Budh Mesh Rashi Gochar: ವೈದಿಕ ಜೋತಿಷ್ಯ ಶಾಸ್ತ್ರದಲ್ಲಿ ಬುಧನನ್ನು ಅರ್ಥವ್ಯವಸ್ಥೆ, ಬುದ್ಧಿ ಹಾಗೂ ವ್ಯಾಪಾರದ ಕಾರಕ ಗ್ರಹ ಎಂದು ಭಾವಿಸಲಾಗಿದೆ. ಆತನ ಸ್ಥಿತಿಯಲ್ಲಿ ಬದಲಾವಣೆ ಈ ಎಲ್ಲಾ ಕ್ಷೇತ್ರಗಳ ಮೇಲೆ ಪ್ರಭಾವ ಬೀರುತ್ತದೆ. ಮೇ ತಿಂಗಳ ಆರಂಭದಲ್ಲಿ ಬುಧ ಮೇಷ ರಾಶಿಗೆ ಪ್ರವೇಶಿಸಲಿದ್ದಾನೆ, ಇದರಿಂದ ಕೆಲ ರಾಶಿಗಳ ಜನರ್ ಭಾಗ್ಯ ಹೊಳೆಯಲಿದ್ದು, ಅವರ ಧನ ಸಂಪತ್ತಿನಲ್ಲಿ ಅಪಾರ ಹೆಚ್ಚಳ ಉಂಟಾಗಲಿದೆ. 

COMMERCIAL BREAK
SCROLL TO CONTINUE READING

ಮಿಥುನ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಜಾತಕದ ಆದಾಯ ಹಾಗೂ ಲಾಭದ ಸ್ಥಾನದಲ್ಲಿ ಸಂಚರಿಸಲಿದ್ದಾನೆ. ನಿಮ್ಮ ರಾಶಿಗೆ ಆತ ಅಧಿಪತಿ ಕೂಡ ಆಗಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಹೊಸ ಮೂಲಗಳಿಂದ ಹಣ ಹರಿದು ಬರಲಿದೆ. ಕಾರ್ಯಕ್ಷೇತ್ರದಲ್ಲಿ ಉನ್ನತಿ, ವೇತನ ವೃದ್ಧಿ, ಪದೋನ್ನತಿಯ ಎಲ್ಲಾ ಲಕ್ಷಣಗಳಿವೆ. ಆದಾಯದಲ್ಲಿ ಹಚ್ಚಳವಾಗುವುದರಿಂದ ನೀವು ಯಾವುದಾದರೊಂದು ಯೋಜನೆಯಲ್ಲಿ ಹಣವನ್ನು ಹೂಡಿಕೆ ಮಾಡುವಿರಿ. ಷೇರು ಮಾರುಕಟ್ಟೆ, ಮ್ಯೂಚವಲ್ ಫಂಡ್ ಗಳಂತಹ ವ್ಯವಹಾರಗಳಲ್ಲಿ ಹಣ ಹೂಡಿಕೆ ಮಾಡಲು ಬಯಸುತ್ತಿದ್ದರೆ, ನಿಮಗೆ ಲಾಭದ ಯೋಗ ಇದೆ.

ತುಲಾ ರಾಶಿ: ಬುಧನ ಈ ಮೇಷ ಗೋಚರ ನಿಮ್ಮ ಪಾಲಿಗೆ ಶುಭ ಫಲಗಳನ್ನು ನೀಡಲಿದೆ. ಏಕೆಂದರೆ ಈ ಗೋಚರ ನಿಮ್ಮ ಜಾತಕದ ಸಪ್ತಮ ಭಾವದಲ್ಲಿರಲಿದೆ. ಇದರಿಂದ ಪಾರ್ಟ್ನರ್ ಶಿಪ್ ವ್ಯವಹಾರದಲ್ಲಿ ನಿಮಗೆ ಲಾಹ ಸಿಗಲಿದೆ. ಕೌಟುಂಬಿಕ ವಾತಾವರಣ ಸುಖಮಯವಾಗಿರಲಿದೆ. ಬಾಳಸಂಗಾತಿಯ ಜೊತೆಗಿನ ನಿಮ್ಮ ಸಂಬಂಧ ಸುಮಧುರವಾಗಿರಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾವನೆ ಬರುವ ಸಾಧ್ಯತೆ ಇದೆ. ನೌಕರ ವರ್ಗದ ಜನರ ವೇತನ ಹೆಚ್ಚಳವಾಗಲಿದೆ, ಪ್ರಮೋಷನ್ ಕೂಡ ಸಿಗಲಿದೆ. ಆಸೆ ಆಕಾಂಕ್ಷೆಗಳು ಈಡೇರಲಿವೆ. ಹೊಸ ಕೆಲಸ ಆರಂಭಿಸಲು ಸಮಯ ಉತ್ತಮವಾಗಿದೆ.


ಇದನ್ನೂ ಓದಿ- ಹತ್ತು ವರ್ಷಗಳ ಬಳಿಕ ಕೃತಿಕಾ ನಕ್ಷತ್ರಕ್ಕೆ ಗುರು ಪ್ರವೇಶ, ಈ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!

ಸಿಂಹ ರಾಶಿ: ಬುಧನ ರಾಶಿ ಪರಿವರ್ತನೆ ನಿಮ್ಮ ಪಾಲಿಗೆ ವರದಾನ ಸಾಬೀತಾಗಲಿದೆ. ಏಕೆಂದರೆ, ಈ ಗೋಚರ ನಿಮ್ಮ ಜಾತಕದ ನವಮ ಭಾವದಲ್ಲಿರಲಿದೆ. ಇದರಿಂದ ನಿಮಗೆ ಭಾಗ್ಯದ ಸಂಪೂರ್ಣ ಸಾಥ್ ಸಿಗಲಿದೆ. ಆದಾಯದಲ್ಲಿ ವೃದ್ಧಿಯಾಗುವ ಕಾರಣ, ದೊಡ್ಡ ಯೋಜನೆಯಲ್ಲಿ ನೀವು ಹಣವನ್ನು ಹೂಡಿಕೆ ಮಾಡಬಹುದು. ಈ ಅವಧಿಯಲ್ಲಿ8 ದೇಶ-ವಿದೇಶ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಮನೆಯಲ್ಲಿ ಧಾರ್ಮಿಕ ಹಾಗೂ ಮಂಗಳ ಕಾರ್ಯಗಳು ನಡೆಯುವ ಸಾಧ್ಯತೆ ಇದೆ. ನೌಕರ ವರ್ಗದ ಜನರ ಪ್ರಗತಿಯ ಲಕ್ಷಣಗಳು ಕೂಡ ಗೋಚರಿಸುತ್ತಿವೆ. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಿಗುವ ನಿರೀಕ್ಷೆ ಇದೆ. 


ಇದನ್ನೂ ಓದಿ-Kuber Favourite Zodiac Signs: ಈ ರಾಶಿಗಳ ಜನರ ಮೇಲೆ ಸದಾ ಕುಬೇರನ ಕೃಪೆ ಇರುತ್ತದೆ, ಜೀವನದಲ್ಲಿ ಸಿರಿ-ಸಂಪತ್ತಿನ ಕೊರತೆ ಇರುವುದಿಲ್ಲ!

(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ