ದಿನಭವಿಷ್ಯ 02-07-2024: ಯೋಗಿನಿ ಏಕಾದಶಿಯ ಈ ದಿನ ಯಾವ ರಾಶಿಯವರಿಗೆ ಶುಭ

Today Horoscope 02nd July 2024: ಮಂಗಳವಾರದ ಈ ದಿನ ಯೋಗಿನಿ ಏಕಾದಶಿಯಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Jul 2, 2024, 07:31 AM IST
  • ವೃಷಭ ರಾಶಿಯವರು ನಿಮ್ಮ ಸಂಗಾತಿ ನೀಡುವ ಜವಾಬ್ದಾರಿಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ.
  • ಕರ್ಕಾಟಕ ರಾಶಿಯವರಿಗೆ ಪೂರ್ವಜರ ಆಸ್ತಿಗೆ ಸಂಬಂಧಿಸಿದ ಯಾವುದೇ ವಿವಾದವು ನಿಮ್ಮನ್ನು ತೊಂದರೆಗೊಳಿಸಬಹುದು.
  • ಕನ್ಯಾ ರಾಶಿಯವರೇ ಕುಟುಂಬದ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.
ದಿನಭವಿಷ್ಯ 02-07-2024:  ಯೋಗಿನಿ ಏಕಾದಶಿಯ ಈ ದಿನ ಯಾವ ರಾಶಿಯವರಿಗೆ ಶುಭ  title=

Mangalvara Dina Bhavishya In Kannada: ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಏಕಾದಶಿ ತಿಥಿ, ಮಂಗಳವಾರದ ಈ ದಿನ ಭರಣಿ ನಕ್ಷತ್ರ, ಧೃತಿ ಯೋಗ ಇರಲಿದೆ. ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ. 

ಮೇಷ ರಾಶಿಯವರ ಭವಿಷ್ಯ (Aries Horoscope):  
ಯೋಗಿನಿ ಏಕಾದಶಿಯ ಈ ದಿನ ಮೇಷ ರಾಶಿಯ ವ್ಯಾಪಾರಸ್ಥರು ಬಂಪರ್ ಲಾಭವನ್ನು ಗಳಿಸುವಲ್ಲಿ ಯಶಸ್ವಿಯಾಗುವರು. ಕುಟುಂಬದಲ್ಲಿ ಮದುವೆಯಂತಹ ಶುಭ ಕಾರ್ಯಗಳು ಆರಂಭವಾಗುವ ಸಾಧ್ಯತೆ ಇದೆ. ಬೇರೆ ಊರಿನಲ್ಲಿ ಕೆಲಸ ಮಾಡುವವರಿಗೆ ಇಂದು ಕುಟುಂಬಸ್ಥರ ಭೇಟಿ ಮನಸ್ಸಿಗೆ ಮುದ ನೀಡಲಿದೆ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ವೃಷಭ ರಾಶಿಯವರಿಗೆ ಇಂದು ಆರ್ಥಿಕ ಸ್ಥಿತಿ ಬಲವಾಗಿರಲಿದ್ದು ಇದರಿಂದ ಮನಸ್ಸಿಗೆ ಸಂತೋಷವಾಗಲಿದೆ. ಆದಾಗ್ಯೂ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಯೋಜನೆಯಂತೆ ಕೆಲಸ ಜರುಗದೆ ಇರುವುದರಿಂದ ಒತ್ತಡವನ್ನು ಎದುರಿಸಬೇಕಾಗಬಹುದು. ನಿಮ್ಮ ಸಂಗಾತಿ ನೀಡುವ ಜವಾಬ್ದಾರಿಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ಮಿಥುನ ರಾಶಿಯವರಿಗೆ ಇಂದು ಶುಭ ಸುದ್ದಿ ಬರಬಹುದು. ಸೋಮಾರಿತನವನ್ನು ಬಿಟ್ಟು ಕೆಲಸ ಮಾಡಿದರೆ ಒಳ್ಳೆಯದು, ಇಲ್ಲದಿದ್ದರೆ ಭಾರೀ ತೊಂದರೆ ಅನುಭವಿಸಬೇಕಾಗಬಹುದು. ಆಸ್ತಿ ವ್ಯವಹಾರದಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಇಂದು ಶುಭ ದಿನ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಕರ್ಕಾಟಕ ರಾಶಿಯವರೇ ನಿಮ್ಮ ವಿರುದ್ಧ ಪಿತೂರಿ ನಡೆಸುವ ವಿರೋಧಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ. ಪೂರ್ವಜರ ಆಸ್ತಿಗೆ ಸಂಬಂಧಿಸಿದ ಯಾವುದೇ ವಿವಾದವು ನಿಮ್ಮನ್ನು ತೊಂದರೆಗೊಳಿಸಬಹುದು. ಹಣಕಾಸಿನ ವಿಷಯದಲ್ಲಿ ದಿನ ಉತ್ತಮವಾಗಿದ್ದು, ಆರ್ಥಿಕ ಸ್ಥಿತಿಯು ಮೊದಲಿಗಿಂತ ಬಲವಾಗಿರುತ್ತದೆ.

ಇದನ್ನೂ ಓದಿ- Shani Vakri: ಮುಂದಿನ 137 ದಿನಗಳವರೆಗೆ ಈ ರಾಶಿಯವರಿಗೆ ಶನಿ ಕೃಪೆ, ಹೆಚ್ಚಾಗಲಿದೆ ಬ್ಯಾಂಕ್ ಬ್ಯಾಲೆನ್ಸ್

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಸಿಂಹ ರಾಶಿಯ ಉದ್ಯೋಗಸ್ಥರಿಗೆ ಇಂದು ಉತ್ತಮ ದಿನ. ನೀವು ನಿಮ್ಮ ಕೆಲಸದ ಜೊತೆಗೆ ಅರೆಕಾಲಿಕ ಕೆಲಸದಲ್ಲಿ ನಿಮ್ಮನ್ನು ತೊಡಗಿಸಲು ಬಯಸಿದರೆ ಒಳ್ಳೆಯ ಅವಕಾಶಗಳು ಇಂದು ಸಿಗಬಹುದು. ದೀರ್ಘ ಸಮಯದ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಕನ್ಯಾ ರಾಶಿಯವರಿಗೆ ಇಂದು ಮಿಶ್ರ ಫಲಿತಾಂಶಗಳಿಂದ ಕೂಡಿದ ದಿನ. ವ್ಯಾಪಾರ-ವ್ಯವಹಾರದಲ್ಲಿ ಹೊಸದಾಗಿ ಏನನ್ನಾದರೂ ಮಾಡುವ ಮೊದಲು ನಿಮ್ಮ ತಂದೆಯವರನ್ನು ಸಂಪರ್ಕಿಸಿ. ಕುಟುಂಬದ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ.  

ತುಲಾ ರಾಶಿಯವರ ಭವಿಷ್ಯ (Libra Horoscope): 
ತುಲಾ ರಾಶಿಯವರಿಗೆ ಇಂದು ನಿಮ್ಮ ಮಕ್ಕಳು ಮತ್ತು ಸಂಗಾತಿಯಿಂದಾಗಿ ಬಜೆಟ್ ಏರುಪೇರಾಗಬಹುದು. ಆರೋಗ್ಯದ ಕ್ಷೀಣತೆಯಿಂದಾಗಿ ಕಿರಿಕಿರಿಯುಂಟಾಗಬಹುದು. ಕೆಲಸಕ್ಕೆ ಸಂಬಂಧಿಸಿದಂತೆ ಪ್ರವಾಸ ಕೈಗೊಳ್ಳಬೇಕಾಗಬಹುದು. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ವೃಶ್ಚಿಕ ರಾಶಿಯವರಿಗೆ ಇಂದು ಉತ್ತಮ ಚಿಂತನೆಯ ಲಾಭ ದೊರೆಯಲಿದ್ದು, ಪಾಸಿಟಿವ್ ಫಲಿತಾಂಶಗಳನ್ನು ಪಡೆಯುವಿರಿ. ವೃತ್ತಿ ಬದುಕಿನಲ್ಲಿ ಎದುರಾಗಿರುವ ಸಮಸ್ಯೆಗಳಿಂದ ಪರಿಹಾರ ದೊರೆಯಲಿದೆ. ವ್ಯಾಪಾರದಲ್ಲಿ ಬೇರೆಡೆ ಸಿಲುಕಿರುವ ಹಣ ಕೈ ಸೇರಲಿದೆ. 

ಇದನ್ನೂ ಓದಿ- ಮುಂದಿನ 6 ತಿಂಗಳು ಈ ರಾಶಿಗೆ ಅದೃಷ್ಟವೋ ಅದೃಷ್ಟ! ಕೈಯಿಟ್ಟ ಪ್ರತೀ ಕೆಲಸದಲ್ಲೂ ದುಡ್ಡಿನ ಮಳೆ-ವೃತ್ತಿಯಲ್ಲಿ ಬಡ್ತಿ ಯೋಗ

ಧನು ರಾಶಿಯವರ ಭವಿಷ್ಯ (Sagittarius Horoscope):  
ಧನು ರಾಶಿಯವರಿಗೆ ಶುಭ ಫಲಿತಾಂಶಗಳಿಂದ ಕೂಡಿದ ದಿನ ಇದಾಗಿದೆ. ಇಂದು ಕುಟುಂಬದ ಸದಸ್ಯರಿಂದ ಶುಭ ಸುದ್ದಿ ಕೇಳುವಿರಿ. ಉದ್ಯೋಗಸ್ಥರಿಗೆ ಕೆಲಸದ ಸ್ಥಳದಲ್ಲಿ ನಿಮ್ಮನ್ನು ನೀವು ಸಾಬೀತುಪಡಿಸಿಕೊಳ್ಳಲು ಸಾಧಯ್ವಾಗುತ್ತದೆ. ಕುಟುಂಬದ ಹಿರಿಯ ಸದಸ್ಯರೊಂದಿಗೆ ಯಾವುದೇ ವಿವಾದವಿದ್ದರೆ ಅದು ಇಂದು ಬಗೆಹರಿಯಲಿದೆ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಮಕರ ರಾಶಿಯವರೇ ಯಾವುದೇ ರೀತಿಯ ಪಾಲುದಾರಿಕೆ ವ್ಯವಹಾರದಲ್ಲಿ ಕೈ ಹಾಕುವುದನ್ನು ತಪ್ಪಿಸಿ. ಉದ್ಯೋಗ ಕ್ಷೇತ್ರದಲ್ಲಿ ಕೆಲವು ಅಡೆತಡೆಗಳು ನಿಮ್ಮನ್ನು ಬಾಧಿಸಬಹುದು. ಆದರೆ, ತಾಳ್ಮೆಯಿಂದ ಮುಂದುವರೆಯುವುದರಿಂದ ಎಲ್ಲವೂ ಒಳ್ಳೆಯದೇ ಆಗಲಿದೆ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಕುಂಭ ರಾಶಿಯವರೇ ಕೆಲಸದ ಸ್ಥಳದಲ್ಲಿ ನಿಮ್ಮ ಅಸಭ್ಯ ವರ್ತನೆಯಿಂದ ಸಹೋದ್ಯೋಗಿಗಳು ನಿಮ್ಮಿಂದ ದೂರ ಉಳಿಯಬಹುದು. ಕುಟುಂಬ ಜೀವನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿ ನೀವು ಯಶಸ್ವಿಯಾಗುತ್ತೀರಿ. ವ್ಯಾಪಾರ ಕ್ಷೇತ್ರಕ್ಕೆ ಸಂಬಂಧಿಸಿದ ಜನರು ಇಂದು ಲಾಭವನ್ನು ಪಡೆಯುತ್ತಾರೆ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಮೀನ ರಾಶಿಯ ಜನರು ಇಂದು ಹಣದ ವಿಷಯಗಳಲ್ಲಿ ಏರಿಳಿತವನ್ನು ಕಾಣುತ್ತಾರೆ. ಕೆಲಸದ ಸ್ಥಳದಲ್ಲಿ ತರಾತುರಿಯಲ್ಲಿ ಮಾಡುವ ಯಾವುದೇ ಕೆಲಸವು ನಿಮಗೆ ತೊಂದರೆ ಉಂಟು ಮಾಡಬಹುದು. ಹಣಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ಯೋಚಿಸದೆ ಮಾಡುವುದನ್ನು ತಪ್ಪಿಸಿ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News