)
Budhvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಸೌರ ವರ್ಷಾ ಋತು, ಆಷಾಢ ಮಾಸ, ಕೃಷ್ಣ ಪಕ್ಷ ಷಷ್ಠಿ ತಿಥಿಯಂದು ಬುಧವಾರ ಉ.ಭಾ. ನಕ್ಷತ್ರ, ಶೋಭನ ಯೋಗ, ಗರಜ ಕರಣ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ನಿಮಗೆ ಮಿಶ್ರ ಫಲಗಳಿಂದ ಕೂಡಿದ ದಿನ. ಯಾವುದೇ ವಿಷಯದಲ್ಲಿ ಭಾವನಾತ್ಮಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಹೂಡಿಕೆ ಚಟುವಟಿಕೆಗಳು ವೇಗಗೊಳ್ಳಬಹುದು. ದೂರದೂರಿಗೆ ಪ್ರಯಾಣ ಕೈಗೊಳ್ಳಬೇಕಾಗಬಹುದು. ವೈಯಕ್ತಿಕ ವಿಚಾರಗಳಲ್ಲಿ ಸ್ಪಷ್ಟತೆ ಕಾಪಾಡಿಕೊಳ್ಳಿ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ಹಠಾತ್ ಪ್ರವೃತ್ತಿಗಳು ನಿಮಗೆ ಲಾಭದಾಯಕವಾಗಿವೆ. ವೃತ್ತಿ ಬದುಕಿನಲ್ಲಿ ಸಹಕಾರದ ಭಾವನೆ ಬೆಳೆಯಲಿದೆ. ವ್ಯವಹಾರದಲ್ಲಿ ನಿರೀಕ್ಷೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವಿರಿ. ಹಣಕಾಸಿನ ವಿಷಯಗಳು ವೇಗ ಪಡೆಯಲಿವೆ. ಸಮಾಜದಲ್ಲಿ ನಿಮ್ಮ ಖ್ಯಾತಿ, ಗೌರವ ಹೆಚ್ಚಾಗಲಿದೆ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ವೃತ್ತಿ ಬದುಕಿನಲ್ಲಿ ನಿರ್ವಹಣಾ ಪ್ರಯತ್ನಗಳನ್ನು ಮುಂದುವರೆಸುವಿರಿ. ಪೂರ್ವಜರ ಆಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಶುಭ ಫಲಗಳನ್ನು ನಿರೀಕ್ಷಿಸಬಹುದು. ವ್ಯವಹಾರದಲ್ಲಿ ಆಕರ್ಷಕ ಪ್ರಸ್ತಾಪಗಳನ್ನು ಪಡೆಯುವಿರಿ. ವೈಯಕ್ತಿಕ ಜೀವನದಲ್ಲಿ ಧನಾತ್ಮಕತೆ ಹೆಚ್ಚಾಗಲಿದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ವೃತ್ತಿ-ವ್ಯವಹಾರದಲ್ಲಿ ನಿಮ್ಮ ಸ್ಥಿರ ಪ್ರಯತ್ನಗಳನ್ನು ಮುಂದುವರೆಸಿ. ಸಹಕಾರ ಮತ್ತು ಪಾಲುದಾರಿಕೆಗಳು ಬಲಗೊಳ್ಳುತ್ತವೆ. ಅದೃಷ್ಟದ ಬೆಂಬಲದಿಂದ ನಿಮ್ಮ ಗುರಿಗಳನ್ನು ತಲುಪುವಿರಿ. ಹಿರಿಯರ ಬೆಂಬಲದಿಂದ ಹೊಸ ವ್ಯವಹಾರದಲ್ಲಿ ಭರ್ಜರಿ ಲಾಭ ಗಳಿಸುವಿರಿ.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಇಂದು ಕುಟುಂಬದಲ್ಲಿ ಪರಸ್ಪರ ಬೆಂಬಲ, ಸಹಕಾರದ ಮನೋಭಾವವನ್ನು ಕಾಪಾಡಿಕೊಳ್ಳುವುದು ಲಾಭದಾಯಕವಾಗಿದೆ. ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ನೀತಿ, ನಿಯಮಗಳನ್ನು ಅನುಸರಿಸಿ. ವ್ಯಾಪಾರದಲ್ಲಿ ಜಾಗರೂಕರಾಗಿರಿ. ವಿರೋಧಿಗಳ ಬಗ್ಗೆ ಎಚ್ಚರಿಕೆಯಿಂದ ಇರುವುದನ್ನು ಖಚಿತಪಡಿಸಿಕೊಳ್ಳಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಈ ರಾಶಿಯವರಿಗೆ ಸ್ನೇಹ ಸಂಬಂಧಗಳು ಬಲಗೊಳ್ಳುತ್ತವೆ. ಸಂವಹನದ ಮೂಲಕ ಕುಟುಂಬ ಸದಸ್ಯರ ನಡುವಿನ ಭಿನ್ನಾಭಿಪ್ರಾಯಂಗಳನ್ನು ಬಗೆಹರಿಸಿಕೊಳ್ಳುವಿರಿ. ಪಾಲುದಾರಿಕೆ ವ್ಯವಹಾರದಲ್ಲಿ ಸಹಕಾರದಿಂದ ಲಾಭದ ಅವಕಾಶಗಳು ಗೋಚರಿಸಲಿವೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಸಮಯ ನಿರ್ವಹಣೆಯತ್ತ ನಿಗಾವಹಿಸಿ. ಸೃಜನಶೀಲತೆಗೆ ಪ್ರಾಮುಖ್ಯತೆ ನೀಡಿ. ಉದ್ಯೋಗ ರಂಗದಲ್ಲಿ ಧನಾತ್ಮಕ ಫಲಗಳನ್ನು ಪಡೆಯುವಿರಿ. ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಸೇವಾ ಕ್ಷೇತ್ರದಲ್ಲಿರುವವರು ಉತ್ತಂವಾಗಿ ಕಾರ್ಯ ನಿರ್ವಹಿಸುವರು.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಹಣಕಾಸಿನ ಪ್ರಯತ್ನಗಳಲ್ಲಿ ನಿರಾಳತೆಯನ್ನು ಕಾಯ್ದುಕೊಳ್ಳುವಿರಿ. ನಿಮ್ಮ ಮಧುವರವಾದ ಮಾತು, ನಡವಳಿಕೆಯ ಪ್ರತಿಫಲವನ್ನು ಅನುಭವಿಸುವಿರಿ. ಪ್ರೇಮ ಸಂಬಂಧಗಳಲ್ಲಿ ಉತ್ಸಾಹಭರಿತರಾಗಿರುವಿರಿ. ವೃತ್ತಿಪರ ಕ್ಷೇತ್ರದಲ್ಲಿ ನಿಮ್ಮ ಪ್ರತಿಭೆಯ ಮೂಲ ಸ್ಥಾನಮಾನ ಹೆಚ್ಚಾಗಲಿದೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ಇಂದು ನಿಮ್ಮ ಕುಟುಂಬ ವಿಚಾರದಲ್ಲಿ ಗಂಭೀರತೆಯನ್ನು ಕಾಪಾಡಿಕೊಳ್ಳಿ. ವೈಯಕ್ತಿಕ ಸಂಬಂಧಗಳನ್ನು ಗೌರವಿಸುತ್ತೀರಿ. ಕೆಲಸ-ವ್ಯವಹಾರದಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯುವಿರಿ. ಆತ್ಮೀಯರೊಂದಿಗೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸುವುದು ಫಲಪ್ರದವಾಗಿದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ನಿಮ್ಮ ಸಾಮಾಜಿಕ ನೆಟ್ವರ್ಕಿಂಗ್ ಹೆಚ್ಚಾಗಲಿದೆ. ವೈಯಕ್ತಿಕ ಸಂಬಂಧಗಳು ಸುಧಾರಿಸುತ್ತವೆ. ಒಡಹುಟ್ಟಿದವರೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯುವಿರಿ. ನಿಮ್ಮ ಧೈರ್ಯ, ದೃಢನಿಶ್ಚಯದಿಂದ ಪರಿಸ್ಥಿತಿಗಳು ಬಲವಾಗಿ ಉಳಿಯಲಿವೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ನಿಮ್ಮ ನಿರೀಕ್ಷೆಯಂತೆ ಜೀವನಶೈಲಿ ಇರಲಿದೆ. ವೈಯಕ್ತಿಕ ವಿಷಯಗಳಲ್ಲಿ ಹಿಂಜರಿಕೆಯನ್ನು ತಪ್ಪಿಸಿ. ಅನುಕೂಲಕರ ಪರಿಸ್ಥಿತಿಗಳನ್ನು ಸದುಪಯೋಗಪಡಿಸಿಕೊಳ್ಳಿ. ಕುಟುಂಬದಲ್ಲಿ ಹೊಸ ಅತಿಥಿಗಳ ಆಗಮನವು ಸಂತೋಷವನ್ನು ಇಮ್ಮಡಿಗೊಳಿಸಲಿದೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ಹೊಸತನ, ಸೃಜನಶೀಲ ಚಟುವಟಿಕೆಗಳಿಗೆ ಆದ್ಯತೆ ನೀಡುವುದರಿಂದ ಧನ-ಸಂಪತ್ತು ಹೆಚ್ಚಾಗಲಿದೆ. ಪ್ರೀತಿಪಾತ್ರರು ಮನೆಗೆ ಭೇಟಿ ನೀಡಬಹುದು. ಮಾಡುವ ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದ್ದು ಸಕಾರಾತ್ಮಕ ಫಲಿತಾಂಶಗಳನ್ನು ಪಡೆಯುವಿರಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.