ದಿನಭವಿಷ್ಯ 02-08-2024: ಕೊನೆಯ ಆಷಾಢ ಶುಕ್ರವಾರದಂದು ಆರ್ದ್ರಾ ನಕ್ಷತ್ರ ಹರ್ಷಣ ಯೋಗ, ಯಾವ ರಾಶಿಯವರಿಗೆ ಏನು ಫಲ!

Today Horoscope 02nd August 2024: ಕೊನೆಯ ಆಷಾಢ ಶುಕ್ರವಾರ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Aug 2, 2024, 08:09 AM IST
  • ಕರ್ಕಾಟಕ ರಾಶಿಯವರು ನಿಮ್ಮ ನಿರೀಕ್ಷೆಯಂತೆ ವ್ಯವಹಾರದಲ್ಲಿ ಉತ್ತಮ ಗಳಿಕೆಯನ್ನು ಕಾಣುವಿರಿ.
  • ಸಿಂಹ ರಾಶಿಯವರಿಗೆ ಹಣಕಾಸಿನ ಮೂಲಗಳು ಹೆಚ್ಚಾಗಲಿದ್ದು ವಾಹನ ಖರೀದಿ ಯೋಗವು ಇದೆ.
  • ಕುಂಭ ರಾಶಿಯವರೇ ನೀವಿಂದು ಕುಟುಂಬಸ್ಥರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲು ಯೋಜಿಸಬಹುದು.
ದಿನಭವಿಷ್ಯ 02-08-2024:  ಕೊನೆಯ ಆಷಾಢ ಶುಕ್ರವಾರದಂದು ಆರ್ದ್ರಾ ನಕ್ಷತ್ರ ಹರ್ಷಣ ಯೋಗ, ಯಾವ ರಾಶಿಯವರಿಗೆ ಏನು ಫಲ! title=

Shukravara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ತ್ರಯೋದಶಿ, ಕೊನೆಯ ಆಷಾಢ ಶುಕ್ರವಾರದ ಈ ದಿನ ಆರ್ದ್ರಾ ನಕ್ಷತ್ರ ಹರ್ಷಣ ಯೋಗ ಇರಲಿದ್ದು, ಇಂದು ಯಾವ ರಾಶಿಯವರಿಗೆ ಎಂದು ಫಲ ತಿಳಿಯಿರಿ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ಈ ದಿನ ಹೂಡಿಕೆಯಿಂದ ಉತ್ತಮ ಲಾಭವನ್ನು ಕ್ಗಳಿಸುವಿರಿ. ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ವೃತ್ತಿ ಬದುಕಿನಲ್ಲಿ ನಿಮ್ಮ ಪ್ರಾಮಾಣಿಕತೆ ಎಲ್ಲರ ಗಮನ ಸೆಳೆಯಲಿದೆ. ನಿಮ್ಮ ದಿನಚರಿಯಲ್ಲಿ ಯೋಗ, ವ್ಯಾಯಾಮ ಸೇರಿಸುವುದರಿಂದ ಶುಭ ಫಲ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ನಿಮ್ಮ ಕೆಲಸಗಳನ್ನು ಬೇರೆಯವರಿಂದ ಮಾಡಿಸುವುದು ಅಷ್ಟು ಒಳ್ಳೆಯ ಆಲೋಚನೆಯಲ್ಲ. ಇದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಆಸ್ತಿ ಖರೀದಿ ಬಗ್ಗೆ ಯೋಚಿಸುತ್ತಿರುವವರಿಗೆ ಶುಭ ಸಮಯ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಆದಾಯದ ಹೊಸ ಮೂಲಗಳು ಸೃಷ್ಟಿಯಾಗಬಹುದು. ಪೂರ್ವಜನಾ ಆಸ್ತಿಗೆ ಸಂಬಂಧಿಸಿದ ವ್ಯಾಜ್ಯಗಳು ಕೊನೆಗೊಳ್ಳಲಿವೆ. ಗೃಹಾಲಂಕಾರಕ್ಕಾಗಿ ಖರ್ಚು ಮಾಡಬಹುದು. ಆದಾಗ್ಯೂ, ನಿಮ್ಮ ಬಜೆಟ್ ಬಗ್ಗೆ ನಿಗಾವಹಿಸಿ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ನಿಮ್ಮ ನಿರೀಕ್ಷೆಯಂತೆ ವ್ಯವಹಾರದಲ್ಲಿ ಉತ್ತಮ ಗಳಿಕೆಯನ್ನು ಕಾಣುವಿರಿ. ಉಡೊಗ ರಂಗದಲ್ಲಿ ಹೊಸ ಕೌಶಲ್ಯಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ಸಾಮಾಜಿಕ ಬದುಕಿನಲ್ಲಿ ಕೀರ್ತಿ ಹೆಚ್ಚಾಗಲಿದೆ. 

ಇದನ್ನೂ ಓದಿ- ಆಗಸ್ಟ್‌ನಲ್ಲಿ ಶುಕ್ರ ಗೋಚಾರದಿಂದ ದರಿದ್ರ ಯೋಗ ನಿರ್ಮಾಣ: ಹೆಜ್ಜೆ ಹೆಜ್ಜೆಗೂ ಎಚ್ಚರಿಕೆಯಿಂದ ಇರಬೇಕು ಈ 3 ರಾಶಿಯ ಜನ

ಸಿಂಹ ರಾಶಿಯವರ ಭವಿಷ್ಯ (Leo Horoscope):  
ದೈಹಿಕ ಶಕ್ತಿಯೊಂದಿಗೆ ಭಾವನಾತ್ಮಕ ಸಾಮರಸ್ಯವನ್ನು ಕಾಪಾಡಿಕೊಳ್ಳಿ. ಹಣಕಾಸಿನ ಮೂಲಗಳು ಹೆಚ್ಚಾಗಲಿದ್ದು ವಾಹನ ಖರೀದಿ ಯೋಗವು ಇದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ಕೃಷ್ಟತೆಯು ನಿಮ್ಮ ಪ್ರೇರಣೆಯನ್ನು ಹೆಚ್ಚಿಸುತ್ತದೆ.

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಆರೋಗ್ಯದ ವಿಷಯದಲ್ಲಿ ಕಾಳಜಿಯು  ನಿಮ್ಮ ಜೀವನಶೈಲಿಯಲ್ಲಿ ಅಗತ್ಯ ಬದಲಾವಣೆಗಳನ್ನು ತರಲು ಸಹಾಯಕವಾಗಿದೆ. ವೃತ್ತಿಪರರು ಇಂದು ಧನಾತ್ಮಕ ಫಲಗಳನ್ನು ನಿರೀಕ್ಷಿಸಬಹುದು. 

ತುಲಾ ರಾಶಿಯವರ ಭವಿಷ್ಯ (Libra Horoscope): 
ನೀವು ಇಂದು ಮೃದು ಸ್ವಭಾವದ ವ್ಯಕ್ತಿಯೊಬ್ಬರನ್ನು ಭೇಟಿಯಾಗಬಹುದು. ಕೆಲಸದಲ್ಲಿ ನಿಮ್ಮ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯ ಬೇಕಾಗಬಹುದು. ತಾಳ್ಮೆಯಿಂದ ಮುಂದುವರೆಯುವುದು ಪ್ರಯೋಜನಕಾರಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ನಿಮ್ಮ ಅತ್ಯುತ್ತಮ ಕೊಡುಗೆ ನೀಡಲು ನೀವಿಂದು ಹೆಚ್ಚು ಶ್ರಮವಹಿಸುವಿರಿ. ವೈಯಕ್ತಿಕ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ಸಮಯವು ನಿಮ್ಮ ಪರವಾಗಿದೆ. ಅನಿರೀಕ್ಷಿತ ಮೂಲದಿಂದ ಬಂಪರ್ ಧನ-ಲಾಭವನ್ನು ಪಡೆಯಬಹುದು. 

ಇದನ್ನೂ ಓದಿ- 50 ವರ್ಷಗಳ ಬಳಿಕ ಈ ರಾಶಿಗೆ ಕೂಡಿಬಂತು ರಾಜಯೋಗ: ಎಲ್ಲದರಲ್ಲೂ ಯಶಸ್ಸು ಸಿಗುವ ಕಾಲ! ಸಂಪತ್ತು, ಕೀರ್ತಿ, ಪ್ರತಿಷ್ಠೆ ಒಟ್ಟಾಗಿ ಲಭಿಸುವುದು ಖಚಿತ

ಧನು ರಾಶಿಯವರ ಭವಿಷ್ಯ (Sagittarius Horoscope):  
ಉದ್ಯೋಗ ರಂಗದಲ್ಲಿ ಕೆಲಸಗಳು ವೇಗವಾಗಿ ಪೂರ್ಣಗೊಳ್ಳಲಿವೆ. ನಿಮ್ಮ ನಿರಂತರ ಪರಿಶ್ರಮಕ್ಕೆ ಇಂದು ಉತ್ತಮ ಕೊಡುಗೆಯನ್ನು ಪಡೆಯುವ ನಿರೀಕ್ಷೆಯಿದೆ. ಗೃಹಿಣಿಯರು ಮನೆಯಲ್ಲಿ ಆಹ್ಲಾದಕರ ವಾತಾವರಣವನ್ನು ಅನುಭವಿಸುವಿರಿ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ನೀವು ಮನೆಯಲ್ಲಿ ದಕ್ಷತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ದೈನಂದಿನ ಬದುಕಿನಲ್ಲಿ ವ್ಯಾಯಾಮವನ್ನು ರೂಢಿಸಿಕೊಳ್ಳುವುದು ಹೆಚ್ಚು ಲಾಭದಾಯಕವಾಗಲಿದೆ. ಹಣಕಾಸಿನ ಸಮಸ್ಯೆಗಳು ಬಗೆಹರಿದು, ಮುಖದಲ್ಲಿ ಮಂದಹಾಸ ಮೂಡಲಿದೆ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ನೀವಿಂದು ಕುಟುಂಬಸ್ಥರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲು ಯೋಜಿಸಬಹುದು. ಮಕ್ಕಳಿಂದ ಶುಭ ಸುದ್ದಿ ನಿರೀಕ್ಷೆಯಿದೆ. ಆಸ್ತಿ ಖರೀದಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಇಂದು ದಿನ ಉತ್ತಮವಾಗಿದೆ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ನೀವು ಹಿಂದೆ ಮಾಡಿದ ಹೂಡಿಕೆಗಳಿಂದ ಲಾಭವನ್ನು ನಿರೀಕ್ಷಿಸಬಹುದು. ಆದಾಗ್ಯೂ, ಇಂದು ಪ್ರಮುಖ ವಿಚಾರಗಳಿಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಬೇಕಾಗಬಹುದು. ಈ ಸಂದರ್ಭದಲ್ಲಿ ಭಾವನಾತ್ಮಕವಾಗಿರುವುದನ್ನು ತಪ್ಪಿಸಿದರೆ ಒಳಿತು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News