)
Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ, ಹುಣ್ಣಿಮೆ ತಿಥಿ, ಮಂಗಳವಾರದ ಈ ದಿನ ರೇವತಿ ನಕ್ಷತ್ರ, ಧ್ರುವ ಯೋಗ, ಬಾಲವ ಕರಣ ಇರಲಿದೆ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ನಿಮ್ಮ ಮಾತಿನ ಬಗ್ಗೆ ತುಂಬಾ ಜಾಗರೂಕರಾಗಿರಿ. ಸಂಬಂಧಗಳಿಗೆ ಗೌರವ ನೀಡುವುದನ್ನು ಖಚಿತಪಡಿಸಿಕೊಳ್ಳಿ. ಕೆಲಸದಲ್ಲಿ ನಿರೀಕ್ಷಿತ ಪ್ರಗತಿ ಕಂಡು ಬರದಿರಬಹುದು. ಇದರಿಂದ ತಲ್ಲಣಗೊಳ್ಳದೆ ನಿಮ್ಮ ಪ್ರಯತ್ನವನ್ನು ಮುಂದುವರೆಸಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ವ್ಯವಹಾರದಲ್ಲಿ ಡಬಲ್ ಲಾಭವಾಗಲಿದೆ. ಇದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದ್ದು ಭವಿಷ್ಯಕ್ಕಾಗಿ ಉಳಿತಾಯದ ಬಗ್ಗೆ ಯೋಚಿಸಿ. ವ್ಯವಹಾರದಲ್ಲಿ ಆಕರ್ಷಕ ಪ್ರಸ್ತಾಪಗಳನ್ನು ಪಡೆಯುವಿರಿ. ವೃತ್ತಿಯಲ್ಲಿ ಪ್ರಗತಿ ಕಂಡು ಬರಲಿದೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಕೆಲಸದ ಕ್ಷೇತ್ರದಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ವೃತ್ತಿ-ವ್ಯವಹಾರದಲ್ಲಿ ಅನುಕೂಲಕರ ವಾತಾವರಣ ಇರಲಿದೆ. ವಿವಿಧ ವಿಷಯಗಳಲ್ಲಿ ನಿಮ್ಮ ಉತ್ಸಾಹ ಹೆಚ್ಚಾಗುತ್ತದೆ. ಆಡಳಿತಾತ್ಮಕ ಕೆಲಸಗಳಲ್ಲಿ ಸಕಾರಾತ್ಮಕ ಫಲಗಳನ್ನು ನಿರೀಕ್ಷಿಸಬಹುದು.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ಅದೃಷ್ಟದ ಬೆಂಬಲದಿಂದ ನೀವು ಕೈ ಹಾಕಿದ ಕೆಲಸಗಳಲ್ಲಿ ಹೆಚ್ಚಿನ ಲಾಭಾಂಶವನ್ನು ಕಾಣುವಿರಿ. ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ವ್ಯವಹಾರದಲ್ಲಿ ವಿಶಾಲ ದೃಷ್ಟಿಕೋನವನ್ನು ಕಾಪಾಡಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಿ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಇಂದು ಕೆಲಸದಲ್ಲಿ ಆತುರತೆಯನ್ನು ತಪ್ಪಿಸಿ. ಸ್ವಲ್ಪ ಅಜಾಗರೂಕತೆಯೂ ಕೂಡ ನಿಮ್ಮ ಲಾಭಾಂಶವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ತುಂಬು ಕುಟುಂಬದಲ್ಲಿ ಇರುವವರು ನಿಕಟತೆಯನ್ನು ಕಾಪಾಡಿಕೊಳ್ಳಿ. ಅರೋಗ್ಯ ವಿಷಯಗಳಲ್ಲಿ ಅಜಾಗರೂಕತೆಯನ್ನು ತಪ್ಪಿಸಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ಪ್ರಮುಖ ಕೆಲಸಗಳಲ್ಲಿ ಲಾಭ ಹೆಚ್ಚಾಗಲಿದೆ. ವೃತ್ತಿ ಬದುಕಿನಲ್ಲಿ ನಿರೀಕ್ಷಿತ ಫಲಗಳು ದೊರೆಯಲಿವೆ. ವೈಯಕ್ತಿಕ ಸಂಬಂಧಗಳು ಸುಧಾರಿಸಲಿವೆ. ದೀರ್ಘಾವಧಿ ಯೋಜನೆಗಳಲ್ಲಿ ವೇಗ ಪಡೆಯಲಿವೆ. ಜಂಟಿ ವ್ಯವಹಾರಗಳಲ್ಲಿ ದುಪ್ಪಟ್ಟು ಲಾಭವನ್ನು ಕಾಣುವಿರಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ವ್ಯವಹಾರದಲ್ಲಿ ಮಾಹಿತಿಯ ಕೊರತೆಯಿಂದ ನಿಮ್ಮ ಲಾಭ ಕಡಿಮೆಯಗಬಹುದು. ಆದಾಗ್ಯೂ, ಕೆಲಸದಲ್ಲಿ ಶ್ರದ್ಧೆಯಿಂದ ಮುಂದುವರೆಯುವುದು ಭವಿಷ್ಯದಲ್ಲಿ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಅರೋಗ್ಯ ಸಮಸ್ಯೆಗಳು ಉಲ್ಬಣಿಸಬಹುದು.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ನಿಮ್ಮ ಪ್ರೀತಿಪಾತ್ರರೊಂದಿಗೆ ಸಂತೋಷದ ಕ್ಷಣಗಳನ್ನು ಆನಂದಿಸುವಿರಿ. ಸ್ನೇಹಿತರೊಂದಿಗೆ ಗುಣಮಟ್ಟದ ಸಮಯ ಕಳೆಯುವಿರಿ. ಹಣಕಾಸಿನ ವಿಷಯದಲ್ಲಿ ಪರಿಸ್ಥಿತಿಗಳು ಅನುಕೂಲಕರವಾಗಿವೆ. ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡುಬರಲಿದೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ಮನೆಯಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳಿ. ನಿಮ್ಮನ್ನು ಸರಿ ಎಂದು ವಾದಿಸುವ ನಿಮ್ಮ ಅಭ್ಯಾಸವನ್ನು ತಪ್ಪಿಸಿ. ತಪ್ಪನ್ನು ಒಪ್ಪಿಕೊಳ್ಳಿ, ಕುಟುಂಬ ಸಂಬಂಧಗಳನ್ನು ಸುಗಮವಾಗಿ ನಿಭಾಯಿಸಲು ಯತ್ನಿಸಿ. ಆಸ್ತಿ ವಾಹನ ಸಂಬಂಧಿತ ವಿಷಯಗಳ ವ್ಯಾಜ್ಯ ಬಗೆಹರಿಯಲಿವೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ನೀವಿಂದು ಸಾಮಾಜಿಕ ಚಟುವಟಿಕೆಗಳ ಬಗ್ಗೆ ಹೆಚ್ಚು ನಿಗಾವಹಿಸಿ. ವಾಣಿಜ್ಯ ವ್ಯವಹಾರಗಳಲ್ಲಿ ನಿರೀಕ್ಷಿತ ಫಲ ದೊರೆಯದೆ ಇರಬಹುದು. ಸಾಂಪ್ರದಾಯಿಕ ವ್ಯವಹಾರಗಳಲ್ಲಿ ಲಾಭ ಹೆಚ್ಚಾಗಲಿದೆ. ಪ್ರೀತಿಪಾತ್ರರೊಂದಿಗೆ ಸಂವಹನ ಹೆಚ್ಚಾಗಲಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಕುಟುಂಬದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಕಲೆ ಮತ್ತು ಸೃಜನಶೀಲತೆ ಮೇಲೆ ಆಸಕ್ತಿ ಹೆಚ್ಚಾಗಲಿದೆ. ಭಾವನಾತ್ಮಕವಾಗಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಹಣಕಾಸಿನ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ ನಿರೀಕ್ಷಿಸಬಹುದು. ಮಾತಿನಲ್ಲಿ ಸ್ಪಷ್ಟತೆ ಇರಲಿ.
ಮೀನ ರಾಶಿಯವರ ಭವಿಷ್ಯ (Pisces Horoscope):
ಪ್ರೀತಿಪಾತ್ರರೊಂದಿಗೆ ಸಾಮರಸ್ಯ ಹೆಚ್ಚಾಗಲಿದ್.ಎ ವೈಯಕ್ತಿಕ ವಿಷಯಗಳು ಸುಧಾರಿಸಲಿವೆ. ಬ್ಯಾಂಕಿಂಗ್ ವ್ಯವಹಾರಗಳಲ್ಲಿ ನಿರೀಕ್ಷಿತ ಫಲಿತಾಂಶವು ನಿಮ್ಮ ಮನಸ್ಸಿನ ಉತ್ಸಾಹವನ್ನು ಇಮ್ಮಡಿಗೊಳಿಸಲಿದೆ. ನಿಮ್ಮ ನಡವಳಿಕೆ ಮೇಲೆ ನಿಗಾವಹಿಸಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.