Solar Eclipse and Lunar Eclipse 2023: ಅಕ್ಟೋಬರ್ 2023 ರಲ್ಲಿ ಹದಿನೈದು ದಿನಗಳ ಅಂತರದಲ್ಲಿ ವರ್ಷದ ಎರಡನೇ ಹಾಗೂ ಕೊನೆಯ ಸೂರ್ಯ ಗ್ರಹಣ ಮತ್ತು ಚಂದ್ರಗ್ರಹಣ ಸಂಭವಿಸಲಿದೆ. ಖಗೋಳ ವಿಧ್ಯಮಾನಗಳಾದ ಸೂರ್ಯ ಗ್ರಹಣ ಮತ್ತು ಚಂದ್ರಗ್ರಹಣಗಳಿಗೆ ಜ್ಯೋತಿಷ್ಯ ಶಾಸ್ತ್ರದಲ್ಲೂ ಪ್ರಾಮುಖ್ಯತೆ ಇದೆ. ಹಿಂದೂ ಧರ್ಮದಲ್ಲಿ ಗ್ರಹಣಗಳು ವ್ಯಕ್ತಿಯ ಜೀವನದ ಮೇಲೆ ದೊಡ್ಡ ಪರಿಣಾಮವನ್ನು ಉಂಟುಮಾಡುತ್ತವೆ ಎಂಬ ನಂಬಿಕೆ ಇದೆ. 


COMMERCIAL BREAK
SCROLL TO CONTINUE READING

15 ದಿನಗಳಲ್ಲಿ ಎರಡು ಗ್ರಹಣ: 
2023ರ ಅಕ್ಟೋಬರ್ ತಿಂಗಳಿನಲ್ಲಿ ಹದಿನೈದು ದಿನಗಳ ಅಂತರದಲ್ಲಿ ಎರಡು ಗ್ರಹಣಗಳು ಸಂಭವಿಸಲಿವೆ. ಅಕ್ಟೋಬರ್ 14 ರಂದು ಸೂರ್ಯಗ್ರಹಣ  ಸಂಭವಿಸಲಿದೆ. ಈ ದಿನ ರಾತ್ರಿ 08:34 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮಧ್ಯರಾತ್ರಿ 02:25 ರವರೆಗೆ ಇರುತ್ತದೆ. ಅಕ್ಟೋಬರ್ 28 ರಂದು ಚಂದ್ರಗ್ರಹಣ ಸಂಭವಿಸಲಿದೆ. ಈ ದಿನ ಮಧ್ಯಾಹ್ನ 01:06 ಕ್ಕೆ ಪ್ರಾರಂಭವಾಗುತ್ತದೆ ಮತ್ತು 02:22 ಕ್ಕೆ ಕೊನೆಗೊಳ್ಳುತ್ತದೆ.


ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣದ ಪರಿಣಾಮಗಳು ದ್ವಾದಶ ರಾಶಿಗಳ ಮೇಲೆ ಕಂಡು ಬರುತ್ತದೆ. ಅದರಲ್ಲೂ, ವರ್ಷದ ಕೊನೆಯ ಸೂರ್ಯ-ಚಂದ್ರ ಗ್ರಹಣಗಳು ಮೂರು ರಾಶಿಯವರ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿಯ ಜೊತೆಗೆ ಬ್ಯಾಂಕ್ ಬ್ಯಾಲೆನ್ಸ್ ಅನ್ನು ಕೂಡ ಹೆಚ್ಚಿಸಲಿವೆ ಎಂದು ಹೇಳಲಾಗುತ್ತಿದೆ.  ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ... 


ಇದನ್ನೂ ಓದಿ- ದಾನ ಪುಣ್ಯದ ಕೆಲಸ, ಆದರೆ ಈ ಪದಾರ್ಥಗಳನ್ನು ಎಂದಿಗೂ ದಾನ ಮಾಡಬೇಡಿ


ಅಕ್ಟೋಬರ್‌ನಲ್ಲಿ ಸೂರ್ಯ-ಚಂದ್ರಗ್ರಹಣದ ಪ್ರಭಾವ: ಈ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ, ಆದಾಯ ಹೆಚ್ಚಳ: 
ಮಿಥುನ ರಾಶಿ: 

ಈ ವರ್ಷದ ಕೊನೆಯ ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣಗಳು ಮಿಥುನ ರಾಶಿಯವರ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಇದರಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿನ ಜೊತೆಗೆ ಉದ್ಯೋಗ ರಂಗದಲ್ಲಿ ಹೊಸ ಉತ್ತುಂಗವನ್ನು ಏರಿವಿರಿ. ಹಣಕಾಸಿನ ಸ್ಥಿತಿಯೂ ಉತ್ತಮವಾಗಿರಲಿದೆ. 


ಸಿಂಹ ರಾಶಿ: 
2023ರ ಎರಡನೇ ಹಾಗೂ ಕೊನೆಯ ಸೂರ್ಯ-ಚಂದ್ರ ಗ್ರಹಣಗಳು ಸಿಂಹ ರಾಶಿಯವರಿಗೆ ಲಾಭದಾಯಕ ಎಂದು ಸಾಬೀತುಪಡಿಸಲಿವೆ. ವೃತ್ತಿ ರಂಗದಲ್ಲಿ ಜವಾಬ್ದಾರಿಗಳು ಹೆಚ್ಚಾಗಳಿವೆ. ಹಣಕಾಸಿನ ಹೊಸ ಮೂಲಗಳು ಸೃಷ್ಟಿಯಾಗಲಿದ್ದು, ಇದರಿಂದ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಸಾಲದಿಂದಲೂ ಪರಿಹಾರ ಕಂಡುಕೊಳ್ಳುವ ಅವಕಾಶ ಲಭ್ಯವಾಗಲಿದೆ. 


ಇದನ್ನೂ ಓದಿ- Surya Grahan: ನಾಲ್ಕು ರಾಶಿಯವರ ಜೀವನದಲ್ಲಿ ಕೋಲಾಹವನ್ನು ಸೃಷ್ಟಿಸಲಿದೆ ವರ್ಷದ ಕೊನೆಯ ಸೂರ್ಯಗ್ರಹಣ


ತುಲಾ ರಾಶಿ: 
ಸೂರ್ಯಗ್ರಹಣ ಮತ್ತು ಚಂದ್ರಗ್ರಹಣಗಳು ತುಲಾ ರಾಶಿಯವರಿಗೆ ಬಂಪರ್ ಉಡುಗೊರೆಯನ್ನು ನೀಡಲಿವೆ. ಈ ಸಮಯದಲ್ಲಿ ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣಬಹುದು. ಮಾತ್ರವಲ್ಲದೆ, ವ್ಯಾಪಾರ-ವ್ಯವಹಾರದಲ್ಲಿಯೂ ಏಳ್ಗೆಯಾಗಲಿದೆ. ಒಟ್ಟಾರೆಯಾಗಿ ಇದು ನಿಮಗೆ ಅತ್ಯುತ್ತಮ ಸಮಯ ಎಂದು ಸಾಬೀತು ಪಡಿಸಲಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.