Budhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ, ದ್ವಾದಶಿ ತಿಥಿಯ ಈ ದಿನ ಬುಧವಾರ, ಚಿತ್ರಾ ಪೂರ್ಣ ನಕ್ಷತ್ರ, ಆಯುಷ್ಮಾನ್ ಯೋಗ, ಕೌಲವ ಕರಣ. ಎಲ್ಲಾ 12 ರಾಶಿಯವರ ಇಂದಿನ ಫಲಾಫಲ ಹೇಗಿದೆ ತಿಳಿಯಿರಿ. 


COMMERCIAL BREAK
SCROLL TO CONTINUE READING

ಮೇಷ ರಾಶಿಯವರ ಭವಿಷ್ಯ (Aries Horoscope):  
ಆಯುಷ್ಮಾನ್ ಯೋಗವು ಇಂದು ನಿಮಗೆ ಭಾರೀ ಅದೃಷ್ಟವನ್ನು ತರಲಿದೆ. ಕಾನೂನು ವಿಷಯಗಳಲ್ಲಿ ದೀರ್ಘಾವಧಿಯಿಂದ ಬಾಕಿ ಉಳಿದಿದ್ದ ಪ್ರಕರಣಗಳು ಇಂದು ಬಗೆಹರಿಯಲಿವೆ. ಯೋಜಿಸಿ ಕೆಲಸ ಮಾಡುವುದರಿಂದ ಭಾರೀ ಲಾಭವನ್ನು ನಿಮ್ಮದಾಗಿಸಬಹುದು. 


ವೃಷಭ ರಾಶಿಯವರ ಭವಿಷ್ಯ (Taurus Horoscope):  
ನಿಮ್ಮ ಬದುಕಿನಲ್ಲಿ ಸುಖ-ಸೌಕರ್ಯಗಳು ಹೆಚ್ಚಾಗಲಿವೆ. ಏನಾದರೂ ಹೊಸದನ್ನು ಕಲಿಯುವ ನಿಮ್ಮ ಪ್ರಯತ್ನಕ್ಕೆ ಫಲ ದೊರೆಯಲಿದೆ. ಸಹೋದ್ಯೋಗಿಗಳಿಗೆ ಏನಾದರೂ ಹೇಳುವ ಮೊದಲು ಈ ಬಗ್ಗೆ ನೂರು ಬಾರಿ ಯೋಚಿಸಿ, ನಂತರವಷ್ಟೇ ಮಾತನಾಡಿ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಾಡಬಹುದು. 


ಮಿಥುನ ರಾಶಿಯವರ ಭವಿಷ್ಯ (Gemini Horoscope):   
ನಿಮ್ಮ ಕೆಲವು ಸಂಪರ್ಕಗಳು ಇಂದು ಲಾಭವನ್ನು ತರಬಹುದು. ಪ್ರಯಾಣದಿಂದ ಲಾಭವಾಗಲಿದೆ. ರಾಜಕೀಯದಲ್ಲಿರುವವರು ಇಂದು ಷಡ್ಯಂತ್ರಗಳ ಬಗ್ಗೆ ಜಾಗರೂಕರಾಗಿರಿ. ಕೌಟುಂಬಿಕ ವಿಚಾರಗಳ ಬಗ್ಗೆ ಮನೆಯ ಹಿರಿಯರೊಂದಿಗೆ ಕೂಡಿ ಮಾತನಾಡುವುದರಿಂದ ಪರಿಹಾರ ದೊರೆಯಲಿದೆ. 


ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಆಯುಷ್ಮಾನ್ ಯೋಗದ ಪ್ರಭಾವದಿಂದ ಇಂದು ಸಮಸ್ಯೆಗಳಿಂದ ಮುಕ್ತಿ ಹೊಂದುವಿರಿ. ನಿಮ್ಮ ಮಕ್ಕಳ ಬಗ್ಗೆ ಸಂಪೂರ್ಣ ಗಮನಹರಿಸಿ. ಯಾವುದೇ ಕಾನೂನು ಬಾಹಿರ ವಿಚಾರಗಳಲ್ಲಿ ಅಸಡ್ಡೆ ತೋರುವುದನ್ನು ತಪ್ಪಿಸಿ. ತಾಯಿಯೊಂದಿಗೆ ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡಬಹುದು. 


ಇದನ್ನೂ ಓದಿ- ಶನಿ ಮಂಗಳರಿಂದ ಷಡಷ್ಟಕ ರಾಜಯೋಗ: ಈ ರಾಶಿಯವರಿಗೆ ಸುಖದ ಸುಪ್ಪತ್ತಿಗೆ ಗ್ಯಾರಂಟಿ!


ಸಿಂಹ ರಾಶಿಯವರ ಭವಿಷ್ಯ (Leo Horoscope):  
ಆಯುಷ್ಮಾನ್ ಯೋಗವು ಇಂದು ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಕೌಟುಂಬಿಕ ಸಮಸ್ಯೆಗಳು ದೂರವಾಗುತ್ತವೆ. ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ನಿರೀಕ್ಷಿಸಬಹುದು. ವ್ಯವಹಾರಕ್ಕೆ ಸಂಬಂಧಿಸಿದಂತೆ ಮುಖ್ಯವಾದ ನಿರ್ಧಾರ ಕೈಗೊಳ್ಳುವಾಗ ಹಿರಿಯರ ಸಲಹೆ ಪಡೆಯಿರಿ. 


ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸವೊಂದು ಇಂದು ಬಗೆಹರಿಯಲಿದೆ. ಪ್ರಮುಖ ಕೆಲಸದಲ್ಲಿ ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗಿ ಕೆಲಸ ಪೂರ್ಣಗೊಳ್ಳಲಿದೆ. ಯಾವುದೇ ಹಣಕಾಸು ಸಂಬಂಧಿತ ವಿಚಾರಗಳಲ್ಲಿ ನಿರ್ಲಕ್ಷ್ಯ ಒಳ್ಳೆಯದಲ್ಲ. ಹೊಸ ಆಸ್ತಿ ಖರೀದಿ ಬಗ್ಗೆ ಯೋಚಿಸಬಹುದು. 


ತುಲಾ ರಾಶಿಯವರ ಭವಿಷ್ಯ (Libra Horoscope): 
ಇದು ನಿಮಗೆ ಮಧ್ಯಮ ಫಲಪ್ರದವಾದ ದಿನವಾಗಿರಲಿದೆ. ಸರ್ಕಾರಿ ಕೆಲಸಗಳಿಗೆ ಸಂಬಂಧಿಸಿದಂತೆ ಶುಭ ಸುದ್ದಿ ನಿರೀಕ್ಷಿಸಬಹುದು. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಬರಬಹುದು. ನಿಮ್ಮ ವ್ಯವಹಾರದಲ್ಲಿ ಕುಟುಂಬ ಸದಸ್ಯರ ಬೆಂಬಲವನ್ನು ಪಡೆಯುತ್ತೀರಿ. 


ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಆಯುಷ್ಮಾನ್ ಯೋಗದ ಪ್ರಭಾವದಿಂದ ಇಂದು ನಿಮ್ಮ ಸಂಪತ್ತು ಹೆಚ್ಚಾಗಲಿದೆ. ಬೇರೆಯವರೊಂದಿಗೆ ಅನಗತ್ಯ ವಾದವು ನಿಮ್ಮ ಅಮೂಲ್ಯ ಸಮಯವನ್ನಷ್ಟೇ ಹಾಳು ಮಾಡುತ್ತದೆ. ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯುವಿರಿ. ಪಾಲುದಾರಿಕೆ ವ್ಯವಹಾರಗಳಲ್ಲಿ ಶುಭ ಸುದ್ದಿ ಸಿಗಲಿದೆ. 


ಇದನ್ನೂ ಓದಿ- ಹೊಸ ವರ್ಷದಲ್ಲಿ ಈ ರಾಶಿಯವರಿಗೆ ಗುರು ಬಲ: ಅವಿವಾಹಿತರಿಗೆ ವಿವಾಹ ಯೋಗ, ಬಂಪರ್ ಆರ್ಥಿಕ ಲಾಭ, ಹೆಜ್ಜೆ ಹೆಜ್ಜೆಗೂ ಯಶಸ್ಸು


ಧನು ರಾಶಿಯವರ ಭವಿಷ್ಯ (Sagittarius Horoscope):  
ಈ ದಿನ ನೀವು ಕಷ್ಟಪಟ್ಟು ಕೆಲಸ ಮಾಡಿದರೆ ಮಾತ್ರ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಹಿರಿಯರ ಮಾತಿಗೆ ಮನ್ನಣೆ ನೀಡಿ ಮುಂದುವರೆಯಿರಿ. ವ್ಯವಹಾರದಲ್ಲಿ ಹೊಸ ಪ್ರಯೋಗಗಳನ್ನು ಮಾಡಲು ಇದು ಸಕಾಲವಾಗಿದೆ. ಉದ್ಯೋಗಸ್ಥರು ತಂಡದೊಂದಿಗೆ ಸಮನ್ವಯದಿಂದ ಕೆಲಸ ಮಾಡಿದರೆ ಉತ್ತಮ ಫಲ. 


ಮಕರ ರಾಶಿಯವರ ಭವಿಷ್ಯ (Capricorn Horoscope):  
ಆಯುಷ್ಮಾನ್ ಯೋಗವು ಇಂದು ನಿಮ್ಮ ಬದುಕಿನಲ್ಲಿ ಧನಾತ್ಮಕ ಫಲಗಳನ್ನು ತರಲಿದೆ. ನ್ಯಾಯಾಲಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ತೀರ್ಪು ನಿಮ್ಮ ಪರವಾಗಿ ಬರಲಿದೆ. ಕುಟುಂಬ ಸಮಸ್ಯೆಗಳಿಗೆ ಗಮನ ಹರಿಸಿ. ಇಲ್ಲವೇ, ಸಮಯ ಮೀರಿ ಹೋಗಬಹುದು. 


ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಇಂದು ದಾನ ಕಾರ್ಯಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ. ಸಮಾಜದಲ್ಲಿ ಪ್ರೀತಿ, ಗೌರವವನ್ನು ಪಡೆಯುವಿರಿ. ಹಳೆಯ ಸ್ನೇಹಿತರೊಂದಿಗಿನ ಬೇಟಿ ಆಹ್ಲಾದಕರವಾಗಿರುತ್ತದೆ. ವಿಶೇಷ ಸಂದರ್ಭಗಳಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳಿ. ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಿ. 


ಮೀನ ರಾಶಿಯವರ ಭವಿಷ್ಯ (Pisces Horoscope): 
ಆಯುಷ್ಮಾನ್ ಯೋಗವು ಇಂದು ನಿಮಗೆ ವಿಶೇಷವಾದುದ್ದನ್ನು ನೀಡಲಿದೆ. ಇದರಿಂದ ನಿಮ್ಮ ಆತ್ಮಸ್ಥೈರ್ಯ ಹೆಚ್ಚಾಗುತ್ತದೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಯಾರೊಂದಿಗೂ ನಿಷ್ಟೂರವಾಗಿ ವರ್ತಿಸಬೇಡಿ. ಸ್ಥಗಿತಗೊಂಡಿದ್ದ ಕಾಮಗಾರಿಗಳು ಇಂದು ವೇಗವನ್ನು ಪಡೆಯಲಿವೆ. 


ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.