Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಸೌರ ಶಿಶಿರ ಋತು, ಪುಷ್ಯ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿಯ ಈ ದಿನ ಮಂಗಳವಾರ, ರೇವತಿ ನಕ್ಷತ್ರ, ಶಿವ ಯೋಗ, ಬಾಲವ ಕರಣ. ಮೇಷದಿಂದ ಮೀನ ರಾಶಿಯವರೆಗೆ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ. 


COMMERCIAL BREAK
SCROLL TO CONTINUE READING

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ನಿಮ್ಮ ದಿನವು ಉತ್ಸಾಹದಿಂದ ತುಂಬಿರುತ್ತದೆ. ಪ್ರಮುಖ ಯೋಜನೆಗಳಲ್ಲಿ ಸ್ನೇಹಿತರ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಮನೆಯಲ್ಲಿ ಶುಭ ಕಾರ್ಯಗಳು ಜರುಗುವುವು. ಸಂಬಂಧಗಳಲ್ಲಿ ಮೂಡಿದ್ದ ಬಿರುಕು ಸರಿಹೋಗಲಿದೆ. 


ವೃಷಭ ರಾಶಿಯವರ ಭವಿಷ್ಯ (Taurus Horoscope):  
ಇಂದು ಇಡೀ ದಿನ ನೀವು ಸಂತಸದಿಂದ ಕಳೆಯುವಿರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿದ್ದರೂ ದಿಢೀರ್ ಧನಲಾಭವು ನಿಮ್ಮನ್ನು ಉತ್ಸಾಹದ ಚಿಲುಮೆಯಂತೆ ಇರಿಸಲಿದೆ. ದಾಂಪತ್ಯ ಜೀವನವು ಆನಂದದಾಯಕವಾಗಿರಲಿದೆ. 


ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ನಿಮಗೆ ಶುಭ ಸುದ್ದಿಯೊಂದು ಕೇಳಿಬರಲಿದೆ. ಕೆಲಸದಲ್ಲಿ ಉನ್ನತ ಅಧಿಕಾರಿಗಳ ಮನ್ನಣೆಗೆ ಪಾತ್ರರಾಗುವಿರಿ. ವ್ಯಾಪಾರಸ್ಥರಿಗೆ ಬಂಪರ್ ಲಾಭವಾಗಲಿದೆ. ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಬಡ್ತಿ ಸಂಭವವಿದೆ. ಕುಟುಂಬದೊಂದಿಗೆ ಪ್ರವಾಸಕ್ಕಾಗಿ ಯೋಜಿಸಬಹುದು. 


ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಇಂದು ನೀವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸಾಧಿಸುವಿರಿ. ಮಾಡುವ ಕೆಲಸಗಳಲ್ಲಿ ಶಿವನ ಬೆಂಬಲವಿದ್ದು ಸೋಲೆಂಬುದೇ ಇಕೃವುದಿಲ್ಲ. ಉದ್ಯೋಗಸ್ಥರಿಗೆ ಕೆಲಸದ ಹೊರೆ ಹೆಚ್ಚಾಗಬಹುದು. ಹಣಕಾಸಿನ ಸ್ಥಿತಿ ಮೊದಲಿಗಿಂತ ಉತ್ತಮವಾಗಿರಲಿದೆ. 


ಇದನ್ನೂ ಓದಿ- ಇಂದಿನಿಂದ ಧರ್ಮಸ್ಥಳದಲ್ಲೂ ತಿರುಪತಿ ಮಾದರಿ: ಏನೆಲ್ಲಾ ಹೊಸ ವ್ಯವಸ್ಥೆ ಮಾಡಲಾಗಿದೆ ಗೊತ್ತಾ...?


ಸಿಂಹ ರಾಶಿಯವರ ಭವಿಷ್ಯ (Leo Horoscope):  
ಬಹಳ ದಿನಗಳ ಬಳಿಕ ನೀವಿಂದು ಮಾನಸಿಕ ಶಾಂತಿಯನ್ನು ಅನುಭವಿಸುವಿರಿ. ಕುಟುಂಬದಲ್ಲಿ ಆಧ್ಯಾತ್ಮಿಕ ವಾತಾವರಣ ಇರುತ್ತದೆ. ಬೇರೆಯವರೊಂದಿಗೆ ನಿಮ್ಮ ನಡವಳಿಕೆಯಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳಿ. 


ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಸಮಾಜದಲ್ಲಿ ಇಂದು ನಿಮ್ಮ ಪ್ರತಿಷ್ಠೆ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಎಲ್ಲರೊಂದಿಗೆ ಒಟ್ಟಿಗೆ ಕುಳಿತು ಆಹ್ಲಾದಕರ ಸಮಯವನ್ನು ಆನಂದಿಸುವಿರಿ. ನಿಮ್ಮ ಆಲೋಚನೆಗಳಿಗೆ ವಿಶೇಷ ಪ್ರಾಮುಖ್ಯತೆ ಇರುತ್ತದೆ. ಹೊಸ ಕೆಲಸಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ. 


ತುಲಾ ರಾಶಿಯವರ ಭವಿಷ್ಯ (Libra Horoscope): 
ಇಂದು ಹಳೆಯ ಸ್ನೇಹಿತರೊಬ್ಬರ ಭೇಟಿ ನಿಮ್ಮ ಮನಸ್ಸಿಗೆ ಮುದ ನೀಡಲಿದೆ. ಕೌಟುಂಬಿಕ ವಾತಾವರಣವು ಸಂತೋಷದಾಯಕವಾಗಿ ಇರಲಿದೆ. ವ್ಯವಹಾರದ ದೃಷ್ಟಿಯಿಂದ ಇಂದು ಅನಿರೀಕ್ಷಿತ ಆದಾಯ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ನಿಮ್ಮ ಅಧ್ಯಯನದತ್ತ ಹೆಚ್ಚಿನ ಗಮನವಹಿಸಿ. 


ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಇಂದು ದಿನವಿಡೀ ಭರವಸೆಯಿಂದ ತುಂಬಿರಲಿದೆ. ಮಕ್ಕಳ ಅಧ್ಯಯನದಲ್ಲಿ ಯಶಸ್ಸನ್ನು ಕಂಡು ಮನಸ್ಸು ಸಂತಸಗೊಳ್ಳಲಿದೆ. ಆಶಾದಾಯಕವಾಗಿ ಭವಿಷ್ಯಕ್ಕಾಗಿ ಹಣವನ್ನು ಕೂಡಿದಿ. ಕುಟುಂಬದಲ್ಲಿ ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಿ. 


ಇದನ್ನೂ ಓದಿ- ಗಜಕೇಸರಿ ರಾಜಯೋಗ: ಮೂರು ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ, ದಿಢೀರ್ ಧನಲಾಭ, ಮನೆ ಖರೀದಿ ಯೋಗ


ಧನು ರಾಶಿಯವರ ಭವಿಷ್ಯ (Sagittarius Horoscope):  
ವೃತ್ತಿಪರರಿಗೆ ಬಾಸ್ ಇಂದು ನಿಮ್ಮನ್ನು ಹೊಗಳಬಹುದು. ಕುಟುಂಬ ಜೀವನದಲ್ಲಿ ಕೆಲವು ಶುಭ ಸುದ್ದಿಗಳನ್ನು ಕೇಳುವಿರಿ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯವನ್ನು ಕಂಡು ಎದುರಿನವರು ಬೆರಗಾಗುವರು. ವ್ಯಾಪಾರಸ್ಥರಿಗೆ ಅದೃಷ್ಟ ಖುಲಾಯಿಸಲಿದೆ. 


ಮಕರ ರಾಶಿಯವರ ಭವಿಷ್ಯ (Capricorn Horoscope):  
ಇಂದು ನಿಮಗೆ ಅನುಕೂಲಕರವಾದ ದಿನ. ಕುಟುಂಬದೊಂದಿಗೆ ಎಲ್ಲಾದರೂ ಪ್ರಯಾಣಕ್ಕಾಗಿ ಯೋಜಿಸಬಹುದು. ನಿಮ್ಮ ಮನೆಗೆ ಇಂದು ಪುಟ್ಟ ಅತಿಥಿಗಳ ಆಗಮನವಾಗಲಿದ್ದು ಮನೆಯಲ್ಲಿ ಸಂಭ್ರಮ ಹೆಚ್ಚಾಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಬಹುದು. 


ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಇಂದು ಮಕ್ಕಳೊಂದಿಗೆ ಹೊರಹೋಗಲು ಯೋಜಿಸಬಹುದು. ಮನೆಗೆ ಅತಿಥಿಗಳ ಆಗಮನದಿಂದ ಸಂತೋಷದ ವಾತಾವರಣ ತುಂಬಲಿದೆ. ವ್ಯಾಪಾರಸ್ಥರಿಗೆ ಹಣಕಾಸಿನ ಹರಿವು ಹೆಚ್ಚಾಗಲಿದ್ದು ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲಿದೆ. 


ಮೀನ ರಾಶಿಯವರ ಭವಿಷ್ಯ (Pisces Horoscope): 
ಇಂದು ನೀವು ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯುವಿರಿ. ನಿಮ್ಮ ಜೀವನಶೈಲಿಯನ್ನು ಬದಲಾಯಿಸುವ ಪ್ರಯತ್ನಕ್ಕೆ ಮನೆಯವರಿಗೆ ಬೆಂಬಲ ದೊರೆಯಲಿದೆ. ಉದ್ಯೋಗಸ್ಥರಿಗೆ ಇಂದು ಅನುಕೂಲಕರವಾದ ದಿನ. 


ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.