ದಿನಭವಿಷ್ಯ 21-03-2025: ಶುಕ್ರವಾರದಂದು ಜ್ಯೇಷ್ಠಾ ನಕ್ಷತ್ರದಲ್ಲಿ ಸಿದ್ಧಿ ಯೋಗ, ಈ ರಾಶಿಯವರಿಗೆ ಕೈ ಹಿಡಿಯಲಿದ್ದಾಳೆ ಅದೃಷ್ಟ ಲಕ್ಷ್ಮಿ

Today Horoscope 21st March 2025: ಶುಕ್ರವಾರದ ಈ ದಿನ ಜ್ಯೇಷ್ಠಾ ನಕ್ಷತ್ರ, ಸಿದ್ಧಿ ಯೋಗ, ವಿಷ್ಟಿ ಕರಣ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Mar 21, 2025, 08:09 AM IST
  • ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ
  • ಶುಕ್ರವಾರದ ಈ ದಿನ ಜ್ಯೇಷ್ಠಾ ನಕ್ಷತ್ರ, ಸಿದ್ಧಿ ಯೋಗ, ವಿಷ್ಟಿ ಕರಣ.
  • ಇಂದು ದ್ವಾದಶ ರಾಶಿಗಳಿಗೆ ಏನು ಫಲ ತಿಳಿಯಿರಿ.
ದಿನಭವಿಷ್ಯ 21-03-2025:  ಶುಕ್ರವಾರದಂದು ಜ್ಯೇಷ್ಠಾ ನಕ್ಷತ್ರದಲ್ಲಿ ಸಿದ್ಧಿ ಯೋಗ, ಈ ರಾಶಿಯವರಿಗೆ ಕೈ ಹಿಡಿಯಲಿದ್ದಾಳೆ ಅದೃಷ್ಟ ಲಕ್ಷ್ಮಿ

Shukravara Dina Bhavishya In Kannada:ಶ್ರೀ ಶಾಲಿವಾಹನ ಶಕೆ 1946 ಕ್ರೋಧಿ ನಾಮ ಸಂವತ್ಸರ, ಉತ್ತರಾಯಣ, ಸೌರ ವಸಂತ ಋತು, ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಸಪ್ತಮಿ ತಿಥಿ, ಶುಕ್ರವಾರದ ಈ ದಿನ ಜ್ಯೇಷ್ಠಾ ನಕ್ಷತ್ರ, ಸಿದ್ಧಿ ಯೋಗ, ವಿಷ್ಟಿ ಕರಣ. ಇಂದು ದ್ವಾದಶ ರಾಶಿಗಳಿಗೆ ಏನು ಫಲ ತಿಳಿಯಿರಿ. 

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ವಿನಾಕಾರಣ ಯಾರೊಂದಿಗಾದರೂ ಜಗಳವಾಡುವುದನ್ನು ತಪ್ಪಿಸಿ. ಭಾವನಾತ್ಮಕ ಸಂದರ್ಭಗಳಲ್ಲಿ ತಾಳ್ಮೆಯಿಂದ ಇರಿ. ಅನುಭವಿ ವ್ಯಕ್ತಿಗಳ ಮಾರ್ಗದರ್ಶನದಿಂದ ಮುಂದುವರೆದರೆ ಶುಭ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ನಿಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸುವುದರಿಂದ ಮನಸ್ಸಿಗೆ ನೆಮ್ಮದಿ. ಪ್ರೀತಿಪಾತ್ರರಲ್ಲಿ ನಂಬಿಕೆ ಹೆಚ್ಚಾಗಲಿದೆ. ಕುಟುಂಬದಲ್ಲಿ ಸಕಾರಾತ್ಮಕತೆ ಉಳಿಯಲಿದೆ. ಎಲ್ಲರೊಂದಿಗೆ ಸಹಕಾರದ ಮನೋಭಾವದಿಂದ ಮುಂದುವರೆಯಿರಿ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಭಾವನೆಗಳಿಂದ ಆಕರ್ಷಿತರಾಗುವುದನ್ನು ತಪ್ಪಿಸಿ. ಭಾವನಾತ್ಮಕ ಪ್ರಚೋದನೆಯನ್ನು ನಿಯಂತ್ರಿಸಿ.  ಪ್ರಣಯ ಸಂಬಂಧಗಳಲ್ಲಿ ನಂಬಿಕೆಯನ್ನು ಕಾಪಾಡಿಕೊಳ್ಳಿ. ಸ್ನೇಹ ಸಂಬಂಧಗಳು ಸುಗಮವಾಗಿರಲಿವೆ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಇಂದು ಪ್ರೀತಿಪಾತ್ರರೊಂದಿಗೆ ಸ್ಮರಣೀಯ ಸಮಯವನ್ನು ಕಳೆಯುವಿರಿ. ಪರಸ್ಪರರಲ್ಲಿ ನಂಬಿಕೆ ಹೆಚ್ಚಾಗಲಿದೆ. ಪ್ರಮುಖ ಕೆಲಸಗಳಲ್ಲಿ ಸ್ನೇಹಿತರು ಬೆನ್ನೆಲುಬಾಗಿ ನಿಲ್ಲಲಿದ್ದಾರೆ. ಸಂಬಂಧಗಳಲ್ಲಿ ಸಕಾರಾತ್ಮಕತೆ ಮೇಲುಗೈ ಸಾಧಿಸಲಿವೆ. 

ಇದನ್ನೂ ಓದಿ- ಶನಿ ಅಮಾವಾಸ್ಯೆ ಸೂರ್ಯ ಗ್ರಹಣದ ಅದ್ಭುತ ಸಂಯೋಗ: ಈ ರಾಶಿಯವರಿಗೆ ಜಾಕ್‌ಪಾಟ್, ಮುಟ್ಟಿದ್ದೆಲ್ಲಾ ಚಿನ್ನ, ಸರ್ವ ಸುಖ ಪ್ರಾಪ್ತಿ 

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಇಂದು ನಿಮ್ಮ ಪ್ರೀತಿಪಾತ್ರರ ಸಲಹೆ ಸೂಚನೆಗಳನ್ನು ಅನುಸರಿಸುವುದರಿಂದ ಜಯ ಸಾಧಿಸುವಿರಿ. ಆಪ್ತರೊಂದಿಗೆ ಸಮರಸ್ಯವನ್ನು ಕಾಪಾಡಿಕೊಳ್ಳಿ. ವೈಯಕ್ತಿಕ ಸಂಬಂಧಗಳಲ್ಲಿ ಪೂರ್ವಾಗ್ರಹ ಪೀಡಿತರಾಗಿರುವುದು ಒಳ್ಳೆಯದಲ್ಲ. ಸಂಬಂಧಗಳಿಗೆ ಆದ್ಯತೆ ನೀಡಿ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಇಂದು ಆತ್ಮೀಯರೊಂದಿಗೆ ಸಾಮರಸ್ಯವು ಮೇಲುಗೈ ಸಾಧಿಸಲಿದೆ. ಪ್ರೀತಿಪಾತ್ರರೊಂದಿಗೆ ಸಂತೋಷದ ಸಮಯವನ್ನು ಕಳೆಯುವಿರಿ. ನಿಮ್ಮ ಮಾತು ನಡವಳಿಕೆಯಲ್ಲಿ ನಮ್ರತೆಯನ್ನು ಕಾಪಾಡಿಕೊಳ್ಳಿ. ಅರಿವು, ನಿರಾಳತೆ ಸಂಬಂಧವನ್ನು ಬಲಪಡಿಸುತ್ತದೆ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಇಂದು ಪ್ರೀತಿಪಾತ್ರರೊಂದಿಗೆ ಆತ್ಮೀಯತೆ ಹೆಚ್ಚಾಗುತ್ತದೆ. ತಾಯಿ ಲಕ್ಷ್ಮಿ ದಯೆಯಿಂದ ವ್ಯಾಪಾರದಲ್ಲಿ ಅದೃಷ್ಟ ಖುಲಾಯಿಸಲಿದೆ. ಸಂಬಂಧಿಕರೊಂದಿಗೆ ಸಂಬಂಧಗಳು ಬಲಗೊಳ್ಳುತ್ತವೆ. ಮನೆಗೆ ಅತಿಥಿಗಳ ಆಗಮನದಿಂದ ಸಂತೋಷ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಪ್ರೀತಿಯನ್ನು ವ್ಯಕ್ತಪಡಿಸುವ ಹೊಸ ವಿಧಾನವು ನಿಮ್ಮ ಪ್ರೀತಿಪಾತ್ರರನ್ನು ಮೆಚ್ಚಿಸುತ್ತದೆ. ಆತ್ಮೀಯರೊಂದಿಗೆ ಸಾಮರಸ್ಯದ ವಾತಾವರಣ ಮೇಲುಗೈ ಸಾಧಿಸುತ್ತದೆ. ನಿಮ್ಮ ಭಾವನೆಗಳನ್ನೂ ವ್ಯಕ್ತಪಡಿಸಲು ಸರಿಯಾದ ಸಮಯ. 

ಇದನ್ನೂ ಓದಿ- ಹೆಣ್ಣು 'ಬಿಂದಿ' ಇಡುವ ರೀತಿಯೇ ತಿಳಿಸುತ್ತೆ ಆಕೆಯ ವ್ಯಕ್ತಿತ್ವ...!  

ಧನು ರಾಶಿಯವರ ಭವಿಷ್ಯ (Sagittarius Horoscope):  
ಪ್ರೀತಿ ವಾತ್ಸಲ್ಯದ ವಿಷಯಗಳಲ್ಲಿ ಸದ್ಭಾವನೆಯನ್ನು ಕಾಪಾಡಿಕೊಳ್ಳಿ. ಭಾವನಾತ್ಮಕ ವಿಷಯಗಳಲ್ಲಿ ಮಿಶ್ರ ಫಲಿತಾಂಶ ಸಿಗಲಿದೆ. ಪ್ರೀತಿಪಾತ್ರರನ್ನು ನಿರ್ಲಕ್ಷಿಸುವುದನ್ನು ತಪ್ಪಿಸಿ. ನಿಮ್ಮ ಆಲೋಚನೆಗಳನ್ನು ಸರಿಯಾದ ರೀತಿಯಲ್ಲಿ ವ್ಯಕ್ತಪಡಿಸಿ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಯಾರೊಂದಿಗಾದರೂ ಮಾತನಾಡುವಾಗ ಸ್ಪಷ್ಟತೆ ಮತ್ತು ದೃಢತೆಯಿಂದ ಮಾತನಾಡಿ. ಪ್ರೇಮ ಸಂಬಂಧಗಳಲ್ಲಿ ಸಂವಾಹನದ ಬಗ್ಗೆ ಜಾಗರೂಕರಾಗಿರಿ. ಕುಟುಂಬ ಸದಸ್ಯರ ವಿಶ್ವಾಸ ಮತ್ತು ಬೆಂಬಲವನ್ನು ಪಡೆಯುತ್ತೀರಿ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಇಂದು ಪ್ರಮುಖ ಆಲೋಚನೆಗಳನ್ನು ವ್ಯಕ್ತಪಡಿಸಲು ಸರಿಯಾದ ಸಮಯ. ಸಂಬಂಧಗಳಲ್ಲಿ ಉದಾರತೆ ಕಾಪಾಡಿಕೊಳ್ಳಿ. ಆಪ್ತರೊಂದಿಗೆ ಸಂತೋಷದ ಸಮಯ ಕಳೆಯುವಿರಿ. ಹಿರಿಯರ ಮಾರ್ಗದರ್ಶನದಿಂದ ಮುಂದುವರೆದರೆ ಧನಲಾಭ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ವೈಯಕ್ತಿಕ ಸಂಬಂಧಗಳಲ್ಲಿ ಪ್ರಭಾವಶಾಲಿಯಾಗಿ ಉಳಿಯಳಿದ್ದೀರಿ. ಪ್ರೀತಿಪಾತ್ರರಿಗೆ ನೀಡಿದ ಭರವಸೆಗಳನ್ನು ಪೂರೈಸುತ್ತೀರಿ. ಸಂಬಂಧಗಳಲ್ಲಿ ಭಾವನಾತ್ಮಕ ಸಂವಹನಗಳು ಧನಾತ್ಮಕ ಫಲಗಳನ್ನು ನೀಡಲಿವೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News