ಮಾಸ ಭವಿಷ್ಯ: ಮಾರ್ಚ್ ತಿಂಗಳಿನಲ್ಲಿ ಪ್ರಕಾಶಿಸಲಿದೆ ಈ ರಾಶಿಯವರ ಅದೃಷ್ಟ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಾರ್ಚ್ ಮಾಸದಲ್ಲಿಯೂ ಕೂಡ ಕೆಲವು ಪ್ರಮುಖ ಗ್ರಹಗಳು ತಮ್ಮ ಸ್ಥಾನವನ್ನು ಬದಲಾಯಿಸಲಿವೆ. ಇದಲ್ಲದೆ, ಈ ತಿಂಗಳಿನಲ್ಲಿ ಕೆಲವು ಪ್ರಮುಖ ಹಬ್ಬಗಳನ್ನು ಕೂಡ ಆಚರಿಸಲಾಗುತ್ತಿದೆ. ಇವೆಲ್ಲವೂ ಎಲ್ಲಾ 12 ರಾಶಿಗಳ ಮೇಲೆ ಬಹಳ ಗಮನಾರ್ಹವಾದ ಪರಿಣಾಮವನ್ನು ಬೀರಲಿವೆ. ಜ್ಯೋತಿಷ್ಯ ಲೆಕ್ಕಾಚಾರದ ದೃಷ್ಟಿಯಿಂದ ಮಾರ್ಚ್ ತಿಂಗಳಿನಲ್ಲಿ ಕೆಲವು ರಾಶಿಯವರ ಅದೃಷ್ಟದ ಬಾಗಿಲು ತೆರೆಯಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ಇನ್ನೇನು ಫೆಬ್ರವರಿ ತಿಂಗಳ ಅಂತ್ಯಕ್ಕೆ ಬಂದಿದ್ದೇವೆ. ಮಾರ್ಚ್‌ನಲ್ಲಿ ಹೋಳಿ, ಚೈತ್ರ ನವರಾತ್ರಿಯಂತಹ ಪ್ರಮುಖ ಹಬ್ಬಗಳನ್ನು ಆಚರಿಸಲಾಗುತ್ತಿದೆ. ಈ ವರ್ಷ ಧರ್ಮ ಮತ್ತು ಜ್ಯೋತಿಷ್ಯ ಎರಡೂ ಕಾರಣಗಳಿಂದಾಗಿ ಮಾರ್ಚ್ ತಿಂಗಳು ಬಹಳ ಮಹತ್ವದ್ದಾಗಿದೆ. ಈ ತಿಂಗಳಿನಲ್ಲಿ ಕೆಲವು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಮಾಡಲಿದ್ದು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಸಾಬೀತುಪಡಿಸಲಿವೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಾರ್ಚ್ ತಿಂಗಳನ್ನು ಕೆಲವು ರಾಶಿಯವರಿಗೆ ತುಂಬಾ ಮಂಗಳಕರ ಎಂದು ಬಣ್ಣಿಸಲಾಗುತ್ತಿದೆ. ಮಾರ್ಚ್‌ನಲ್ಲಿ ಕೆಲ ರಾಶಿಯ ಜನರಿಗೆ ಬಡ್ತಿ, ಇನ್‌ಕ್ರಿಮೆಂಟ್ ಸಾಧ್ಯತೆ ಕೂಡ ಇದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ...
ವೃಷಭ ರಾಶಿ:
ವೃಷಭ ರಾಶಿಯವರಿಗೆ ವೃತ್ತಿ ಬದುಕಿಗೆ ಸಂಬಂಧಿಸಿದಂತೆ ಮಾರ್ಚ್ ತಿಂಗಳು ಅತ್ಯದ್ಭುತವಾಗಿದೆ ಎಂದು ಹೇಳಲಾಗುತ್ತಿದೆ. ಈ ತಿಂಗಳು ನೀವು ತೆಗೆದುಕೊಳ್ಳುವ ಕೆಲವು ಪ್ರಮುಖ ನಿರ್ಧಾರಗಳು ನಿಮ್ಮ ಯಶಸ್ಸಿನ ಹಾದಿಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ವ್ಯಾಪಾರ-ವ್ಯವಹಾರದ ದೃಷ್ಟಿಯಿಂದಲೂ ಮಾರ್ಚ್ ಮಾಸ ನಿಮಗೆ ಅದ್ಭುತವಾಗಿದ್ದು, ನಿಮ್ಮ ಪ್ರತಿಯೊಂದು ಕೆಲಸದಲ್ಲಿಯೂ ಅದೃಷ್ಟದ ಬೆಂಬಲ ಇರಲಿದೆ.
ಇದನ್ನೂ ಓದಿ- ಗುರು ಶುಕ್ರ ಯುತಿ ಪರಿಣಾಮ: ಮೂರು ರಾಶಿಯವರಿಗೆ ಭಾರೀ ಅದೃಷ್ಟ
ಕನ್ಯಾ ರಾಶಿ:
ಕನ್ಯಾ ರಾಶಿಯವರು ಕೂಡ ಮಾರ್ಚ್ ತಿಂಗಳಿನಲ್ಲಿ ಉದ್ಯೋಗದಲ್ಲಿ ಸುಧಾರಣೆಗಳನ್ನು ಕಾಣಬಹುದು. ಹೊಸ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಈ ಸಮಯದ ಅತ್ಯುತ್ತಮವಾಗಿದ್ದು ನಿಮ್ಮ ನೆಚ್ಚಿನ ಉದ್ಯೋಗ ದೊರೆಯುವ ಸಾಧ್ಯತೆ ಇದೆ. ಆರ್ಥಿಕ ಲಾಭವೂ ಇದೆ. ಆದರೆ, ನಿಮ್ಮ ಖರ್ಚು ವೆಚ್ಚಗಳನ್ನು ನಿಯಂತ್ರಿಸುವುದು ಮುಖ್ಯ.
ತುಲಾ ರಾಶಿ:
ಮಾರ್ಚ್ ಮಾಸದ ಆರಂಭದಲ್ಲಿಯೇ ಈ ರಾಶಿಯವರಿಗೆ ಉದ್ಯೋಗದಲ್ಲಿ ಭರ್ಜರಿ ಯಶಸ್ಸು ಪ್ರಾಪ್ತಿಯಾಗಲಿದೆ. ವ್ಯಾಪಾರಸ್ಥರಿಗೂ ಲಾಭವಾಗಲಿದೆ. ದಾಂಪತ್ಯ ಜೀವನವೂ ಮಾಧುರ್ಯದಿಂದ ಕೂಡಿರಲಿದೆ. ಆದಾಗ್ಯೂ, ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸುವುದು ಒಳ್ಳೆಯದು.
ಇದನ್ನೂ ಓದಿ- ಈ ವಸ್ತುಗಳನ್ನು ದಾನ ಮಾಡಿದರೆ ಶನಿ ಸಂತೋಷಗೊಳ್ಳುತ್ತಾನೆ, ಶ್ರೀಮಂತರಾಗಲು ಇದು ಸುಲಭ ಮಾರ್ಗ!
ಧನು ರಾಶಿ:
ಮಾರ್ಚ್ ಮಾಸಿಕ ಜ್ಯೋತಿಷ್ಯದ ಪ್ರಕಾರ, ಈ ತಿಂಗಳಿನಲ್ಲಿ ಧನು ರಾಶಿಯವರಿಗೆ ಬಡ್ತಿ, ಇನ್‌ಕ್ರಿಮೆಂಟ್ ಸಾಧ್ಯತೆ ಇದೆ. ಹಣಕಾಸಿನ ಹರಿವು ಹೆಚ್ಚಾಗಲಿದ್ದು ವಿತ್ತೀಯ ಸ್ಥಿತಿ ಸುಧಾರಿಸಲಿದೆ. ಹೊಸ ವ್ಯಾಪಾರ ಆರಂಭಿಸಲು ಯೋಚಿಸುತ್ತಿರುವವರಿಗೆ ಉತ್ತಮ ಸಮಯ ಇದಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.