Mangalavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮಸಂವತ್ಸರ, ದಕ್ಷಿಣಾಯನ, ವರ್ಷಾ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ, ದ್ವಿತೀಯ ತಿಥಿ, ಮಂಗಳವಾರದ ಈ ದಿನ ಮಘಾ ನಕ್ಷತ್ರ, ವರೀಯಾನ ಯೋಗ ಯಾವ ರಾಶಿಯ ಜನರಿಗೆ ಏನು ಫಲ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ನಿಮ್ಮ ಜೀವನದಲ್ಲಿ ಬದಲಾವಣೆಗಳನ್ನು ಬಯಸಿದ್ದೀರಿ. ಆದರೆ, ಈ ಬಗ್ಗೆ ಭಯಪಡುವ ಅಗತ್ಯವಿಲ್ಲ. ಹಿರಿಯರ, ನಿಮ್ಮ ಹಿತೈಷಿಗಳ ಮಾರ್ಗದರ್ಶನ ಪಡೆದು ಮುಂದುವರೆಯಿರಿ. ವೃತ್ತಿ ಬದುಕಿನಲ್ಲಿ ನಿಮ್ಮ ಕೌಶಲ್ಯಗಳು ಬಲಗೊಳ್ಳಲಿವೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಹಣಕಾಸಿನ ವಿಷಯದಲ್ಲಿ ಪ್ರಗತಿ ಕಂಡು ಬರಲಿದೆ. ವೃತ್ತಿ-ವ್ಯವಹಾರದಲ್ಲಿ ಧನಾತ್ಮಕ ಫಲಗಳನ್ನು ನಿರೀಕ್ಷಿಸಬಹುದು. ಪ್ರೀತಿಯ ಜೀವನವು ನೀವಂದುಕೊಂಡಂತೆ ಸಾಗಲಿದೆ. ಆರೋಗ್ಯ ವಿಷಯದಲ್ಲಿ ಎಚ್ಚರಿಕೆಯಿಂದಿರಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ದೈನಂದಿನ ಬದುಕಿನಲ್ಲಿ ಶಿಸ್ತನ್ನು ರೂಢಿಸಿಕೊಳ್ಳಿ. ಇದರಿಂದ ಜೀವನದಲ್ಲಿ ಸಮತೋಲನವನ್ನು ಮರಳಿ ಪಡೆಯಲು ಅನುಕೂಲವಾಗುತ್ತದೆ. ಹೊಸ ವ್ಯವಹಾರ ಪ್ರಾರಂಭಿಸಲು ಶುಭ ದಿನ. ಪ್ರೀತಿಯಲ್ಲಿರುವವರಿಗೆ ಸಂತಸದ ದಿನ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ವೈಯಕ್ತಿಕ ಜೀವನದಲ್ಲಿ ಮಾತ್ರವಲ್ಲ ವೃತ್ತಿ ಕ್ಷೇತ್ರದಲ್ಲೂ ಹೊಸ ಹೊಸ ಅನುಭವವನ್ನು ಪಡೆಯುವಿರಿ. ನಿಮ್ಮ ಗುರಿಗಳತ್ತ ಗಮನಹರಿಸಿ ಮುಂದುವರೆಯುವುದರಿಂದ ಶುಭ. ಫಿಟ್ನೆಸ್ ಬಗ್ಗೆ ಕಾಳಜಿವಹಿಸಿ.
ಇದನ್ನೂ ಓದಿ- Surya Gochar 2024: ಸ್ವ ರಾಶಿಗೆ ಗ್ರಹಗಳ ರಾಜನ ಪ್ರವೇಶ, ಸೂರ್ಯನಂತೆಯೇ ಉಜ್ವಲಿಸಲಿದೆ ಈ ರಾಶಿಯವರ ಭವಿಷ್ಯ
ಸಿಂಹ ರಾಶಿಯವರ ಭವಿಷ್ಯ (Leo Horoscope):
ನಿಮ್ಮ ಬೆಳವಣಿಗೆಗೆ ಸಹಾಯಕವಾದ ದಿನ ಇದು. ಸುತ್ತಮುತ್ತಲಿನವರೊಂದಿಗೆ ಉತ್ತಮ ಸಂಪರ್ಕ ಸಾಧಿಸುವಿರಿ. ಕೆಲವು ವಿಚಾರಗಳಲ್ಲಿ ನೀವು ದೃಢವಾದ ನಿರ್ಧಾರ ಕೈಗೊಳ್ಳಬೇಕಾದ ಸಮಯ ಇದಾಗಿರುವುದರಿಂದ ಚಿಂತಿಸಿ ನಿರ್ಧರಿಸಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ದಿನವಿಡೀ ಸಂಶೋಧನೆ, ಬರವಣಿಗೆಯಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳುವಂತಹ ದಿನ ಇದಾಗಿದೆ. ಆರ್ಥಿಕ ಸುಧಾರಣೆಗೆ ಹೊಸ ಅವಕಾಶಗಳು ಗೋಚರಿಸಲಿವೆ. ಸಂಗಾತಿಯೊಂದಿಗಿನ ವೈಮಸ್ಸು ದೂರವಾಗಲಿದೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಉತ್ತಮ ಲಾಭ ದೊರೆಯಲಿದೆ. ಭೂಮಿ ಅಥವಾ ಯಾವುದೇ ಸ್ಥಿರಾಸ್ತಿಯಲ್ಲಿ ಹಣ ಹೂಡಿಕೆ ಮಾಡುವುದು ಫಲಪ್ರದವಾಗಿದೆ. ಉದ್ಯೋಗ ರಂಗದಲ್ಲಿ ನಿಮ್ಮ ಕೆಲಸಕ್ಕೆ ಮನ್ನಣೆ ದೊರೆಯುವುದು.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ನಿಮ್ಮ ಜೀವನದಲ್ಲಿ ಹೆಚ್ಚಿನ ಅನುಭವ, ಜ್ಞಾನವನ್ನು ಪಡೆಯಲು ನಿಮ್ಮ ಮನಸ್ಸು ಹಾತೊರೆಯುವುದು. ಎಂತಹುದೇ ಸಂದರ್ಭದಲ್ಲಿ ಧನಾತ್ಮಕವಾಗಿ ಇರಲು ಪ್ರಯತ್ನಿಸಿ. ಆರೋಗ್ಯದ ವಿಚಾರದಲ್ಲಿ ಕೊಂಚ ಕಾಳಜಿ ಅಗತ್ಯವಿದೆ.
ಇದನ್ನೂ ಓದಿ- Astro Tips: ಸೋಮವಾರ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ, ಮಾಡಿದ್ರೆ ಬಡತನ ಬರುತ್ತದೆ!
ಧನು ರಾಶಿಯವರ ಭವಿಷ್ಯ (Sagittarius Horoscope):
ಕಾನೂನಾತ್ಮಕ ಸಮಸ್ಯೆಗಳಿಗೆ ಪರಿಹಾರ ದೊರೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಅದೃಷ್ಟ ನಿಮ್ಮ ಪರವಾಗಿದ್ದು, ಯಾವುದೇ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸುವಿರಿ. ವೈಯಕ್ತಿಕ ಬೆಳವಣಿಗೆಗೆ ಸೂಕ್ತ ಅವಕಾಶಗಳು ದೊರೆಯಲಿವೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಜೀವನದಲ್ಲಿ ಹಣಕಾಸಿನ ಬಿಕ್ಕಟ್ಟುಗಳು ಹೆಚ್ಚು ಬಾಧಿಸಬಹುದು. ಆದಾಗ್ಯೂ, ನಿಮ್ಮ ಪ್ರೀತಿಪಾತ್ರರಿಗೆ ಸಹಾಯ ಮಾಡುವ ನಿಮ್ಮ ಗುಣವೇ ನಿಮಗೆ ಕಾವಲಾಗಿರಲಿದೆ. ಬದಲಾಗುತ್ತಿರುವ ಪರಿಸರಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸಿದರೆ ಶುಭ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಆಂತರಿಕ ಬದಲಾವಣೆಗಳಿಗೆ ನಿಮ್ಮ ಮನಸ್ಸನ್ನು ಸಿದ್ಧಗೊಳಿಸಿ. ನಿಮ್ಮ ಕುಟುಂಬ ಸದಸ್ಯರಿಗೆ ಅಗತ್ಯವಿರುವ ನೆರವು ನೀಡಿ. ವೃತ್ತಿಪರ ಜೀವನದಲ್ಲಿ ಎದುರಾಗಿದ್ದ ಸಮಸ್ಯೆಗಳು ಕೊನೆಗೊಳ್ಳಲಿವೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ತೆರಳುವ ನಿಮ್ಮ ಕನಸು ಸಾಕಾರಗೊಳ್ಳಲಿದೆ. ಸಾಗರೋತ್ತರ ಆಮದು-ರಫ್ತು ವ್ಯಾಪಾರದಲ್ಲಿ ಬಂಪರ್ ಧನಲಾಭವನ್ನು ನಿರೀಕ್ಷಿಸಬಹುದು. ಹಣಕಾಸಿನ ಸ್ಥಿತಿ ಉತ್ತಮಗೊಳ್ಳಲಿದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.