Budhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ ದಕ್ಷಿಣಾಯನ ವರ್ಷಾ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ, ಪ್ರತಿಪದಾ ನಕ್ಷತ್ರ, ಬುಧವಾರದ ಈ ದಿನ ಉತ್ತರಾ ಪೂರ್ಣ ನಕ್ಷತ್ರ, ಸಾಧ್ಯ ಯೋಗ ಯಾರಿಗೆ ತರಲಿದೆ ಅದೃಷ್ಟ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಈ ರಾಶಿಯವರಿಗೆ ಇಂದು ಅಷ್ಟು ಶುಭಕರವಾಗಿಲ್ಲ. ಅದರಲ್ಲೂ ಮಾರಾಟ ಮತ್ತು ಮಾರ್ಕೆಟಿಂಗ್ ಕ್ಷೇತ್ರಗಳಿಗೆ ಸಂಬಂಧಿಸಿದ ಜನರು ತುಂಬಾ ಜಾಗರೂಕರಾಗಿರಬೇಕು. ಕೆಲಸ ಸಂಬಂಧಿತ ಸಂವಹನ ಸುಧಾರಿಸುವುದರಿಂದ ವಿಶೇಷ ಲಾಭವಾಗಲಿದೆ. ನಿಮ್ಮ ಆರೋಗ್ಯವನ್ನು ನಿರ್ಲಕ್ಷಿಸಬೇಡಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಆದಾಯದಿಂದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯನ್ನು ನಿರೀಕ್ಷಿಸಬಹುದು. ನಿಮ್ಮ ಕಠಿಣ ಪರಿಶ್ರಮ ಮತ್ತು ಸಂಕಲ್ಪವು ಫಲ ನೀಡುತ್ತದೆ. ವೃತ್ತಿ ಅಥವಾ ವೈಯಕ್ತಿಕ ಬದುಕಿಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಅತ್ಯುತ್ತಮ ದಿನ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಆರ್ಥಿಕ ವಿಚಾರಕ್ಕೆ ಸಂಬಂಧಿಸಿದಂತೆ ದಿನವು ಉತ್ತಮವಾಗಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ಮನ್ನಣೆ ದೊರೆಯಲಿದ್ದು ನಿಮ್ಮನ್ನು ಕಷ್ಟಪಟ್ಟು ಕೆಲಸ ಮಾಡಲು ಪ್ರೋತ್ಸಾಹಿಸುತ್ತದೆ. ಮಾರಾಟ ಮತ್ತು ಮಾರ್ಕೆಟಿಂಗ್‌ಗೆ ಸಂಬಂಧಿಸಿದ ಜನರು ಇಂದು ಪ್ರಯೋಜನ ಪಡೆಯುತ್ತಾರೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಈ ರಾಶಿಯ ವ್ಯಾಪಾರಸ್ಥರಿಗೆ ಇಂದು ನಷ್ಟ ಸಾಧ್ಯತೆ ಇದೆ. ಹಾಗಾಗಿ ದೊಡ್ಡ ಪ್ರಮಾಣದ ಹೂಡಿಕೆಗಳನ್ನು ತಪ್ಪಿಸಿ. ಕೆಲಸದ ಸ್ಥಳದಲ್ಲಿ ತಕ್ಷಣ ನಿಮ್ಮ ನಿರೀಕ್ಷಿತ ಫಲಿತಾಂಶ ದೊರೆಯದಿದ್ದರೆ ಬೇಸರಗೊಳ್ಳುವ ಅಗತ್ಯವಿಲ್ಲ. ಸಂಜೆಯ ಹೊತ್ತಿಗೆ ನಿಮ್ಮ ಶ್ರಮಕ್ಕೆ ಉತ್ತಮ ಫಲ ದೊರೆಯಲಿದೆ. ನಿಮ್ಮ ಮನೋಬಲ ಹೆಚ್ಚಾಗಿರುತ್ತದೆ.
ಇದನ್ನೂ ಓದಿ- ಶುಕ್ರ-ಶನಿ ಮೈತ್ರಿ: ವರ್ಷಾಂತ್ಯದಲ್ಲಿ ಈ 3 ರಾಶಿಯ ಜನರಿಗೆ ಒಲಿಯಲಿದ್ದಾಳೆ ತಾಯಿ ಲಕ್ಷ್ಮಿ, ತುಂಬಲಿದೆ ಖಜಾನೆ
ಸಿಂಹ ರಾಶಿಯವರ ಭವಿಷ್ಯ (Leo Horoscope):
ಈ ರಾಶಿಯ ಪಾಲುದಾರಿಕೆ ವ್ಯಾಪಾರಸ್ಥರಿಗೆ ಇಂದು ಭರ್ಜರಿ ಲಾಭವಾಗಲಿದೆ. ಆಸ್ತಿ-ಸಂಬಂಧಿತ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಇಂದು ನಿಮ್ಮ ಆದಾಯದ ಮೂಲಗಳು ಹೆಚ್ಚಾಗಬಹುದು. ನಿಮ್ಮ ಅನುಭವದ ಲಾಭವನ್ನು ಪಡೆದುಕೊಳ್ಳುವುದರಿಂದ ಉತ್ತಮ ಲಾಭ ನಿರೀಕ್ಷಿಸಬಹುದು.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಕನ್ಯಾ ರಾಶಿಯವರು ಇಂದು ಆರ್ಥಿಕ ನಷ್ಟವನ್ನು ಎದುರಿಸಬೇಕಾಗಬಹುದು. ಆದಾಯಕ್ಕಿಂತ ವೆಚ್ಚಗಳು ಹೆಚ್ಚಾಗುವುದರಿಂದ ಬಜೆಟ್ ಹಾಳಾಗಬಹುದು. ಆದಾಗ್ಯೂ, ವೃತ್ತಿ ಬದುಕಿನಲ್ಲಿ ಶುಭ ಸುದ್ದಿಯನ್ನು ನಿರೀಕ್ಷಿಸಬಹುದು. ನಿಮ್ಮ ಅತ್ಯುತ್ತಮ ಇಮೇಜ್ ಅನ್ನು ನೀವು ಉಳಿಸಿಕೊಳ್ಳುತ್ತೀರಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ಆರ್ಥಿಕ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನವಾಗಲಿದೆ. ವ್ಯಾಪಾರಸ್ಥರಿಗೆ ಲಾಭ ಸಾಧ್ಯತೆ ದಟ್ಟವಾಗಿದೆ. ಇದರಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ನಿರೀಕ್ಷೆಯಿದೆ. ವೃತ್ತಿ ಮತ್ತು ವ್ಯವಹಾರವು ನಿರೀಕ್ಷೆಯಂತೆ ಪ್ರಗತಿ ಹೊಂದುತ್ತದೆ. ಆರೋಗ್ಯವೂ ಸುಧಾರಿಸಲಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಈ ರಾಶಿಯ ಜನರಿಗೆ ಹಣಕಾಸಿನ ದೃಷ್ಟಿಯಿಂದ ಇಂದು ಸವಾಲಿನ ದಿನ ಎಂತಲೇ ಹೇಳಬಹುದು. ಇಂದು ನೀವು ನಿಮ್ಮ ಖರ್ಚುಗಳ ಮೇಲೆ ನಿಗಾ ಇಡಬೇಕಾಗುತ್ತದೆ. ನಿಮ್ಮ ಹೂಡಿಕೆಯ ಬಗ್ಗೆಯೂ ಜಾಗರೂಕರಾಗಿರಬೇಕು. ಕೆಲಸದಲ್ಲಿ ನೀವು ಹೊಸತನ ಮತ್ತು ಸೃಜನಶೀಲತೆಯ ಮೇಲೆ ಗಂನ ಕೇಂದ್ರೀಕರಿಸುವುದರಿಂದ ಶುಭವಾಗಲಿದೆ.
ಇದನ್ನೂ ಓದಿ- ಬುಧಾದಿತ್ಯ ರಾಜಯೋಗದಿಂದ ಸೆಪ್ಟೆಂಬರ್‌ನಲ್ಲಿ ಈ ರಾಶಿಗಳ ಅದೃಷ್ಟ ಸೂರ್ಯನಂತೆ ಹೊಳೆಯಲಿದೆ..!
ಧನು ರಾಶಿಯವರ ಭವಿಷ್ಯ (Sagittarius Horoscope):
ಈ ರಾಶಿಯವರು ಇಂದು ಹಣಕಾಸಿನ ವಿಚಾರದಲ್ಲಿ ನಷ್ಟವನ್ನು ಎದುರಿಸಬೇಕಾಗಬಹುದು. ಇಂದು ನೀವು ಯಾವುದೇ ಹೂಡಿಕೆಯಲ್ಲಿ ಉತ್ತಮ ಹಣವನ್ನು ಗಳಿಸುವ ಅವಕಾಶಗಳು ಕಡಿಮೆ. ವೃತ್ತಿಪರ ಸಮಸ್ಯೆಗಳ ಮೇಲೆ ಗಮನ ಕೇಂದ್ರೀಕರಿಸಿ, ವಿವಾದಗಳನ್ನು ತಪ್ಪಿಸುವುದರಿಂದ ಒಳಿತು.
ಮಕರ ರಾಶಿಯವರ ಭವಿಷ್ಯ (Capricorn Horoscope):
ಆದಾಯದ ಮೂಲಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಹಣಕಾಸಿನ ದೃಷ್ಟಿಯಿಂದ ಇಂದು ನಿಮಗೆ ಉತ್ತಮ ದಿನ. ದೊಡ್ಡ ಯೋಜನೆಯನ್ನು ಪ್ರಾರಂಭಿಸಲು ಇದು ಉತ್ತಮ ಸಮಯ. ಅದೃಷ್ಟದ ಬೆಂಬಲದಿಂದ ಪ್ರತಿ ಕೆಲಸದಲ್ಲೂ ಭಾರೀ ಯಶಸ್ಸನ್ನು ಗಳಿಸುವಿರಿ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಹಣಕಾಸಿನ ದೃಷ್ಟಿಯಿಂದ ಉತ್ತಮ ದಿನ. ಹೂಡಿಕೆಯಲ್ಲಿ ಉತ್ತಮ ಹಣವನ್ನು ಗಳಿಸುವ ಅವಕಾಶವನ್ನು ಪಡೆಯುತ್ತೀರಿ. ವೃತ್ತಿ ಬದುಕಿನಲ್ಲಿ ನೀವು ಯಶಸ್ಸಿನ ಮೆಟ್ಟಿಲನ್ನು ವೇಗವಾಗಿ ಏರುತ್ತೀರಿ. ವೃತ್ತಿಪರರು ನಿರೀಕ್ಷೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿ ಉತ್ತಮ ಲಾಭವನ್ನು ಗಳಿಸಬಹುದು.
ಮೀನ ರಾಶಿಯವರ ಭವಿಷ್ಯ (Pisces Horoscope):
ನಿಮ್ಮ ಕಠಿಣ ಪರಿಶ್ರಮದ ಫಲವಾಗಿ ಇಂದು ಆರ್ಥಿಕವಾಗಿ ಪ್ರಗತಿ ಹೊಂದುವಿರಿ. ಆದರೆ, ನಷ್ಟವನ್ನು ತಪ್ಪಿಸಲು, ಇಂದು ಹೂಡಿಕೆ ಮಾಡದಿರುವುದು ಒಳ್ಳೆಯದು. ಉದ್ಯೋಗದಲ್ಲಿ ಅನಿರೀಕ್ಷಿತ ಯಶಸ್ಸು ಸಿಗಬಹುದು. ಆದರೆ, ಆರೋಗ್ಯದ ದೃಷ್ಟಿಯಿಂದ ಇಂದು ಹೊರಗಿನ ಆಹಾರ ಸೇವನೆ ತಪ್ಪಿಸಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.