ದಿನಭವಿಷ್ಯ 25-04-2025: ಶುಕ್ರವಾರದಂದು ಐಂದ್ರ ಯೋಗ: ಬದಲಾಗಲಿದೆ ಈ ರಾಶಿಯವರ ಲಕ್

Today Horoscope 25th April 2025: ಶುಕ್ರವಾರದ ದಿನ ಐಂದ್ರ ಯೋಗವು ಕೆಲವು ರಾಶಿಯವರ ಅದೃಷ್ಠವನ್ನೇ ಬದಲಾಯಿದಲಿದೆ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : Apr 25, 2025, 08:02 AM IST
  • ಶುಭ ಶುಕ್ರವಾರದಂದು ದ್ವಾದಶ ತಿಥಿ
  • ಐಂದ್ರ ಯೋಗದಿಂದ ಕೆಲವರ ಅದೃಷ್ಟವೇ ಬದಲು
  • ಶುಕ್ರವಾರ ಯಾವ ರಾಶಿಗೆ ಅದೃಷ್ಟ ತಿಳಿಯಿರಿ
ದಿನಭವಿಷ್ಯ 25-04-2025: ಶುಕ್ರವಾರದಂದು ಐಂದ್ರ ಯೋಗ: ಬದಲಾಗಲಿದೆ ಈ ರಾಶಿಯವರ ಲಕ್

Shukravara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ದ್ವಾದಶಿ ತಿಥಿಯ ಈ ದಿನ ಶುಕ್ರವಾರ ಪೂ.ಭಾ. ನಕ್ಷತ್ರ, ಐಂದ್ರ ಯೋಗ, ಗರಜ ಕರಣ. ಇಂದು ಮೇಷದಿಂದ ಮೀನ ರಾಶಿಯವರೆಗೆ ಯಾವ ರಾಶಿಯವರಿಗೆ ಹೇಗಿದೆ ತಿಳಿಯಿರಿ.  

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ನಿಮ್ಮ ಜೀವನದಲ್ಲಿ ಸಕಾರಾತ್ಮಕತೆ ಹೆಚ್ಚಾಗಲಿದೆ. ಇಂದು ಇಡೀ ದಿನ ಉತ್ಸಾಹ ಮತ್ತು ಆತ್ಮವಿಶ್ವಾಸದಿಂದ ಕೂಡಿರುವಿರಿ. ಕೈಗಾರಿಕಾ ಕ್ಷೇತ್ರಗಳಲ್ಲಿ ನಿರೀಕ್ಷೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುವಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ವಿವಿಧ ಕ್ಷೇತ್ರಗಳಲ್ಲಿ ಇಂದು ಪ್ರಭಾವಶಾಲಿಯಾಗಿ ಉಳಿಯುವಿರಿ. ಪೂರ್ವಜರ ಆಸ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ಶುಭ ಫಲಗಳನ್ನು ನಿರೀಕ್ಷಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸಾಧಿಸುವಿರಿ. ಕೆಲಸದಲ್ಲಿ ದಕ್ಷತೆ ಹೆಚ್ಚಾಗುತ್ತದೆ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಉದ್ಯೋಗ ರಂಗದಲ್ಲಿ ಪ್ರಭಾವಶಾಲಿಯಾಗಿ ಉಳಿಯುವಿರಿ. ಹೊಸ ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ. ಇದು ಮನಸ್ಸಿಗೆ ನೆಮ್ಮದಿಯನ್ನು ನೀಡಲಿದೆ. ಅದೃಷ್ಟದ ಬೆಂಬಲದಿಂದ ಜೀವನದ ಪ್ರಮುಖ ವಿಚಾರಗಳಲ್ಲಿ ಪ್ರಗತಿಯನ್ನು ಕಾಣುವಿರಿ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ನಿಮ್ಮ ಕೆಲಸದಲ್ಲಿ ಸ್ಪಷ್ಟತೆಯನ್ನು ತರಲು ಪ್ರಯತ್ನಿಸಿ. ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಬೇಡಿ. ವೈಯಕ್ತಿಕ ವಿಚಾರಗಳ ಬಗ್ಗೆ ಬೇರೆಯವರೊಂದಿಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಿ. ದೇಶೀಯ ವ್ಯವಹಾರದಲ್ಲಿರುವವರಿಗೆ ಶುಭ ದಿನ. 

ಇದನ್ನೂ ಓದಿ- ಧನಕಾರಕ ಶುಕ್ರ, ಕರ್ಮಫಲದಾತ ಶನಿಯಿಂದ ವಿಶೇಷ ದೃಷ್ಟಿ ಯೋಗ: ಇಂದಿನಿಂದ ಈ ರಾಶಿಯವರ ಬಾಳೇ ಬಂಗಾರ, ಗೋಲ್ಡನ್ ಟೈಮ್ ಆರಂಭ 

ಸಿಂಹ ರಾಶಿಯವರ ಭವಿಷ್ಯ (Leo Horoscope):  
ಇಂದು ದೀರ್ಘ ಸಮಯದಿಂದ ಸ್ಥಗಿತಗೊಂಡಿದ್ದ ಕೆಲಸಗಳು ವೇಗವನ್ನು ಪಡೆಯಲಿವೆ. ವೈಯಕ್ತಿಕ ಜೀವನದಲ್ಲಿ ಸಂತೋಷ ಹೆಚ್ಚಾಗಲಿದೆ. ಪ್ರೀತಿ ವಿಚಾರಗಳಲ್ಲಿ ಸಂಗಾತಿಯಿಂದ ಶುಭ ಸುದ್ದಿಯನ್ನು ಕೇಳುವಿರಿ. ವ್ಯವಹಾರದಲ್ಲಿ ಭರ್ಜರಿ ಲಾಭವಾಗಲಿದೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಹಣಕಾಸಿನ ವಿಷಯಗಳಲ್ಲಿ ಸಕ್ರಿಯರಾಗಿರುವ ದಿನ. ಆದಾಗ್ಯೂ, ನೀತಿ, ನಿಯಮಗಳನ್ನು ಪಾಲಿಸುವುದನ್ನು ಖಚಿತಪಡಿಸಿಕೊಳ್ಳಿ. ವೃತ್ತಿ ಸಂಬಂಧಿತ ವಿಷಯಗಳಲ್ಲಿ ಸ್ಪಷ್ಟತೆ ಇರಲಿದೆ. ಸ್ಮಾರ್ಟ್ ಆಗಿ ಕೆಲಸ ಮಾಡುವುದನ್ನು ರೂಢಿಸಿಕೊಳ್ಳಿ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ಭಾವನಾತ್ಮಕವಾಗಿ ಉತ್ತಮವಾಗಿ ಕಾರ್ಯನಿರ್ವಹಿಸುವ ನೀವು ಇಂದು ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವಿರಿ. ನಿಮಗೆ ದೊರೆಯುವ ಉತ್ತಮ ಸಮಯವನ್ನು ಸದುಪಯೋಗಪಡಿಸಿಕೊಳ್ಳುವಿರಿ. ವ್ಯವಹಾರದಲ್ಲಿ ಪ್ರಗತಿ ಕಂಡು ಬರಲಿದೆ. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ಅಹಂಕಾರ ಅಥವಾ ಭಾವನಾತ್ಮಕವಾಗಿ ಹಠಾತ್ ಪ್ರವೃತ್ತಿಯನ್ನು ತಪ್ಪಿಸಿ. ಕೌಟುಂಬಿಕ ವಿಚಾರಗಳನ್ನು ಸುಲಭವಾಗಿ ನಿಭಾಯಿಸುವಿರಿ. ಆಸ್ತಿ ಮತ್ತು ವಾಹನಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಶುಭ ಫಲಗಳು ನಿಮಗಾಗಿ ಕಾದಿವೆ. ಅಗತ್ಯಕ್ಕೆ ಅನುಗುಣವಾಗಿ ಖರ್ಚು ಮಾಡಿ, ಹೂಡಿಕೆಯಿಂದ ಲಾಭ. 

ಇದನ್ನೂ ಓದಿ- 150 ವರ್ಷದ ಬಳಿಕ ಶನಿಯಿಂದ ಈ 5 ರಾಶಿಯವರಿಗೆ ರಾಜಯೋಗ.. ಸೋಲೇ ಬರದಂತೆ ಪ್ರತಿ ಹೆಜ್ಜೆಯಲ್ಲೂ ಜಯ, ಸಿರಿ ಸಂಪತ್ತು ಉಕ್ಕಿ ಹರಿಯವುದು.. ಅದೃಷ್ಟ ಅಂದ್ರೆ ಇದಪ್ಪ !

ಧನು ರಾಶಿಯವರ ಭವಿಷ್ಯ (Sagittarius Horoscope):  
ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿರಿ. ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಹೆಚ್ಚಾಗಲಿದೆ. ನಿಮ್ಮ ಸಂಪರ್ಕ ವಲಯಗಳು ವಿಸ್ತರಿಸಲಿವೆ. ವೈಯಕ್ತಿಕ ಕಾರ್ಯಕ್ಷಮತೆಯನ್ನು ಸುಧಾರಿಸುವುದು ಅಗತ್ಯವಾಗಿದೆ. ವ್ಯವಹಾರ ಸ್ಥಿರವಾಗಿರುತ್ತದೆ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಕುಟುಂಬದೊಂದಿಗೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ವ್ಯವಹಾರದಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ಪಡೆಯುವಿರಿ. ಬ್ಯಾಂಕಿಂಗ್ ವಿಷಯಗಳಲ್ಲಿ ಪ್ರಮುಖವಾದ ನಿರ್ಧಾರಗಳನ್ನು ಕೈಗೊಳ್ಳಬೇಕಾಗಬಹುದು. ಆದಾಗ್ಯೂ, ಇದು ನಿಮ್ಮ ಆರ್ಥಿಕ ಬಲವನ್ನು ಹೆಚ್ಚಿಸಲಿದೆ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ನಿಮ್ಮ ಪ್ರೀತಿಪಾತ್ರರ ಮಾತಿಗೆ ಕಿವಿಗೋಡಿ. ಭಾವನಾತ್ಮಾ ವಿಷಯಗಳ ಮೇಳ ಗಮನ ಕೇಂದ್ರೀಕರಿಸಿ. ಕೆಲವು ಫಲಪ್ರದವಾದ ಅವಕಾಶಗಳು ಸಿಕ್ಕಾಗ ಧೈರ್ಯ ಮತ್ತು ಶೌರ್ಯದಿಂದ ಮುಂದುವರೆಯುವುದು ಒಳ್ಳೆಯದು. ಸಂಬಂಧಗಳಲ್ಲಿ ಮಧುರತೆ ಇರಲಿದೆ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ವೃತ್ತಿ ವ್ಯವಹಾರಗಳು ಎಂದಿನಂತೆ ಮುಂದುವರೆಯಲಿದೆ. ಹಣಕಾಸು ಮತ್ತು ವಾಣಿಜ್ಯ ವಿಷಯಗಳಲ್ಲಿ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಯಾವುದೇ ಆಮಿಷಗಳಿಗೆ ಬಲಿಯಾಗುವುದನ್ನು ತಪ್ಪಿಸಿ. ಪ್ರಮುಖ ಹಣಕಾಸು ವ್ಯವಹಾರಗಳಲ್ಲಿ ಬುದ್ದಿವಂತಿಕೆಯಿಂದ ಮುಂದುವರೆಯಿರಿ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News