ಈ ನಾಲ್ಕು ರಾಶಿಯವರು ಚಿನ್ನದ ಉಂಗುರ ಹಾಕಿದರೆ ಖುಲಾಯಿಸುವುದು ಅದೃಷ್ಟ

ಕೆಲವು ರಾಶಿಯವರು ಚಿನ್ನದ ಉಂಗುರವನ್ನು ಹಾಕಿದರೆ ಅವರ ಅದೃಷ್ಟ ಖುಲಾಯಿಸುತ್ತದೆಯಂತೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನವನ್ನು ಧರಿಸುವುದು ಪ್ರಯೋಜನಕಾರಿ.

Written by - Ranjitha R K | Last Updated : Jan 26, 2023, 08:22 PM IST
  • ಪ್ರತಿಯೊಂದು ಲೋಹಕ್ಕೂ ಅದರದ್ದೇ ಆದ ಮಹತ್ವವಿದೆ.
  • ಲೋಹಗಳ ಮಹತ್ವ, ಮತ್ತು ವಿಶೇಷತೆಯನ್ನು ಜ್ಯೋತಿಷ್ಯದಲ್ಲಿ ವಿವರಿಸಲಾಗಿದೆ.
  • ಒಡವೆ ಧರಿಸುವುದು ಎಲ್ಲರಿಗೂ ಇಷ್ಟವಾಗುತ್ತದೆ.
ಈ ನಾಲ್ಕು ರಾಶಿಯವರು ಚಿನ್ನದ ಉಂಗುರ ಹಾಕಿದರೆ ಖುಲಾಯಿಸುವುದು ಅದೃಷ್ಟ title=

ಬೆಂಗಳೂರು : ಪ್ರತಿಯೊಂದು ಲೋಹಕ್ಕೂ ಅದರದ್ದೇ ಆದ ಮಹತ್ವವಿದೆ. ಲೋಹಗಳ ಮಹತ್ವ, ಮತ್ತು ವಿಶೇಷತೆಯನ್ನು ಜ್ಯೋತಿಷ್ಯದಲ್ಲಿ ವಿವರಿಸಲಾಗಿದೆ. ಸಾಮಾನ್ಯವಾಗಿ ಒಡವೆ ಧರಿಸುವುದು ಎಲ್ಲರಿಗೂ ಇಷ್ಟವಾಗುತ್ತದೆ. ಅದರಲ್ಲೂ ಚಿನ್ನ ಅಥವಾ ವಜ್ರದ ಉಂಗುರವನ್ನು ಧರಿಸಲು  ಎಲ್ಲರೂ  ಇಷ್ಟಪಡುತ್ತಾರೆ. ಆದರೆ ವಜ್ರವನ್ನು ಎಲ್ಲರೂ ಧರಿಸುವಂತಿಲ್ಲ. ರಾಶಿಗನುಗುಣವಾಗಿ ವಜ್ರವನ್ನು ಕೆಲವು ರಾಶಿಯವರು ಮಾತ್ರ ಧರಿಸಬಹುದು. ಇಲ್ಲವಾದರೆ ಅದು ದುರಾದೃಷ್ಟ ಬಾಗಿಲು ತೆರೆಯುತ್ತದೆ ಎಂದು ಹೇಳಲಾಗುತ್ತದೆ. ಅದೇ ರೀತಿ ಕೆಲವು ರಾಶಿಯವರು ಚಿನ್ನದ ಉಂಗುರವನ್ನು ಹಾಕಿದರೆ ಅವರ ಅದೃಷ್ಟ ಖುಲಾಯಿಸುತ್ತದೆಯಂತೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನವನ್ನು ಧರಿಸುವುದು ಪ್ರಯೋಜನಕಾರಿ. ಉಂಗುರದ ಬೆರಳಿಗೆ ಚಿನ್ನದ ಉಂಗುರವನ್ನು ಧರಿಸುವುದರಿಂದ ಮಕ್ಕಳ ಸಂತೋಷದಲ್ಲಿ ಬರುವ ಅಡೆತಡೆಗಳಿಂದ ಮುಕ್ತಿ ಸಿಗುತ್ತದೆ ಎಂದು ಹೇಳಲಾಗುತ್ತದೆ. ಇದರೊಂದಿಗೆ, ಧನಲಾಭ ಮತ್ತು ವೃತ್ತಿ ಪ್ರಗತಿಯನ್ನು ಕೂಡಾ ಸಾಧಿಸಬಹುದು ಎಂದು ಹೇಳಲಾಗುತ್ತದೆ.

ಈ ರಾಶಿಯವರ ಅದೃಷ್ಟ ಹೆಚ್ಚಿಸುತ್ತದೆ ಚಿನ್ನದ ಉಂಗುರ :  
ಸಿಂಹ ರಾಶಿ :  ಸಿಂಹ ರಾಶಿಯವರಿಗೆ ಚಿನ್ನದ ಉಂಗುರ ಅತ್ಯಂತ ಮಂಗಳಕರ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಸಿಂಹ ರಾಶಿಯು ಬೆಂಕಿಯ ಅಂಶದ ಸಂಕೇತವಾಗಿದೆ. ಈ ರಾಶಿಯ ಅಧಿಪತಿ ಸೂರ್ಯ. ಆದ್ದರಿಂದ, ಸಿಂಹ ರಾಶಿಯವರು ಚಿನ್ನದ ಉಂಗುರವನ್ನು ಧರಿಸುವುದು ಮಂಗಳಕರ ಎಂದು ಹೇಳಲಾಗುತ್ತದೆ. 

ಇದನ್ನೂ ಓದಿ : Dream Science: ಯಾವ ರೀತಿಯ ಕನಸಿನಿಂದ ರಾಜಯೋಗ ಬರುತ್ತದೆ ಗೊತ್ತಾ? ಈ ಕನಸುಗಳು ಸಮೃದ್ಧಿಯ ಸಂಕೇತ

ಕನ್ಯಾ ರಾಶಿ : ಈ ರಾಶಿಯ ಜನರು ಸುಖ ಸಮೃದ್ದಿಯ ಜೀವನವನ್ನು ಇಷ್ಟ ಪಡುತ್ತಾರೆ. ಕನ್ಯಾ ರಾಶಿಯ ಜನರು ಚಿನ್ನದ ಉಂಗುರ, ಚೈನ್ ಹೀಗೆ ಚಿನ್ನದಿಂದ ಮಾಡಿದ ಯಾವುದೇ ಆಭರಣ ಧರಿಸಿದರೂ ಅದೃಷ್ಟ ಅವರ ಕೈಹಿಡಿಯುತ್ತದೆ. 

ತುಲಾ ರಾಶಿ : ತುಲಾ ರಾಶಿಯ ಜನರಿಗೂ ಚಿನ್ನ ಶುಭ ಫಲವನ್ನೇ ನೀಡುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಚಿನ್ನದ ಉಂಗುರವು ತುಲಾ ರಾಶಿಯವರಿಗೆ ಅದೃಷ್ಟಡ ಬಾಗಿಲು ತೆರೆಯುತ್ತದೆ. ಈ ರಾಶಿಯ ಅಧಿಪತಿ ಶುಕ್ರ. ಚಿನ್ನ ಶುಕ್ರನಿಗೆ ಲಾಭದಾಯಕ ಎಂದು ಹೇಳಲಾಗುತ್ತದೆ. 

ಇದನ್ನೂ ಓದಿ : Name Astrology : ಈ ಅಕ್ಷರದ ಹೆಸರಿನವರಿಗೆ ಕೋಪವೇ ಶಾಪ : ನಿಮ್ಮ ಹೆಸರು ಇದೆಯಾ ನೋಡಿ

ಮೀನ ರಾಶಿ : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಿನ್ನವನ್ನು ಧರಿಸುವುದು ಮೀನ ರಾಶಿಯವರಿಗೆ ಕೂಡಾ ಅತ್ಯಂತ ಶುಭ. ಚಿನ್ನವನ್ನು ಧರಿಸುವುದು ಈ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ.ಇವರು ಚಿನ್ನ ಧರಿಸಿದರೆ ಜೀವನದಲ್ಲಿ ಎದುರಾಗುವ ಅಡೆತಡೆಗಳು ನಿವಾರ್ನೆಯಾಗುತ್ತದೆಯಂತೆ.  

 

( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

Trending News