ದಿನಭವಿಷ್ಯ 05-03-2025: ಬುಧವಾರ ಕೃತಿಕಾ ನಕ್ಷತ್ರ ವೈಧೃತಿ ಯೋಗ: ಈ ರಾಶಿಯವರಿಗೆ ಶುಭ ದಿನ

Today Horoscope 05th March 2025: ಈ ದಿನ ಬುಧವಾರ ಕೃತಿಕಾ ನಕ್ಷತ್ರ ವೈಧೃತಿ ಯೋಗ, ಗರಜ ಕರಣ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Mar 5, 2025, 07:43 AM IST
  • ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ ಸೌರ ವಸಂತ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಷಷ್ಠಿ ತಿಥಿ
  • ಈ ದಿನ ಬುಧವಾರ ಕೃತಿಕಾ ನಕ್ಷತ್ರ ವೈಧೃತಿ ಯೋಗ, ಗರಜ ಕರಣ.
  • ಮೇಷದಿಂದ ಮೀನ ರಾಶಿಯವರೆಗೆ ಇಂದಿನ ಭವಿಷ್ಯ ಹೇಗಿದೆ ತಿಳಿಯಿರಿ.
ದಿನಭವಿಷ್ಯ 05-03-2025: ಬುಧವಾರ ಕೃತಿಕಾ ನಕ್ಷತ್ರ ವೈಧೃತಿ ಯೋಗ: ಈ ರಾಶಿಯವರಿಗೆ ಶುಭ ದಿನ

Budhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1946, ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ ಸೌರ ವಸಂತ ಋತು, ಫಾಲ್ಗುಣ ಮಾಸ, ಶುಕ್ಲ ಪಕ್ಷ, ಷಷ್ಠಿ ತಿಥಿಯ ಈ ದಿನ ಬುಧವಾರ ಕೃತಿಕಾ ನಕ್ಷತ್ರ ವೈಧೃತಿ ಯೋಗ, ಗರಜ ಕರಣ. ಮೇಷದಿಂದ ಮೀನ ರಾಶಿಯವರೆಗೆ ಇಂದಿನ ಭವಿಷ್ಯ ಹೇಗಿದೆ ತಿಳಿಯಿರಿ. 

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ಕುಟುಂಬದೊಂದಿಗೆ ಇಂದು ಆಹ್ಲಾದಕರ ಸಮಯವನ್ನು ಆನಂದಿಸುವಿರಿ. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ. ದೈಹಿಕ ಚಟುವಟಿಕೆಯು ಪ್ರಯೋಜನಕಾರಿ ಆಗಿದೆ. ವ್ಯವಹಾರದಲ್ಲಿ ಹೊಸ ಅವಕಾಶಗಳನ್ನು ಪಡೆಯುವಿರಿ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ವೃತ್ತಿ ರಂಗದಲ್ಲಿ ನಿಮ್ಮ ಕೆಲಸಕ್ಕೆ ಮೆಚ್ಚುಗೆ ದೊರೆಯಲಿದೆ. ಕಠಿಣ ಪರಿಶ್ರಮವನ್ನು ನಂಬಿ ಮುಂದೆ ನಡೆಯಿರಿ ಇದರಿಂದ ಆರ್ಥಿಕ ಸ್ಥಿತಿಯೂ ಸುಧಾರಣೆಯಾಗಲಿದೆ. ಕುಟುಂಬದೊಂದಿಗೆ ಸಮಯ ಕಳೆಯುವುದು ಮಾನಸಿಕ ಶಾಂತಿಯನ್ನು ನೀಡುತ್ತದೆ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಇಂದು ಹೊಸ ವಿಚಾರಗಳ ಬಗ್ಗೆ ಮುಕ್ತವಾಗಿ ಯೋಚಿಸುವಿರಿ. ಇದು ನಿಮಗೆ ಭವಿಷ್ಯದಲ್ಲಿ ಲಾಭದಾಯಕವಾಗಿರಲಿದೆ. ವೃತ್ತಿ ಮತ್ತು ವೈಯಕ್ತಿಕ ಬದುಕು ಎರಡರಲ್ಲೂ ಬದಲಾವಣೆಗಳನ್ನು ತರಲಿದೆ. ಅನಗತ್ಯ ವಿವಾದಗಳನ್ನು ತಪ್ಪಿಸಲು ಮಾತಿನ ಬಗ್ಗೆ ನಿಗಾ ಇರಲಿ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ನಿಮ್ಮ ಗುರಿಗಳತ್ತ ಗಮನ ಕೇಂದ್ರೀಕರಿಸಿ ಮುಂದುವರೆಯಿರಿ. ಗುರಿ ನಿಖರವಾಗಿದ್ದು, ಕಠಿಣ ಶ್ರಮ ವಹಿಸಿದರೆ ಮಾತ್ರ ಯಶಸ್ಸು. ಹಣಕಾಸಿನ ವಿಷಯಗಳು ಸ್ಥಿರವಾಗಿರುತ್ತವೆ. ಸಣ್ಣ ಪುಟ್ಟ ಖರ್ಚುಗಳು ಇರಬಹುದು. ಆದರೆ, ನಿಮ್ಮ ಬಜೆಟ್ ಬಗ್ಗೆ ನಿಗಾವಹಿಸಿ. 

ಇದನ್ನೂ ಓದಿ- ಮೀನ ರಾಶಿಯಲ್ಲಿ ಶುಕ್ರಾದಿತ್ಯ ರಾಜಯೋಗ: ಈ ರಾಶಿಯವರಿಗೆ ಬೆನ್ನಟ್ಟಲಿದೆ ಅದೃಷ್ಟ, ರಾಜವೈಭೋಗದ ಜೀವನ

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಉದ್ಯೋಗ ರಂಗದಲ್ಲಿ ನಿಮ್ಮ ಪ್ರಯತ್ನಗಳು ಮೆಚ್ಚುಗೆಗೆ ಪಾತ್ರವಾಗಲಿವೆ. ಸಹೋದ್ಯೋಗಿಗಳಲ್ಲಿ ಗೌರವವಿರಲಿ. ಈ ಸಮಯದಲ್ಲಿ ವೈಯಕ್ತಿಕ ಸಂಬಂಧಗಳು ಆಹ್ಲಾದಕರವಾಗಿರುತ್ತವೆ. ಬಹುದಿನಗಳ ನಿಮ್ಮ ಆಸೆ ಈಡೇರಲಿದೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಈ ಸಮಯದಲ್ಲಿ ನಿಮ್ಮ ಆಲೋಚನೆಗಳನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿ. ಆರೋಗ್ಯದ ಬಗ್ಗೆ ಗಮನವಿರಲಿ. ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಿ. ಇಂದು ಯಾವುದೇ ರೀತಿಯ ಹೂಡಿಕೆಯನ್ನು ತಪ್ಪಿಸಿ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಮಾನಸಿಕವಾಗಿ ಸಿದ್ದರಾಗಿರಿ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಸಾಮಾಜಿಕವಾಗಿ ಬೇರೆಯಲು ಇಂದು ಶುಭ ದಿನ. ಸ್ನೇಹಿತರು ಮತ್ತು ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಸೃಜನಶೀಲ ಕೆಲಸಗಳಲ್ಲಿ ಯಶಸ್ಸು ಪಡೆಯ್ವಿರಿ. ಹಣಕಾಸಿನ ಬಗ್ಗೆ ಯಾವುದೇ ಪ್ರಮುಖ ನಿರ್ಧಾರ ಕೈಗೊಳ್ಳಲು ಇಂದು ದಿನ ಸೂಕ್ತವಾಗಿದೆ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಇದು ಸಕಾಲ. ಇದರಿಂದ ಭವಿಷ್ಯದಲ್ಲಿ ಪ್ರಯೋಜನವನ್ನು ಪಡೆಯುವಿರಿ. ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಪ್ರಮುಖ ವಿಷಯಗಳನ್ನು ಚರ್ಚಿಸಿ, ಅವರ ಸಲಹೆ ನಿಮಗೆ ಅಮೂಲ್ಯವೆಂದು ಸಾಬೀತುಪಡಿಸಬಹುದು. 

ಇದನ್ನೂ ಓದಿ- ಈ ದಿನಾಂಕದಲ್ಲಿ ಜನಿಸಿದವರು ಅದೃಷ್ಟಕ್ಕೆ ಮತ್ತೊಂದು ಹೆಸರಿದ್ದಂತೆ: ಹೆಣ್ಣಾದರಂತೂ ಹುಟ್ಟಿದ ಮನೆಗೂ, ಕಾಲಿಟ್ಟ ಮನೆಗೂ ಶುಕ್ರದೆಸೆ ಹೊತ್ತ ಸೌಭಾಗ್ಯದೇವತೆ!

ಧನು ರಾಶಿಯವರ ಭವಿಷ್ಯ (Sagittarius Horoscope):  
ವೈಯಕ್ತಿಕ ಸಂಬಂಧಗಳಲ್ಲಿ ಸಾಮರಸ್ಯ ಹೆಚ್ಚಾಗುತ್ತದೆ. ಹಳೆಯ ಸಮಸ್ಯೆಗಳನ್ನು ಪರಿಹರಿಸಲು ಕುಟುಂಬದಲ್ಲಿ ಹಿರಿಯರೊಂದಿಗೆ ಕುಳಿತು ಮಾತನಾಡಿ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಕುಟುಂಬದೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ. ಇದು ನಿಮ್ಮ ವೈಯಕ್ತಿಕ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ. ಹಣ ಖರ್ಚು ಮಾಡುವಾಗ ನಿಮ್ಮ ಬಜೆಟ್ ಬಗ್ಗೆ ನಿಗಾವಹಿಸಿ. ಇದರಿಂದ ಮುಂದೆ ಎದುರಾಗಬಹುದಾಗ ಆರ್ಥಿಕ ಬಿಕ್ಕಟ್ಟನ್ನು ತಪ್ಪಿಸಬಹುದು. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ನೀವಿಂದು ನಿಮ್ಮ ಆಂತರಿಕ ಭಾವನೆಗಳಿಗೆ ಗಮನಹರಿಸಿ. ಜೀವನದ ಕೆಲವು ಆಯಾಮಗಳಲ್ಲಿ ಅನಿಶ್ಚಿತತೆಯನ್ನು ಅನುಭವಿಸುವಿರಿ. ಸಾಮಾಜಿಕ ಸಂವಹನ ನಡೆಸುವಾಗ ಸಂಯಮವನ್ನು ಕಾಪಾಡಿಕೊಳ್ಳಿ. ನಿಮ್ಮ ಕಠಿಣ ಪರಿಶ್ರಮಕ್ಕೆ ಶೀಘ್ರದಲ್ಲೇ ಒಳ್ಳೆಯ ಫಲ ಸಿಗಲಿದೆ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಈ ರಾಶಿಯವರಿಗೆ ಇಂದು ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸಲು ಒಳ್ಳೆಯ ದಿನ. ಕಠಿಣ ಪರಿಶ್ರಮದ ಮೇಲೆ ನಂಬಿಕೆಯಿಡಿ, ಫಲಾಫಲಗಳನ್ನು ದೇವರಿಗೆ ಬಿಡಿ. ಅನಾರೋಗ್ಯ ಸಮಸ್ಯೆಗಳಿದ್ದಲ್ಲಿ ಇಂದು ಕೊಂಚ ಪರಿಹಾರವನ್ನು ಪಡೆಯುವೀರಿ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

  

About the Author

Yashaswini V

Yashaswini V

ಯಶಸ್ವಿನಿ ವಿ. Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017ರಿಂದ Zee ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ರಾಜಕೀಯ, ಎಂಟರ್ಟೈನ್ಮೆಂಟ್, ಬ್ಯುಸಿನೆಸ್, ಲೈಫ್ ಸ್ಟೈಲ್, ವರ್ಲ್ಡ್, ಸೈನ್ಸ್ ಅಂಡ್ ಟೆಕ್ನಾಲಜಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅನುಭವ ಹೊಂದಿದ್ದಾರೆ. ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿರುವ ಇವರು ಸದ್ಯ ಅಸಿಸ್ಟೆಂಟ್ ನ್ಯೂಸ್ ಎಡಿಟರ್ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

...Read More

Trending News