Mangal Gochar: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನವಗ್ರಹಗಳಲ್ಲಿ ಪ್ರತಿ ಗ್ರಹವೂ ಕೂಡ ತನ್ನದೇ ಆದ ಕಾಲದಲ್ಲಿ ತಮ್ಮ ರಾಶಿಚಕ್ರವನ್ನು ಬದಲಾಯಿಸುತ್ತವೆ. ಯಾವುದೇ ಒಂದು ಗ್ರಹದ ಚಲನೆಯಲ್ಲಿನ ಸಣ್ಣ ಬದಲಾವಣೆಯೂ ಸಹ ಎಲ್ಲಾ ಜೀವರಾಶಿಯ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಇದೀಗ, ಬೆಳಕಿನ ಹಬ್ಬ ದೀಪಾವಳಿಗೂ ಮೊದಲು ಗ್ರಹಗಳ ಕಮಾಂಡರ್ ಮಂಗಳ ಗ್ರಹ ತನ್ನ ರಾಶಿಯನ್ನು ಬದಲಾಯಿಸಲಿದೆ.
ದೀಪಾವಳಿ ಹಬ್ಬಕ್ಕೂ ಮೊದಲು ಮಂಗಳ ರಾಶಿ ಪರಿವರ್ತನೆ ಹೊಂದಿ ತನ್ನದೇ ಆದ ವೃಶ್ಚಿಕ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಶುಭ-ಅಶುಭ ಪರಿಣಾಮಗಳು ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಮಂಗಳ ಸಂಚಾರ ಬದಲಾವಣೆಯು ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳನ್ನು ತೆರೆಯಲಿದ್ದು, ಭಾಗ್ಯದ ಜ್ಯೋತಿಯನ್ನು ಬೆಳಗಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- Numerology: ಎಂತಹವರನ್ನೇ ಆದರೂ ಮೊದಲ ನೋಟದಲ್ಲೇ ಮೋಡಿ ಮಾಡುತ್ತಾರೆ ಈ ದಿನಾಂಕದಂದು ಜನಸಿದ ಜನ
ದೀಪಾವಳಿಗೂ ಮೊದಲು ಮಂಗಳ ರಾಶಿ ಪರಿವರ್ತನೆ: ತೆರೆಯಲಿದೆ ಮೂರು ರಾಶಿಯವರ ಅದೃಷ್ಟದ ಬಾಗಿಲು:-
ಸಿಂಹ ರಾಶಿ:
ಸಿಂಹ ರಾಶಿಯವರ ಅದೃಷ್ಟದ ಸ್ಥಾನದ ಅಧಿಪತಿಯಾಗಿರುವ ಮಂಗಳನ ರಾಶಿ ಬದಲಾವಣೆಯು ಈ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆ. ಈ ಸಮಯದಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದ್ದು, ಪ್ರಯಾಣವು ಲಾಭದಾಯಕವಾಗಿರುತ್ತದೆ. ಪೂರ್ವಜರ ಆಸ್ತಿ ಪ್ರಯೋಜನಕಾರಿ ಆಗಿರಲಿದೆ. ಸ್ವಂತ ಮನೆ, ವಾಹನ ಖರೀದಿಸುವ ಯೋಗವೂ ಇದೆ.
ತುಲಾ ರಾಶಿ:
ಮಂಗಳ ರಾಶಿ ಬದಲಾವಣೆಯು ತುಲಾ ರಾಶಿಯವರಿಗೆ ಹಣದ ಸುರಿಮಳೆಯನ್ನೇ ಸುರಿಸಲಿದೆ. ಈ ಸಂದರ್ಭದಲ್ಲಿ ತುಲಾ ರಾಶಿಯವರು ದಿಢೀರ್ ಸಂಪತ್ತನ್ನು ಪಡೆಯುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ಕಣ್ಮರೆಯಾಗಿದ್ದ ಸುಖ-ಸಂತೋಷ ಮತ್ತೆ ಕಾಣಿಸಿಕೊಳ್ಳಲಿದೆ. ಒಂದರ್ಥದಲ್ಲಿ ಈ ಸಮಯದಲ್ಲಿ ನಿಮ್ಮ ಇಷ್ಟಾರ್ಥಗಳೆಲ್ಲವೂ ನೆರವೇರಲಿದೆ.
ಇದನ್ನೂ ಓದಿ- Rahu Ketu Upay: ರಾಹು-ಕೇತು ದೋಷದಿಂದ ಮುಕ್ತಿಗಾಗಿ ಈ ಕೆಲಸ ಮಾಡಿ
ಮೀನ ರಾಶಿ:
ಮಂಗಳ ಸಂಚಾರದಿಂದ ಮೀನ ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ಉನ್ನತ ವಿದ್ಯಾಭ್ಯಾಸ, ಇಲ್ಲವೇ ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಲು ಬಯಸುವವರಿಗೆ ಮಂಗಳಕರ ಸಮಯ ಇದಾಗಿದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಹೊಸ ಅವಕಾಶಗಳ ಜೊತೆಗೆ ಹಣಕಾಸಿನ ಮೂಲಗಳು ಹೆಚ್ಚಾಗುವುದರಿಂದ ನಿಮ್ಮ ಹಣಕಾಸಿನ ಸಮಸ್ಯೆಗಳು ಶಾಶ್ವತವಾಗಿ ಕೊನೆಗೊಳ್ಳಲಿವೆ ಎಂದು ಹೇಳಲಾಗುತ್ತಿದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.