ದಿನಭವಿಷ್ಯ 07-07-2025: ಸೋಮವಾರದಂದು ಶುಭ ಯೋಗ, ಈ ರಾಶಿಯವರಿಗೆ ಪ್ರಾಪ್ತಿಯಾಗಲಿದೆ ಅಷ್ಟೈಶ್ವರ್ಯ

Today Horoscope 07th July 2025: ಸೋಮವಾರದ ಈ ದಿನ ಅನುರಾಧಾ ನಕ್ಷತ್ರದಲ್ಲಿ ಶುಭ ಯೋಗ ನಿರ್ಮಾಣವಾಗಲಿದ್ದು, ಇಂದು   ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Jul 7, 2025, 07:54 AM IST
  • ಆಷಾಢ ಮಾಸದ ದ್ವಾದಶ ತಿಥಿಯ ಈ ದಿನ ಸೋಮವಾರ
  • ಇಂದು ಅನುರಾಧಾ ನಕ್ಷತ್ರದಲ್ಲಿ ಶುಭ ಯೋಗ ರಚನೆಯಾಗಲಿದೆ.
  • ಶುಭ ಯೋಗದಿಂದ ಈ ದಿನ ಕೆಲವು ರಾಶಿಯವರ ಬದುಕಿನಲ್ಲಿ ಅಷ್ಟೈಶ್ವರ್ಯ ಪ್ರಾಪ್ತಿಯಾಗಲಿದೆ
ದಿನಭವಿಷ್ಯ 07-07-2025:  ಸೋಮವಾರದಂದು ಶುಭ ಯೋಗ, ಈ ರಾಶಿಯವರಿಗೆ ಪ್ರಾಪ್ತಿಯಾಗಲಿದೆ ಅಷ್ಟೈಶ್ವರ್ಯ

Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯಣ, ಸೌರ ವರ್ಷಾ ಋತು, ಆಷಾಢ ಮಾಸ, ಶುಕ್ಲ ಪಕ್ಷ, ದ್ವಾದಶಿ ತಿಥಿ, ಸೋಮವಾರದ ಈ ದಿನ ಅನುರಾಧಾ ನಕ್ಷತ್ರದಲ್ಲಿ ಶುಭ ಯೋಗ, ಬವ ಕರಣ. ಈ ದಿನ ಎಲ್ಲಾ 12 ರಾಶಿಯವರ ಭವಿಷ್ಯ ಹೇಗಿದೆ ತಿಳಿಯಿರಿ. 

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ಈ ದಿನ ಗ್ರಹಗತಿಗಳು ನಿಮಗೆ ಅನುಕೂಲಕರವಾಗಿದ್ದು ವ್ಯವಹಾರದಲ್ಲಿ ನಿರೀಕ್ಷಿಗಿಂತ ಹೆಚ್ಚಿನ ಪ್ರಗತಿಯನ್ನು ಕಾಣುವಿರಿ. ಹೂಡಿಕೆಗಳಿಂದ ಭರ್ಜರಿ ಲಾಭವಾಗಲಿದೆ. ಆದಾಗ್ಯೂ, ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಇಂದು ನಿಮ್ಮನ್ನು ಬಾಧಿಸಬಹುದು. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಇಂದು ವಿವಾದಗಳು, ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ಪಡೆಯಬಹುದು. ಉದ್ಯೋಗ ರಂಗದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ಆದಾಯ ಹೆಚ್ಚಾಗಳಿದ್ದು, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ ಹೊಂದುವಿರಿ. ಪ್ರಮುಖ ವಿಷಯಗಳಲ್ಲಿ ಸಂಗಾತಿಯೊಂದಿಗೆ ಸಮಾಲೋಚನೆ ನಡೆಸಿ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಈ ದಿನ ಆದಾಯಕ್ಕೆ ಸಂಬಂಧಿಸಿದಂತೆ ಸಮಯ ತುಂಬಾ ಅದ್ಭುತವಾಗಿದೆ.  ವೃತ್ತಿ ವ್ಯವಹಾರದಲ್ಲಿ ಸಣ್ಣ ಬದಲಾವಣೆಗಳಿಗೆ ಸಿದ್ದರಾಗಿರಿ. ವಿದೇಶ ವ್ಯವಹಾರದಿಂದ ಭಾರೀ ಆದಾಯ ಹರಿದುಬರಲಿದೆ. ಹೂಡಿಕೆಗೆ ಉತ್ತಮ ಸಮಯ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಇಂದು ವೃತ್ತಿ-ವ್ಯವಹಾರದಲ್ಲಿ ವಿಶ್ರಾಂತಿ ಇಲ್ಲದ ಪರಿಸ್ಥಿತಿ ಇರುತ್ತದೆ. ಜವಾಬ್ದಾರಿಗಳು ಹೆಚ್ಚಾಗಬಹುದು. ಆದಾಗ್ಯೂ, ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಧನಾತ್ಮಕ ಫಲಗಳನ್ನು ನಿರೀಕ್ಷಿಸಬಹುದು. ಪ್ರೇಮ ವ್ಯವಹಾರದಲ್ಲಿ ಶುಭ ಸುದ್ದಿ ನಿರೀಕ್ಷಿಸಬಹುದು. 

ಇದನ್ನೂ ಓದಿ- 120ದಿನಗಳ ಕಾಲ ಗುರು ಹಿಮ್ಮುಖ ಚಲನೆ: ಈ ರಾಶಿಯವರಿಗೆ ಧನ ಯೋಗ, ಭಾರೀ ಅದೃಷ್ಟದಿಂದ ಹೆಚ್ಚಾಗಲಿದೆ ಬ್ಯಾಂಕ್ ಬ್ಯಾಲೆನ್ಸ್ 

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಈ ದಿನ ಹಣಕಾಸಿನ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ಆದರೆ, ಬಜೆಟ್ ಗೆ ಅಂಟಿಕೊಳ್ಳದಿದ್ದರೆ ಅನಾವಶ್ಯಕ ಖರ್ಚುಗಳು ನಿಮ್ಮನ್ನು ಬಾಧಿಸಬಹುದು. ಉದ್ಯೋಗ ರಂಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ಪ್ರತಿಸ್ಪರ್ಧಿಗಳಿಗಿಂತ ಮೇಲುಗೈ ಸಾಧಿಸುವಿರಿ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಇಂದು ಉದ್ಯೋಗದಲ್ಲಿ ಪ್ರಗತಿ ಕಂಡು ಬರಲಿದೆ. ಕೆಲಸದಲ್ಲಿ ಪ್ರಮೋಷನ್ ಸಾಧ್ಯತೆ ಇದೆ. ವ್ಯವಹಾರದಲ್ಲಿ ಚಟುವಟಿಕೆಗಳು ಹೆಚ್ಚಾಗಲಿವೆ. ಆದಾಯ ಉತ್ತಮವಾಗಿದ್ದು ಕುಟುಂಬ ಸದಸ್ಯರಿಗಾಗಿ ಹೆಚ್ಚು ಖರ್ಚು ಮಾಡುವಿರಿ. ವಿದ್ಯಾರ್ಥಿಗಳು ಯಶಸ್ವಿಯಾಗುವಿರಿ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಹಣಕಾಸಿನ ವಿಷಯಗಳಿಗೆ ಸಂಬಂಧಿಸಿದಂತೆ ಸಮಯ ಅನುಕೂಲಕರವಾಗಿದೆ. ವೃತ್ತಿಪರ ಜೀವನದಲ್ಲಿ ಪ್ರಾಮುಖ್ಯತೆ ಹೆಚ್ಚಾಗಲಿದೆ. ಹೊಸ ಪ್ರಯತ್ನಗಳಲ್ಲಿ ಯಶಸ್ಸು ಸಾಧಿಸುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿದೇಶ ವ್ಯವಹಾರದಲ್ಲಿ ಭಾರೀ ಲಾಭವನ್ನು ಗಳಿಸುವಿರಿ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಇಂದು ಶುಭ ಯೋಗದಿಂದ ನಿಮ್ಮ ಆರ್ಥಿಕ ಸಮಸ್ಯೆಗಳು ಬಗೆಹರಿಯಲಿದ್ದು ಅಷ್ಟೈಶ್ವರ್ಯ ಪ್ರಾಪ್ತಿಯಾಗಲಿದೆ. ಕುಟುಂಬದಲ್ಲಿ ಸಂತೋಷ, ಸಾಮರಸ್ಯ ಮೇಲುಗೈ ಸಾಧಿಸಲಿದೆ. ವೃತ್ತಿ-ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದೆ. ಜೊತೆಗಿದ್ದು ಬೆನ್ನಿಗೆ ಚೂರಿ ಹಾಕುವ ಸಂಬಂಧಿಕರ ಬಗ್ಗೆ ಜಾಗರೂಕರಾಗಿರಿ. 

ಇದನ್ನೂ ಓದಿ- 100ವರ್ಷಗಳ ಬಳಿಕ ವಿಪರೀತ ರಾಜಯೋಗ: ಈ ರಾಶಿಯವರಿಗೆ ಶುಕ್ರನ ಅನುಗ್ರಹ, ಭಾರೀ ಅದೃಷ್ಟ, ವೃತ್ತಿಯಲ್ಲಿ ಬಡ್ತಿ, ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಳ 

ಧನು ರಾಶಿಯವರ ಭವಿಷ್ಯ (Sagittarius Horoscope):  
ಇಂದು ಕೆಲಸಗಳು ನಿಮ್ಮ ಯೋಜನೆಯಂತೆ ಪೂರ್ಣಗೊಳ್ಳಲಿವೆ. ನಿಮ್ಮ ಪ್ರತಿ ಪ್ರಯತ್ನಕ್ಕೂ ಯಶಸ್ಸು ದೊರೆಯಲಿದೆ. ಆದಾಯದಲ್ಲಿ ಯಾವುದೇ ಕೊರತೆ ಇರುವುದಿಲ್ಲ. ಉತ್ತಮ ಸಂಪರ್ಕಗಳು ಎರ್ಪಾಡುತ್ತವೆ. ಮಕ್ಕಳಿಂದ ಶುಭ ಸಮಾಚಾರಗಳನ್ನು ಕೇಳುವಿರಿ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಉದ್ಯೋಗ ರಂಗದಲ್ಲಿ ಇಂದು ಸಕಾರಾತ್ಮಕ ಸುದ್ದಿಗಳನ್ನು ಕೇಳುವಿರಿ. ಕೆಲಸದಲ್ಲಿ ಬಡ್ತಿ ಸಂಭವವಿದೆ. ವ್ಯವಹಾರವು ಸ್ಥಿತರಾಗಿ ಮುಂದುವರೆಯಲಿದೆ. ಕುಟುಂಬದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ವಿದೇಶ ವ್ಯವಹಾರದಿಂದ ಭರ್ಜರಿ ಲಾಭವಾಗಲಿದೆ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ವೃತ್ತಿ ಬದುಕಿನಲ್ಲಿ ನಿಮ್ಮ ಪ್ರಭಾವ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭವನ್ನು ಪಡೆಯುವಿರಿ. ನಿರುದ್ಯೋಗಿಗಳಿಗೆ ಹೊಸ ಹೊಸ ಅವಕಾಶಗಳು ಗೋಚರಿಸುತ್ತವೆ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಸ್ನೇಹಿತರಿಂದ ಆರ್ಥಿಕ ನಷ್ಟ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರಿ. ಇಂದು ಯಾವುದೇ ವಿಚಾರದಲ್ಲಿ ಆತುರರ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News