Somavara Dina Bhavishya In Kannada: ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಏಕಾದಶಿಯ ಈ ದಿನ ಸೋಮವಾರದಂದು ಚಿತ್ರ ನಕ್ಷತ್ರ  ಪರಿಘ ಯೋಗವು ಯಾವ ರಾಶಿಯವರಿಗೆ ಹೇಗಿದೆ ತಿಳಿಯಿರಿ. 


COMMERCIAL BREAK
SCROLL TO CONTINUE READING

ಮೇಷ ರಾಶಿಯವರ ಭವಿಷ್ಯ (Aries Horoscope):  
ಮೇಷ ರಾಶಿಯ ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನ. ಮದುವೆ ಸಂಬಂಧಿತ ನಿರ್ಧಾರ ಕೈಗೊಳ್ಳಲು ಒಳ್ಳೆಯ ದಿನ. ಪ್ರೇಮ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ಹಿರಿಯರ ಸಲಹೆ ಪಡೆಯಲು ಮರೆಯದಿರಿ. 


ವೃಷಭ ರಾಶಿಯವರ ಭವಿಷ್ಯ (Taurus Horoscope):  
ವೃಷಭ ರಾಶಿಯ ಜನರು ಇಂದು ಶಕ್ತಿಯುತವಾಗಿರುತ್ತೀರಿ. ಹಣಕಾಸಿನ ಸ್ಥಿತಿ ಸುಧಾರಿಸುವುದರಿಂದ ಮನಸ್ಸಿಗೆ ಸಂತೋಷ. ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿ ಜಯ ಸಾಧಿಸಬಹುದು. 


ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಹೊಸ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ಮಿಥುನ ರಾಶಿಯವರಿಗೆ ಉದ್ಯೋಗ ಪ್ರಾಪ್ತಿ ಸಾಧ್ಯತೆ ಇದೆ. ಆದಾಗ್ಯೂ, ನಿಮ್ಮ ಸೋಮಾರಿತನವನ್ನು ಬಿಟ್ಟು ಮುಂದುವರೆದರಷ್ಟೇ ಶುಭ. ಆಸ್ತಿಯಲ್ಲಿ ಹೂಡಿಕೆಯಿಂದ ಲಾಭವಾಗಲಿದೆ. 


ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಕರ್ಕಾಟಕ ರಾಶಿಯವರು ಇಂದು ನಿಮ್ಮ ವಿರುದ್ಧ ಪಿತೂರಿ ನಡೆಸುವ ವಿರೋಧಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ. ಪೂರ್ವಜರ ಆಸ್ತಿಗೆ ಸಂಬಂಧಿಸಿದ ವಿವಾದಗಳಿಂದ ತೊಂದರೆಗೊಳ್ಳಬಹುದು. ಆರ್ಥಿಕ ಸ್ಥಿತಿಯು ಮೊದಲಿಗಿಂತ ಸುಧಾರಿಸಲಿದೆ. 


ಇದನ್ನೂ ಓದಿ- Shukra Gochar: ಶುಕ್ರ ನಕ್ಷತ್ರ ಪರಿವರ್ತನೆ, 4 ರಾಶಿಯವರಿಗೆ ಬಂಪರ್ ಲಾಭ, ಭಾರೀ ಯಶಸ್ಸು


ಸಿಂಹ ರಾಶಿಯವರ ಭವಿಷ್ಯ (Leo Horoscope):  
ಸಿಂಹ ರಾಶಿಯ ಉದ್ಯೋಗಸ್ಥರು ಇಂದು ಕೆಲಸದಲ್ಲಿ ಬದಲಾವಣೆ ಬಗ್ಗೆ ಯೋಚಿಸಬಹುದು. ಅರೆಕಾಲಿಕ ಕೆಲಸದಲ್ಲಿ ನಿಮ್ಮ ಅದೃಷ್ಟ ಬದಲಾಗಲಿದೆ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಬಹುದು. ಆದರೆ ನೀವು ತಾಳ್ಮೆಯಿಂದ ಮುಂದುವರೆಯುವುದು ಒಳ್ಳೆಯದು. 


ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಕನ್ಯಾ ರಾಶಿಯವರಿಗೆ ಇಂದು ಮಿಶ್ರ ಫಲಗಳಿಂದ ಕೂಡಿದ ದಿನ.  ವ್ಯಾಪಾರ ವಿಷಯಗಳಲ್ಲಿ ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ನಿಮ್ಮ ತಂದೆಯನ್ನು ಸಂಪರ್ಕಿಸಿ. ಇದರಿಂದ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವನ್ನು ಪಡೆಯಬಹುದು. 


ತುಲಾ ರಾಶಿಯವರ ಭವಿಷ್ಯ (Libra Horoscope): 
ತುಲಾ ರಾಶಿಯವರೇ ನಿಮ್ಮ ಮಕ್ಕಳು ಮತ್ತು ಸಂಗಾತಿಯ ಹೆಚ್ಚಿದ ಖರ್ಚುಗಳಿಂದ ಬಜೆಟ್ ಹಾಳಾಗಬಹುದು. ಇದು ನಿಮ್ಮನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಬಹುದು. ಕೆಲಸಕ್ಕೆ ಸಂಬಂಧಿಸಿದಂತೆ ದೂರದ ಪ್ರವಾಸಕ್ಕೆ ಹೋಗಲು ನಿಮಗೆ ಅವಕಾಶ ಸಿಗಬಹುದು. 


ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ವೃಶ್ಚಿಕ ರಾಶಿಯವರಿಗೆ ಇಂದು ಧನಾತ್ಮಕ ಫಲಗಳು ಲಭ್ಯವಾಗಲಿವೆ. ಉತ್ತಮ ಆಲೋಚನೆಗಳಿಂದ ಉತ್ತಮ ಲಾಭವನ್ನು ಗಳಿಸುವಿರಿ. ಕೆಲಸದ ಸ್ಥಳದಲ್ಲಿ ಎದುರಾಗಿದ್ದ ಸಮಸ್ಯೆಗಳಿಂದ ಪರಿಹಾರ ದೊರೆಯಲಿದೆ. ಬೇರೆಡೆ ಸಿಲುಕಿರುವ ಹಣ ನಿಮ್ಮ ಕೈ ಸೇರಲಿದೆ. 


ಇದನ್ನೂ ಓದಿ- ಸೂರ್ಯನಿಂದ ರೂಪುಗೊಂಡ ಬುಧಾದಿತ್ಯ ಯೋಗ; ಈ 6 ರಾಶಿಯವರಿಗೆ ದೊರೆಯಲಿದೆ ರಾಜಯೋಗ!


ಧನು ರಾಶಿಯವರ ಭವಿಷ್ಯ (Sagittarius Horoscope):  
ಧನು ರಾಶಿಯವರು ಇಂದು ಶುಭ ಫಲಗಳನ್ನು ನಿರೀಕ್ಷಿಸಬಹುದು. ವ್ಯಾಪಾರದಲ್ಲಿ ಬಂಪರ್ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಉದ್ಯೋಗಸ್ಥರಿಗೆ ಪ್ರಗತಿಯ ಹೊಸ ದಾರಿಗಳು ತೆರೆಯಲಿವೆ. ಕಲೆ ಮತ್ತು ಸಂಗೀತಕ್ಕೆ ಸಂಬಂಧಿಸಿದ ಜನರು ಇಂದು ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಪಡೆಯಬಹುದು. 


ಮಕರ ರಾಶಿಯವರ ಭವಿಷ್ಯ (Capricorn Horoscope):  
ಪಾಲುದಾರಿಕೆ ವ್ಯವಹಾರ ಮಾಡುವ ಮಕರ ರಾಶಿಯ ಜನರು ಹೆಜ್ಜೆ ಹೆಜ್ಜೆಗೂ ಎಚ್ಚರಿಕೆಯಿಂದ ಇರಿ. ಇಲ್ಲವೇ ನಿಮ್ಮವರೇ ನಿಮಗೆ ಮೋಸ ಮಾಡಬಹುದು. ಉದ್ಯೋಗಸ್ಥರಿಗೆ ಕೆಲಸದ ಸ್ಥಳದಲ್ಲಿ ಅಡೆತಡೆಗಳು ಎದುರಾಗಬಹುದು. 


ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಕುಂಭ ರಾಶಿಯವರೇ ಉದ್ಯೋಗ ರಂಗದಲ್ಲಿ ನಿಮ್ಮ ಅಸಭ್ಯ ವರ್ತನೆ ನಿಮ್ಮ ಮೇಲೆ ಋಣಾತ್ಮಕ ಪರಿಣಾಮವನ್ನು ಉಂಟು ಮಾಡಬಹುದು. ಯಾವುದೇ ಕೆಲಸದಲ್ಲಿ ಜವಾಬ್ದಾರಿ ತುಂಬಾ ಮುಖ್ಯ ಎಂಬುದನ್ನೂ ನೆನಪಿನಲ್ಲಿಡಿ. ಕುಟುಂಬ ಜೀವನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ನೀವು ಯಶಸ್ವಿಯಾಗುತ್ತೀರಿ.


ಮೀನ ರಾಶಿಯವರ ಭವಿಷ್ಯ (Pisces Horoscope): 
ಮೀನ ರಾಶಿಯ ಜನರು ಇಂದು ಹಣಕಾಸಿನ ವಿಷಯದಲ್ಲಿ ಏರಿಳಿತಗಳನ್ನು ಅನುಭವಿಸಬಹುದು. ಕೆಲಸದ ಸ್ಥಳದಲ್ಲಿ ತರಾತುರಿಯಲ್ಲಿ ಮಾಡುವ ಯಾವುದೇ ಕೆಲಸವು  ನಿಮಗೆ ತೊಂದರೆ ನೀಡಬಹುದು. ವಿದ್ಯಾರ್ಥಿಗಳಿಗೆ ಇದು ಉತ್ತಮ ಸಮಯ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.