Mangalvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಜ್ಯೇಷ್ಠ ಮಾಸ ಕೃಷ್ಣ ಪಕ್ಷ, ಷಷ್ಠಿ ತಿಥಿಯ ಈ ದಿನ ಮಂಗಳವಾರ ಶತಭಿಷ ನಕ್ಷತ್ರ ವಿಷ್ಕಂಭ ಯೋಗ, ವಿಷ್ಟಿ ಕರಣ. ಈ ದಿನ ಯಾವ ರಾಶಿಯವರಿಗೆ ಹೇಗಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ಆಸ್ತಿ ವ್ಯವಹಾರಗಳಲ್ಲಿ ಉತ್ತಮ ಫಲವನ್ನು ಕಾಣುವಿರಿ. ಹಣಕಾಸಿನ ವಿಷಯಗಳಲ್ಲಿ ಅನುಕೂಲಕರ ಫಲಿತಾಂಶಗಳನ್ನು ಪಡೆಯುವಿರಿ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗುವುದರಿಂದ ಆರ್ಥಿಕ ಪ್ರಗತಿ. ಕೆಲಸದಲ್ಲಿ ಆಕರ್ಷಕ ಪ್ರಸ್ತಾಪಗಳನ್ನು ಪಡೆಯಬಹುದು.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಈ ದಿನ ವ್ಯವಹಾರದಲ್ಲಿ ವೇಗವನ್ನು ಕಾಣುವಿರಿ. ಪ್ರಮುಖ ವಿಷಯಗಳಲ್ಲಿ ಪ್ರಗತಿ ಕಂಡು ಬರಲಿದೆ. ಉದ್ಯೋಗದಲ್ಲಿ ದೊಡ್ಡ ಜವಾಬ್ದಾರಿಗಳು ಹೆಗಲೇರಬಹುದು. ಹಣಕಾಸಿನ ವಿಷಯಗಳಲ್ಲಿ ಪರಿಷ್ಕರಣೆಯನ್ನು ಕಾಣಬಹುದು. ನಿಮ್ಮೊಳಗಿನ ಕೌಶಲ್ಯಗಳನ್ನು ಪ್ರದರ್ಶಿಸಲು ಸುಸಮಯ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಇಂದು ಬುದ್ದಿವಂತಿಕೆಯಿಂದ ಕೆಲಸ ಮಾಡುವುದರಿಂದ ಶುಭ ಫಲಿತಾಂಶಗಳನ್ನು ಪಡೆಯುವಿರಿ. ಅಷ್ಟದಿಕ್ಕುಗಳಿಂದ ಆದಾಯ ಹರಿದುಬರಲಿದೆ. ಪ್ರಯಾಣ ಯಶಸ್ವಿಯಾಗಲಿದೆ. ಕ್ರಿಯಾಶೀಲ ಕೆಲಸಗಳಿಗೆ ಕೀರ್ತಿ, ಮನ್ನಣೆ ದೊರೆಯಲಿದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ನಿಮ್ಮ ಶತ್ರುಗಳ ಬಗ್ಗೆ ವಿಶೇಷವಾಗಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಸವಾಲಿನ ಸಂದರ್ಭಗಳಿಗೆ ಮಾನಸಿಕವಾಗಿ ಸಿದ್ಧವಾಗಿರಿ. ಆದಾಯವು ಸುಮಾರಾಗಿರುತ್ತದೆ. ಹಾಗಾಗಿ, ನಿಮ್ಮ ಬಜೆಟ್ ಗೆ ಅನುಗುಣವಾಗಿ ಖರ್ಚುವೆಚ್ಚಗಳನ್ನು ನಿಭಾಯಿಸಿ.
ಇದನ್ನೂ ಓದಿ- Weekly Horoscope: ಜೂನ್ ಮೂರನೇ ವಾರ ಗುರು ಆದಿತ್ಯರಿಂದ ಶುಭ ಯೋಗ ನಿರ್ಮಾಣ, ಈ ರಾಶಿಯವರಿಗೆ ಬದಲಾಗಲಿದೆ ಲಕ್
ಸಿಂಹ ರಾಶಿಯವರ ಭವಿಷ್ಯ (Leo Horoscope):
ನಿಮ್ಮ ಹಿಂದಿನ ಪ್ರಯತ್ನಗಳಿಗೆ ಇಂದು ಉತ್ತಮ ಪ್ರತಿಫಲ ದೊರೆಯುತ್ತದೆ. ವ್ಯವಹಾರ ವಿಸ್ತರಣೆಗೆ ಅನುಕೂಲಕರ ಸಮಯ. ಭೂಮಿ ಸಂಬಂಧಿತ ವ್ಯವಹಾರಗಳಲ್ಲಿ ಅದೃಷ್ಟ ಕೈ ಹಿಡಿಯಲಿದೆ. ನಿಮ್ಮ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಿರಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಈ ದಿನ ನಿಮ್ಮ ಬಜೆಟ್‌ಗೆ ಅಂಟಿಕೊಳ್ಳದೆ ಇದ್ದರೆ ಭವಿಷ್ಯದಲ್ಲಿ ಆರ್ಥಿಕ ಮುಗ್ಗಟ್ಟುಗಳು ಎದುರಾಗಬಹುದು. ಯಾವುದೇ ಕೆಲಸಗಳಲ್ಲಿ ನೀತಿ-ನಿಯಮಗಳನ್ನು ಉಲ್ಲಂಘಿಸುವುದನ್ನು ತಪ್ಪಿಸಿ. ಹಣಕಾಸಿನ ವಿಷಯದಲ್ಲಿ ತುಂಬಾ ಎಚ್ಚರಿಕೆ ಅಗತ್ಯ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಹಣಕಾಸು ನಿರ್ವಹಣೆ ಉತ್ತಮವಾಗಿರಲಿದೆ. ವ್ಯಾಪಾರದಲ್ಲಿ ಲಾಭದ ಅವಕಾಶಗಳು ಹೆಚ್ಚಾಗಳಿವೆ. ನಿರೀಕ್ಷೆಗೂ ಮೀರಿದ ಫಲಿತಾಂಶವನ್ನು ಪಡೆಯುವಿರಿ. ಪ್ರಯಾಣವು ಯಶಸ್ವಿಯಾಗುತ್ತದೆ. ಆದಾಯದ ಬಹು ಮೂಲಗಳು ಗೋಚರಿಸುತ್ತವೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ಆಸ್ತಿ ಮತ್ತು ವಾಹನಗಳಿಗೆ ಸಂಬಂಧಿಸಿದ ವಿಷಯಗಳು ನಿಮ್ಮ ಪರವಾಗಿರುತ್ತವೆ. ಹಣಕಾಸಿನ ಚಟುವಟಿಕೆಗಳಲ್ಲಿ ನಿಮ್ಮ ಕಾರ್ಯಕ್ಷಮತೆ ಸುಧಾರಿಸುತ್ತದೆ. ಪೂರ್ವಜರಾ ಆಸ್ತಿಯಿಂದ ಲಾಭವಾಗಲಿದೆ. ಸರ್ಕಾರಿ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಶುಭ ಫಲಗಳನ್ನು ನಿರೀಕ್ಷಿಸಬಹುದು.
ಇದನ್ನೂ ಓದಿ- Vastu Tips: ಯಾವ ದಿಕ್ಕಿಗೆ ತಲೆ ಹಾಕಿ ಮಲಗಿದ್ರೆ ಧನಲಾಭ, ಆರ್ಥಿಕ ಸಮೃದ್ಧಿ...
ಧನು ರಾಶಿಯವರ ಭವಿಷ್ಯ (Sagittarius Horoscope):
ಇಂದು ಪ್ರತಿಕೂಲ ಸಂದರ್ಭಗಳಲ್ಲಿ ತಾಳ್ಮೆಯಿಂದ ವರ್ತಿಸಿ. ವ್ಯಾಪಾರ ಚಟುವಟಿಕೆಗಳಲ್ಲಿ ವೇಗವನ್ನು ಕಾಯ್ದುಕೊಳ್ಳುವಿರಿ. ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ವೃತ್ತಿಪರ ಪ್ರಯಾಣವು ಲಾಭದಾಯಕವಾಗಿರಲಿದೆ. ಪ್ರಮುಖ ಕೆಲಸಗಳಲ್ಲಿ ಹಿತೈಷಿಗಳ ಬೆಂಬಲ ಸಹಕಾರ ದೊರೆಯಲಿದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಪ್ರೀತಿಪಾತ್ರರಿಂದ ಇಂದು ನಿಮಗೆ ಅಮೂಲ್ಯವಾದ ಉಡುಗೊರೆ ಸ್ವೀಕರಿಸಬಹುದು. ವಾಣಿಜ್ಯ ಅಂಶಗಳು ಬಲವಾಗಿರುತ್ತವೆ. ಪೂರ್ವಜರ ಆಸ್ತಿ ವ್ಯವಹಾರದಲ್ಲಿ ವ್ಯಾಜ್ಯಗಳು ನಿಮ್ಮ ಪರವಾಗಿ ಬಗೆಹರಿಯಲಿವೆ. ಸಾಂಪ್ರದಾಯಿಕ ವ್ಯವಹಾರಗಳಲ್ಲಿ ಸಂಪತ್ತು ಹೆಚ್ಚಾಗಲಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ವ್ಯವಹಾರ ವಿಸ್ತರಣೆಗೆ ಒಟ್ಟು ನೀಡಿ. ಭೂಮಿ, ಕಟ್ಟಡ ಸಂಬಂಧಿತ ವ್ಯವಹಾರಗಳಲ್ಲಿ ಕೆಲಸ ಕಾರ್ಯಗಳು ಸುಸೂತ್ರವಾಗಿ ಜರುಗಲಿವೆ. ಸಮಾಜದಲ್ಲಿ ಸ್ಥಾನಮಾನ, ಪ್ರತಿಷ್ಠೆ ಹೆಚ್ಚಾಗಲಿದೆ. ಬಂಪರ್ ಆದಾಯವನ್ನು ನಿರೀಕ್ಷಿಸಬಹುದಾದ ದಿನ.
ಮೀನ ರಾಶಿಯವರ ಭವಿಷ್ಯ (Pisces Horoscope):
ಈ ದಿನ ವಿವಿಧ ಮೂಲಗಳಿಂದ ಒತ್ತಡ ಹೆಚ್ಚಾಗಲಿದೆ. ಹೂಡಿಕೆ ವೆಚ್ಚಗಳು ಅಧಿಕವಾಗಳಿವೆ. ಬಜೆಟ್‌ಗೆ ಅನುಗುಣವಾಗಿ ಹಣ ಖರ್ಚು ಮಾಡುವುದನ್ನು ಖಚಿತಪಡಿಸಿಕೊಳ್ಳಿ. ಇಲ್ಲವೇ, ಹಣಕಾಸಿನ ಮುಗ್ಗಟ್ಟು ಸೃಷ್ಟಿಯಾಗಬಹುದು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









