Shukravara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ತ್ರಯೋದಶಿ, ಕೊನೆಯ ಆಷಾಢ ಶುಕ್ರವಾರದ ಈ ದಿನ ಆರ್ದ್ರಾ ನಕ್ಷತ್ರ ಹರ್ಷಣ ಯೋಗ ಇರಲಿದ್ದು, ಇಂದು ಯಾವ ರಾಶಿಯವರಿಗೆ ಎಂದು ಫಲ ತಿಳಿಯಿರಿ. 


COMMERCIAL BREAK
SCROLL TO CONTINUE READING

ಮೇಷ ರಾಶಿಯವರ ಭವಿಷ್ಯ (Aries Horoscope):  
ಈ ದಿನ ಹೂಡಿಕೆಯಿಂದ ಉತ್ತಮ ಲಾಭವನ್ನು ಕ್ಗಳಿಸುವಿರಿ. ಶೈಕ್ಷಣಿಕ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ವೃತ್ತಿ ಬದುಕಿನಲ್ಲಿ ನಿಮ್ಮ ಪ್ರಾಮಾಣಿಕತೆ ಎಲ್ಲರ ಗಮನ ಸೆಳೆಯಲಿದೆ. ನಿಮ್ಮ ದಿನಚರಿಯಲ್ಲಿ ಯೋಗ, ವ್ಯಾಯಾಮ ಸೇರಿಸುವುದರಿಂದ ಶುಭ ಫಲ. 


ವೃಷಭ ರಾಶಿಯವರ ಭವಿಷ್ಯ (Taurus Horoscope):  
ನಿಮ್ಮ ಕೆಲಸಗಳನ್ನು ಬೇರೆಯವರಿಂದ ಮಾಡಿಸುವುದು ಅಷ್ಟು ಒಳ್ಳೆಯ ಆಲೋಚನೆಯಲ್ಲ. ಇದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು. ಆಸ್ತಿ ಖರೀದಿ ಬಗ್ಗೆ ಯೋಚಿಸುತ್ತಿರುವವರಿಗೆ ಶುಭ ಸಮಯ. 


ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಆದಾಯದ ಹೊಸ ಮೂಲಗಳು ಸೃಷ್ಟಿಯಾಗಬಹುದು. ಪೂರ್ವಜನಾ ಆಸ್ತಿಗೆ ಸಂಬಂಧಿಸಿದ ವ್ಯಾಜ್ಯಗಳು ಕೊನೆಗೊಳ್ಳಲಿವೆ. ಗೃಹಾಲಂಕಾರಕ್ಕಾಗಿ ಖರ್ಚು ಮಾಡಬಹುದು. ಆದಾಗ್ಯೂ, ನಿಮ್ಮ ಬಜೆಟ್ ಬಗ್ಗೆ ನಿಗಾವಹಿಸಿ. 


ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ನಿಮ್ಮ ನಿರೀಕ್ಷೆಯಂತೆ ವ್ಯವಹಾರದಲ್ಲಿ ಉತ್ತಮ ಗಳಿಕೆಯನ್ನು ಕಾಣುವಿರಿ. ಉಡೊಗ ರಂಗದಲ್ಲಿ ಹೊಸ ಕೌಶಲ್ಯಗಳು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಬಹುದು. ಸಾಮಾಜಿಕ ಬದುಕಿನಲ್ಲಿ ಕೀರ್ತಿ ಹೆಚ್ಚಾಗಲಿದೆ. 


ಇದನ್ನೂ ಓದಿ- ಆಗಸ್ಟ್‌ನಲ್ಲಿ ಶುಕ್ರ ಗೋಚಾರದಿಂದ ದರಿದ್ರ ಯೋಗ ನಿರ್ಮಾಣ: ಹೆಜ್ಜೆ ಹೆಜ್ಜೆಗೂ ಎಚ್ಚರಿಕೆಯಿಂದ ಇರಬೇಕು ಈ 3 ರಾಶಿಯ ಜನ


ಸಿಂಹ ರಾಶಿಯವರ ಭವಿಷ್ಯ (Leo Horoscope):  
ದೈಹಿಕ ಶಕ್ತಿಯೊಂದಿಗೆ ಭಾವನಾತ್ಮಕ ಸಾಮರಸ್ಯವನ್ನು ಕಾಪಾಡಿಕೊಳ್ಳಿ. ಹಣಕಾಸಿನ ಮೂಲಗಳು ಹೆಚ್ಚಾಗಲಿದ್ದು ವಾಹನ ಖರೀದಿ ಯೋಗವು ಇದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ಕೃಷ್ಟತೆಯು ನಿಮ್ಮ ಪ್ರೇರಣೆಯನ್ನು ಹೆಚ್ಚಿಸುತ್ತದೆ.


ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಆರೋಗ್ಯದ ವಿಷಯದಲ್ಲಿ ಕಾಳಜಿಯು  ನಿಮ್ಮ ಜೀವನಶೈಲಿಯಲ್ಲಿ ಅಗತ್ಯ ಬದಲಾವಣೆಗಳನ್ನು ತರಲು ಸಹಾಯಕವಾಗಿದೆ. ವೃತ್ತಿಪರರು ಇಂದು ಧನಾತ್ಮಕ ಫಲಗಳನ್ನು ನಿರೀಕ್ಷಿಸಬಹುದು. 


ತುಲಾ ರಾಶಿಯವರ ಭವಿಷ್ಯ (Libra Horoscope): 
ನೀವು ಇಂದು ಮೃದು ಸ್ವಭಾವದ ವ್ಯಕ್ತಿಯೊಬ್ಬರನ್ನು ಭೇಟಿಯಾಗಬಹುದು. ಕೆಲಸದಲ್ಲಿ ನಿಮ್ಮ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚಿನ ಸಮಯ ಬೇಕಾಗಬಹುದು. ತಾಳ್ಮೆಯಿಂದ ಮುಂದುವರೆಯುವುದು ಪ್ರಯೋಜನಕಾರಿ. 


ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ನಿಮ್ಮ ಅತ್ಯುತ್ತಮ ಕೊಡುಗೆ ನೀಡಲು ನೀವಿಂದು ಹೆಚ್ಚು ಶ್ರಮವಹಿಸುವಿರಿ. ವೈಯಕ್ತಿಕ ಹಾಗೂ ವೃತ್ತಿಪರ ಕ್ಷೇತ್ರಗಳಲ್ಲಿ ಸಮಯವು ನಿಮ್ಮ ಪರವಾಗಿದೆ. ಅನಿರೀಕ್ಷಿತ ಮೂಲದಿಂದ ಬಂಪರ್ ಧನ-ಲಾಭವನ್ನು ಪಡೆಯಬಹುದು. 


ಇದನ್ನೂ ಓದಿ- 50 ವರ್ಷಗಳ ಬಳಿಕ ಈ ರಾಶಿಗೆ ಕೂಡಿಬಂತು ರಾಜಯೋಗ: ಎಲ್ಲದರಲ್ಲೂ ಯಶಸ್ಸು ಸಿಗುವ ಕಾಲ! ಸಂಪತ್ತು, ಕೀರ್ತಿ, ಪ್ರತಿಷ್ಠೆ ಒಟ್ಟಾಗಿ ಲಭಿಸುವುದು ಖಚಿತ


ಧನು ರಾಶಿಯವರ ಭವಿಷ್ಯ (Sagittarius Horoscope):  
ಉದ್ಯೋಗ ರಂಗದಲ್ಲಿ ಕೆಲಸಗಳು ವೇಗವಾಗಿ ಪೂರ್ಣಗೊಳ್ಳಲಿವೆ. ನಿಮ್ಮ ನಿರಂತರ ಪರಿಶ್ರಮಕ್ಕೆ ಇಂದು ಉತ್ತಮ ಕೊಡುಗೆಯನ್ನು ಪಡೆಯುವ ನಿರೀಕ್ಷೆಯಿದೆ. ಗೃಹಿಣಿಯರು ಮನೆಯಲ್ಲಿ ಆಹ್ಲಾದಕರ ವಾತಾವರಣವನ್ನು ಅನುಭವಿಸುವಿರಿ. 


ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ನೀವು ಮನೆಯಲ್ಲಿ ದಕ್ಷತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ದೈನಂದಿನ ಬದುಕಿನಲ್ಲಿ ವ್ಯಾಯಾಮವನ್ನು ರೂಢಿಸಿಕೊಳ್ಳುವುದು ಹೆಚ್ಚು ಲಾಭದಾಯಕವಾಗಲಿದೆ. ಹಣಕಾಸಿನ ಸಮಸ್ಯೆಗಳು ಬಗೆಹರಿದು, ಮುಖದಲ್ಲಿ ಮಂದಹಾಸ ಮೂಡಲಿದೆ. 


ಕುಂಭ ರಾಶಿಯವರ ಭವಿಷ್ಯ (Aquarius Horoscope):  
ನೀವಿಂದು ಕುಟುಂಬಸ್ಥರೊಂದಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಲು ಯೋಜಿಸಬಹುದು. ಮಕ್ಕಳಿಂದ ಶುಭ ಸುದ್ದಿ ನಿರೀಕ್ಷೆಯಿದೆ. ಆಸ್ತಿ ಖರೀದಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ಇಂದು ದಿನ ಉತ್ತಮವಾಗಿದೆ. 


ಮೀನ ರಾಶಿಯವರ ಭವಿಷ್ಯ (Pisces Horoscope): 
ನೀವು ಹಿಂದೆ ಮಾಡಿದ ಹೂಡಿಕೆಗಳಿಂದ ಲಾಭವನ್ನು ನಿರೀಕ್ಷಿಸಬಹುದು. ಆದಾಗ್ಯೂ, ಇಂದು ಪ್ರಮುಖ ವಿಚಾರಗಳಿಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಬೇಕಾಗಬಹುದು. ಈ ಸಂದರ್ಭದಲ್ಲಿ ಭಾವನಾತ್ಮಕವಾಗಿರುವುದನ್ನು ತಪ್ಪಿಸಿದರೆ ಒಳಿತು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.