಯನ್ನು ಕಂಡು ಕೊಳ್ಳುವಿರಿ. 


ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಹಿರಿಯರ ಆಶೀರ್ವಾದ ಪಡೆದು ಮುಂದುವರೆಯುವುದರಿಂದ ಜೀವನದಲ್ಲಿ ಸಕಾರಾತ್ಮಕತೆ ಹೆಚ್ಚುತ್ತದೆ. ವೃತ್ತಿ ಬದುಕಿನಲ್ಲಿ ಸಹಕಾರ ಮನೋಭಾವವು ನಿಮ್ಮನ್ನು ಉನ್ನತ ಮಟ್ಟಕ್ಕೆ ಏರಿಸಲಿದೆ. ಹಣಕಾಸಿನ ವಿಚಾರಗಳಲ್ಲಿ ಶುಭ ಸುದ್ದಿಯನ್ನು ಪಡೆಯುವಿರಿ. 


ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಅದೃಷ್ಟದ ಸಂಪೂರ್ಣ ಬೆಂಬಲ ನಿಮ್ಮೊಂದಿಗಿದ್ದು ಹಿಡಿದ ಕೆಲಸಗಳಲ್ಲಿ ನಿರೀಕ್ಷಿತ ಫಲಿತಾಂಶಗಳನ್ನು ಪಡೆಯುವಿರಿ. ಆಧ್ಯಾತ್ಮಿಕ ಬೆಳವಣಿಗೆಗೆ ಹೆಚ್ಚಾಗುತ್ತದೆ. ವೈಯಕ್ತಿಕ ಸಂಬಂಧಗಳು ಸುಧಾರಿಸಲಿವೆ. ಸಾರ್ವಜನಿಕ ಕ್ಷೇತ್ರದಲ್ಲಿರುವವರಿಗೆ ಉತ್ತಮ ದಿನ. 


ಇದನ್ನೂ ಓದಿ- ವೈಕುಂಠ ಏಕಾದಶಿಯಂದೇ ತೆರೆಯಲಿದೆ ಈ ರಾಶಿಯವರ ಅದೃಷ್ಟದ ಬಾಗಿಲು, ವಿಷ್ಣು ಕೃಪೆಯಿಂದ ಸಂಪತ್ತಿಗೆ ಕೊರತೆಯೇ ಇಲ್ಲದ ಜೀವನ ಇವರದು..! 


ಸಿಂಹ ರಾಶಿಯವರ ಭವಿಷ್ಯ (Leo Horoscope):  
ಇದು ನೀವು ಜಾಗರೂಕತೆಯಿಂದ ಮುನ್ನಡೆಯಬೇಕಾಗಿರುವ ಸಮಯವಾಗಿದೆ. ವಿವೇಕಯುತವಾಗಿ ಉತ್ತಮ ನಡವಳಿಕೆಯನ್ನು ಕಾಪಾಗಿಕೊಳ್ಳಿ. ಪ್ರೀತಿಪಾತ್ರರೊಡನೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಿ. ವ್ಯಾಪಾರ-ವಹಿವಾಟಿನಲ್ಲಿ ತಾಳ್ಮೆಯಿಂದ ಇರಿ. 


ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಇಂದು ನಿಮ್ಮ ಕುಟುಂಬಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರವನ್ನು ಕೈಗೊಳ್ಳಬೇಕಾಗಬಹುದು. ಕೈಗಾರಿಕಾ ಕ್ಷೇತ್ರದಲ್ಲಿ ಕೆಲಸ ಮಾಡುವವರು ನಿಮ್ಮ ಯೋಜನೆಯಂತೆ ಕೆಲಸಗಳನ್ನು ಪೂರ್ಣಗೊಳಿಸುವುದರಿಂದ ಬಂಪರ್ ಆದಾಯ ಗಳಿಸಬಹುದು. 


ತುಲಾ ರಾಶಿಯವರ ಭವಿಷ್ಯ (Libra Horoscope): 
ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲಿತಾಂಶಗಳನ್ನು ಪಡೆಯುವಿರಿ. ವೃತ್ತಿಪರ ಪರಿಸ್ಥಿತಿಗಳು ಮಿಶ್ರ ಫಲಗಳನ್ನು ನೀಡಬಹುದು. ವೈಯಕ್ತಿಕ ಸಾಧನೆಗಳತ್ತ  ಗಮನಹರಿಸಿ ಮುಂದುವರೆಯುವುದು ಶುಭ. ಸೇವಾ ವಲಯದಲ್ಲಿರುವವರಿಗೆ ಬಡ್ತಿ ಸಂಭವವಿದೆ. 


ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ನಿಮ್ಮ ಸ್ನೇಹಿತರು, ಸಹೋದ್ಯೋಗಿಗಳೊಂದಿಗೆ ಉತ್ಸಾಹಭರಿತ ಜೀವನವನ್ನು ಆನಂದಿಸುವಿರಿ. ಕುಟುಂಬದೊಂದಿಗೆ ಉತ್ತಮ ಗುಣಮಟ್ಟದ ಸಮಯವನ್ನು ಕಳೆಯುವಿರಿ. ವೈಯಕ್ತಿಕ ಕಾರ್ಯಕ್ಷಮತೆ ಸುಧಾರಿಸುತ್ತದೆ. ಸಮಯ ನಿರ್ವಹಣೆಗೆ ಗಮನ ನೀಡಿ. 


ಇದನ್ನೂ ಓದಿ- 2025ರಲ್ಲಿ ಶನಿಯ ಅಸ್ತ; ಈ 3 ರಾಶಿಯವರಿಗೆ ಅದೃಷ್ಟದ ಬೆಂಬಲದ ಜೊತೆಗೆ ಎಲ್ಲಾ ಸಮಸ್ಯೆಗಳಿಂದ ಮುಕ್ತಿ!!


ಧನು ರಾಶಿಯವರ ಭವಿಷ್ಯ (Sagittarius Horoscope):  
ಇತರರ ಭಾವನೆಗಳನ್ನೂ ನಿರ್ಲಕ್ಷಿಸಬೇಡಿ. ಭಾವನಾತ್ಮಕವಾಗಿ ಪ್ರೀತಿಪಾತ್ರರೊಂದಿಗೆ ಅಜಾಗರೂಕತೆಯಿಂದ ವರ್ತಿಸಬೇಡಿ. ಇದು ನಿಮ್ಮ ಸಂಬಂಧದಲ್ಲಿ ಬಿರುಕುಂಟುಮಾಡಬಹುದು. ವೃತ್ತಿಪರ ಕ್ಷೇತ್ರದಲ್ಲಿ ಪ್ರಮುಖ ಕಾರ್ಯಗಳು ವೇಗವನ್ನು ಪಡೆಯಲಿವೆ. 


ಮಕರ ರಾಶಿಯವರ ಭವಿಷ್ಯ (Capricorn Horoscope):  
ವಿವಿಧ ವಿಷಯಗಳಲ್ಲಿ ಉಪಕ್ರಮವನ್ನು ತೆಗೆದುಕೊಳ್ಳುವುದು ಹೆಚ್ಚಿನ ಒತ್ತಡವನ್ನು ಉಂಟುಮಾಡಬಹುದು. ಧೈರ್ಯದಿಂದ ಮಾಡುವ ಕೆಲಸಗಳಲ್ಲಿ ಉತ್ತಮ ಸಾಧನೆ ಗೈಯುವಿರಿ. ಕೆಲಸದಲ್ಲಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದರಿಂದ ಶುಭ. 


ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಇಂದು ನಿಮ್ಮ ಪ್ರೀತಿಪಾತ್ರರೊಂದಿಗೆ ಸಂತೋಷವನ್ನು ಹಂಚಿಕೊಳ್ಳುವಿರಿ. ಕೌಟುಂಬಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಮಾಡಿದ ಪ್ರಯತ್ನಗಳಿಗೆ ಸೂಕ್ತ ಪ್ರತಿಫಲವನ್ನು ಕಾಣುವಿರಿ. ಹಣಕಾಸಿನ ಹರಿವು ಹೆಚ್ಚಾಗಲಿದೆ. 


ಮೀನ ರಾಶಿಯವರ ಭವಿಷ್ಯ (Pisces Horoscope): 
ನಿಮ್ಮ ಬಹುಮುಖ ಪ್ರತಿಭೆಗೆ ಮೆಚ್ಚುಗೆ ದೊರೆಯಲಿದೆ. ಕುಟುಂಬದಲ್ಲಿ ಸಂತೋಷದ ಕ್ಷಣಗಳು ಸೃಷ್ಟಿಯಾಗಲಿವೆ. ಸೃಜನಾತ್ಮಕ ಕಾರ್ಯಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳುವುದರಿಂದ ಶುಭವಾಗಲಿದೆ. ನಿಮ್ಮ ಪ್ರೀತಿ ಪಾತ್ರರಿಗೆ ಉಡುಗೊರೆ ನೀಡುವುದರಿಂದ ಮನಸ್ಸಿಗೆ ಸಂತೋಷ. 


ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.