Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ಏಕಾದಶಿ ತಿಥಿಯ ಈ ದಿನ ಮಂಗಳವಾರ ಆಶ್ಲೇಷಾ ನಕ್ಷತ್ರ, ಶೂಲ ಯೋಗ, ವಣಿಜ ಕರಣ. ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಭಾವನಾತ್ಮಕ ವಿಷಯಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಕೆಲಸದಲ್ಲಿ ನಿಮ್ಮ ಯೋಜನೆಗಳಿಗೆ ಫಲ ದೊರೆಯಲಿದೆ. ಅನಗತ್ಯ ಚರ್ಚೆಗಳನ್ನು ತಪ್ಪಿಸಿ, ಇಲ್ಲವೇ ವಿನಾಕಾರಣ ಕೆಲಸದಲ್ಲಿ ವಿಘ್ನ ತರಬಹುದು.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ನಿಮ್ಮ ಪ್ರೀತಿಪಾತ್ರರು, ಕುಟುಂಬದವರೊಂದಿಗೆ ಹೆಚ್ಚು ಸಮಯ ಕಳೆಯುವಿರಿ. ವ್ಯವಹಾರದಲ್ಲಿ ಪ್ರಗತಿಯನ್ನು ಕಾಣುವಿರಿ. ಕುಟುಂಬದಲ್ಲಿ ಬಾಂಧವ್ಯ ಹೆಚ್ಚಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಸೌಮ್ಯವಾಗಿ ವರ್ತಿಸಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಸಾಮಾಜಿಕ ವಿಷಯಗಳು ಬಗೆಹರಿಯಲಿವೆ. ಸಹೋದರತ್ವ ಮತ್ತು ಐಕ್ಯತೆ ಬಲಗೊಳ್ಳಲಿದೆ. ಸಂವಹನ ಮತ್ತು ನೆಟ್ವರ್ಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಪರಿಣಾಮಕಾರಿಯಾದ ದಿನ. ಒಡಹುಟ್ಟಿದವರೊಂದಿಗೆ ಸಮಯ ಕಳೆಯುವಿರಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ನಿಮ್ಮ ಪ್ರಮುಖ ಕೆಲಸಗಳಲ್ಲಿ ಕುಟುಂಬ ಸದಸ್ಯರು ಬೆಂಬಲವಾಗಿ ನಿಲ್ಲಲಿದ್ದಾರೆ. ಬುದ್ದಿವಂತಿಕೆ ಮತ್ತು ಸಾಮರಸ್ಯದಿಂದ ವರ್ತಿಸಿ. ಆತ್ಮವಿಶ್ವಾಸವು ಇಂದು ಉನ್ನತ ಮಟ್ಟದಲ್ಲಿ ಉಳಿಯಲಿದೆ. ಯಾವುದೇ ವಿಚಾರದಲ್ಲಿ ನಿಮ್ಮ ಮಾತಿಗೆ ಬದ್ಧರಾಗಿ ನಡೆದುಕೊಳ್ಳಿ.
ಇದನ್ನೂ ಓದಿ- ಗಜಕೇಸರಿ ಯೋಗದಿಂದ ಖುಲಾಯಿಸಲಿದೆ ಈ ರಾಶಿಯವರ ಅದೃಷ್ಟ, ಸುಖದ ಸುಪ್ಪತ್ತಿಗೆಯಲ್ಲೇ ಸಾಗಲಿದೆ ಜೀವನ
ಸಿಂಹ ರಾಶಿಯವರ ಭವಿಷ್ಯ (Leo Horoscope):
ಈ ದಿನ ಸ್ವಯಂ ಶಿಸ್ತನ್ನು ಕಾಪಾಡಿಕೊಳ್ಳಿ. ಅನುಕೂಲಕರ ಸಂದರ್ಭ್ಗಳ ಲಾಭ ಪಡೆಯಿರಿ. ಸೃಜನಶೀಲ ಪ್ರಯತ್ನಗಳು ವೇಗಗೊಳ್ಳಲಿವೆ. ಎಲ್ಲಾ ಕ್ಷೇತ್ರಗಳಲ್ಲೂ ಖ್ಯಾತಿ ಹೆಚ್ಚಾಗಲಿದೆ. ಆಸ್ತಿ ಮತ್ತು ಕಟ್ಟಡ ಸಂಬಂಧಿತ ವಿಷಯಗಳಲ್ಲಿ ಪ್ರಗತಿ ಕಾಣುವಿರಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ಫಲಪ್ರದವಾದ ವಿವಿಧ ಕಾರ್ಯಗಳಲ್ಲಿ ಹೂಡಿಕೆ ಮಾಡುವತ್ತ ಗಮನಹರಿಸಿ. ಮನೆಯಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಆದಾಗ್ಯೂ, ಇಂದು ಸಾಲ ತೆಗೆದುಕೊಳ್ಳುವುದನ್ನು ತಪ್ಪಿಸಿ. ವಿದೇಶ ವ್ಯಾಪಾರಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿವೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ಪ್ರಮುಖ ಕೆಲಸಗಳಲ್ಲಿ ಉತ್ಸಾಹದ ಜೊತೆಗೆ ಶಿಸ್ತು ಕಾಪಾಡಿಕೊಳ್ಳಿ. ನಿರ್ವಹಣೆಗೆ ಸಂಬಂಧಿಸಿದ ಕೆಲಸಗಳು ಸುಗಮವಾಗಿ ಜರುಗಳಿವೆ. ಕೆಲಸ ಮತ್ತು ವ್ಯವಹಾರದಲ್ಲಿ ಸ್ಪರ್ಧೆಗಳಲ್ಲಿ ಜಯ ಸಾಧಿಸುವಿರಿ. ಅಧ್ಯಯನ ಮತ್ತು ಬೋಧನೆಗೆ ಸಂಬಂಧಪಟ್ಟ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿರಿ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ವೃತ್ತಿಪರ ವಿಷಯಗಳಲ್ಲಿ ನೀವು ವೇಗವನ್ನು ಪಡೆಯುತ್ತೀರಿ. ವೈಯಕ್ತಿಕ ವ್ಯವಹಾರಗಳಲ್ಲಿ ವೇಗ ತೋರಿಸುವುದು ಲಾಭದಾಯಕ. ನಿರ್ವಹಣಾ ಕ್ಷೇತ್ರದಲ್ಲಿ ಅಪೇಕ್ಷಿತ ಗುರಿ ಸಾಧಿಸುವಿರಿ. ಜವಾಬ್ದಾರಿಗಳನ್ನು ಪೂರೈಸುವಲ್ಲಿ ಮುಂದಾಗುವಿರಿ. ನಿಮ್ಮ ಈ ಸ್ವಭಾವ ಮನ್ನಣೆಗೆ ಪಾತ್ರವಾಗಲಿದೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ಆರ್ಥಿಕ ಮತ್ತು ಸಾಮಾಜಿಕ ವಿಷಯಗಳು ವೇಗ ಪಡೆಯಲಿವೆ. ಎಲ್ಲೆಡೆ ಸೌಕರ್ಯ ಮತ್ತು ಸಾಮರಸ್ಯ ಮೇಲುಗೈ ಸಾಧಿಸಲಿದೆ. ಅದೃಷ್ಟದ ಬೆಂಬಲದಿಂದ ಗುರಿ ಸಾಧಿಸುವಿರಿ. ದೀರ್ಘಕಾಲಿನ ಚಟುವಟಿಕೆಗಳು ವೇಗಗೊಳ್ಳುತ್ತವೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ನಿಮ್ಮ ಕುಟುಂಬ ಸದಸ್ಯರ ಜೊತೆಗೆ ವಿಶ್ವಾಸವನ್ನು ಕಾಪಾಡಿಕೊಳ್ಳಿ. ನಿಮ್ಮ ಮಾತು ಮತ್ತು ನಾದವಳಿಕೆಯಲ್ಲಿ ಸಮತೋಲನ ಇರಲಿ. ಪ್ರಮುಖ ವ್ಯವಹಾರಗಳಲ್ಲಿ ಬುದ್ದಿವಂತಿಕೆಯಿಂದ ವರ್ತಿಸಿ. ಮನೆಗೆ ಅತಿತ್ಥಿಗಳ ಆಗಮನವಾಗಬಹುದು. ಸಂವಾಹನದ ವೇಳೆ ಜಾಗರೂಕರಾಗಿರಿ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ವೃತ್ತಿ-ವ್ಯವಹಾರವನ್ನು ವಿಸ್ತರಿಸಲು ಉತ್ತಮ ಅವಕಾಶಗಳನ್ನು ಪಡೆಯುವಿರಿ. ಹಣಕಾಸು ಸಂಬಂಧಿತ ವಿಷಯಗಳು ಸುಧಾರಣೆಗೊಳ್ಳಲಿವೆ. ಉದ್ಯಮ-ವ್ಯವಹಾರದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿ. ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗಲಿದೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಕೆಲಸದಲ್ಲಿ ನಿಮ್ಮ ಆತ್ಮವಿಶ್ವಾಸವನ್ನು ಸ್ಥಿರವಾಗಿರಿಸ್ಕೊಲ್ಲಿ. ಆರಾಮದಾಯಕ ವೇಗದಲ್ಲಿ ಮುಂದುವರೆಯಿರಿ. ಯಾರಿಗಾದರೂ ಹಣವನ್ನು ಸಾಲವಾಗಿ ನೀಡುವುದನ್ನು ತಪ್ಪಿಸಿ. ವ್ಯವಹಾರದಲ್ಲಿ ಸ್ಪಷ್ಟತೆ ಇರಲಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









