)
Somavara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ತ್ರಯೋದಶಿ, ಸೋಮವಾರದ ಈ ದಿನ ವಿಶಾಖಾ ನಕ್ಷತ್ರ ಶಿವ ಯೋಗ ಗರಜ ಕರಣ. ಇಂದಿನ ದಿನ ಭವಿಷ್ಯ ಯಾರಿಗೆ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಪರಸ್ಪರ ಸಂಬಂಧಗಳು ಬಲಗೊಳ್ಳುತ್ತವೆ. ಕೌಟುಂಬಿಕ ವಿಚಾರಗಳಲ್ಲಿ ನಂಬಿಕೆಗಳು ಬೆಳೆಯುತ್ತವೆ. ಸಂಘಟನಾ ಕಾರ್ಯ, ಸಹಯೋಗದ ಪ್ರಯತ್ನಗಳಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಮಾತು ಮತ್ತು ನಡವಳಿಕೆಯಲ್ಲಿ ಸೌಮ್ಯತೆಯನ್ನು ಕಾಪಾಡಿಕೊಳ್ಳಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ನೀತಿ, ನಿಯಮಗಳನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಅಧಿಕಾರಿಗಳ ನಿರೀಕ್ಷೆಗಳನ್ನು ಪೂರೈಸುವ ಒತ್ತಡ ಹೆಚ್ಚಾಗಿರುತ್ತದೆ. ಕೆಲಸದ ಸ್ಥಳದಲ್ಲಿ ವಿವೇಚನೆಯಿಂದ ಕಾರ್ಯನಿರ್ವಹಿಸುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಉದ್ಯೋಗ ರಂಗದಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಕೆಲಸ ಮಾಡಿ ಪ್ರಗತಿಯ ಹಾದಿ ತೆರೆಯುತ್ತದೆ. ಸ್ನೇಹಿತರೊಂದಿಗೆ ಆಹ್ಲಾದಕರ ಸಮಯವನ್ನು ಕಳೆಯುವಿರಿ. ಪ್ರೀತಿಪಾತ್ರರೊಂದಿಗೆ ಮೂಡಿದ್ದ ಭಿನ್ನಾಭಿಪ್ರಾಯಗಳು ಬಗೆಹರಿಯುತ್ತವೆ. ವೃತ್ತಿಪರ ಕಾರ್ಯಗಳಲ್ಲಿ ಶುಭ ಸುದ್ದಿ ಸ್ವೀಕರಿಸುವಿರಿ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಸಂಕುಚಿತ ಮನೋಭಾವ, ಸ್ವಾರ್ಥ ಬೆಳೆಯದಂತೆ ತಡೆಯಿರಿ. ಕೆಲಸದಲ್ಲಿ ವೇಗವನ್ನು ಕಾಯ್ದುಕೊಳ್ಳುವಿರಿ. ಕೌಟುಂಬಿಕ ಸಮಾಲೋಚನೆ ನಡುವೆ ಭಾವನಾತ್ಮಕ ಅಸಹನೆಯನ್ನು ತಪ್ಪಿಸಿ. ವೈಯಕ್ತಿಕ ವಿಷಯಗಳಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಆಸ್ತಿ, ವಾಹನ ಸಂಬಂಧಿಸಿದ ವಿಷಯಗಳಲ್ಲಿ ಚಟುವಟಿಕೆಯಿಂದ ಇರುವಿರಿ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಸಂಬಂಧಗಳಲ್ಲಿ ಮಧುರತೆಯನ್ನು ಕಾಪಾಡಿಕೊಳ್ಳುವಿರಿ. ನಿಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷದ ಸಮಯವನ್ನು ಕಳೆಯುವಿರಿ. ನಿಮ್ಮವರಿಗಾಗಿ ತ್ಯಾಗದ ಮನೋಭಾವವನ್ನು ಬೆಳೆಸಿಕೊಳ್ಳುವಿರಿ. ಜವಾಬ್ದಾರಿಯುತ ವ್ಯಕ್ತಿಗಳನ್ನು ಭೇಟಿಯಾಗುವಿಐ. ಇಂದು ಸಮಾಜದಲ್ಲಿ ನಿಮ್ಮ ಖ್ಯಾತಿ ಮತ್ತು ಪ್ರಭಾವ ಹೆಚ್ಚಾಗಲಿದೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಕುಟುಂಬ ಸದಸ್ಯರೊಂದಿಗೆ ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸುವಿರಿ. ಕುಟುಂಬದಲ್ಲಿ ಸ್ನೇಹಪರ ವಾತಾವರಣವಿದ್ದು ಸಂತೋಷದ ಸಮಯವನ್ನು ಆನಂದಿಸುವಿರಿ. ಮನೆಯಲ್ಲಿ ಸಂಭ್ರಮಾಚರಣೆ, ಶುಭ ಕಾರ್ಯಗಳು ಜರುಗುವ ಸಂಭವವಿದೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ಹೊಸ ಜನರೊಂದಿಗೆ ಉತ್ತಮ ನಡವಳಿಕೆ ಮತ್ತು ಸಂವಾಹನವನ್ನು ಕಾಪಾಡಿಕೊಳುತ್ತೀರಿ. ಹೊಸ ಯೋಜನೆಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. ಕೆಲಸದಲ್ಲಿ ದಕ್ಷತೆ ಹೆಚ್ಚಾಗಲಿದೆ. ವಿವಿಧ ಪ್ರಯತ್ನಗಳಲ್ಲಿ ಶುಭ ಫಲವನ್ನು ನಿರೀಕ್ಷಿಸಬಹುದು. ಸಭೆಗಳಲ್ಲಿ ನಿಮ್ಮ ಮಾತಿಗೆ ಮನ್ನಣೆ ದೊರೆಯಲಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ನಿಮ್ಮ ಕೆಲಸದಲ್ಲಿ ಇಂದು ನಿರಾಳ ಭಾವಾವನ್ನು ಅನುಭವಿಸುವಿರಿ. ಪ್ರೀತಿಪಾತ್ರರ ಅನುಕೂಲಕ್ಕಾಗಿ ಶ್ರಮವಹಿಸುವಿರಿ. ಪ್ರಯಾಣವು ಲಾಭದಾಯಕವಾಗಿರುತ್ತದೆ. ಸಂಬಂಧಿಕರು ಮತ್ತು ಪರಿಚಯಸ್ಥರೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳುವಿರಿ.
ಧನು ರಾಶಿಯವರ ಭವಿಷ್ಯ (Sagittarius Horoscope):
ವ್ಯವಹಾರದಲ್ಲಿ ಉತ್ಸಾಹವನ್ನು ಕಾಯ್ದುಕೊಳ್ಳುವಿರಿ. ಇದೇ ಇಂದಿನ ನಿಮ್ಮ ಯಶಸ್ಸಿನ ಗುಟ್ಟು. ಒಪ್ಪಂದಗಳು ವೇಗವನ್ನು ಪಡೆಯುತ್ತವೆ. ವ್ಯಾಪಾರ ವಿಚಾರಗಳಲ್ಲಿ ಹಿಂಜರಿಕೆಯಿಲ್ಲದೆ ಮುಂದುವರೆಯಿರಿ. ಇದರಿಂದ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯುವಿರಿ.
ಮಕರ ರಾಶಿಯವರ ಭವಿಷ್ಯ (Capricorn Horoscope):
ವೃತ್ತಿ ವ್ಯವಹಾರದಲ್ಲಿ ಸಹೋದ್ಯೋಗಿಗಳು ಮತ್ತು ಗೆಳೆಯರಿಂದ ಬೆಂಬಲ ದೊರೆಯಲಿದೆ. ವಹಿವಾಟುಗಳನ್ನು ಎಚ್ಚರಿಕೆಯಿಂದ ನಿರ್ವಹಿಸಿ. ಸ್ನೇಹಿತರಲ್ಲಿ ನಂಬಿಕೆ ಬೆಳೆಯುತ್ತದೆ. ಅಧಿಕಾರ ಮತ್ತು ನಿರ್ವಹಣೆಗೆ ಸಂಬಂಧಿಸಿದ ಕೆಲಸಗಳು ವೇಗವನ್ನು ಪಡೆಯುತ್ತವೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ಅದೃಷ್ಟ ನಿಮ್ಮ ಪರವಾಗಿದ್ದು ನಿರೀಕ್ಷಿತ ಕೆಲಸಗಳು ಕೈಗೂಡಲಿವೆ. ಪ್ರೀತಿಪಾತ್ರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಿರಿ. ಕೆಲಸ ಮತ್ತು ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದೆ. ಯೋಜನೆಗಳ ಅನುಷ್ಠಾನದಿಂದ ಶುಭ ಫಲಗಳನ್ನು ನಿರೀಕ್ಷಿಸಬಹುದು.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ಪ್ರತಿ ಹೆಜ್ಜೆಯಲ್ಲೂ ಯಶಸ್ಸು ನಿಮ್ಮ ಕೈ ಹಿಡಿಯಲಿದೆ. ಮಧ್ಯಾಹ್ನದ ಬಳಿಕ ಅನುಕೂಲಕರ ಸಮಯ ಇರಲಿದ್ದು ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಾಶಸ್ತ್ಯವಾಗಿದೆ. ಇತರರ ಮಾತುಗಳಿಗೆ ಪ್ರಭಾವಿತರಾಗಬೇಡಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.