Rajyog In Simha Rashi: ಆದಿತ್ಯನ ರಾಶಿಯಲ್ಲಿ `ಬುಧಾದಿತ್ಯ ರಾಜಯೋಗ` ಈ ರಾಶಿಗಳ ಜನರಿಗೆ ಸಿಗಲಿದೆ ಅಪಾರ ಧನಸಂಪತ್ತು!
Sun-Mercury Conjunction And Budhaditya Rajyog: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯದೇವನ ರಾಶಿಯಾಗಿರುವ ಸಿಂಹ ರಾಶಿಯಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜಾತಕದವರಿಗೆ ಅಪಾರ ಧನಸಂಪತ್ತು ಪ್ರಾಪ್ತಿಯಾಗಲಿದೆ. ಬನ್ನಿ ಹಾಗಾದರೆ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ.
Surya-Budh Yuti: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತಮ್ಮ ತಮ್ಮ ರಾಶಿಗಳನ್ನು ಪರಿವರ್ತಿಸುತ್ತವೆ ಮತ್ತು ಶುಭ ಹಾಗೂ ಅಶುಭ ಯೋಗಗಳನ್ನು ರೂಪಿಸುತ್ತವೆ. ಅಷ್ಟೇ ಅಲ್ಲ ಇತರ ಗ್ರಹಗಳ ಜೊತೆಗೆ ಸಂಯೋಜನೆಯನ್ನು ಕೂಡ ರೂಪಿಸುತ್ತವೆ. ಈ ಮೈತ್ರಿಯ ಪ್ರಭಾವ ಮಾನವನ ಜೀವನ ಹಾಗೂ ದೇಶ-ವಿದೇಶಗಳಲ್ಲಿರುವ ಸಕಲ ಚರಾಚರಗಳ ಮೇಲೆ ಉಂಟಾಗುತ್ತದೆ. ಬರುವ ಆಗಸ್ಟ್ 17 ರಂದು ಗ್ರಹಗಳ ರಾಜ ಎಂದೇ ಕರೆಯಲಾಗುವ ಸೂರ್ಯದೇವ ಸಿಂಹರಾಶಿಗೆ ಪ್ರವೇಶಿಸುತ್ತಿದ್ದಾನೆ. ಆದರೆ, ಸಿಂಹ ರಾಶಿಯಲ್ಲಿ ಈಗಾಗಲೇ ಬುಧ ಸ್ಥಿತನಾಗಿದ್ದಾನೆ. ಇದರಿಂದ ಅಲ್ಲಿ ಬುಧಾದಿತ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ರಾಜಯೋಗ ಎಲ್ಲಾ ದ್ವಾದಶ ರಾಶಿಗಳ ಜನರ ಜೀವನದ ಮೇಲೆ ಪ್ರಭಾವ ಬೀರಲಿದೆ. ಆದರೆ 3 ರಾಶಿಗಳ ಜನರ ಮೇಲೆ ಇದು ಭಾರಿ ಸಕಾರಾತ್ಮಕ ಪ್ರಭಾವವನ್ನು ಬೀರಲಿದ್ದು, ಜೀವನದಲ್ಲಿ ಅವರಿಗೆ ಅಪಾರ ಧನಲಾಭದ ಜೊತೆಗೆ ಘನತೆ ಗೌರವ ಪ್ರಾಪ್ತಿಯಾಗಲಿದೆ. ಬನ್ನಿ ಆ ರಾಶಿಗಳು ಯಾವುವು ತಿಳುದುಕೊಳ್ಳೋಣ,
ಮಿಥುನ ರಾಶಿ: ಮಿಥುನ ರಾಶಿಯ ಜಾತಕದವರ ಪಾಲಿಗೆ ಬುಧಾದಿತ್ಯ ರಾಜಯೋಗ ಅತ್ಯಂತ ಲಾಭಕಾರಿ ಸಾಬೀತಾಗಲಿದೆ. ಏಕೆಂದರೆ ಈ ಯೋಗ ನಿಮ್ಮ ಜಾತಕದ ತೃತೀಯ ಭಾವದಲ್ಲಿ ನೆರವೇರುತ್ತಿದೆ. ಇದರಿಂದ ನಿಮ್ಮ ಸಾಹಸ ಪ್ರರಾಕ್ರಮದಲ್ಲಿ ವೃದ್ಧಿಯನ್ನು ನೀವು ಕಾಣಬಹುದು. ನಿಮಗೆ ಸಹೋದರ ಸಹೋದರಿಯರ ಬೆಂಬಲ ಸಿಗಲಿದೆ. ವಿದೇಶಕ್ಕೆ ಸಂಬಂಧಿಸಿದ ವ್ಯಾಪಾರದಲ್ಲಿ ನಿರತರಾದವರಿಗೆ ಈ ಗೋಚರ ಅತ್ಯಂತ ಅದ್ಭುತ ಸಾಬೀತಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದಲ್ಲದೆ ನಿಮಗೆ ಆಕಸ್ಮಿಕ ಧನಲಾಭ ಉಂಟಾಗುವ ಸಾಧ್ಯತೆ ಇದೆ. ಇದರಿಂದ ಆರ್ಥಿಕ ವೇದಿಕೆಯಲ್ಲಿ ಸಮೃದ್ಧಿ ನಿಮ್ಮದಾಗಲಿದೆ. ನೌಕರಿಯಲ್ಲಿ ನಿಮ್ಮ ಸ್ಥಿತಿ ತುಂಬಾ ಉತ್ತಮವಾಗಿರಲಿದೆ.
ಧನು ರಾಶಿ: ಬುಧಾದಿತ್ಯ ರಾಜಯೋಗ ಧನು ರಾಶಿಯ ಜಾತಕದವರ ಪಾಲಿಗೆ ಅತ್ಯಂತ ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ಕೆಲಸಕ್ಕೆ ಸಂಬಂಧಿಸಿದಂತೆ ಯಾತ್ರೆ ಸಂಭವಿಸುವ ಸಾಧ್ಯತೆ ಕೂಡ ಇದೆ. ಇದರಿಂದ ವಿದೇಶಕ್ಕೆ ಹೋಗುವ ನಿಮ್ಮ ಆಸೆ ಕೂಡ ಈಡೇರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ನಿಮ್ಮ ದೊಡ್ಡ ದೊಡ್ಡ ಆಸೆಗಳನ್ನು ಈಡೇರಿಸಿಕೋಕೊಳ್ಳಲು ಹಣ ಖರ್ಚು ಮಾಡುವಿರಿ. ಇನ್ನೊಂದೆಡೆ ಈ ಅವಧಿಯಲ್ಲಿ ಆಧ್ಯಾತ್ಮದತ್ತ ನಿಮ್ಮ ಒಲವು ಹೆಚ್ಚಾಗಲಿದೆ. ನಿಮಗೆ ನಿಮ್ಮ ತಂದೆಯ ಬೆಂಬಲ ಸಿಗುವ ಸಾಧ್ಯತೆ ಇದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ಸಮಯ ಶುಭ ಸಾಬೀಟಾಗುವ ಸಾಧ್ಯತೆ ಇದೆ.
ಇದನ್ನೂ ಓದಿ-Mars Transit 2023: ಜುಲೈ 15 ರಿಂದ ಈ ರಾಶಿಗಳ ಜನರ ಒಳ್ಳೆಯ ದಿನಗಳು ಆರಂಭ, ಸ್ಥಿತಿಗತಿಯಲ್ಲಿ ಭಾರಿ ಸುಧಾರಣೆ
ತುಲಾ ರಾಶಿ: ಬುಧಾದಿತ್ಯ ರಾಜಯೋಗದಿಂದ ನಿಮ್ಮ ಒಳ್ಳೆಯ ದಿನಗಳು ಆರಂಭವಾಗಲಿವೆ. ಏಕೆಂದರೆ ನಿಮ್ಮ ಗೋಚರ ಜಾತಕದ ಆದಾಯದ ಮನೆಯಲ್ಲಿ ಈ ಯೋಗ ನಿರ್ಮಾಣಗೊಳ್ಳುತ್ತಿದೆ. ಇದರಿಂದ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸುವ ಸಾಧ್ಯತೆ ಇದೆ. ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. ಒಟ್ಟಾರೆ ಹೇಳುವುದಾದರೆ, ಆರ್ಥಿಕ ವೇದಿಕೆಯಲ್ಲಿ ನಿಮ್ಮ ಉನ್ನತಿಯಾಗುವುದು ಪಕ್ಕಾ ಎನ್ನಲಾಗಿದೆ. ಹಳೆ ಹೂಡಿಕೆಗಳಿಂದ ನಿಮಗೆ ಲಾಭ ಸಿಗಲಿದೆ. ದೊಡ್ಡ ವ್ಯಾಪಾರ ಒಪ್ಪಂದ ಕುದುರುವ ಸಾಧ್ಯತೆ ಇದೆ.ಇದರಿಂದ ನಿಮಗೆ ಭವಿಷ್ಯದಲ್ಲಿ ಲಾಭ ಸಿಗಲಿದೆ.
ಇದನ್ನೂ ಓದಿ-Shani-Mangal Yog: ಶೀಘ್ರದಲ್ಲಿಯೇ ಶನಿ-ಮಂಗಳರ ಮುಖಾ-ಮುಖಿಯಿಂದ ಸಮಸಪ್ತಕ ಯೋಗ ನಿರ್ಮಾಣ, ಯಾರ ಮೇಲೆ ಹೇಗೆ ಪ್ರಭಾವ?
(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.