Rahu Gochar 2023:  ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪಾಪ ಗ್ರಹ ಎಂದು ಬಣ್ಣಿಸಲ್ಪಡುವ ರಾಹು ತನ್ನ ರಾಶಿಚಕ್ರವನ್ನು ಬದಲಾಯಿಸಿದಾಗಲೆಲ್ಲಾ ಅದರ ಪರಿಣಾಮವು ಎಲ್ಲಾ 12 ರಾಶಿಗಳ ಮೇಲೆ ಕಂಡು ಬರುತ್ತದೆ. ಸಾಮಾನ್ಯವಾಗಿ, ಶನಿ, ರಾಹು, ಕೇತು ಪರಿಣಾಮ ಎಂದರೆ ಜನರ ಮನಸ್ಸಿನಲ್ಲಿ ಈ ಗ್ರಹಗಳು ಕೆಟ್ಟ ಪರಿಣಾಮವನ್ನೇ ಉಂಟು ಮಾಡುತ್ತವೆ ಎಂಬ ನಂಬಿಕೆ ಇದೆ. ಆದರೆ, ಜಾತಕದಲ್ಲಿ ಈ ಗ್ರಹಗಳು ಶುಭ ಸ್ಥಾನದಲ್ಲಿದ್ದರೆ ಇದರಿಂದ ಒಳ್ಳೆಯ ಫಲಗಳು ಕೂಡ ದೊರೆಯುತ್ತವೆ. 


COMMERCIAL BREAK
SCROLL TO CONTINUE READING

ವೈದಿಕ ಜ್ಯೋತಿಷ್ಯದ ಪ್ರಕಾರ, ರಾಹು ಹಿಮ್ಮುಖವಾಗಿ ಚಲಿಸುವ ಗ್ರಹ. ಅಕ್ಟೋಬರ್ 30 ರಂದು ಮಧ್ಯಾಹ್ನ 12.30 ಕ್ಕೆ ರಾಹು ಗ್ರಹವು ಮೇಷ ರಾಶಿಯನ್ನು ತೊರೆದು ಮೀನ ರಾಶಿಯನ್ನು ಪ್ರವೇಶಿಸಲಿದೆ. ಈ ಸಮಯದಲ್ಲಿ ರಾಹುವು ಕೆಲವು ರಾಶಿಯವರಿಗೆ ಭಾಗ್ಯೋದಯವನ್ನು ಕರುಣಿಸಲಿದ್ದಾನೆ  ಎಂದು ಹೇಳಲಾಗುತ್ತಿದೆ. 2023ರಲ್ಲಿ  ರಾಹು ಸಂಕ್ರಮಣದಿಂದ ಯಾವ್ಯಾವ ರಾಶಿಯವರಿಗೆ ಪ್ರಯೋಜನವಾಗಲಿದೆ ತಿಳಿಯಿರಿ.


ಇದನ್ನೂ ಓದಿ- Shani Gochar 2023: ಇನ್ನೊಂದು ವಾರದಲ್ಲಿ ಶನಿ ಸಂಚಾರದಲ್ಲಿ ಬದಲಾವಣೆ ನಿಮ್ಮ ಮೇಲೆ ಏನು ಪರಿಣಾಮ


ಈ ರಾಶಿಯವರಿಗೆ ಅಪಾರ ಹಣ, ಯಶಸ್ಸು ನೀಡಲಿದ್ದಾನೆ ರಾಹು :
ಮೇಷ ರಾಶಿ: 

ಮೇಷ ರಾಶಿಯಿಂದ ಮೀನ ರಾಶಿಗೆ ಪ್ರವೇಶಿಸಲಿರುವ ರಾಹು ಈ ರಾಶಿಯವರಿಗೆ ಭಾಗ್ಯೋದಯವನ್ನು ಕರುಣಿಸಲಿದ್ದಾನೆ. ರಾಹುವಿನ ಶುಭ ಪರಿಣಾಮದಿಂದಾಗಿ ಈ ರಾಶಿಯವರಿಗೆ ಕೈ ಹಾಕಿದ ಕೆಲಸಗಳಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ಇದಲ್ಲದೆ, ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಲಿದೆ.


ಕರ್ಕಾಟಕ ರಾಶಿ:
ರಾಹು ರಾಶಿ ಪರಿವರ್ತನೆಯು ಕರ್ಕಾಟಕ ರಾಶಿಯವರಿಗೂ ಲಾಭದಾಯಕವಾಗಲಿದೆ. ಈ ಸಮಯದಲ್ಲಿ ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿವೆ. ಈ ಸಮಯದಲ್ಲಿ ವ್ಯಾಪಾರಸ್ಥರಿಗೆ ನಿರೀಕ್ಷೆಗಿಂತ ಹೆಚ್ಚಿನ ಪ್ರಯೋಜನವಾಗಲಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ- Shukra Gochar 2023: ಶನಿಯ ರಾಶಿಯಲ್ಲಿ ಶುಕ್ರನ ಸಂಚಾರ- ಈ ರಾಶಿಯವರಿಗೆ ಧನ ಲಾಭ


ಮೀನ ರಾಶಿ: 
ಮೀನ ರಾಶಿಯಲ್ಲಿಯೇ ರಾಹುವಿನ ಸಂಚಾರ ನಡೆಯಲಿದ್ದು ಈ ಸಮಯದಲ್ಲಿ ಮೀನ ರಾಶಿಯವರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬ ಸ್ಥಿತಿ ನಿರ್ಮಾಣವಾಗಲಿದೆ. ಉದ್ಯೋಗಸ್ಥರಿಗೆ ಪ್ರಮೋಷನ್ ಪ್ರಾಪ್ತಿಯಾಗುವ ಯೋಗವಿದ್ದು ವಿತ್ತೀಯ ಲಾಭದಿಂದಾಗಿ ಕುಟುಂಬದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಲಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.