Venus Transit 2023: ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸುಖ-ಸಂಪತ್ತು, ಐಷಾರಾಮಿ ಜೀವನಕಾರಕನಾದ ಶುಕ್ರನು ಶೀಘ್ರದಲ್ಲೇ ರಾಶಿ ಪರಿವರ್ತನೆ ಮಾಡಲಿದ್ದಾನೆ. ಮೇ ತಿಂಗಳ ಆರಂಭದಲ್ಲಿ ಮಿಥುನ ರಾಶಿಯನ್ನು ಪ್ರವೇಶಿಸಿದ್ದ ಶುಕ್ರನು ಇನ್ನೊಂದು ವಾರದಲ್ಲಿ ಕರ್ಕಾಟಕ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, 30 ಮೇ 2023ರಂದು ರಾತ್ರಿ 7.51ರ ಸುಮಾರಿಗೆ ಶುಕ್ರ ರಾಶಿ ಪರಿವರ್ತನೆ ಹೊಂದಲಿದ್ದಾನೆ.
ಕರ್ಕಾಟಕ ರಾಶಿಗೆ ಐಷಾರಾಮಿ ಜೀವನದ ಅಂಶವಾದ ಶುಕ್ರನ ಪ್ರವೇಶವು ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಆದರೆ, ಮೇ ಅಂತ್ಯದಲ್ಲಿ ಶುಕ್ರನ ರಾಶಿ ಪರಿವರ್ತನೆಯು ಕೆಲವು ರಾಶಿಯವರ ಜೀವನದಲ್ಲಿ ಬಂಪರ್ ಧನಯೋಗವನ್ನು ತರಲಿದೆ. ಅದರಲ್ಲೂ ಮೂರು ರಾಶಿಯವರ ಜೀವನದಲ್ಲಿ ಶುಕ್ರನು ಹಣದ ಹೊಳೆಯನ್ನೇ ಹರಿಸಲಿದ್ದಾನೆ ಎಂದು ಹೇಳಲಾಗುತ್ತದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ...
ಇದನ್ನೂ ಓದಿ- Surya Grahan: ಈ 5 ರಾಶಿಯವರಿಗೆ ತುಂಬಾ ಅಪಾಯಕಾರಿ ವರ್ಷದ ಕೊನೆಯ ಸೂರ್ಯಗ್ರಹಣ
ಶುಕ್ರ ರಾಶಿ ಪರಿವರ್ತನೆಯಿಂದ ಈ 3 ರಾಶಿಯವರಿಗೆ ವಿಶೇಷ ಪ್ರಯೋಜನ:
ಮಿಥುನ ರಾಶಿ:
ಪ್ರಸ್ತುತ ಮಿಥುನ ರಾಶಿಯಲ್ಲಿಯೇ ಇರುವ ಶುಕ್ರ 30 ಮೇ 2023ರಂದು ಕರ್ಕಾಟಕ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ. ಶುಕ್ರನ ಚಲನೆಯಲ್ಲಿನ ಈ ಬದಲಾವಣೆಯು ಮಿಥುನ ರಾಶಿಯವರಿಗೆ ಆರ್ಥಿಕವಾಗಿ ತುಂಬಾ ಮಂಗಳಕರ ಎಂದು ಸಾಬೀತುಪಡಿಸಲಿದೆ. ವಾಸ್ತವವಾಗಿ, ಗ್ರಹಗಳ ರಾಜಕುಮಾರ ಬುಧ ಮಿಥುನ ರಾಶಿಯ ಅಧಿಪತಿಯಾಗಿದ್ದು, ಬುಧ-ಶುಕ್ರರು ಮಿತ್ರ ಗ್ರಹಗಳು. ಹಾಗಾಗಿ, ಶುಕ್ರ ರಾಶಿ ಪರಿವರ್ತನೆಯು ಈ ರಾಶಿಯವರಿಗೆ ಬಂಪರ್ ಆರ್ಥಿಕ ಲಾಭವನ್ನು ನೀಡಲಿದೆ. ಸಂಪತ್ತು ಹೆಚ್ಚಳವಾಗಲಿದೆ ಎಂದು ಹೇಳಲಾಗುತ್ತಿದೆ.
ಕರ್ಕಾಟಕ ರಾಶಿ:
ವಾರದ ಬಳಿಕ ಸ್ವ ರಾಶಿಯಲ್ಲಿ ಶುಕ್ರನ ಸಂಚಾರವು ಈ ರಾಶಿಯವರಿಗೆ ಬಂಗಾರದಂತ ಸಮಯ ಎಂತಲೇ ಬಣ್ಣಿಸಲಾಗುತ್ತಿದೆ. ಈ ಸಮಯದಲ್ಲಿ ಕರ್ಕಾಟಕ ರಾಶಿಯವರಿಗೆ ಆದಾಯದ ಹೊಸ ಹೊಸ ಮೂಲಗಳು ಸೃಷ್ಟಿಯಾಗಲಿದ್ದು ಆಕಸ್ಮಿಕ ಹಣಕಾಸಿನ ಹರಿವು ಹೆಚ್ಚಾಗಲಿದೆ. ನಿಮ್ಮ ಮಧುರವಾದ ಮಾತಿಗೆ ಕಲ್ಲನ್ನೇ ಕರಗಿಸುವ ಶಕ್ತಿ ದೊರೆಯಲಿದ್ದು ನೀವು ಅಂದುಕೊಂಡಂತೆ ಕೆಲಸ ಕಾರ್ಯಗಳು ಜರುಗಲಿವೆ. ಉದ್ಯೋಗಸ್ಥರಿಗೆ ಪ್ರಮೋಷನ್ ಸಾಧ್ಯತೆ ಇದ್ದು, ವ್ಯಾಪಾರಸ್ಥರಿಗೆ ದೊಡ್ಡ ಆರ್ಡರ್ ಸಿಗುವ ಸಂಭವವಿದೆ.
ಇದನ್ನೂ ಓದಿ- Weekly Horoscope: ಮೇ 22 ರಿಂದ ಮೇ 28ರವರೆಗೆ ದ್ವಾದಶ ರಾಶಿಗಳ ಫಲಾಫಲ ಹೇಗಿದೆ
ಕನ್ಯಾ ರಾಶಿ:
ಶುಕ್ರ ರಾಶಿ ಪರಿವರ್ತನೆಯು ಕನ್ಯಾ ರಾಶಿಯವರ ಅದೃಷ್ಟವನ್ನೇ ಬದಲಾಯಿಸಲಿದೆ. ಈ ಸಮಯದಲ್ಲಿ ಕನ್ಯಾ ರಾಶಿಯವರು ತಮ್ಮೆಲ್ಲಾ ಆರ್ಥಿಕ ಸಮಸ್ಯೆಗಳಿಂದ ಹೊರಬರಲಿದ್ದು, ದೀರ್ಘ ಸಮಯದಿಂದ ಸ್ಥಗಿತಗೊಂಡಿರುವ ಕೆಲಸಗಳು ವೇಗವನ್ನು ಪಡೆಯಲಿವೆ. ಕೆಲಸದಲ್ಲಿ ನಿರೀಕ್ಷಿತ ಯಶಸ್ಸು ಪ್ರಾಪ್ತಿಯಾಗಲಿದ್ದು ಭರ್ಜರಿ ಹಣಕಾಸಿನ ಪ್ರಯೋಜನವೂ ಆಗಲಿದೆ. ಒಟ್ಟಾರೆಯಾಗಿ ಇದು ನಿಮಗೆ ಅತ್ಯುತ್ತಮ ಸಮಯ ಎಂದು ಸಾಬೀತು ಪಡಿಸಲಿದೆ.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.