Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ಪ್ರತಿಪದಾ ತಿಥಿ, ಸೋಮವಾರದ ಈ ದಿನ ಆರ್ದ್ರಾ ನಕ್ಷತ್ರ, ಶುಕ್ಲ ಯೋಗ, ತೈತಿಲ ಕರಣ. ಇಂದು ಯಾವ ರಾಶಿಯವರ ಫಲ ಹೇಗಿದೆ ತಿಳಿಯಿರಿ. 


COMMERCIAL BREAK
SCROLL TO CONTINUE READING

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ನಿಮ್ಮ ದಿನವು ಆಹ್ಲಾದಕರವಾಗಿರುತ್ತದೆ. ಭೂಮಿ ಅಥವಾ ಮನೆ ಖರೀದಿಸುವ ನಿಮ್ಮ ಆಸೆ ಈಡೇರಲಿದೆ. ಕೆಲಸದ ಸ್ಥಳದಲ್ಲಿ ನಿಮ್ಮಿಚ್ಚೆಯಂತೆ ಮೇಲಾಧಿಕಾರಿಗಳು ನಿಮ್ಮನ್ನು ಹೊಗಳುವರು. ನಿಮ್ಮ ಪ್ರತಿ ಕೆಲಸದಲ್ಲೂ ಕುಟುಂಬಸ್ಥರ ಸಂಪೂರ್ಣ ಬೆಂಬಲ ದೊರೆಯಲಿದೆ. 


ವೃಷಭ ರಾಶಿಯವರ ಭವಿಷ್ಯ (Taurus Horoscope):  
ನಿಮಗಿಂದು ಉತ್ತಮವಾದ ದಿನ. ಸಮಾಜದಲ್ಲಿ ನಿಮ್ಮ ಇಮೇಜ್‌ಗೆ ಅನುಗುಣವಾಗಿಯೇ ನೀವು ಫಲಿತಾಂಶವನ್ನು ಪಡೆಯುತ್ತೀರಿ. ವ್ಯಾಪಾರ ವ್ಯವಹಾರವನ್ನು ವಿಸ್ತರಿಸಲು ಸಮಯ ಉತ್ತಮವಾಗಿದೆ. ಪ್ರಮುಖ ಕೆಲಸಗಳಲ್ಲಿ ಸಂಗಾತಿ ಬೆಂಬಲ ದೊರೆಯಲಿದೆ. ಕುಟುಂಬದಲ್ಲಿ ವಾತಾವರಣ ಶಾಂತಿಯುತವಾಗಿರುತ್ತದೆ. 


ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಅನುಕೂಲಕರವಾದ ದಿನ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಇಂದು ಹೊಸ ಕೆಲಸವನ್ನು ಆರಂಭಿಸಲು ಸಮಯ ಪ್ರಾಶಸ್ತ್ಯವಾಗಿದೆ. ಮನೆಯಲ್ಲಿ ಐಷಾರಾಮಿ ವಸ್ತುಗಳನ್ನು ಖರೀದಿಸುವಿರಿ. ಆರ್ಥಿಕ ಸ್ಥಿತಿ ಮೊದಲಿಗಿಂತ ಉತ್ತಮವಾಗಿರಲಿದೆ. 


ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಇಂದು ನಿಮಗೆ ಸಂತೋಷದ ದಿನವಾಗಿರುತ್ತದೆ. ಬಿಡುವಿಲ್ಲದ ನಿಮ್ಮ ಕೆಲಸಕಾರ್ಯಗಳ ನಡುವೆ ಮಕ್ಕಳಿಗಾಗಿ ಸ್ವಲ್ಪ ಸಮಯವನ್ನು ಮೀಸಲಿಡಿ. ಇಂದು ನಿಮ್ಮ ಆಲೋಚನೆಗಳನ್ನು ಹೆತ್ತವರೊಂದಿಗೆ ಹಂಚಿಕೊಳ್ಳಿ. ಸಮಸ್ಯೆಗಳಿಂದ ಸುಲಭ ಪರಿಹಾರ ದೊರೆಯಲಿದೆ. 


ಇದನ್ನೂ ಓದಿ- ಧನುರ್ಮಾಸದಲ್ಲಿ ಸೂರ್ಯನಂತೆ ಪ್ರಜ್ವಲಿಸಲಿದೆ ಈ ರಾಶಿಯವರ ಬಾಳು, ಸೂರ್ಯ ದೇವನಿಂದ ಸುಖದ ಸುಪ್ಪತ್ತಿಗೆಯಲ್ಲೇ ಜೀವನ..! 


ಸಿಂಹ ರಾಶಿಯವರ ಭವಿಷ್ಯ (Leo Horoscope):  
ಇಂದು ನಿಮಗೆ ಒಳ್ಳೆಯ ದಿನವಾಗಿರಲಿದೆ. ಈ ದಿನ ನೀವು ಹೆಚ್ಚು ಉಲ್ಲಾಸವನ್ನು ಅನುಭವಿಸುವಿರಿ. ಇದರಿಂದ ನಿಮ್ಮ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಿರಿ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. 


ಕನ್ಯಾ ರಾಶಿಯವರ ಭವಿಷ್ಯ (Virgo Horoscope)
ಇಂದು ನಿಮ್ಮ ಕೆಲಸಗಳಲ್ಲಿ ಕುಟುಂಬದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.  ಭವಿಷ್ಯಕ್ಕಾಗಿ ಹಣ ಉಳಿಸುವುದನ್ನು ಪರಿಗಣಿಸಿ. ಕುಟುಂಬದ ಜವಾಬ್ದಾರಿಗಳನ್ನು ತೆಗೆದುಕೊಳ್ಳಲು ಮುಂದೆ ಬರುವ ನಿಮ್ಮ ಗುಣವು ಕುಟುಂಬಸ್ಥರ ಸಂತಸಕ್ಕೆ ಕಾರಣವಾಗಲಿದೆ. 


ತುಲಾ ರಾಶಿಯವರ ಭವಿಷ್ಯ (Libra Horoscope): 
ಇಂದು ಪ್ರಭಾವಿ ವ್ಯಕ್ತಿಯೊಬ್ಬರು ನಿಮ್ಮನ್ನು ಭೇಟಿಯಾಗಲಿದ್ದಾರೆ. ಮಕ್ಕಳ ಕಡೆಯಿಂದ ಆಹ್ಲಾದಕರ ಅನುಭವವನ್ನು ಹೊಂದುವಿರಿ. ಪೋಷಕರಿಂದ ಸಂಪೂರ್ಣ ಬೆಂಬಲ ದೊರೆಯಲಿದ್ದು ಹಿಡಿದ ಕೆಲಸಗಳಲ್ಲಿ ಜಯ ಸಾಧಿಸುವಿರಿ. 


ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಇಂದು ನಿಮಗೆ ದಿನವು ಅನುಕೂಲಕರವಾಗಿದೆ. ಯಾವುದೇ ವಿಚಾರಗಳಲ್ಲಿ ಅತಿಯಾಗಿ ಯೋಚಿಸುವುದನ್ನು ತಪ್ಪಿಸಿ. ಸ್ನೇಹಿತರು ಮನೆಗೆ ಭೇಟಿ ನೀಡುವುದು ನಿಮ್ಮ ಮನಸ್ಸಿಗೆ ಸಂತಸವನ್ನು ನೀಡಲಿದೆ. ಪ್ರೀತಿಪಾತ್ರರೊಂದಿಗೆ ಉತ್ತಮ ಸಮಯವನ್ನು ಆನಂದಿಸುವಿರಿ. 


ಇದನ್ನೂ ಓದಿ- Money Tips: ಹೆಂಡತಿ ʼಈʼ ಒಂದೇ ಒಂದು ಕೆಲಸ ಮಾಡಿದ್ರೆ ಸಾಕು ಗಂಡನ ಪರ್ಸ್‌ನಲ್ಲಿ ಹಣ ತುಂಬಿರುತ್ತೆ!!


ಧನು ರಾಶಿಯವರ ಭವಿಷ್ಯ (Sagittarius Horoscope):  
ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ಇಂದು ನೀವು ನಿರತರಾಗಿರುತ್ತೀರಿ. ಬಹಳ ದಿನಗಳಿಂದ ಬೇರೆಡೆ ಸಿಲುಕಿದ್ದ ಹಣ ಇಂದು ಕೈ ಸೇರಲಿದೆ. ಗೃಹೋಪಯೋಗಿ ವಸ್ತುಗಳಿಗಾಗಿ ಹಣ ವ್ಯಯಿಸಬಹುದು. ಖಾಸಗಿ ಉದ್ಯೋಗದಲ್ಲಿರುವವರು ಬಡ್ತಿ ಪಡೆಯುವ ಸಾಧ್ಯತೆ ಇದೆ. 


ಮಕರ ರಾಶಿಯವರ ಭವಿಷ್ಯ (Capricorn Horoscope):  
ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತಯಾರಿ ನಡೆಸುತ್ತಿರುವವರಿಗೆ ಇಂದು ಶುಭ ಸುದ್ದಿಯೊಂದು ಕೇಳಿಬರಲಿದೆ. ಕಚೇರಿಯಲ್ಲಿ ನಿಮ್ಮ ಫೋನ್ ಬಳಕೆಯನ್ನು ಕಡಿಮೆ ಮಾಡಿ. ಮೂಳೆ ಸಂಬಂಧಿತ ಆರೋಗ್ಯ ಸಮಸ್ಯೆಗಳಿದ್ದರೆ ತಡಮಾಡದೆ ಇಂದು ವೈದ್ಯರನ್ನು ಭೇಟಿಯಾಗಿ. 


ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಇಂದು ಉದ್ಯೋಗದಲ್ಲಿ ಆಹ್ಲಾದಕರ ಬದಲಾವಣೆಗಳನ್ನು ಕಾಣುವಿರಿ. ನಿಮ್ಮ ಆರೋಗ್ಯವು ಉತ್ತಂವಾಗಿರುತ್ತದೆ. ಜವಳಿ ವ್ಯಾಪಾರಿಗಳು ಇಂದು ಕಠಿಣ ಪರಿಶ್ರಮದ ಸಂಪೂರ್ಣ ಫಲವನ್ನು ಪಡೆಯುತ್ತೀರಿ. ನಿಮ್ಮ ತಾಯಿಗೆ ನೆಚ್ಚಿನ ವಸ್ತುಗಳನ್ನು ಉಡುಗೊರೆಯಾಗಿ ನೀಡಲು ಯೋಜಿಸಬಹುದು. 


ಮೀನ ರಾಶಿಯವರ ಭವಿಷ್ಯ (Pisces Horoscope): 
ಇಂದು ವ್ಯವಹಾರದಲ್ಲಿ ಬಂಪರ್ ಆರ್ಡರ್ ಒಂದು ಸಿಗಬಹುದು. ಇದು ನಿಮ್ಮ ಆದಾಯವನ್ನು ಹೆಚ್ಚಿಸಲಿದೆ. ದಾಂಪತ್ಯ ಜೀವನದಲ್ಲಿ ಮಾಧುರ್ಯತೆ ಹೆಚ್ಚಾಗಲಿದೆ. ಕೌಟುಂಬಿಕ ಸಮಸ್ಯೆಗಳು ಬಗೆಹರಿದು ವಾತಾವರಣ ಮೊದಲಿಗಿಂತ ಹೆಚ್ಚು ಅನುಕೂಲಕರವಾಗಿರುತ್ತದೆ. 


ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.