Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ತೃತೀಯ ಪೂರ್ಣ ತಿಥಿ ಸೋಮವಾರದ ಈ ದಿನ ಆಶ್ಲೇಷ ನಕ್ಷತ್ರ, ವಜ್ರ ಯೋಗ ಇರಲಿದೆ. ಈ ದಿನ ಮೇಷದಿಂದ ಮೀನ ರಾಶಿಯವರೆಗೆ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ. 


COMMERCIAL BREAK
SCROLL TO CONTINUE READING

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ಬೇರೆಯವರೊಂದಿಗೆ ಅಹಂಕಾರದಿಂದ ವರ್ತಿಸುವುದನ್ನು ತಪ್ಪಿಸಿ. ಕಚೇರಿ ಕೆಲಸಕ್ಕೆ ಸಂಬಂಧಿಸಿದಂತೆ ಸೋಮಾರಿತನವು ನಿಮಗೆ ಭಾರೀ ನಷ್ಟವನ್ನು ಉಂಟುಮಾಡಬಹುದು. ಸರ್ಕಾರಿ ಅಧಿಕಾರಿಗಳೊಂದಿಗೆ ವಿವಾದಗಳಿರಬಹುದು. 


ವೃಷಭ ರಾಶಿಯವರ ಭವಿಷ್ಯ (Taurus Horoscope):  
ನಿಮ್ಮ ಜೊತೆಗಿರುವವರೇ ಬೆನ್ನಿಗೆ ಚೂರಿ ಹಾಕುವ ಸಂಭವವಿದೆ. ಈ ಬಗ್ಗೆ ತುಂಬಾ ಜಾಗರೂಕರಗಿರಿ. ಕೆಲಸಗಳು ನಿರೀಕ್ಷೆಯಂತೆ ಪೂರ್ಣಗೊಂಡಾಗ ಮನಸ್ಸು ಉಲ್ಲಾಸಗೊಳ್ಳುತ್ತದೆ. ವ್ಯಾಪಾರದಲ್ಲಿ ಹೊಸ ಪ್ರಯೋಗಗಳು ಲಾಭದಾಯಕವಾಗುತ್ತವೆ.


ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಕಛೇರಿಯಲ್ಲಿ ಉನ್ನತ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ತಿಳಿಸಲಾದ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿ. ವ್ಯಾಪಾರದಲ್ಲಿ ಆಸಕ್ತಿ ಇರುವ ಮಹಿಳೆಯರು ಈ ಸಂಬಂಧ ಆನ್‌ಲೈನ್ ಶಿಕ್ಷಣವನ್ನು ತೆಗೆದುಕೊಳ್ಳಬೇಕು. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯವಹಿಸುವುದನ್ನು ತಪ್ಪಿಸಿ. 


ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಉದ್ಯೋಗಸ್ಥರಿಗೆ ಬಾಸ್ ನಿಮ್ಮೊಂದಿಗೆ ಕೋಪಿಸಿಕೊಳ್ಳಬಹುದು. ಇದನ್ನು ತಪ್ಪಿಸಲು ಕೆಲಸದ ಬಗ್ಗೆ ಹೆಚ್ಚು ಗಮನ ಕೊಡಿ. ವ್ಯಾಪಾರಸ್ಥರು ಗ್ರಾಹಕರೊಂದಿಗೆ ವಿವಾದವನ್ನು ತಪ್ಪಿಸಿ. ಖರೀದಿಗೆ ಸಂಬಂಧಿಸಿದಂತೆ ಬಾಕಿ ಕೆಲಸಗಳನ್ನು ಇಂದೇ ಪೂರ್ಣಗೊಳಿಸಿ. 


ಇದನ್ನೂ ಓದಿ- ನಾಲ್ಕು ದಿನಗಳಲ್ಲಿ ವೃಷಭ ರಾಶಿಗೆ ಮಂಗಳನ ಪ್ರವೇಶ, ಈ ರಾಶಿಯವರಿಗೆ ವೃತ್ತಿ-ವ್ಯವಹಾರದಲ್ಲಿ ಹೆಚ್ಚಾಗಲಿದೆ ಸಮಸ್ಯೆ


ಸಿಂಹ ರಾಶಿಯವರ ಭವಿಷ್ಯ (Leo Horoscope):  
ದೀರ್ಘಸಮಯದಿಂದ ಸ್ಥಗಿತಗೊಂಡಿದ್ದ ಕೆಲಸಗಳು ಪೂರ್ಣಗೊಳ್ಳುವುವು. ಖಾಸಗಿ ವಲಯದಲ್ಲಿ ಕೆಲಸ ಮಾಡುವ ಉದ್ಯೋಗಸ್ಥರಿಗೆ ಕೆಲಸದ ಒತ್ತಡ ಹೆಚ್ಚಿರುತ್ತದೆ. ಪಾಲುದಾರಿಕೆ ವ್ಯವಹಾರದಲ್ಲಿ ಸರಿಯಾದ ಸಮನ್ವಯ ಕಾಪಾಡಿಕೊಳ್ಳಿ. 


ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಸಹೋದ್ಯೋಗಿಗಳೊಂದಿಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು. ವರ್ಕ್ ಫ್ರಮ್ ಹೋಂ ಮಾಡುವ ಉದ್ಯೋಗಸ್ಥರಿಗೆ ಸಮನ್ವಯದ ಕೊರತೆ ಕಾಡಬಹುದು. ವ್ಯವಹಾರದಲ್ಲಿ ಹಣಕಾಸಿನ ಅಡಚಣೆಗಳು ನಿಮ್ಮನ್ನು ಬಾಧಿಸಬಹುದು. 


ತುಲಾ ರಾಶಿಯವರ ಭವಿಷ್ಯ (Libra Horoscope): 
ಇತರರೊಂದಿಗೆ ನಿಮ್ಮ ವಿನಮ್ರ ಸ್ವಭಾವವು ಸಂಬಂಧಗಳನ್ನು ಬಲಪಡಿಸುತ್ತದೆ. ವ್ಯವಹಾರದಲ್ಲಿ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುವಾಗ ಶಾಂತ ಮನಸ್ಥಿತಿಯಿಂದ ಯೋಚಿಸಿ. ಕಣ್ಣಿನ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಇಂದು ಕೊಂಚ ಪರಿಹಾರ ದೊರೆಯುವ ಸಾಧ್ಯತೆ ಇದೆ. 


ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಬಾಸ್ ಜೊತೆಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳಿ. ಸಾರ್ವಜನಿಕ ಸಂಬಂಧಗಳು ಸುಧಾರಿಸಿ ಗೌರವ ಪ್ರಾಪ್ತಿಯಾಗಲಿದೆ. ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಆರೋಗ್ಯ ಸುಧಾರಿಸಲಿದೆ. 


ಇದನ್ನೂ ಓದಿ- ಗುರುವಿನ ಹಿಮ್ಮುಖ ಸಂಚಾರದಿಂದ ಒಂದೇ ವರ್ಷದಲ್ಲಿ ಈ 3 ರಾಶಿಯವರಿಗೆ ರಾಜಯೋಗ ಸಿಗಲಿದೆ!


ಧನು ರಾಶಿಯವರ ಭವಿಷ್ಯ (Sagittarius Horoscope):  
ಭಕ್ತಿಯಿಂದ ನಿಮ್ಮ ಆರಾಧ್ಯ ದೈವವನ್ನು ಪೂಜಿಸುವುದರಿಂದ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಕಚೇರಿ ಕೆಲಸಗಳಲ್ಲಿ ಆಸಕ್ತಿ ಕೊರತೆ ಎದ್ದು ಕಾಣಬಹುದು. ಹೊಸ ವ್ಯವಹಾರಕ್ಕೆ ಕೈ ಹಾಕುವಾಗ ತುಂಬಾ ಜಾಗರೂಕರಾಗಿರಿ. 


ಮಕರ ರಾಶಿಯವರ ಭವಿಷ್ಯ (Capricorn Horoscope):  
ನಿಮ್ಮ ನೆಟ್‌ವರ್ಕ್ ಅನ್ನು ವಿಸ್ತರಿಸಲು ಎಲ್ಲಾ ಶಕ್ತಿಯನ್ನು ಬಳಸಿ. ಕಛೇರಿಯಲ್ಲಿನ ಕೆಲಸದಲ್ಲಿ ಎಷ್ಟೇ ಸವಾಲುಗಳು ಎದುರಾದರೂ ಎಲ್ಲವನ್ನೂ ಮೆಟ್ಟಿ ನಿಲ್ಲುವ ಸಾಮರ್ಥ್ಯ ನಿಮ್ಮಲ್ಲಿದೆ. ನಿಮ್ಮ ದೈನಂದಿನ ವ್ಯವಹಾರದಲ್ಲಿ ನೀವು ತೃಪ್ತರಾಗುತ್ತೀರಿ. 


ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಜ್ಞಾನವನ್ನು ಪಡೆಯಲು ದಿನವು ಮಂಗಳಕರವಾಗಿದೆ. ಕಚೇರಿಯಲ್ಲಿನ ಕೆಲಸದ ಹೊರೆ ಹೆಚ್ಚಾಗಬಹುದು. ಇದಕ್ಕಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಸಿದ್ಧರಾಗಿರಿ. ವಿದ್ಯಾರ್ಥಿಗಳು ಇಂದಿನಿಂದ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.


ಮೀನ ರಾಶಿಯವರ ಭವಿಷ್ಯ (Pisces Horoscope): 
ಸೌಮ್ಯವಾಗಿ ಮಾತುಕತೆ ನಡೆಸುವುದರಿಂದ ಹಲವು ಸಮಸ್ಯೆಗಳು ಬಗೆಹರಿಯುತ್ತವೆ. ವ್ಯಾಪಾರಸ್ಥರಿಗೆ ಆರ್ಥಿಕ ನಷ್ಟ ಸಾಧ್ಯತೆ ಇದೆ. ಆರೋಗ್ಯದ ದೃಷ್ಟಿಯಿಂದಲೂ ದಿನ ಅಷ್ಟು ಉತ್ತಮವಾಗಿಲ್ಲ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.