Dina Bhavishya 18-09-2023: ಇಂದು ಸೋಮವಾರ. ಜಾತಕದ ಪ್ರಕಾರ, ಇಂದು ಕೆಲವು ರಾಶಿಗಳು ವ್ಯವಹಾರದಲ್ಲಿ ಲಾಭವನ್ನು ಪಡೆಯುತ್ತವೆ. ಇನ್ನು ಪಂಚಾಂಗದ ಪ್ರಕಾರ ಇಂದು ಭಾದ್ರಪದ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯು ಮಧ್ಯಾಹ್ನ 12:39 ರವರೆಗೆ ಇರುತ್ತದೆ. ನಂತರ ಚತುರ್ಥಿ ತಿಥಿ ಪ್ರಾರಂಭವಾಗುತ್ತದೆ.
ಇದನ್ನೂ ಓದಿ:
ಮೇಷ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಲಿದೆ. ವ್ಯಾಪಾರದಲ್ಲಿ ಲಾಭವನ್ನು ಪಡೆಯುತ್ತೀರಿ. ಕುಟುಂಬದಲ್ಲಿ ಶುಭ ಕಾರ್ಯಕ್ರಮಗಳು ನಡೆಯಲಿವೆ. ಪ್ರೀತಿಪಾತ್ರರಿಂದ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.
ವೃಷಭ ರಾಶಿ: ನೀವು ಇಂದು ವಾಹನವನ್ನು ಎಚ್ಚರಿಕೆಯಿಂದ ಚಾಲನೆ ಮಾಡಿ. ಕುಟುಂಬದಲ್ಲಿ ಪ್ರೀತಿಪಾತ್ರರ ಕುರಿತಾದ ದುಃಖದ ಸುದ್ದಿಯನ್ನು ಪಡೆಯುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಹೆಂಡತಿಯ ಆರೋಗ್ಯದ ಬಗ್ಗೆ ಕಾಳಜಿ ಇರುತ್ತದೆ.
ಮಿಥುನ ರಾಶಿ: ಇಂದು ನಿಮಗೆ ಒಳ್ಳೆಯ ದಿನವಾಗಿರುತ್ತದೆ. ವ್ಯವಹಾರದಲ್ಲಿ ಹಣಕಾಸಿನ ಸಹಾಯವನ್ನು ಪಡೆಯಬಹುದು, ಕೆಲಸದ ಸ್ಥಳದಲ್ಲಿ ಲಾಭದ ಅವಕಾಶಗಳನ್ನು ಸೃಷ್ಟಿಸುತ್ತದೆ.
ಕರ್ಕಾಟಕ ರಾಶಿ: ಇಂದು ನೀವು ಕೆಲವು ಅನಗತ್ಯ ವಿವಾದಗಳಲ್ಲಿ ಸಿಲುಕಿಕೊಳ್ಳಬಹುದು. ಆದ್ದರಿಂದ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ಆರೋಗ್ಯವು ಉತ್ತಮವಾಗಿರುತ್ತದೆ.
ಸಿಂಹ ರಾಶಿ: ನೀವು ಇಂದು ನಿಮ್ಮ ಆರೋಗ್ಯದ ಬಗ್ಗೆ ಚಿಂತಿತರಾಗಬಹುದು, ಜಾಗರೂಕರಾಗಿರಿ. ಕುಟುಂಬ ಸದಸ್ಯರ ಬೆಂಬಲವನ್ನು ಪಡೆಯುತ್ತೀರಿ. ಸಂಗಾತಿ ಜೊತೆಗಿನ ಸಂಬಂಧವು ಸೌಹಾರ್ದಯುತವಾಗಿರುತ್ತದೆ.
ಕನ್ಯಾ ರಾಶಿ: ಇಂದು ನೀವು ವಿಶೇಷವಾದ ವ್ಯಕ್ತಿಯನ್ನು ಭೇಟಿ ಮಾಡಬಹುದು, ಆದರೆ ಅನಾರೋಗ್ಯದ ಕಾರಣದಿಂದಾಗಿ ಆರ್ಥಿಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಇಂದು ವ್ಯವಹಾರದಲ್ಲಿ ನಷ್ಟದ ಸಾಧ್ಯತೆಗಳಿವೆ. ಪೂರ್ವಿಕರ ಆಸ್ತಿಯಿಂದಾಗಿ ಕುಟುಂಬದಲ್ಲಿ ಪರಸ್ಪರ ಸಂಘರ್ಷದ ಪರಿಸ್ಥಿತಿ ಉಂಟಾಗಬಹುದು.
ತುಲಾ ರಾಶಿ: ಇಂದು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ದಿನ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು. ವ್ಯಾಪಾರದಲ್ಲಿ ರಿಸ್ಕ್ ತೆಗೆದುಕೊಳ್ಳಬೇಡಿ.
ವೃಶ್ಚಿಕ ರಾಶಿ: ಇಂದು ನೀವು ಕೆಲವು ನಿರ್ದಿಷ್ಟ ಕೆಲಸಗಳಿಗಾಗಿ ನಿಮ್ಮ ಸಹೋದ್ಯೋಗಿಗಳೊಂದಿಗೆ ಹೊರಗೆ ಪ್ರಯಾಣಿಸಬಹುದು. ಇದು ಮನಸ್ಸನ್ನು ಸಂತೋಷವಾಗಿರಿಸುತ್ತದೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆಗಳಿವೆ.
ಧನು ರಾಶಿ: ಇಂದು ನೀವು ಕೆಲವು ಸಾಮಾಜಿಕ ವಿವಾದಗಳಿಂದಾಗಿ ಒತ್ತಡವನ್ನು ಅನುಭವಿಸಬಹುದು. ಜಾಗರೂಕರಾಗಿರಿ. ವ್ಯಾಪಾರ ವ್ಯವಹಾರದಲ್ಲಿ ಹಾನಿಯನ್ನುಂಟಾಗಬಹುದು.
ಮಕರ ರಾಶಿ: ಇಂದು ಅದ್ಭುತ ದಿನವಾಗಲಿದೆ. ವ್ಯಾಪಾರದಲ್ಲಿ ಲಾಭ ಇರುತ್ತದೆ. ಆರ್ಥಿಕ ಪರಿಸ್ಥಿತಿ ಬಲಗೊಳ್ಳಲಿದೆ. ಕೆಲವು ಹೊಸ ಕೆಲಸವನ್ನು ಪ್ರಾರಂಭಿಸಲು ಶ್ರಮಪಡಬಹುದು. ಹೊಸ ವಾಹನ ಅಥವಾ ಮನೆ ಖರೀದಿಸಬಹುದು.
ಕುಂಭ ರಾಶಿ: ಇಂದು ನಿಮಗೆ ಉತ್ತಮ ದಿನವಾಗಿರುವುದಿಲ್ಲ. ಆರೋಗ್ಯದ ಬಗ್ಗೆ ಚಿಂತಿತರಾಗುವಿರಿ. ವ್ಯಾಪಾರದಲ್ಲಿ ನಷ್ಟವಾಗುವ ಸಂಭವವಿದೆ. ಪ್ರೀತಿಪಾತ್ರರೊಂದಿಗಿನ ಭಿನ್ನಾಭಿಪ್ರಾಯಗಳು ಹೆಚ್ಚಾಗಬಹುದು.
ಮೀನ ರಾಶಿ: ಇಂದು ವ್ಯಾಪಾರದಲ್ಲಿ ಹೆಚ್ಚಿನ ಲಾಭದ ಸಾಧ್ಯತೆಗಳಿವೆ. ಮನಸ್ಸು ಸಂತೋಷವಾಗುತ್ತದೆ. ಆರ್ಥಿಕ ಮೂಲಗಳ ಹೊಸ ಮಾರ್ಗಗಳನ್ನು ಸೃಷ್ಟಿಸುತ್ತದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುವ ಸಾಧ್ಯತೆಗಳಿವೆ.
ಇದನ್ನೂ ಓದಿ: ಪ್ರಾಣಕ್ಕೆ ಕುತ್ತು ತರುತ್ತದೆ ಈ ಫ್ಯಾಟಿ ಲಿವರ್ ಡಿಸಾರ್ಡರ್, ಪಾರಾಗುವ ದಾರಿ ಇಲ್ಲಿದೆ!
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.