Sun Transit: ಆಗಸ್ಟ್ 17ರವರೆಗೆ ಸೂರ್ಯನಂತೆ ಹೊಳೆಯಲಿದೆ ಈ ರಾಶಿಯವರ ಭವಿಷ್ಯ

Surya Rashi Parivartane: ಗ್ರಹಗಳ ರಾಜ ಸೂರ್ಯ ದೇವನು ಪ್ರತಿ ತಿಂಗಳು ರಾಶಿ ಚಕ್ರವನ್ನು ಬದಲಾಯಿಸುತ್ತಾನೆ. ಪ್ರಸ್ತುತ, ಮಿಥುನ ರಾಶಿಯಲ್ಲಿರುವ ಸೂರ್ಯ ಇನ್ನೂ ಹತ್ತು ದಿನಗಳ ಬಳಿಕ ರಾಶಿ ಪರಿವರ್ತನೆ ಹೊಂದಲಿದ್ದಾನೆ. ಸೂರ್ಯನ ಈ ರಾಶಿ ಬದಲಾವಣೆಯು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಆದರೂ, ಇದನ್ನು ಮೂರು ರಾಶಿಯವರ ದೃಷ್ಟಿಯಿಂದ ಭಾಗ್ಯೋದಯದ ಸಮಯ ಎಂದು ಹೇಳಲಾಗುತ್ತಿದೆ. 

Written by - Yashaswini V | Last Updated : Jul 6, 2023, 08:26 AM IST
  • ಕರ್ಕಾಟಕ ರಾಶಿಯಲ್ಲಿ ಸೂರ್ಯನ ಸಂಚಾರವು ಎಲ್ಲಾ 12 ರಾಶಿಯವರ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಬೀರುತ್ತದೆ.
  • ಕರ್ಕಾಟಕ ರಾಶಿಯ ಅಧಿಪತಿ ಚಂದ್ರ. ಸೂರ್ಯ-ಚಂದ್ರರ ನಡುವೆ ಸ್ನೇಹ ಸಂಬಂಧವಿದೆ.
  • ಹಾಗಾಗಿ, ಸುಮಾರು ಒಂದು ತಿಂಗಳುಗಳ ಕಾಲ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಸೂರ್ಯನು ಕೆಲವು ರಾಶಿಯವರ ಜೀವನದಲ್ಲಿ ಶುಭ ದಿನಗಳನ್ನು ತರಲಿದ್ದಾನೆ ಎಂದು ಹೇಳಲಾಗುತ್ತಿದೆ.
Sun Transit: ಆಗಸ್ಟ್ 17ರವರೆಗೆ ಸೂರ್ಯನಂತೆ ಹೊಳೆಯಲಿದೆ ಈ ರಾಶಿಯವರ ಭವಿಷ್ಯ  title=
Surya Rashi Parivartane

Surya Rashi Parivartane: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜ ಎಂದು ಕರೆಯಲ್ಪಡುವ ಸೂರ್ಯ ದೇವನು ಪ್ರತಿ ತಿಂಗಳು ನಿಗದಿತ ಸಮಯದಲ್ಲಿ ತನ್ನ ರಾಶಿಚಕ್ರವನ್ನು ಬದಲಾಯಿಸುತ್ತಾನೆ. ಪ್ರಸ್ತುತ, ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವ ಸೂರ್ಯ ದೇವನು ಇನ್ನೂ ಹತ್ತು ದಿನಗಳಲ್ಲಿ ಅಂದರೆ, ಜುಲೈ 16, 2023 ರಂದು ಬೆಳಿಗ್ಗೆ 04.59 ಕ್ಕೆ ಮಿಥುನ ರಾಶಿಯನ್ನು ತೊರೆದು ಕರ್ಕಾಟಕ ರಾಶಿಯನ್ನು ಪ್ರವೇಶಿಸಲಿದ್ದಾನೆ. ಬಳಿಕ, ಆಗಸ್ಟ್ 17, 2023ರವರೆಗೆ ಇದೇ ರಾಶಿಯಲ್ಲಿ ಸಂಚರಿಸುತ್ತಾನೆ. 

ಕರ್ಕಾಟಕ ರಾಶಿಯಲ್ಲಿ ಸೂರ್ಯನ ಸಂಚಾರವು ಎಲ್ಲಾ 12 ರಾಶಿಯವರ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಬೀರುತ್ತದೆ. ಕರ್ಕಾಟಕ ರಾಶಿಯ ಅಧಿಪತಿ ಚಂದ್ರ. ಸೂರ್ಯ-ಚಂದ್ರರ ನಡುವೆ ಸ್ನೇಹ ಸಂಬಂಧವಿದೆ. ಹಾಗಾಗಿ, ಸುಮಾರು ಒಂದು ತಿಂಗಳುಗಳ ಕಾಲ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಸೂರ್ಯನು ಕೆಲವು ರಾಶಿಯವರ ಜೀವನದಲ್ಲಿ ಶುಭ ದಿನಗಳನ್ನು ತರಲಿದ್ದಾನೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯೋಣ... 

ಇದನ್ನೂ ಓದಿ- Mangal Gochar 2023: ಸೂರ್ಯನ ರಾಶಿಯಲ್ಲಿ ಮಂಗಳನ ಪ್ರವೇಶ, ಹೊಳೆಯಲಿದೆ ಈ 4 ರಾಶಿಯವರ ಅದೃಷ್ಟ

ಕರ್ಕಾಟಕ ರಾಶಿಯಲ್ಲಿ ಸೂರ್ಯನ ಸಂಚಾರ: 30ದಿನಗಳವರೆಗೆ ಈ ಮೂರು ರಾಶಿಯವರ ಬಾಳೇ ಬಂಗಾರ: 
ಮೇಷ ರಾಶಿ: 

ಕರ್ಕಾಟಕ ರಾಶಿಯಲ್ಲಿ ಸೂರ್ಯನ ರಾಶಿ ಪರಿವರ್ತನೆಯು ಮೇಷ ರಾಶಿಯವರ ಜೀವನದಲ್ಲಿ ಮಹತ್ವದ ಬದಲಾವಣೆಗಳನ್ನು ತರಲಿದೆ. ಈ ಸಂಯದಲ್ಲಿ, ನೀವು ಉದ್ಯೋಗ ಕ್ಷೇತ್ರದಲ್ಲಿ, ಮಕ್ಕಳ ಕಡೆಯಿಂದ ಶುಭ ಸುದ್ದಿಗಳನ್ನು ಪಡೆಯಬಹುದು. ಉದ್ಯೋಗಸ್ಥರಿಗೆ ಬಡ್ತಿ ಸಿಗುವ ಸಾಧ್ಯತೆ ಇದ್ದರೆ, ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರಿಗೂ ಒಳ್ಳೆಯದಾಗಲಿದೆ. ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಉನ್ನತ ಹುದ್ದೆ ಅಲಂಕರಿಸುವ ಯೋಗವಿದೆ. ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣ ಭಾಗ್ಯವಿದೆ. ಒಟ್ಟಾರೆಯಾಗಿ ಇದು ನಿಮ್ಮ ಬಾಳಿಗೆ ಬಂಗಾರದ ಸಮಯ. 

ಕರ್ಕಾಟಕ ರಾಶಿ: 
ಹತ್ತು ದಿನಗಳ ನಂತರ ಗ್ರಹಗಳ ರಾಜ ಸೂರ್ಯ ದೇವ ಇದೇ ರಾಶಿಯನ್ನು ಪ್ರವೇಶಿಸಲಿದ್ದಾನೆ. ಸ್ವ ರಾಶಿಯಲ್ಲಿ ಸೂರ್ಯನ ಪ್ರವೇಶವು ಈ ರಾಶಿಯವರ ಮೇಲೆ ಗರಿಷ್ಠ ಪ್ರಭಾವವನ್ನು ಬೀರಲಿದೆ. ಇದರಿಂದಾಗಿ ಕರ್ಕಾಟಕ ರಾಶಿಯವರಿಗೆ ಈ ವೇಳೆ ಆರೋಗ್ಯ ವೃದ್ದಿಯಾಗಲಿದ್ದು, ದಾಂಪತ್ಯ ಜೀವನದಲ್ಲಿ ಮೂಡಿದ್ದ ಬಿರುಕುಗಳು ಸರಿ ಹೋಗಲಿವೆ. ಉದ್ಯೋಗ ಬದಲಾವಣೆಗಾಗಿ ಪ್ರಯತ್ನಿಸುತ್ತಿರುವವರಿಗೂ ಶುಭ ಸಮಯ ಇದಾಗಿದ್ದು, ನಿಮ್ಮ ನೆಚ್ಚಿನ ಉದ್ಯೋಗ ಪಡೆಯುವಿರಿ. ಹಣಕಾಸಿನ ವಿಷಯವಾಗಿಯೂ ಒಳ್ಳೆಯ ಸಮಯ ಇದಾಗಿದೆ. 

ಇದನ್ನೂ ಓದಿ- Shani Vakri: ನವೆಂಬರ್ 4ರವರೆಗೆ ಈ ರಾಶಿಯವರಿಗೆ ಅಪಾರ ಸಂಪತ್ತು ಕರುಣಿಸಲಿದ್ದಾನೆ ವಕ್ರೀ ಶನಿ

ತುಲಾ ರಾಶಿ: 
ಸೂರ್ಯ ರಾಶಿ ಪರಿವರ್ತನೆಯು ತುಲಾ ರಾಶಿಯವರ ವೃತ್ತಿ ಬದುಕಿನಲ್ಲಿ ಧನಾತ್ಮಕ ಫಲಿತಾಂಶಗಳನ್ನು ತರಲಿದೆ. ಈ ವೇಳೆ ನಿಮ್ಮ ಆತ್ಮಸ್ಥೈರ್ಯ ಹೆಚ್ಚಾಗಲಿದ್ದು ಎಂತಹ ಸಂಘರ್ಷದ ಸಮಯವನ್ನೂ ಕೂಡ ಸುಲಭವಾಗಿ ನಿಭಾಯಿಸುವಿರಿ. ಆಗಸ್ಟ್ 17, 2023ರವರೆಗೂ ನಿಮ್ಮ ಸಮಯ ಅತ್ಯುತ್ತಮವಾಗಿದ್ದು, ಆರ್ಥಿಕವಾಗಿಯೂ ಪ್ರಗತಿ ಸಾಧಿಸುವಿರಿ. ಮಕ್ಕಳಿಂದ ಸಂತೋಷದ ವಾರ್ತೆ ಲಭಿಸಲಿದೆ. 

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News