)
Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಪ್ರತಿಪದಾ ತಿಥಿ ಗುರುವಾರದ ಈ ದಿನ ಮೂಲಾ ನಕ್ಷತ್ರ, ಶುಭ ಯೋಗ ತೈತಿಲ ಕರಣ ಇರಲಿದೆ. ಇಂದು ದ್ವಾದಶ ರಾಶಿಗಳ ಫಲಾಫಲ ಹೇಗಿದೆ. ಈ ದಿನ ಗುರು ರಾಘವೇಂದ್ರರ ಕೃಪೆ ಯಾರಿಗಿರಲಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ವೃತ್ತಿ ವ್ಯವಹಾರದಲ್ಲಿ ಇಂದು ನಿಮ್ಮ ಪರಿಸ್ಥಿತಿ ಬಲಗೊಳ್ಳುತ್ತದೆ. ದೀರ್ಘಕಾಲಿನ ಯೋಜನೆಗಳಲ್ಲಿ ಪರಿಷ್ಕರಣೆಗೆ ಮುಂದಾಗುವುದು ಲಾಭದಾಯಕವಾಗಿದೆ. ವಿವಿಧ ವಿಷಯಗಳು ಇಂದು ಅನುಕೂಲಕರವಾಗಿರುತ್ತವೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ಆರೋಗ್ಯದ ವಿಚಾರಗಳಲ್ಲಿ ನಿರ್ಲಕ್ಷ್ಯವನ್ನು ತಪ್ಪಿಸಿ. ಶಿಸ್ತುಬದ್ಧ ಜೀವನವನ್ನು ರೂಢಿಸಿಕೊಳ್ಳಲು ಪ್ರಯತ್ನ ಅಗತ್ಯವಾಗಿದೆ. ವೃತ್ತಿಪರರಿಗೆ ಮಿಶ್ರ ಫಲಪ್ರಧವಾದ ದಿನ. ಹಣಕಾಸು ವಿಚಾರಗಳಲ್ಲಿ ಯೋಚಿಸಿ ತುಂಬಾ ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಕುಟುಂಬಸ್ಥರೊಂದಿಗೆ ಸಿಹಿ ಕ್ಷಣಗಳನ್ನು ಕಳೆಯುವಿರಿ. ನಿಮ್ಮ ಕೆಲಸ ಕಾರ್ಯಗಳಲ್ಲಿ ತಾಳ್ಮೆ ಅಗತ್ಯವಾಗಿದೆ. ವೈವಾಹಿಕ ಜೀವನದಲ್ಲಿ ಸೌಕರ್ಯಗಳು ಹೆಚ್ಚಾಗಬಹುದು. ನಿಮ್ಮ ಗುರಿಗಳ ಮೇಲೆ ಗಮನ ಕೇಂದ್ರೀಕರಿಸಿ ಮುಂದುವರೆಯುವುದು ಶುಭ ಫಲ ನೀಡಲಿದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ವೃತ್ತಿಪರರು ನೀಡಿದ ಭಾರವಸೆಗಳನ್ನು ಪೂರೈಸಲು ಪ್ರಯತ್ನಿಸಿ. ಕೆಲಸದ ಕ್ಷೇತ್ರದಲ್ಲಿ ಸಾಧ್ಯವಾದಷ್ಟು ಸಮಯ ವ್ಯರ್ಥ ಮಾಡುವುದನ್ನು ತಪ್ಪಿಸಿ. ಪ್ರಮುಖ ಕೆಲಸಗಳನ್ನು ಬಾಕಿ ಉಳಿಸುವ ತಪ್ಪನ್ನು ಮಾಡಬೇಡಿ. ಇದರಿಂದ ವಿರೋಧಿಗಳು ನಿಮ್ಮ ವಿರುದ್ಧ ಪಿತೂರಿ ಮಾಡಲು ನೀವೇ ದಾರಿ ಮಾಡಿಕೊಟ್ಟಂತಾಗುತ್ತದೆ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಸಹೋದ್ಯೋಗಿಗಳೊಂದಿಗೆ ಸಾಮರಸ್ಯ ಹೆಚ್ಚಾಗಲಿದೆ. ಕೆಲಸದಲ್ಲಿ ನಾವೀನ್ಯತೆ ಪರಿಣಾಮಕಾರಿಯಾಗಿರುತ್ತದೆ. ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕಗಳು ಸುಧಾರಿಸಲಿವೆ. ನಿಮ್ಮ ಪ್ರೀತಿಪಾತ್ರರೊಂದಿಗೆ ಸಂತೋಷದಾಯಕ ಕ್ಷಣಗಳನ್ನು ಕಳೆಯುವಿರಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಇಂದು ಉದಾರ ಮನೋಭಾವವನ್ನು ಕಾಪಾಡಿಕೊಳ್ಳಿ. ವೃತ್ತಿಪರ ಜೀವನದಲ್ಲಿ ಸಕರಾತ್ಮಕತೆ ಕಾಪಾಡಿಕೊಳ್ಳಿ. ಚಿಂತನಶೀಲರಾಗಿ ವರ್ತಿಸುವುದು ಲಾಭದಾಯಕವಾಗಿದೆ. ಪ್ರಮುಖ ವ್ಯವಹಾರಗಳಲ್ಲಿ ಆಪ್ತರಿಂದ ಸಲಹೆ ಪಡೆಯಿರಿ.
ತುಲಾ ರಾಶಿಯವರ ಭವಿಷ್ಯ (Libra Horoscope):
ವಾಣಿಜ್ಯ ವಿಷಯಗಳತ್ತ ಹೆಚ್ಚು ಗಮನಹರಿಸುವಿರಿ. ಸಂವಹನದಲ್ಲಿ ಪರಿಣಾಮಕಾರಿಯಾಗಿರುತ್ತೀರಿ. ಎಲ್ಲರೊಂದಿಗೆ ಸಮನ್ವಯ ಕಾಪಾಡಿಕೊಳ್ಳಿ. ಸಾರ್ವಜನಿಕರ ಹಿತಾಸಕ್ತಿಯ ಬಗ್ಗೆ ಯೋಚಿಸಿ. ಹೊಸ ಪರಿಚಯಗಳಿಂದ ಪ್ರಯೋಜನವನ್ನು ಪಡೆಯುವಿರಿ. ಸಾಮಾಜಿಕ ಚಟುವಟಿಕೆಗಳು ವೇಗಗೊಳ್ಳಲಿವೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ನಿಮ್ಮ ಆಪ್ತರು, ಸಹೋದ್ಯೋಗಿಗಳೊಂದಿಗೆ ಸಂವಹನ ಸಂಪರ್ಕಗಳು ಹೆಚ್ಚಾಗಳಿವೆ. ವೈಯಕ್ತಿಕ, ಕೌಟುಂಬಿಕ ಸಾಧನೆಗಳು ವೇಗಗೊಳ್ಳಲಿವೆ. ಆಸ್ತಿ ವ್ಯವಹಾರದಲ್ಲಿ ಸಕಾರಾತ್ಮಕತೆಯೂ ನಿಮ್ಮ ಮನೆಯಲ್ಲಿ ಸಂತೋಷದ ವಾತಾವರಣಕ್ಕೆ ಕಾರಣವಾಗಲಿದೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ನಿಮ್ಮ ಕೆಲಸ ಮತ್ತು ವ್ಯವಹಾರದಲ್ಲಿ ಉನ್ನತ ಆದರ್ಶಗಳನ್ನು ಅನುಸರಿಸುವುದು ಪ್ರಯೋಜನಕಾರಿ ಆಗಿದೆ. ಸೃಜನಶೀಲ ಪ್ರಯತ್ನಗಳಿಂದಾಗಿ ಪ್ರಗತಿ ಕಂಡು ಬರಲಿದೆ. ಎಲ್ಲರೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳುವಿರಿ. ವೈಯಕ್ತಿಕ ಸಂವಹನವು ಮುಖ್ಯವಾಗಿರುತ್ತದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ನಿಮಗೆ ಮಿಶ್ರ ಫಲಗಳಿಂದ ಕೂಡಿದ ದಿನ. ಯಾವುದೇ ವಿಚಾರದಲ್ಲಿ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಜಾಣತನದ ವಿಳಂಬ ನೀತಿ ಅನುಸರಿಸುವುದು ಲಾಭದಾಯಕವಾಗಿದೆ. ನಿಮ್ಮ ವೃತ್ತಿಪರ ಜೀವನದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡುವುದು ಅಗತ್ಯವಾಗಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ನಿಮ್ಮ ವೃತ್ತಿ ವ್ಯವಹಾರದಲ್ಲಿ ಅಪೇಕ್ಷಿತ ಆವೇಗವನ್ನು ತರಲು ಪ್ರಯತ್ನಗಳನ್ನು ಹೆಚ್ಚಿಸುವಿರಿ. ನಿಮ್ಮ ಕೌಶಲ್ಯದಿಂದ ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಶ್ರೀ ಗುರು ರಾಘವೇಂದ್ರರರ ವಿಶೇಷ ಆಶೀರ್ವಾದದಿಂದಾಗಿ ಆದಾಯದ ಮೂಲಗಳು ಹೆಚ್ಚಾಗಲಿವೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಅಧಿಕಾರ ಮತ್ತು ಆಡಳಿತಾತ್ಮಕ ವಿಚಾರಗಳಲ್ಲಿ ಮೇಲುಗೈ ಸಾಧಿಸುವಿರಿ. ನಿಮ್ಮ ವೃತ್ತಿಪರ ಕಾರ್ಯಕ್ಷಮತೆ ಪರಿಣಾಮಕಾರಿಯಾಗಿರುತ್ತದೆ. ನಿಕಟವರ್ತಿಗಳೊಂದಿಗೆ ಸಾಮರಸ್ಯ ಹೆಚ್ಚಾಗುತ್ತದೆ. ವ್ಯವಹಾರ ಮಾತುಕತೆಗಳಲ್ಲಿ ಪ್ರಭಾವಶಾಲಿಯಾಗಿರುತ್ತೀರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.