)
Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಸೌರ ಹೇಮಂತ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ, ನವಮಿ ತಿಥಿ, ಗುರುವಾರದ ಈ ದಿನ ಮಘಾ ನಕ್ಷತ್ರ, ಬ್ರಹ್ಮ ಯೋಗ, ತೈತಿಲ ಕರಣ ಇರಲಿದೆ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಹಠಾತ್ ಪ್ರವಾಸವು ನಿಮ್ಮನ್ನು ಅಚ್ಚರಿಗೊಲಿಸಬಹುದು. ವ್ಯವಹಾರ ಹಾಗೂ ವೈಯಕ್ತಿಕ ಜೀವನವನ್ನು ಬೆರೆಸಬೇಡಿ. ನಿಮ್ಮ ಸ್ಪರ್ಧಾತ್ಮಕ ಮನಸ್ಥಿತಿಯೊಂದಿಗೆ ತಾಳ್ಮೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಬುದ್ದಿವಂತಿಕೆಯಿಂದ ವ್ಯಾಪಾರದಲ್ಲಿ ಲಾಭವಾಗಲಿದೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇತ್ತೀಚಿನ ದಿನಗಳಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಿದೆ. ಹಾಗಂತ ಪ್ರಲೋಭನೆಯನ್ನು ತಪ್ಪಿಸಿ. ಆರೋಗ್ಯದ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ. ಕಠಿಣ ವ್ಯಾಯಾಮ, ದೈಹಿಕ ಕಸರತ್ತುಗಳನ್ನು ತಪ್ಪಿಸುವುದು ಒಳ್ಳೆಯದು.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಹಿಂದಿನ ಸಂಪರ್ಕಗಳು ಮತ್ತೆ ನಿಮ್ಮ ವ್ಯವಹಾರವನ್ನು ಅಭಿವೃದ್ಧಿಪಡಿಸುವಲ್ಲಿ ಪರಿಣಾಮಕಾರಿ ಆಗಿದೆ. ಹಿಂದಿನ ತಪ್ಪುಗಳನ್ನು ತಿದ್ದಿ ಮುಂದುವರೆಯಿರಿ. ಕುಟುಂಬದಲ್ಲಿ ಶಾಂತಿಯನ್ನು ಸ್ಥಾಪಿಸಲು ನಿಮ್ಮ ಮಾತಿನ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ನೀವಿಂದು ನಿಮ್ಮ ರಹಸ್ಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಈ ದಿನ ಹೆಚ್ಚು ಸಂವಹನಶೀಲರಾಗಿ ನಿರ್ಧಾರಗಳನ್ನು ಕೈಗೊಳ್ಳುವುದು ಪ್ರಯೋಜನಕಾರಿ ಆಗಿದೆ. ಪ್ರೀತಿ ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಂಭವವಿದೆ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಯೋಚಿಸದೆ ಮಾತನಾಡುವುದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಯಾವುದೇ ವಿಚಾರದಲ್ಲಿ ತಾಳ್ಮೆಯಿಂದ ವರ್ತಿಸುವುದು ಒಳ್ಳೆಯದು. ಕಾನೂನು ವ್ಯವಹಾರಗಳಲ್ಲಿ ನಿರಾಶಾದಾಯಕ ದಿನವೆಂದು ಸಾಬೀತುಪಡಿಸಬಹುದು.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಈ ದಿನ ನಿಮ್ಮ ನಡವಳಿಕೆಯಲ್ಲಿ ಹೆಚ್ಚಿನ ನಿಗಾ ಅಗತ್ಯವಾಗಿದೆ. ವ್ಯಾಪಾರ ಸಂಬಂಧಿತ ಪ್ರಯಾಣಗಳು ಹೆಚ್ಚಿನ ಲಾಭಾಂಶವನ್ನು ನೀಡಲಿದೆ. ಕುಟುಂಬದೊಂದಿಗೆ ಪ್ರವಾಸಕ್ಕಾಗಿ ಪ್ಲಾನ್ ಮಾಡಬಹುದು. ವೃತ್ತಿರಂಗದಲ್ಲಿ ಫಲಪ್ರದವಾದ ದಿನ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಯಾವುದೇ ರೀತಿಯ ಒತ್ತಡವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವುದನ್ನು ಪರಿಗಣಿಸಿ. ಸ್ನೇಹಿತರೊಂದಿಗೆ ಸಂಜೆ ವಿಹಾರಕ್ಕೆ ತೆರಳುವುದು ಮನಸ್ಸನ್ನು ಹಗುರಗೊಳಿಸಲಿದೆ. ವಿವಾಹ ಸಂಬಂಧ ಪ್ರಮುಖ ನಿರ್ಧಾರ ಕೈಗೊಳ್ಳಬೇಕಾಗಬಹುದು.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ಅರ್ಥಹೀನವಾದ ಚರ್ಚೆಗಳಲ್ಲಿ ತೊಡಗಿ ಸಮಯ ಹಾಳು ಮಾಡಬೇಡಿ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅಗತ್ಯ ವಿಷಯಗಳ ಮೇಲೆ ವಿನಿಯೋಗಿಸುವುದರಿಂದ ಉತ್ತಮ ಲಾಭ ಪಡೆಯುವಿರಿ. ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧರಾಗಿರಿ. ಇಲ್ಲವೇ, ನಿಮ್ಮ ಇಮೇಜ್ ಹಾಳಾಗಬಹುದು. ಆಗದ ಭರವಸೆಗಳನ್ನು ನೀಡುವುದನ್ನು ತಪ್ಪಿಸಿ. ಪ್ರಮುಖ ವಿಚಾರಗಳಲ್ಲಿ ಗೊಂದಲದಿಂದ ಇರುವುದನ್ನು ತಪ್ಪಿಸಿ. ಯೋಚಿಸಿ ನಿರ್ಧರಿಸುವುದು ಹೆಚ್ಚಿನ ಲಾಭವನ್ನು ನೀಡಲಿದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ನಿಮ್ಮ ವಿರೋಧಿಗಳ ಬಗ್ಗೆ ಎಚ್ಚರಿಕೆಯಿಂದ ಇರಿ. ಪ್ರೀತಿಪಾತ್ರರ ಬಗೆಗಿನ ನಿರೀಕ್ಷೆಗಳು ನಿಮಗೆ ಹುಸಿಯಾಗಬಹುದು. ನಿಮ್ಮದಲ್ಲದ ತಪ್ಪಿಗೆ ನಿಮ್ಮನ್ನು ದೂಷಿಸಬಹುದು. ಕೆಲಸದಲ್ಲಿ ಸಣ್ಣ ನಿರ್ಲಕ್ಷ್ಯವೂ ಕೂಡ ಹೆಚ್ಚು ನಷ್ಟ ಉಂಟು ಮಾಡಬಹುದಾದ ದಿನ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ನಿಮ್ಮದಲ್ಲದ ವಿಚಾರಗಳಿಂದ ಅಂತರ ಕಾಯ್ದುಕೊಳ್ಳಿ. ಇಲ್ಲವೇ, ಇದರಿಂದ ವ್ಯತಿರಿಕ್ತ ಪರಿಣಾಮ ಎದುರಿಸಬೇಕಾಗಬಹುದು. ಬೇರೆಯವರ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಮಕ್ಕಳಿಗೆ ಸಂಬಂಧಿಸಿದಂತೆ ಶುಭ ಸುದ್ದಿ ಕೇಳುವಿರಿ.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ಹಣಕಾಸಿನ ಹರಿವು ಉತ್ತಮವಾಗಿರಲಿದ್ದು ಆರ್ಥಿಕ ಸಂಕಷ್ಟಗಳಿಂದ ಪರಿಹಾರ ಪಡೆಯುವಿರಿ. ಅನಿರೀಕ್ಷಿತ ಪ್ರಯಾಣವು ಮಿಶ್ರ ಫಲಗಳನ್ನು ನೀಡಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ನಿಮ್ಮ ಮಾನಸಿಕ ಶಕ್ತಿಯನ್ನು ಕುಂದಿಸಬಹುದು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.