Budhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಹುಣ್ಣಿಮೆ ತಿಥಿಯ ಈ ದಿನ ಜ್ಯೇಷ್ಠಾ ನಕ್ಷತ್ರದಲ್ಲಿ ಸಾಧ್ಯ ಯೋಗ ಬಾಲವ ಕರಣ. ಇಂದಿನ ರಾಶಿ ಭವಿಷ್ಯ ಯಾರಿಗೆ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಕುಟುಂಬಸ್ಥರೊಂದಿಗೆ ಪ್ರವಾಸಕ್ಕಾಗಿ ಯೋಜಿಸಬಹುದು. ಹೊಸ ವ್ಯವಹಾರ ಆರ್ಮಭಿಸಲು ಬಯಸುವವರು ಅನುಭವಿ ವ್ಯಕ್ತಿಗಳಿಂದ ಸಲಹೆ ಪಡೆಯಿರಿ. ವೃತ್ತಿ ಬದುಕಿನಲ್ಲಿ ಉತ್ತಮ ಫಲಿತಾಂಶವನ್ನು ಕಾಣುವಿರಿ. ಹಣಕಾಸು ಸಂಬಂಧಿತ ವಿಚಾರಗಳು ಪ್ರಯೋಜನಕಾರಿ ಆಗಿವೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಈ ರಾಶಿಯ ವೃತ್ತಿಪರರಿಗೆ ಇಂದು ವೇತನ ಹೆಚ್ಚಳ ಸಂಭವವಿದೆ. ದೀರ್ಘ ಸಮಯದಿಂದ ಬಾಕಿ ಉಳಿದಿದ್ದ ಕೆಲಸಗಳನ್ನು ಪೂರೈಸುವಿರಿ. ದಿನವಿಡೀ ಉತ್ಸಾಹಭರಿತರಾಗಿ ಇರುವಿರಿ. ಹೊಸ ವಿಷಯಗಳನ್ನು ಕಲಿಯಲು ಆಸಕ್ತಿ ಹೆಚ್ಚಲಿದೆ. ಸಂಬಂಧಗಳಲ್ಲಿ ಮಾಧುರ್ಯ ಇರಲಿದೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಈ ರಾಶಿಯ ವ್ಯಕ್ತಿಗಳು ಹೊಸ ವ್ಯವಹಾರದಲ್ಲಿ ಸವಾಲುಗಳನ್ನು ಎದುರಿಸಬೇಕಾಗಬಹುದು. ದೀರ್ಘ ಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳು ವೇಗವನ್ನು ಪಡೆಯಲಿವೆ. ಯೋಜಿತ ಕೆಲಸಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ. ಕೆಲಸದಲ್ಲಿ ಸ್ಥಿರತೆ ಕಂಡುಬರಲಿದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಹುಣ್ಣಿಮೆಯ ಈ ದಿನ ನೀವು ಹೆಜ್ಜೆ ಹೆಜ್ಜೆಗೂ ಜಾಗರೂಕರಾಗಿರಬೇಕು. ಒಬ್ಬ ವ್ಯಕ್ತಿಯ ಕಾರಣದಿಂದಾಗಿ ಕೆಲವು ಕೆಲಸಗಳು ಅಗತ್ಯಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳಬಹುದು. ಸಂಗಾತಿಯೊಂದಿಗೆ ಮಧುರವಾಗಿ ಮಾತನಾಡುವುದು ಅರ್ಧ ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರವಾಗಿದೆ.
ಇದನ್ನೂ ಓದಿ- ಸೂರ್ಯನ ರಾಶಿಯಲ್ಲಿ ನೆರಳು ಗ್ರಹ: 2026ರವರೆಗೆ ಈ ರಾಶಿಯವರಿಗೆ ಕೇತು ದೆಸೆ, ಹೆಜ್ಜೆ ಹೆಜ್ಜೆಗೂ ಯಶಸ್ಸು, ಅಪಾರ ಧನ-ಸಂಪತ್ತು
ಸಿಂಹ ರಾಶಿಯವರ ಭವಿಷ್ಯ (Leo Horoscope):
ಇಂದು ದಿಢೀರ್ ಪ್ರಯಾಣ ಕೈಗೊಳ್ಳಬೇಕಾಗಬಹುದು. ಬೇರೆಯವರ ಮಾತುಗಳಿಂದ ನಿಮ್ಮ ಆಲೋಚನೆಗಳು ಪ್ರಭಾವಿತವಾಗಬಹುದು. ವೈಯಕ್ತಿಕ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವುದನ್ನು ತಪ್ಪಿಸಿ. ಆದಾಯ ಹೆಚ್ಚಾಗುವ ನಿರೀಕ್ಷೆ ಇದೆ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ಹಠಾತ್ ಧನಲಾಭವು ನಿಮ್ಮ ದಿನವನ್ನು ಬೆಳಗಲಿದೆ. ಉದ್ಯೋಗಳು ಕಚೇರಿಯಲ್ಲಿ ನಡೆಯುವ ಸಭೆಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಹಿಂಜರಿಯಬೇಡಿ. ಕೆಲಸದಲ್ಲಿ ಸ್ನೇಹಿತರಿಗೆ ಸಹಾಯ ಮಾಡುವಿರಿ. ಯೋಜಿತ ಕೆಲಸಗಳನ್ನು ಪೂರ್ಣಗೊಳಿಸುವಿರಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ದಿನವು ನಿಮಗೆ ಅನುಕೂಲಕರವಾಗಿದೆ. ವ್ಯಾಪಾರ ಚಟುವಟಿಕೆಗಳಲ್ಲಿ ಪ್ರಗತಿ ಕಂಡು ಬರಲಿದೆ. ಮನೆಗಾಗಿ ಕೆಲವು ವಸ್ತುಗಳನ್ನು ಖರೀದಿಸಬಹುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ದೂರದ ಸಂಬಂಧಿಕರು ಇಂದು ಮನೆಗೆ ಬರಬಹುದು.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಜೀವನದಲ್ಲಿ ಏನಾದರೂ ಬದಲಾವಣೆಗಾಗಿ ಯೋಚಿಸುವಿರಿ.ಮಕ್ಕಳೊಂದಿಗೆ ನಿಮ್ಮ ಸಂಬಂಧ ಸುಧಾರಿಸುತ್ತದೆ. ಕಲಾ ಕ್ಷೇತ್ರದಲ್ಲಿರುವವರಿಗೆ ಅನುಕೂಲಕರವಾದ ದಿನ. ವ್ಯವಹಾರದಲ್ಲಿ ಕಠಿಣ ಪರಿಶ್ರಮಕ್ಕೆ ಫಲ ದೊರೆಯಲಿದೆ. ಮನೆ ಖರೀದಿ ವ್ಯವಹಾರಗಳಲ್ಲಿ ಪ್ರಗತಿ ಕಂಡು ಬರಲಿದೆ.
ಇದನ್ನೂ ಓದಿ- ಆರ್ದ್ರಾ ನಕ್ಷತ್ರಕ್ಕೆ ಬುಧನ ಪ್ರವೇಶದಿಂದ ಈ ರಾಶಿಗಳ ಅದೃಷ್ಟ ಚಿನ್ನದಂತೆ ಹೊಳೆಯುತ್ತದೆ!
ಧನು ರಾಶಿಯವರ ಭವಿಷ್ಯ (Sagittarius Horoscope):
ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸಲಿದೆ. ಸಂಗಾತಿಯೊಂದಿಗೆ ಆಹ್ಲಾದಕರ ಸಮಯವನ್ನು ಕಳೆಯುವಿರಿ. ಭೂಮಿ ಸಂಬಂಧಿಸಿದ ವ್ಯವಹಾರಗಳಲ್ಲಿ ಲಾಭವನ್ನು ಕಾಣಬಹುದು. ವೃತ್ತಿ ಬದುಕಿನಲ್ಲಿ ತಲೆದೂರಿದ್ದ ಸಮಸ್ಯೆಗಳಿಂದ ಪರಿಹಾರ ದೊರೆಯಲಿದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ಆಧ್ಯಾತ್ಮಿಕ ವಿಷಯಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸಂಬಂಧಿಕರೊಂದಿಗಿನ ವಿವಾದಗಳು ಕೊನೆಗೊಳ್ಳಲಿವೆ. ಹಣಕಾಸಿನ ವಿಷಯಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಸಂಗಾತಿಯೊಂದಿಗೆ ಕುಳಿತು ಚರ್ಚಿಸುವುದರಿಂದ ಪರಿಹಾರ ದೊರೆಯಲಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ನಿಮ್ಮ ವ್ಯಕ್ತಿತ್ವಕ್ಕೆ ಮನ್ನಣೆ ದೊರೆಯಲಿದೆ. ಸಮಾಜದಲ್ಲಿ ಕೀರ್ತಿ ಹೆಚ್ಚಾಗಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳನ್ನು ನಡೆಸುವ ಬಗ್ಗೆ ಯೋಜಿಸಬಹುದು. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ. ಪ್ರಮುಖ ವ್ಯವಹಾರಗಳಿಗೆ ಸಹಿ ಹಾಕಲು ಉತ್ತಮ ದಿನ.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ಜೀವನದಲ್ಲಿ ಹೊಸ ಉತ್ಸಾಹ, ಸುಮಧುರ ಕ್ಷಣಗಳನ್ನು ಆನಂದಿಸುವಿರಿ. ವೃತ್ತಿ ಬದುಕಿನಲ್ಲಿ ಉತ್ತಮ ಬದಲಾವಣೆಗಳನ್ನು ಕಾಣುವಿರಿ. ಪ್ರಮೋಷನ್ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ಪರಸ್ಪರ ನಂಬಿಕೆಯಿಂದ ಬಂಧ ಬಲಗೊಳ್ಳಲಿದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









