Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ, ದಶಮಿ ತಿಥಿಯ ಈ ದಿನ ಮಂಗಳವಾರ ಕೃತಿಕಾ ನಕ್ಷತ್ರ ವೃದ್ಧಿ ಯೋಗ ಇರಲಿದ್ದು ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಅನಿರೀಕ್ಷಿತ ಮೂಲಗಳಿಂದ ಧಣಪ್ರಾಪ್ತಿ. ಕೌಟುಂಬಿಕ ಸುಖ ಹೆಚ್ಚಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದ್ದು, ಸಂಜೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸಣ್ಣ ವಿಹಾರಕ್ಕೆ ಹೋಗುವ ನಿರೀಕ್ಷೆಯಿದೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ನಿಮ್ಮ ಅದೃಷ್ಟ ಸಂಪೂರ್ಣ ನಿಮ್ಮೊಂದಿಗಿದ್ದು ಕೈ ಹಾಕುವ ಕೆಲಸಗಳಲ್ಲಿ ಭಾರೀ ಯಶಸ್ಸನ್ನು ಕಾಣುವಿರಿ. ವ್ಯವಹಾರದಲ್ಲಿ ಬಂಪರ್ ಆದಾಯವನ್ನು ಗಳಿಸುವ ಸಂಭವವಿದೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಈ ದಿನ ಮಂಗಳ ಕಾರ್ಯಗಳಿಗಾಗಿ ಹೆಚ್ಚು ಖರ್ಚು ಮಾಡಬಹುದು. ಅಧಿಕ ಖರ್ಚು ನಿಮ್ಮ ಮನಸ್ಸಿಗೆ ನೋವುಂಟು ಮಾಡಬಹುದು. ವ್ಯಾಪಾರಸ್ಥರಿಗೆ ಉತ್ತಮ ದಿನ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಹೊಸ ಆದಾಯದ ಮೂಲಗಳು ಸೃಷ್ಟಿಯಾಗಳಿವೆ. ಬೇರೆಡೆ ಸಿಲುಕಿರುವ ನಿಮ್ಮ ಹಣ ಇಂದು ಕೈ ಸೇರುವ ಸಾಧಯ್ತೆ ಇದೆ. ಆರೋಗ್ಯದಲ್ಲಿನ ಸಮಸ್ಯೆಗಳಿಂದ ಕೊಂಚ ಪರಿಹಾರವನ್ನು ಕಾಣಬಹುದು.
ಇದನ್ನೂ ಓದಿ- August Monthly Horoscope: ಆಗಸ್ಟ್‌ನಲ್ಲಿ ಗ್ರಹ ಸಂಚಾರದಿಂದ 3 ಶುಭ ಯೋಗ, ಈ ರಾಶಿಯವರಿಗೆ ಕುಬೇರ ನಿಧಿ ಪ್ರಾಪ್ತಿ
ಸಿಂಹ ರಾಶಿಯವರ ಭವಿಷ್ಯ (Leo Horoscope):
ನಿಮ್ಮ ಪ್ರತಿ ಕೆಲಸದಲ್ಲೂ ಪಿತೃ ಸಮಾನರು ನಿಮ್ಮೊಂದಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೆ. ನ್ಯಾಯಾಂಗ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಯ ನಿಮ್ಮ ಪಾಲಿಗಿದೆ. ಆರೋಗ್ಯವೂ ಉತ್ತಮವಾಗಿರಲಿದೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಈ ದಿನ ಅದೃಷ್ಟದ ಬೆಂಬಲದಿಂದ ನೀವು ವೃತ್ತಿ-ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುವಿರಿ. ಧಾನ ಮಾಡುವುದರಿಂದ ಹೆಚ್ಚಿನ ಫಲ ದೊರೆಯಲಿದೆ. ವ್ಯಾಪಾರಸ್ಥರಿಗೆ ಶುಭ ದಿನ.
ತುಲಾ ರಾಶಿಯವರ ಭವಿಷ್ಯ (Libra Horoscope):
ಸಂದರ್ಭಗಳು ನಿಮ್ಮ ಪ್ರತೀಕೂಲವಾಗಿರುವುದರಿಂದ ಸುರಕ್ಷಿತ ದಾಟಿಯಲ್ಲಿ ಮಾತನಾಡುವುದನ್ನು ಪರಿಗಣಿಸಿ. ಇಲ್ಲವೇ, ಸಂಬಂಧಗಳಲ್ಲಿ ಬಿರುಕುಂಟಾಗಬಹುದು. ಆದಾಗ್ಯೂ, ವ್ಯಾಪಾರ ವೃದ್ಧಿಯಾಗಲಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಉದ್ಯೋಗ ಕ್ಷೇತ್ರದಲ್ಲಿ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ಸ್ನೇಹಿತರೊಂದಿಗೆ ಆಹ್ಲಾದಕರ ಸಮಯವನ್ನು ಕಳೆಯುವಿರಿ. ವ್ಯಾಪಾರಸ್ಥರಿಗೂ ಉತ್ತಮ ದಿನ ಇದಾಗಿದೆ.
ಇದನ್ನೂ ಓದಿ- ಮೂಲ ತ್ರಿಕೋನ ರಾಶಿಚಕ್ರ ಚಿಹ್ನೆಯಲ್ಲಿ ಶನಿ ವಕ್ರಿ, 2025ರವರೆಗೆ ಈ ರಾಶಿಯವರು ತುಂಬಾ ಜಾಗರೂಕರಾಗಿರಬೇಕು!
ಧನು ರಾಶಿಯವರ ಭವಿಷ್ಯ (Sagittarius Horoscope):
ಶತ್ರುಗಳು ಇಂದು ನಿಮ್ಮ ಮುಂದೆ ಮಂಡಿಯೂರಬಹುದು. ನಿಮ್ಮ ಜ್ಞಾನ ಮತ್ತು ಗುಣಕ್ಕೆ ಪ್ರತಿಯೊಬ್ಬರೂ ತಲೆಬಾಗುವರು. ಹಿರಿಯರ ಆಶೀರ್ವಾದ ಪಡೆದು ಮನೆಯಿಂದ ಹೊರಹೋಗುವುದರಿಂದ ಯಶಸ್ಸು.
ಮಕರ ರಾಶಿಯವರ ಭವಿಷ್ಯ (Capricorn Horoscope):
ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ನಿಮ್ಮ ಭಾವನೆಗಳನ್ನು ನಿಯಂತ್ರಿಸಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮದ ಅಗತ್ಯವಿದೆ. ವ್ಯಾಪಾರ-ವ್ಯವಹಾರದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕಫಲ ದೊರೆಯಲಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಆಸ್ತಿ, ವಾಹನ ಖರೀದಿ ಸಾಧ್ಯತೆ ಇದೆ. ಕುಟುಂಬದಲ್ಲಿ ಕೆಲವು ಶುಭ ಕಾರ್ಯಗಳು ಜರುಗಬಹುದು. ಪ್ರೀತಿ-ಪ್ರೇಮದಲ್ಲಿರುವವರು ಇಂದು ಈ ಬಗ್ಗೆ ನಿಮ್ಮ ಕುಟುಂಬದಲ್ಲಿ ಪ್ರಸ್ತಾಪಿಸಬಹುದು.
ಮೀನ ರಾಶಿಯವರ ಭವಿಷ್ಯ (Pisces Horoscope):
ವೃತ್ತಿ ಬದುಕಿನಲ್ಲಿ ಪ್ರಗತಿಯನ್ನು ಕಾಣುವಿರಿ. ಹೊಸ ಕೆಲಸಗಳನ್ನು ಆರಂಭಿಸಲು ಇಂದು ಶುಭ ಸಮಯ. ಆರೋಗ್ಯ ಸಂಬಂಧಿತ ಸಮಸ್ಯೆಗಳು ಬಗೆಹರಿಯಲಿವೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.