ಬೆಂಗಳೂರು : ಜ್ಯೋತಿಷ್ಯದಲ್ಲಿ ಗ್ರಹಗಳ ಸಂಕ್ರಮಣವು ಬಹಳ ವಿಶೇಷವಾಗಿದೆ. ಸೂರ್ಯನನ್ನು ಎಲ್ಲಾ ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ಪ್ರತಿ ತಿಂಗಳು ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಸಂಚರಿಸುತ್ತಾನೆ. ಸೆಪ್ಟೆಂಬರ್ 17 ರಂದು ಸೂರ್ಯನು ಕನ್ಯಾರಾಶಿಯನ್ನು ಪ್ರವೇಶಿಸುತ್ತಾನೆ. ಬೆಳಿಗ್ಗೆ 7:11ಕ್ಕೆ, ಸೂರ್ಯನು ಸಿಂಹ ರಾಶಿಯಿಂದ ಹೊರ ನಡೆದು ಕನ್ಯಾರಾಶಿಯನ್ನು ಪ್ರವೇಶಿಸುತ್ತಾನೆ. ಸೂರ್ಯನ ರಾಶಿ ಪರಿವರ್ತನೆ ಎಲ್ಲಾ 12 ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. ಕೆಲವು ರಾಶಿಯವರು ಸೂರ್ಯನ ಈ ಸಂಕ್ರಮಣದಿಂದ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಸೂರ್ಯನ ಈ ಸಂಕ್ರಮಣದಿಂದ ಲಾಭ ಪಡೆಯುವ ಅದೃಷ್ಟದ ರಾಶಿಗಳು ಯಾವುವು ನೋಡೋಣ.
ಮೇಷ ರಾಶಿ :
ಮೇಷ ರಾಶಿಯವರು ಸೂರ್ಯನ ಸಂಚಾರದಿಂದ ಪ್ರಯೋಜನ ಪಡೆಯುತ್ತಾರೆ. ಸೂರ್ಯನ ಕಿರಣದಂತೆ ಮೇಷ ರಾಶಿಯವರ ಅದೃಷ್ಟವು ಪ್ರಕಾಶಮಾನವಾಗಿ ಹೊಳೆಯುತ್ತದೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ, ಆರೋಗ್ಯಕರ ಆಹಾರವನ್ನು ಅನುಸರಿಸಿ. ಉದ್ಯೋಗಿಗಳು ತಮ್ಮ ಸೃಜನಶೀಲತೆಯನ್ನು ತೋರಿಸಲು ಉತ್ತಮ ಅವಕಾಶ ಸಿಗಲಿದೆ.
ಇದನ್ನೂ ಓದಿ : 300 ವರ್ಷಗಳ ಬಳಿಕ ಚತುರ್ಥಿಯಂದು ವಿಶೇಷ ಯೋಗ: ಈ ರಾಶಿಗಿರಲಿದೆ ಮಹಾಗಣಪತಿ ಶ್ರೀರಕ್ಷೆ, ಆದಾಯದಲ್ಲಿ ಸಮೃದ್ಧಿ-ವೃತ್ತಿಯಲ್ಲಿ ಉನ್ನತಿ
ವೃಷಭ ರಾಶಿ :
ಭಗವಾನ್ ಸೂರ್ಯನಿಂದ ಎಲ್ಲಾ ರೀತಿಯ ಪ್ರಯೋಜನಗಳನ್ನು ಪಡೆಯಲಿದ್ದೀರಿ. ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಹೊಂದುವಿರಿ. ಹಣದ ಹರಿವಿನಲ್ಲಿ ಯಾವುದೇ ಕೊರತೆ ಉಂಟಾಗುವುದಿಲ್ಲ. ಕೆಲಸದಲ್ಲಿ ಉನ್ನತಿ ಮತ್ತು ಬಡ್ತಿ ಪಡೆಯುವ ಸಾಧ್ಯತೆ ಹೆಚ್ಚಿದೆ. ವ್ಯಾಪಾರ ಮತ್ತು ವ್ಯವಹಾರದಲ್ಲಿ ಉತ್ತಮ ಲಾಭವಾಗುವುದು.
ವೃಶ್ಚಿಕ ರಾಶಿ :
ಸೂರ್ಯ ಸಂಕ್ರಮಣ ವೃಶ್ಚಿಕ ರಾಶಿಯವರಿಗೆ ಅದೃಷ್ಟವನ್ನು ತರುತ್ತದೆ. ಜೀವನದಲ್ಲಿ ಉದ್ಭವಿಸಿದ ಎಲ್ಲಾ ಸಮಸ್ಯೆಗಳು ಪರಿಹಾರವಾಗುವುದು. ಪ್ರೇಮ ಜೀವನದಲ್ಲಿ ಕೆಲವು ಸಮಸ್ಯೆಗಳು ಎದುರಾಗಬಹುದು. ಆದರೆ ನಿಮ್ಮ ಸಂಗಾತಿಯೊಂದಿಗೆ ಮನ ಬಿಚ್ಚಿ ಮಾತನಾಡಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ. ಆದಾಯದ ಹೊಸ ಮೂಲಗಳು ಹೊರಹೊಮ್ಮುತ್ತವೆ. ಕೆಲಸದಲ್ಲಿ ಬಡ್ತಿ ಸಿಕ್ಕಿ ವೇತನ ಹೆಚ್ಚಳವಾಗದಿರುವ ಸಾಧ್ಯತೆ ಇದೆ. ಹಣಕಾಸಿನ ತೊಂದರೆ ಎದುರಾಗುವುದೇ ಇಲ್ಲ.
ಇದನ್ನೂ ಓದಿ : Weekly Horoscope: ಈ ವಾರ 3 ರಾಶಿಯವರಿಗೆ ನಷ್ಟ, 5 ರಾಶಿಯವರಿಗೆ ಭರ್ಜರಿ ಧನಲಾಭ
ಧನು ರಾಶಿ :
ಸೂರ್ಯನ ಸಂಚಾರವು ಧನು ರಾಶಿಗೆ ಅನುಕೂಲಕರವೆಂದು ಪರಿಗಣಿಸಲಾಗಿದೆ. ಉದ್ಯೋಗದಲ್ಲಿರುವವರಿಗೆ ಈ ಅವಧಿಯು ಹೆಚ್ಚು ಅನುಕೂಲಕರವಾಗಿರುತ್ತದೆ. ವ್ಯಾಪಾರದಲ್ಲಿ ಧನಲಾಭವೂ ಇರುತ್ತದೆ. ದೈಹಿಕ ಆರೋಗ್ಯಕ್ಕೆ ಹೆಚ್ಚು ಗಮನ ಬೇಕು. ಕುಟುಂಬ ಸಮೇತ ವಿದೇಶಕ್ಕೆ ಹೋಗುವ ಅವಕಾಶ ಸಿಗಲಿದೆ.
(ಸೂಚನೆ : ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. )
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ