ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಸಡಗರ: ವಧು ಸಿಗಲೆಂದು ಯುವಕರ ಪಾದಯಾತ್ರೆ

Deepavali Jatre: ಹೊಸಮಾಲಂಗಿಯಲ್ಲಿ 62 ಮಂದಿ ಯುವಕರಿಗೆ ಮದುವೆಯಾಗಿಲ್ಲ, ಎಷ್ಟು ಹುಡುಕಿದರೂ ವಧು ಸಿಗುತ್ತಿಲ್ಲ, ಮಾದಪ್ಪ ಕರುಣೆ ತೋರಿಸಿ ನಮಗೆ ಮದುವೆ ಮಾಡಿಸಲೆಂದು ಯಾತ್ರೆ ಹೊರಟ್ಟಿದ್ದೇವೆ ಎಂದು ಮನು ಎಂಬ ಯಾತ್ರಿ ತಿಳಿಸಿದ್ದಾರೆ.

Written by - Yashaswini V | Last Updated : Oct 30, 2024, 01:02 PM IST
  • ಮಾದಪ್ಪನ ಬೆಟ್ಟದಲ್ಲಿ ಕಳೆಗಟ್ಟಿದ ದೀಪಾವಳಿ ಜಾತ್ರೆ
  • ವಿದ್ಯುತ್ ದೀಪಾಲಂಕಾರದಿಂದ ಜಗಮಗ, ಭಕ್ತರಿಗೆ ನಿರಂತರ ಪ್ರಸಾದದ ವ್ಯವಸ್ಥೆ
  • ಈಗಾಗಲೇ ಲಕ್ಷಕ್ಕೂ ಮೀರಿದ ಸಂಖ್ಯೆಯಲ್ಲಿ ಬಂದಿರುವ ಭಕ್ತರು
 title=

ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು ಯುವಕರ ದಂಡೇ ಬೆಟ್ಟಕ್ಕೆ ಹರಿದು ಬರುತ್ತಿದೆ.

ವಧು ಸಿಗಲೆಂದು ಯುವಕರ ಪಾದಯಾತ್ರೆ : 
ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಯುವಕರು ವಧು ಸಿಗಲೆಂದು ಇಷ್ಟಾರ್ಥ ಇಟ್ಟುಕೊಂಡು ಪಾದಯಾತ್ರೆ ನಡೆಸಿದ್ದಾರೆ.

ಹೊಸಮಾಲಂಗಿಯಲ್ಲಿ 62 ಮಂದಿ ಯುವಕರಿಗೆ ಮದುವೆಯಾಗಿಲ್ಲ, ಎಷ್ಟು ಹುಡುಕಿದರೂ ವಧು ಸಿಗುತ್ತಿಲ್ಲ, ಮಾದಪ್ಪ ಕರುಣೆ ತೋರಿಸಿ ನಮಗೆ ಮದುವೆ ಮಾಡಿಸಲೆಂದು ಯಾತ್ರೆ ಹೊರಟ್ಟಿದ್ದೇವೆ ಎಂದು ಮನು ಎಂಬ ಯಾತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ- ದೀಪಾವಳಿಯಂದೇ ಗುರು-ಶುಕ್ರರ ಮಹಾನ್ ಸಂಯೋಗ: ಸಂಸಪ್ತಕ ರಾಜಯೋಗದಿಂದ ಈ ರಾಶಿಯವರಿಗೆ ಕಂಡ ಕನಸೆಲ್ಲಾ ನನಸಾಗುವ ಸುವರ್ಣ ಕಾಲ!

ದೀಪಾವಳಿ ಜಾತ್ರೆ ಜೋರು: 
ಅ.29 ರಿಂದ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭಗೊಂಡಿದ್ದು ವಿದ್ಯುತ್ ದೀಪಾಲಂಕಾರದಿಂದ ಕ್ಷೇತ್ರ ಕಂಗೊಳಿಸುತ್ತಿದೆ. ದೇವರಿಗೆ ವಿಶೇಷ ಪೂಜೆ, ಅಭಿಷೇಕಗಳು ಸಾಂಪ್ರದಾಯಿಕವಾಗಿ ಜರುಗುತ್ತಿದೆ.

ರಾಜ್ಯ ಅಷ್ಟೇ ಅಲ್ಲದೇ ತಮಿಳುನಾಡಿನಿಂದಲೂ ಲಕ್ಷಾಂತರ ಮಂದಿ ಭಕ್ತರು ಆಗಮಿಸುತ್ತಿದ್ದು ಶೌಚಾಲಯ ವ್ಯವಸ್ಥೆ, ಕುಡಿಯುವ ನೀರು, ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿದೆ.

ಇದನ್ನೂ ಓದಿ- ದೀಪಾವಳಿ ಸಂಜೆ ಈ ಜೀವಿಗಳು ಕಾಣಿಸಿಕೊಂಡ್ರೆ ಲಕ್ಷ್ಮಿ ಆಗಮನದ ಸಂಕೇತ, ಆರ್ಥಿಕ ಸಮೃದ್ಧಿ, ಭಾರೀ ಅದೃಷ್ಟ

ಭಕ್ತರಿಗೆ ತೊಂದರೆಯಾಗದಂತೆ ನಿರಂತರ ವಿಶೇಷ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು ಎತ್ತ ನೋಡಿದರತ್ತ ಭಕ್ತ ಸಮೂಹವೇ ಕಂಡುಬರುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News