Gajalakshmi Rajyog In Taurus: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಮೇ 1, 2024 ರಂದು ದೇವಗುರು ಬೃಹಸ್ಪತಿ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. ಇನ್ನೊಂದೆಡೆ ಮೇ 19, 2024 ರಂದು ಶುಕ್ರ ಕೂಡ ವೃಷಭ ರಾಶಿಗೆ ಪ್ರವೇಶಿಸಲಿದ್ದು, ಇಬ್ಬರ ಮೈತ್ರಿಯ ಕಾರಣ ವೃಷಭ ರಾಶಿಯಲ್ಲಿ ಗಜಲಕ್ಷ್ಮಿ ರಾಜಯೋಗ ರಚನೆಯಾಗಲಿದೆ. ಇದರಿಂದ ಕೆಲ ರಾಶಿಗಳ ಜನರಿಗೆ ಅಪಾರ ಧನ-ಸಂಪತ್ತು ಪ್ರಾಪ್ತಿಯಾಗಲಿದೆ. ನೌಕರಿಯಲ್ಲಿಯೂ ಕೂಡ ಪ್ರಮೋಷನ್ ಯೋಗ ನಿರ್ಮಾಣಗೊಳ್ಳುತ್ತಿದೆ. ಆ ಲಕ್ಕಿ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ,
ಧನು ರಾಶಿ: ಗಜಲಕ್ಷ್ಮಿ ರಾಜಯೋಗ ರಚನೆಯಿಂದ ಧನು ರಾಶಿಯ ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಹೊಸ ಬಿಸ್ನೆಸ್ ಒಪ್ಪಂದ ಕುದುರುವ ಸಾಧ್ಯತೆ ಇದೆ. ಇದಲ್ಲದೆ ವ್ಯಾಪಾರದಲ್ಲಿ ನಡೆದುಕೊಂಡು ಬಂದ ಅಡೆತಡೆಗಳು ನಿವಾರಣೆಯಾಗಲಿವೆ. ನೌಕರ ವರ್ಗದ ಜನರಿಗೆ ಪದೋನ್ನತಿ ಪ್ರಾಪ್ತಿಯಾಗಲಿದೆ. ಈ ಅವಧಿಯಲ್ಲಿ ನೀವು ಅಪಾರ ಹಣ ಉಳಿತಾಯ ಮಾಡುವಲ್ಲಿ ಯಶಸ್ವಿಯಾಗುವಿರಿ. ಆಸೆ ಆಕಾಂಕ್ಷೆಗಳು ಈಡೇರಲಿವೆ.
ತುಲಾ ರಾಶಿ: ಗಜಲಕ್ಷ್ಮಿ ರಾಜಯೋಗ ತುಲಾ ರಾಶಿಯ ವಿದ್ಯಾರ್ಥಿಗಳ ಪಾಲಿಗೆ ವಿಶೇಷ ಫಲಗಳನ್ನು ತರಲಿದೆ. ಅದರಲ್ಲಿಯೂ ವಿಶೇಷವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನೌಕರಿ ಸಿಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ನಡುವೆ ಸಾಕಷ್ಟು ಸಮತೋಲನ ಇರಲಿದೆ. ಕೌಟುಂಬಿಕ ವಾತಾವರಣ ಉತ್ತಮವಾಗಿರಲಿದೆ. ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿದ್ದು, ಪರಾಕ್ರಮ ಹೆಚ್ಚಾಗಲಿದೆ. ದೇಶ ವಿದೇಶಕ್ಕೆ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ.
ಇದನ್ನೂ ಓದಿ-ನೂರು ವರ್ಷಗಳ ಬಳಿಕ ಪವರ್ಫುಲ್ ಚತುರ್ಗ್ರಹಿ ಯೋಗ ನಿರ್ಮಾಣ, ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ ಯೋಗ!
ಸಿಂಹ ರಾಶಿ: ಗಜಲಕ್ಷ್ಮಿ ರಾಜಯೋಗ ಹೊಸ ನೌಕರಿಯ ಹುಡುಕಾಟದಲ್ಲಿ ನಿರತರಾದ ಸಿಂಹ ರಾಶಿಯ ಜಾತಕದವರಿಗೆ ವಿಶೇಷವಾಗಿರಲಿದೆ. ದೊಡ್ಡ ಕಂಪನಿಯಲ್ಲಿ ಜಾಬ್ ಆಫರ್ ಬರುವ ಸಾಧ್ಯತೆ ಇದೆ. ವಾಹನ, ಆಸ್ತಿಪಾಸ್ತಿಯನ್ನು ನೀವು ಖರೀದಿಸಬಹುದು. ನಿಮ್ಮ ಘನತೆ ಗೌರವ ಹೆಚ್ಚಾಗಲಿದೆ. ಪ್ರತಿಷ್ಠೆ ಕೂಡ ಹೆಚ್ಚಾಗಲಿದೆ. ತಂದೆ ತಾಯಿಯರ ಜೊತೆಗೆ ನಿಮ್ಮ ಸಂಬಂಧ ಉತ್ತಮವಾಗಲಿದೆ. ಬಾಳಸಂಗತಿಯ ಬೆಂಬಲ ಕೂಡ ನಿಮಗೆ ಸಿಗಲಿದೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ.
ಇದನ್ನೂ ಓದಿ-ಶೀಘ್ರದಲ್ಲೇ ಮೇಷ ರಾಶಿಗೆ ಬುಧನ ಪ್ರವೇಶ, ಲಕ್ಷ್ಮಿ ಕೃಪೆಯಿಂದ ಈ ಜನರ ಮೇಲೆ ಅಪಾರ ಕನಕವೃಷ್ಟಿ!
(Disclaimer- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.