Shukravara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ಷಷ್ಟಿ ತಿಥಿ, ಶುಕ್ರವಾರದ ಈ ದಿನ, ಉ.ಭಾ. ನಕ್ಷತ್ರ, ಸುಕರ್ಮಾ ಯೋಗ ಇರಲಿದ್ದು, ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಮೇಷ ರಾಶಿಯವರಿಗೆ ಮಿಶ್ರ ಫಲಗಳಿಂದ ಕೂಡಿದ ದಿನವಾಗಿರಲಿದೆ. ವೃತ್ತಿಪರರಿಗೆ ಕಚೇರಿಯಲ್ಲಿ ನಿಮ್ಮ ಕೆಲಸಕ್ಕೆ ಹೆಚ್ಚಿನ ಮನ್ನಣೆ ದೊರೆಯಲಿದೆ. ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿಯಲಿವೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಈ ರಾಶಿಯ ವ್ಯಾಪಾರಸ್ಥರಿಗೆ ಶುಭ ದಿನ. ನಿಮ್ಮ ಬಜೆಟ್ ಗೆ ತಕ್ಕಂತೆ ಯೋಜಿಸಿ ಹಣ ಖರ್ಚು ಮಾಡುವುದನ್ನು ಪರಿಗಣಿಸಿ, ಇಲ್ಲದಿದ್ದರೆ ಆರ್ಥಿಕ ಬಿಕ್ಕಟ್ಟು ತಲೆದೂರಬಹುದು. ಸುಖಾ-ಸುಮ್ಮನೆ ಜಗಳವಾಡುವ ಜನರ ಬಗ್ಗೆ ನೀವು ಜಾಗರೂಕರಾಗಿರಬೇಕು. ಮಕ್ಕಳ ಭವಿಷ್ಯಕ್ಕಾಗಿ ಹೂಡಿಕೆಯು ಲಾಭದಾಯಕವಾಗಿರಲಿದೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಬಿಡುವಿಲ್ಲದ ದಿನವಾಗಿದ್ದು ನಿಮ್ಮ ಪ್ರತಿ ಕೆಲಸದಲ್ಲೂ ಕುಟುಂಬ ಸದಸ್ಯರಿಂದ ಸಾಕಷ್ಟು ಬೆಂಬಲವನ್ನು ಪಡೆಯುತ್ತೀರಿ. ಕೆಲವು ವಿಷಯದ ಬಗ್ಗೆ ನಿಮ್ಮ ಸಂಗಾತಿಯೊಂದಿಗೆ ನೀವು ಜಗಳವಾಡಬಹುದು. ನಿಮ್ಮ ಯೋಜಿತ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳದ ಕಾರಣ ಮನಸ್ಸು ವಿಚಲಿತಗೊಳ್ಳಬಹುದು.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಈ ರಾಶಿಯವರಿಗೆ ಅದೃಷ್ಟದಿಂದ ಕೂಡಿದ ದಿನ ಇದಾಗಿದೆ. ಕುಟುಂಬ ಸದಸ್ಯರೊಂದಿಗೆ ಸಾಕಷ್ಟು ಉತ್ತಮ ಸಮಯವನ್ನು ಕಳೆಯುತ್ತೀರಿ. ಸರ್ಕಾರಿ ಕೆಲಸಕ್ಕಾಗಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಆಗಷ್ಟೇ ಶುಭ ಫಲಗಳನ್ನು ನಿರೀಕ್ಷಿಸಬಹುದು. ಆದರಿಂದ ಹಣಕಾಸಿನ ವಿಚಾರದಲ್ಲಿ ತುಂಬಾ ಎಚ್ಚರಿಕೆಯಿಂದ ಇರಿ.
ಇದನ್ನೂ ಓದಿ- Samsaptak Yoga 2024: ಇನ್ನೆರಡು ವಾರಗಳಲ್ಲಿ ಎದುರುಬದುರಾಗಲಿರುವ ಪಿತಾ-ಪುತ್ರರಿಂದ ರಾಜಯೋಗ, ಈ ರಾಶಿಯವರಿಗೆ ಗೋಲ್ಡನ್ ಟೈಮ್
ಸಿಂಹ ರಾಶಿಯವರ ಭವಿಷ್ಯ (Leo Horoscope):
ನಿಮ್ಮ ವೈವಾಹಿಕ ಜೀವನಕ್ಕೆ ಸಂಬಂಧಿಸಿದಂತೆ ಶುಭ ಸುದ್ದಿಯನ್ನು ಕೇಳಬಹುದು. ಕುಟುಂಬದೊಂದಿಗೆ ಧಾರ್ಮಿಕ ಪ್ರವಾಸಕ್ಕೆ ಹೋಗಲು ಯೋಚಿಸುತ್ತಿರುವವರಿಗೆ ಕಾಲ ಕೂಡಿಬರಲಿದೆ. ನಿಮ್ಮ ಪ್ರೀತಿಪಾತ್ರರೊಂದಿಗೆ ಯಾವುದೇ ವಿಚಾರದಲ್ಲಿ ಮನಸ್ಥಾಪ ಇದ್ದಲ್ಲಿ ಕುಳಿತು ಮಾತನಾಡುವ ಮೂಲಕ ಬಗೆಹರಿಸಿಕೊಳ್ಳಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ನಿಮ್ಮ ಮನಸ್ಸಿನಲ್ಲಿ ಪರಸ್ಪರ ಸಹಕಾರದ ಭಾವನೆ ಉಳಿಯುತ್ತದೆ. ಆದರೆ, ಅಪರಿಚಿತರನ್ನು ನಂಬುವುದು ನಿಮಗೆ ಭಾರೀ ಹಾನಿಯನ್ನುಂದು ಮಾಡಬಹುದು. ಉದ್ಯೋಗ ಕ್ಷೇತ್ರದಲ್ಲಿ ಸ್ತ್ರೀ ಸ್ನೇಹಿತರ ಬಗ್ಗೆ ನೀವು ಜಾಗರೂಕರಾಗಿರಿ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಜನರು ಕೆಲವು ಕೆಲಸಗಳಿಗಾಗಿ ಟೀಕೆಗಳನ್ನು ಎದುರಿಸಬೇಕಾಗುತ್ತದೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ಈ ರಾಶಿಯವರಿಗೆ ಇಂದು ಸಂತೋಷದಾಯಕ ದಿನವಾಗಿದೆ. ನಿಮ್ಮ ಹಳೆಯ ಬಾಕಿಯಿರುವ ಕೆಲವು ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ. ನೀವು ಉದ್ಯೋಗ ಬದಲಾವಣೆಯ ಬಗ್ಗೆ ಯೋಚಿಸಿದರೆ ಪ್ರಗತಿ ಕಾಣಬಹುದು. ಹೊರಗಿನ ಜನರೊಂದಿಗೆ ಕೌಟುಂಬಿಕ ವಿಚಾರಗಳನ್ನು ಹಂಚಿಕೊಳ್ಳುವುದನ್ನು ತಪ್ಪಿಸಿ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ನೀವು ನಿಮ್ಮ ಕೆಲಸದ ಬಗ್ಗೆ ಸಂಪೂರ್ಣ ಗಮನ ಹರಿಸುವ ದಿನವಾಗಿರುತ್ತದೆ. ಯಾವುದೇ ವಿಚಾರದಲ್ಲಿ ತಾಳ್ಮೆಯಿಂದ ಯೋಚಿಸಿ ನಿರ್ಧಾರ ಕೈಗೊಳ್ಳುವುದನ್ನು ಪರಿಗಣಿಸಿ. ಮಕ್ಕಳ ಕಡೆಯಿಂದ ಒಳ್ಳೆಯ ಸುದ್ದಿ ಕೇಳುವಿರಿ. ಆಸ್ತಿ ಖರೀದಿ ಬಗ್ಗೆ ಚಿಂತಿಸುತ್ತಿದ್ದರೆ ದಿನ ಉತ್ತಮವಾಗಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡುವುದರಿಂದ ಶುಭ.
ಇದನ್ನೂ ಓದಿ- ಗುರುವಿನಿಂದಾಗಿ ಈ ರಾಶಿಯವರಿಗೆ ಕುಬೇರ ರಾಜಯೋಗ : ಇನ್ನೊಂದು ವರ್ಷದವರೆಗೆ ಹರಿದು ಬರುವುದು ಸಂಪತ್ತಿನ ಸುಧೆ
ಧನು ರಾಶಿಯವರ ಭವಿಷ್ಯ (Sagittarius Horoscope):
ಇಂದು ನೀವು ವ್ಯವಹಾರದ ಬಗ್ಗೆ ಜಾಗರೂಕರಾಗಿರಬೇಕು. ಅತಿಯಾದ ಖರ್ಚು ನಿಮ್ಮ ಬಜೆಟ್ ಮೇಲೆ ಪರಿಣಾಮ ಬೀರಬಹುದು. ನೀವು ಭಾವನಾತ್ಮಕವಾಗಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ. ಕುಟುಂಬದ ಸದಸ್ಯರು ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕಾಗಬಹುದು.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ನೀವು ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಜಾಗರೂಕರಾಗಿರಬೇಕಾದ ದಿನ ಇದಾಗಿದೆ. ನಿಮ್ಮ ಮಗುವಿನ ಅನಿಯಂತ್ರಿತ ನಡವಳಿಕೆಯಿಂದಾಗಿ ನೀವು ಚಿಂತಿತರಾಗುತ್ತೀರಿ. ಕೆಲಸದಲ್ಲಿ ಕೆಲವು ಅನಗತ್ಯ ವಿಷಯಗಳ ಬಗ್ಗೆ ನೀವು ವಾದ ಮಾಡುವುದನ್ನು ತಪ್ಪಿಸಿ. ನಿಮ್ಮ ಕುಟುಂಬ ಜೀವನದಲ್ಲಿ ನಡೆಯುತ್ತಿರುವ ಸಮಸ್ಯೆಗಳ ಬಗ್ಗೆ ನೀವು ಗಮನ ಹರಿಸಬೇಕು.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಉತ್ತಮ ದಿನವಾಗಲಿದೆ. ನೀವು ಕೆಲವು ಹೊಸ ಆದಾಯದ ಮೂಲಗಳನ್ನು ಸಹ ಪಡೆಯಬಹುದು. ವಿದ್ಯಾರ್ಥಿಗಳು ತಮ್ಮ ಅಧ್ಯಯನದಲ್ಲಿ ಹೊಸದನ್ನು ಕಲಿಯುತ್ತಾರೆ, ಅದು ಭವಿಷ್ಯದಲ್ಲಿ ಅವರಿಗೆ ತುಂಬಾ ಉಪಯುಕ್ತವಾಗಿರುತ್ತದೆ. ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಅದಕ್ಕೂ ಮುನ್ನ ನೀವು ಅನುಭವಿ ವ್ಯಕ್ತಿಯನ್ನು ಸಂಪರ್ಕಿಸಿದರೆ ಒಳಿತು.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ಹಣಕಾಸಿನ ಕಾರಣದಿಂದಾಗಿ ಕೆಲಸಗಳು ಸಿಲುಕಿಕೊಳ್ಳಬಹುದು. ಆದಾಗ್ಯೂ, ನಿಮ್ಮ ಬುದ್ಧಿವಂತಿಕೆಯನ್ನು ಬಳಸುವುದರಿಂದ ಮಾತ್ರ ನೀವು ಕೆಲವು ತೊಂದರೆಗಳಿಂದ ಸುಲಭವಾಗಿ ಹೊರಬರಲು ಸಾಧ್ಯವಾಗುತ್ತದೆ. ನೀವು ಹೊಸ ವಾಹನಕ್ಕಾಗಿ ಹಣವನ್ನು ಖರ್ಚು ಮಾಡಬಹುದು.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.