ದಿನಭವಿಷ್ಯ 28-06-2024: ಇಂದು ಸೌಭಾಗ್ಯ ಯೋಗ ಯಾವ ರಾಶಿಯವರಿಗೆ ಶುಭ!

Today Horoscope 28th June 2024: ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Jun 28, 2024, 07:55 AM IST
  • ವೃಷಭ ರಾಶಿಯವರು ಇಂದು ಹಣಕಾಸಿನ ಲಾಭಕ್ಕಾಗಿ ಹೆಚ್ಚಿನ ಅವಕಾಶಗಳನ್ನು ಪಡೆಯಬಹುದು.
  • ಕರ್ಕಾಟಕ ರಾಶಿಯವರೇ ಸ್ನೇಹಿತರ ಮುಖವಾಡ ಧರಿಸಿರುವ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ.
  • ವೃಶ್ಚಿಕ ರಾಶಿಯವರಿಗೆ ಇಂದು ಸಂತಸದ ದಿನ.
ದಿನಭವಿಷ್ಯ 28-06-2024: ಇಂದು ಸೌಭಾಗ್ಯ ಯೋಗ ಯಾವ ರಾಶಿಯವರಿಗೆ ಶುಭ!  title=

Shukravara Dina Bhavishya In Kannada: ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿಯ ಈ ದಿನ ಶುಕ್ರವಾರ ಪೂರ್ವ ಭಾದ್ರಪದ ನಕ್ಷತ್ರ, ಸೌಭಾಗ್ಯ ಯೋಗ ಇರಲಿದೆ. ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ಮೇಷ ರಾಶಿಯವರಿಗೆ ಇಂದು ಸಂತೋಷದ ದಿನ. ಯಾವುದೇ ಕಾನೂನಾತ್ಮಕ ವಿಷಯಗಳಲ್ಲಿ ತೊಡಗಿದ್ದರೆ ಜಯ ನಿಮ್ಮ ಪಾಲಿಗಿದೆ. ಇಂದು ನೀವು ನಿಮ್ಮ ಸಹೋದರರ ಸಹಾಯದಿಂದ ಆಸ್ತಿ ಸಂಬಂಧಿತ ವಿವಾದದಲ್ಲಿ ಯಶಸ್ಸನ್ನು ಪಡೆಯಬಹುದು.

ವೃಷಭ ರಾಶಿಯವರ ಭವಿಷ್ಯ (Taurus Horoscope):  
ವೃಷಭ ರಾಶಿಯವರಿಗೆ ಇಂದು ಸಾಮಾನ್ಯ ದಿನ. ಕಲಾ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಪ್ರಗತಿಯನ್ನು ಕಾಣಭೂದು. ಸಾಲ ಮರುಪಾವತಿಸಲು ಬಯಸುವವರು ನಿಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗುತ್ತೀರಿ. ಇಂದು ಹಣಕಾಸಿನ ಲಾಭಕ್ಕಾಗಿ ಹೆಚ್ಚಿನ ಅವಕಾಶಗಳನ್ನು ಪಡೆಯಬಹುದು. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಮಿಥುನ ರಾಶಿಯವರು ಇಂದು ಆತ್ಮವಿಶ್ವಾಸದಿಂದ ತುಂಬಿರುತ್ತೀರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯದಿಂದಾಗಿ ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ತೊಡಕುಂಟಾಗಬಹುದು. ಇಂದು ನಿಮ್ಮ ಸ್ನೇಹಿತರೊಬ್ಬರ ಭೇಟಿಯಿಂದ ಮನಸ್ಸು ಸಂತೋಷಗೊಳ್ಳುತ್ತದೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸದತ್ತ ಗಮನಹರಿಸಿ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಕರ್ಕಾಟಕ ರಾಶಿಯವರು ಇಂದು ಕೆಲಸದ ಸ್ಥಳದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಸ್ನೇಹಿತರ ಮುಖವಾಡ ಧರಿಸಿರುವ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ಸರ್ಕಾರಿ ಕೆಲಸದಲ್ಲಿರುವವರು ಸ್ತ್ರೀಯರ ಸಹಾಯದಿಂದ ಧನ ಸಹಾಯವನ್ನು ಪಡೆಯಬಹುದು. 

ಇದನ್ನೂ ಓದಿ- Surya Shukra Yuti: ಕರ್ಕ ರಾಶಿಯಲ್ಲಿ ಸೂರ್ಯ-ಶುಕ್ರರ ಸಂಯೋಗ, 3 ರಾಶಿಯವರಿಗೆ ಹಣದ ಸುರಿಮಳೆ

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಸಿಂಹ ರಾಶಿಯವರೇ ಇಂದು ನಿಮಗೆ ಏರಿಳಿತಗಳಿಂದ ಕೂಡಿದ ದಿನವಾಗಿರುತ್ತದೆ. ಕೆಲಸದ ಸ್ಥಳದಲ್ಲಿ ಕೆಲವು ಹೊಸ ಅಡೆತಡೆಗಳು ಉಂಟಾಗುತ್ತವೆ. ಕೌಟುಂಬಿಕ ಜೀವನದಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಮನೆಯ ಹಿರಿಯರೊಂದಿಗೆ ಸಮಾಲೋಚನೆ ನಡೆಸಿ. ಹಣಕಾಸಿನ ಸ್ಥಿತಿ ಮೊದಲಿಗಿಂತ ಬಲವಾಗಿರುತ್ತದೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಕನ್ಯಾ ರಾಶಿಯ ಜನರಿಗೆ ಇಂದು ನಿಮಗೆ ಕೌಟುಂಬಿಕ ವಿವಾದಗಳಿಂದ ಮುಕ್ತಿ ದೊರೆಯಲಿದೆ. ನಿಮ್ಮ ಹೆಚ್ಚುತ್ತಿರುವ ಖರ್ಚುಗಳ ಬಗ್ಗೆ ನೀವು ಚಿಂತಿತರಾಗುತ್ತೀರಿ. ಯೋಚಿಸದೆ ಹಣವನ್ನು ಹೂಡಿಕೆ ಮಾಡಿದರೆ, ನಿಮ್ಮ ಹಣವು ಸಿಲುಕಿಕೊಳ್ಳಬಹುದು, ಈ ಬಗ್ಗೆ ಜಾಗರೂಕರಾಗಿರಿ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ತುಲಾ ರಾಶಿಯ ಜನರಿಗೆ ಇಂದು ಮಿಶ್ರ ಫಲಗಳಿಂದ ಕೂಡಿದ ದಿನ. ಸರ್ಕಾರಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಇಂದು ಯೋಜನೆಯ ಸಂಪೂರ್ಣ ಫಲಗಳನ್ನು ಪಡೆಯುತ್ತಾರೆ. ಉದ್ಯೋಗಸ್ಥರು ಇಂದು ನಿಮ್ಮ ಕಠಿಣ ಪರಿಶ್ರಮದಿಂದ ಉತ್ತಮ ಸ್ಥಾನವನ್ನು ಪಡೆಯಬಹುದು. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ವೃಶ್ಚಿಕ ರಾಶಿಯವರಿಗೆ ಇಂದು ಸಂತಸದ ದಿನ. ಉದ್ಯೋಗ ಕ್ಷೇತ್ರದಲ್ಲಿ ತಲೆದೂರಿದ್ದ ಸಮಸ್ಯೆಗಳು ಬಗೆಹರಿಯಲಿವೆ. ಅರಿತು ಹೂಡಿಕೆ ಮಾಡುವುದರಿಂದ ಬಂಪರ್ ಧನಲಾಭವನ್ನು ನಿರೀಕ್ಷಿಸಬಹುದು. ವ್ಯಾಪಾರದಲ್ಲಿ ದೊಡ್ಡ ಆರ್ಡರ್ ಪಡೆಯಬಹುದು. 

ಇದನ್ನೂ ಓದಿ- Vastu Tips: ಮನೆಯಲ್ಲಿ ಗಾಜಿನ & ಲೋಹದ ಆಮೆ ಇಟ್ಟರೆ ಶುಭವೋ ಅಥವಾ ಅಶುಭವೋ?

ಧನು ರಾಶಿಯವರ ಭವಿಷ್ಯ (Sagittarius Horoscope):  
ಧನು ರಾಶಿಯವರಿಗೆ ಇಂದು ಆದಾಯದ ಮೂಲಗಳು ಹೆಚ್ಚಾಗಲಿದೆ. ಉದ್ಯೋಗಸ್ಥರು ಮೇಲಾಧಿಕಾರಿಗಳೊಂದಿಗೆ ಸಮನ್ವಯವನ್ನು ಕಾಪಾಡಿಕೊಳ್ಳಬೇಕು. ಇಲ್ಲದಿದ್ದರೆ ಪ್ರಮೋಷನ್ ಪಡೆಯುವಲ್ಲಿ ತೊಂದರೆ ಉಂಟಾಗಬಹುದು. ಪ್ರತಿಕೂಲ ಸಂದರ್ಭಗಳಲ್ಲಿ ತಾಳ್ಮೆಯಿಂದ ಇರುವುದು ಒಳ್ಳೆಯದು. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಮಕರ ರಾಶಿಯವರಿಗೆ ಇಂದು ಮನಸ್ಸಿನ ಗೊಂದಲಗಳಿಂದ ಪರಿಹಾರ ದೊರೆಯಬಹುದು. ಇದರಿಂದ ಮಾನಸಿಕ ಶಾಂತಿಯನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ. ಇದರಿಂದ ಉತ್ತಮ ಲಾಭವನ್ನು ಗಳಿಸಬಹುದು. ಕೆಲವು ಹೊಸ ಯೋಜನೆಗಳಲ್ಲಿ ಹಣವನ್ನು ಹೂಡಿಕೆ ಮಾಡಬಹುದು. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಕುಂಭ ರಾಶಿಯ ಜನರಿಗೆ ಇಂದು ನಿಮಗೆ ಇತರ ದಿನಗಳಿಗಿಂತ ಉತ್ತಮ ದಿನವಾಗಿದೆ.  ಹಣದ ವ್ಯವಹಾರಗಳಲ್ಲಿ ಯಾರನ್ನಾದರೂ ಕಣ್ಣು ಮುಚ್ಚಿ ನಂಬುವುದನ್ನು ತಪ್ಪಿಸಬೇಕು.  ಉದ್ಯೋಗದಲ್ಲಿ ಕೆಲಸ ಮಾಡುವವರಿಗೆ ಗೌರವ ಸಿಕ್ಕರೆ ಅವರ ಸ್ಥಾನಮಾನ, ಪ್ರತಿಷ್ಠೆಯೂ ಹೆಚ್ಚುತ್ತದೆ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಮೀನ ರಾಶಿಯವರಿಗೆ ಕುಟುಂಬದಲ್ಲಿನ ಕೆಲವು ಮಂಗಳಕರ ಘಟನೆಗಳಿಂದ ಮನಸ್ಸಿಗೆ ಸಂತೋಷವಾಗಲಿದೆ. ವಿದೇಶದಿಂದ ಆಮದು-ರಫ್ತು ವ್ಯವಹಾರ ಮಾಡುವ ಜನರು ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತಾರೆ. ಕೆಲಸದ ಸ್ಥಳದಲ್ಲಿ ಕೆಲವು ಅಡೆತಡೆಗಳು ಇದ್ದಲ್ಲಿ ಇಂದು ಪರಿಹಾರವನ್ನು ಪಡೆಯಬಹುದು. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News