)
Shukravara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಸೌರ ಶರದ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ, ತೃತೀಯಾ ತಿಥಿ, ಶುಕ್ರವಾರದ ಈ ದಿನ ಅನುರಾಧಾ ಪೂರ್ಣ ನಕ್ಷತ್ರ, ಸೌಭಾಗ್ಯ ಯೋಗ, ತೈತಿಲ ಕರಣ ಇರಲಿದೆ. ಇಂದು ಯಾವ ರಾಶಿಯವರಿಗೆ ಲಕ್ಷ್ಮಿ ಕೃಪಾಕಟಾಕ್ಷ ಇರಲಿದೆ ತಿಳಿಯಿರಿ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ನಿಮ್ಮ ಕಾರ್ಯಕ್ಷಮತೆಗೆ ಕೀರ್ತಿ, ಮನ್ನಣೆ ದೊರೆಯಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ, ವೃತ್ತಿಪರರಿಗೆ ಅಧಿಕಾರಿಗಳಿಂದ ಪ್ರೋತ್ಸಾಹ ದೊರೆಯುತ್ತದೆ. ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಆದಾಯ ಗಳಿಸುವಿರಿ. ದೈವಿಕ ಕಾರ್ಯಗಳಲ್ಲಿ ಆಸಕ್ತಿ ಬೆಳೆಯಲಿದೆ.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ನಿಮ್ಮ ಕೆಲಸ ಕಾರ್ಯಗಳು ಸುಸೂತ್ರವಾಗಿ ಜರುಗಲಿವೆ. ಉದ್ಯೋಗಸ್ಥರಿಗೆ ಉತ್ತಮ ಸ್ಥಾನಮಾನ ದೊರಕಲಿದೆ. ಆದರೆ, ಹಣಕಾಸು ವ್ಯವಹಾರಗಳಲ್ಲಿ ಎಚ್ಚರಿಕೆಯ ನಿರ್ಧಾರಗಳನ್ನು ತೆಗೆದುಕೊಳ್ಳಿ. ಇಲ್ಲವೇ, ಭಾರೀ ನಷ್ಟವಾಗಬಹುದು. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ಉದ್ಯೋಗದಲ್ಲಿ ಉನ್ನತ ಸ್ಥಾನಮಾನ ಗಳಿಸುವಿರಿ. ಕಚೇರಿಯಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಲಿವೆ. ವ್ಯವಹಾರದಲ್ಲಿ ಆದಾಯ ಹೆಚ್ಚಾಗಲಿದೆ. ವಿವಾಹ ಸಂಬಂಧಿತ ಮಾತುಕತೆಗಳು ಮುಂದುವರೆಯಬಹುದು. ಕುಟುಂಬದಲ್ಲಿ ಆಹ್ಲಾದಕಾರ ವಾತಾವರಣ ಇರಲಿದೆ. ಸ್ನೇಹಿತರೊಂದಿಗೆ ಹೊರಹೋಗುವ ಸಾಧ್ಯತೆ ಇದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಉದ್ಯೋಗಸ್ಥರಿಗೆ ಇಂದು ಶುಭ ಸುದ್ದಿ ದೊರೆಯಲಿದೆ. ವೃತ್ತಿ-ವ್ಯವಹಾರದಲ್ಲಿ ಲಾಭದಾಯಕವಾದ ದಿನ. ಕಠಿಣ ಪರಿಶ್ರಮದ ಸಂಪೂರ್ಣ ಫಲ ದೊರೆಯಲಿದೆ. ಕುಟುಂಬದಲ್ಲಿ ಸಂತೋಷ ಹೊರಹೊಮ್ಮಲಿದೆ. ಹಣಕಾಸಿನ ಸ್ಥಿತಿ ಉತ್ತಮಗೊಳ್ಳಲಿದೆ. ಸಂಗಾತಿಯೊಂದಿಗೆ ವಿವಾರಕ್ಕೆ ತೆರಳಬಹುದು.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಇಂದು ವೃತ್ತಿ ಬದುಕಿನಲ್ಲಿ ನಿಮ್ಮ ಜವಾಬ್ದಾರಿಗಳು ಹೆಚ್ಚಾಗಬಹುದು. ಇದರಿಂದಾಗಿ ಸ್ವಲ್ಪ ಒತ್ತಡವೂ ಹೆಚ್ಚಾಗಬಹುದು. ಹಣಕಾಸು ವ್ಯವಹಾರಗಳು ಸರಾಗವಾಗಿ ಜರುಗಲಿವೆ. ವ್ಯವಹಾರದಲ್ಲಿ ಸ್ಥಿರ ಆದಾಯವನ್ನು ಗಳಿಸುವಿರಿ. ಮದುವೆ ಪ್ರಯತ್ನಗಳಲ್ಲಿ ಶುಭ ಸುದ್ದಿ ನಿರೀಕ್ಷಿಸಬಹುದು.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಉದ್ಯೋಗಸ್ಥರಿಗೆ ಬಡ್ತಿ, ಆದಾಯ ಹೆಚ್ಚಳ ಸಾಧ್ಯತೆ ಇದೆ. ಹಣಕಾಸಿನ ದೃಷ್ಟಿಯಿಂದ ಅತ್ಯುತ್ತಮವಾದ ದಿನ ಇದಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಇರುವವರು ಸಣ್ಣಪುಟ್ಟ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಸಮಾಜದಲ್ಲಿ ನಿಮ್ಮ ಕೀರ್ತಿ, ಗೌರವ ಹೆಚ್ಚಾಗುತ್ತದೆ.
ತುಲಾ ರಾಶಿಯವರ ಭವಿಷ್ಯ (Libra Horoscope):
ಇಂದು ಹಣಕಾಸಿನ ವಿಚಾರವಾಗಿ ತುಂಬಾ ಅನುಕೂಲಕರವಾದ ಸಮಯ. ಸ್ವಲ್ಪ ಪ್ರಯತ್ನಿಸಿದರೂ ಆದಾಯದಲ್ಲಿ ಗಮನಾರ್ಹ ಪ್ರಗತಿಯನ್ನು ಕಾಣುವಿರಿ. ಬದುದಿನಗಳ ನಿಮ್ಮ ಮನೋಕಾಮನೆಗಳು ಈಡೇರುವ ಸಮಯ. ಬಾಲ್ಯದ ಸ್ನೇಹಿತರನ್ನು ಭೇಟಿಯಾಗುವ ಸಂಭವವಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇದನು ವೃತ್ತಿ-ವ್ಯವಹಾರದಲ್ಲಿ ಸಮಯಕ್ಕೆ ಸರಿಯಾಗಿ ನಿಮ್ಮ ನಿರ್ದಿಷ್ಟ ಗುರಿಗಳನ್ನು ಪೂರ್ಣಗೊಳಿಸುವಿರಿ. ವ್ಯವಹಾರದಲ್ಲಿ ಲಾಭಾಂಶ ಹೆಚ್ಚಾಗಲಿದೆ. ನಿಮ್ಮ ಪ್ರತಿಯೊಂದು ಪ್ರಯತ್ನಕ್ಕೂ ಉತ್ತಮ ಫಲ ದೊರೆಯಲಿದೆ. ಹಠಾತ್ ಧನಲಾಭವು ನಿಮ್ಮ ಹಣಕಾಸಿನ ಸಮಸ್ಯೆಗಳನ್ನು ದೂರಗೊಳಿಸಲಿದೆ. ದಾಂಪತ್ಯದಲ್ಲಿ ಸಂಬಂಧ ಚೆನ್ನಾಗಿರುತ್ತದೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ಇಂದು ನಿಮ್ಮ ಉದ್ಯೋಗ ರಂಗದಲ್ಲಿ ಹಣಕಾಸಿನ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಣೆಗೊಳ್ಳಲಿದೆ. ಕುಟುಂಬದಲ್ಲಿ ಸಂತಸದ ವಾತಾವರಣ ಮನೆ ಮಾಡಲಿದೆ. ಸಂಜೆ ವೇಳೆಗೆ ಮನೆಗೆ ಅತಿಥಿಗಳ ಆಗಮನವಾಗಬಹುದು. ಇದು ನಿಮ್ಮ ಸಂತಸವನ್ನು ಇಮ್ಮಡಿಗೊಳಿಸಲಿದೆ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ದಿನವಿಡೀ ಧನಾತ್ಮಕ ಫಲಗಳನ್ನು ನಿರೀಕ್ಷಿಸಬಹುದು. ವೈಯಕ್ತಿಕ ಸಮಸ್ಯೆಗಳಿಂದ ಪರಿಹಾರ ಕಂಡು ಕೊಳ್ಳುವ ಸಮಯ ಇದಾಗಿದೆ. ಉದ್ಯೋಗಸ್ಥರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ. ಇಂದು ಆದಾಯ ಉತ್ತಮವಾಗಿರಲಿದೆ. ಆದರೂ, ನಿಮ್ಮ ಖರ್ಚಿನ ಬಗ್ಗೆ ಹೆಚ್ಚಿನ ನಿಯಂತ್ರಣ ಅಗತ್ಯವಾಗಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಇಂದು ಉದ್ಯೋಗದಲ್ಲಿ ಅನುಕೂಲಕರ ವಾತಾವರಣ ಇರುತ್ತದೆ. ಬೇರೆಯವರ ವಿಚಾರದಲ್ಲಿ ಅನಾವಶ್ಯಕವಾಗಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸಿ. ಇಲ್ಲವೇ, ಸಮಸ್ಯೆಗಳ ಸುಳಿಯಲ್ಲಿ ಸಿಲುಕಬಹುದು. ಉದ್ಯೋಗ ಬದಲಾಯಿಸಲು ಪ್ರಯತ್ನಿಸುತ್ತಿರುವವರಿಗೆ ಅತ್ಯುತ್ತಮ ಸಮಯ ಇದಾಗಿದೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಇಂದು ನಿಮ್ಮ ಹಣಕಾಸಿನ ಸಮಸ್ಯೆಗಳು ಕೊಂಚ ಹೆಚ್ಚಾಗಬಹುದು. ಕೆಲಸದಲ್ಲಿ ಒತ್ತಡ ಸಾಧ್ಯತೆ ಇದೆ. ಪ್ರಮುಖ ಕೆಲಸಗಳನ್ನು ದಿನದ ಮೊದಲಾರ್ಧದಲ್ಲಿ ಪೂರ್ಣಗೊಳಿಸಲು ಪ್ರಯತ್ನಿಸಿ. ಸಂಜೆ ಕುಟುಂಬದೊಂದಿಗೆ ಆಹ್ಲಾದಕರ ಸಮಯ ಕಳೆಯಬಹುದು.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.