ದಿನಭವಿಷ್ಯ 29-05-2025: ಗುರುವಾರದಂದು ಶೂಲ ಯೋಗ, ಈ ರಾಶಿಯವರು ಜಾಗರೂಕರಾಗಿರಿ

Today Horoscope 29th May 2025: ಗುರುವಾರ ಆರ್ದ್ರಾ ನಕ್ಷತ್ರದಲ್ಲಿ ಶೂಲ ಯೋಗ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ. 

Written by - Yashaswini V | Last Updated : May 29, 2025, 08:34 AM IST
  • ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ಈ ದಿನ ತೃತೀಯ ತಿಥಿ
  • ಗುರುವಾರದಂದು ಆರ್ದ್ರಾ ನಕ್ಷತ್ರ ಶೂಲ ಯೋಗ ಇರಲಿದೆ
  • ಮೇಷದಿಂದ ಮೀನ ರಾಶಿಯವರೆಗೆ ಇಂದಿನ ಭವಿಷ್ಯ ಹೇಗಿದೆ ತಿಳಿಯಿರಿ.
ದಿನಭವಿಷ್ಯ 29-05-2025: ಗುರುವಾರದಂದು ಶೂಲ ಯೋಗ, ಈ ರಾಶಿಯವರು ಜಾಗರೂಕರಾಗಿರಿ

Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಸೌರ ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ತೃತೀಯಾ ತಿಥಿ, ಗುರುವಾರದ ಈ ದಿನ ಆರ್ದ್ರಾ ನಕ್ಷತ್ರ, ಶೂಲ ಯೋಗ, ತೈತಿಲ ಕರಣ. ಇಂದು ಯಾವ ರಾಶಿಯವರಿಗೆ ಹೇಗಿದೆ ತಿಳಿಯಿರಿ. 

Add Zee News as a Preferred Source

ಮೇಷ ರಾಶಿಯವರ ಭವಿಷ್ಯ (Aries Horoscope):  
ಇಂದು ಸಾಹಸಮಯ ಚಟುವಟಿಕೆಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವಿರಿ. ಸಾಮಾಜಿಕ ವಿಷಯಗಳಲ್ಲಿ ಸಕ್ರಿಯರಾಗಿರುವವರಿಗೆ ಶುಭ ದಿನ. ಅನುಭವ ಮತ್ತು ಸಾಮರ್ಥ್ಯದಿಂದ ಉದ್ಯೋಗದಲ್ಲಿ ಪ್ರಯೋಜನವನ್ನು ಪಡೆಯುವಿರಿ. ಪ್ರಯಾಣವು ಲಾಭದಾಯಕವಾಗಿದೆ. 

ವೃಷಭ ರಾಶಿಯವರ ಭವಿಷ್ಯ (Taurus Horoscope):  
ಕುಟುಂಬದವರ ಬೆಂಬಲದಿಂದ ಆತ್ಮ ವಿಶ್ವಾಸ ಹೆಚ್ಚಾಗಲಿದೆ. ಮನೆಗೆ ಆಗಮಿಸುವವರಿಗೆ ಗೌರವ ನೀಡಿ. ರಕ್ತ ಸಂಬಂಧಿಗಳೊಂದಿಗೆ ನಂಬಿಕೆ ಬಲಗೊಳ್ಳುತ್ತದೆ. ಕುಟುಂಬದಲ್ಲಿ ಸಂತೋಷ ಹೆಚ್ಚಾಗಲಿದೆ. ಪ್ರೀತಿಪಾತ್ರರಿಂದ ಆಕರ್ಷಕ ಕೊಡುಗೆಗಳನ್ನು ಸ್ವೀಕರಿಸುವಿರಿ. 

ಮಿಥುನ ರಾಶಿಯವರ ಭವಿಷ್ಯ (Gemini Horoscope):   
ಜೀವನದಲ್ಲಿ ಹೊಸತನವನ್ನು ತರಲು ಹವಣಿಸುತ್ತಿರುವಿರಿ. ಈ ಸಂದರ್ಭದಲ್ಲಿ ಮನಸ್ಸನ್ನು ಸಕರಾತ್ಮಕವಾಗಿ ಇರಿಸಿಕೊಳ್ಳಿ. ಸ್ಮರಣ ಶಕ್ತಿ ಬಲಗೊಳ್ಳಲಿದೆ. ಎಲ್ಲರೊಂದಿಗೆ ಉತ್ತಮ ಸಂಬಂಧವನ್ನು ಕಾಪಾಡಿಕೊಳ್ಳುತ್ತೀರಿ. 

ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope): 
ಹಣಕಾಸಿನ ವಿಷಯಗಳಲ್ಲಿ ನೀತಿ-ನಿಯಮಗಳನ್ನು ಅನುಸರಿಸಿ. ಪ್ರಮುಖ ಕೆಲಸಗಳಲ್ಲಿ ಜಾಗರೂಕರಾಗಿರಿ. ಅನಾವಶ್ಯಕ ವಾದ-ವಿವಾದಗಳಿಂದ ದೂರವಿದ್ದರೆ ಒಳಿತು. ಯಾವುದೇ ವಿಚಾರದಲ್ಲಿ ಆತುರದ ನಿರ್ಧಾರಗಳನ್ನು ಕೈಗೊಳ್ಳುವುದನ್ನು ತಪ್ಪಿಸಿ. 

ಇದನ್ನೂ ಓದಿ- ಸೂರ್ಯ ಚಂದ್ರರಿಂದ ವ್ಯತಿಪತ್ ಯೋಗ: ಈ 5 ರಾಶಿಯವರಿಗೆ ಹೊಳೆಯುತ್ತೆ ಅದೃಷ್ಟ ತುಂಬಲಿದೆ ಖಜಾನೆ

ಸಿಂಹ ರಾಶಿಯವರ ಭವಿಷ್ಯ (Leo Horoscope):  
ನಿಮಗಿಂದು ವೃತ್ತಿಪರ ಸಂಬಂಧಗಳು ಬಲಗೊಳ್ಳುತ್ತವೆ. ಉತ್ಸಾಹ ಮತ್ತು ಮನೋಸ್ಥೈರ್ಯ ಹೆಚ್ಚಾಗಲಿದೆ. ಉದ್ಯೋಗ ರಂಗದಲ್ಲಿ ಪರಿಣಾಮಕಾರಿ ಫಲಿತಾಂಶಗಳನ್ನು ಪಡೆಯುವಿರಿ. ಪ್ರಮುಖ ಕೆಲಸಗಳಲ್ಲಿ ಸಹೋದ್ಯೋಗಿಗಳು ಮತ್ತು ಸ್ನೇಹಿತರ ಬೆಂಬಲ ದೊರೆಯಲಿದೆ. 

ಕನ್ಯಾ ರಾಶಿಯವರ ಭವಿಷ್ಯ (Virgo Horoscope): 
ಇಂದು ಸಹೋದ್ಯೋಗಿಗಳೊಂದಿಗೆ ಸಾಮರಸ್ಯ ಹೆಚ್ಚಾಗಳಿದ್ದು ವ್ಯವಹಾರದಲ್ಲಿ ಏನನ್ನಾದರೂ ಸಾಧಿಸುವಿರಿ. ವಿವಿಧ ಮೂಲಗಳಿಂದ ಲಾಭಗಳು ಹೆಚ್ಚಾಗಲಿವೆ. ಉದ್ಯೋಗದಲ್ಲಿ ಮೇಲಾಧಿಕಾರಿಗಳು ಮತ್ತು ಜವಾಬ್ದಾರಿಯುತ ವ್ಯಕ್ತಿಗಳಿಂದ ಬೆಂಬಲ ಮುಂದುವರೆಯಲಿದೆ. 

ತುಲಾ ರಾಶಿಯವರ ಭವಿಷ್ಯ (Libra Horoscope): 
ನಂಬಿಕೆಯಿಂದ ಎಲ್ಲಾ ವಿಷಯಗಳನ್ನು ಯಶಸ್ವಿಯಾಗಿ ನಿರ್ವಹಿಸುವಿರಿ. ವೂರ್ತ್ತಿಪರ ಭಾಗವು ಬಲವಾಗಿರಲಿದೆ. ಅದೃಷ್ಟದ ಬಲ ಇರಲಿದ್ದು ವ್ಯವಹಾರದಲ್ಲಿ ಆವೇಗವನ್ನು ಕಾಯ್ದುಕೊಳ್ಳುತ್ತೀರಿ. ಯಾವುದೇ ಹಿಂಜರಿಕೆಯಿಲ್ಲದೆ ಮುಂದುವರೆಯುವುದರಿಂದ ಕೆಲಸದಲ್ಲಿ ಯಶಸ್ಸು. 

ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):  
ವೃತ್ತಿಪರ ವಿಷಯಗಳಲ್ಲಿ ನಿಮ್ಮ ಪ್ರಭಾವ ಹೆಚ್ಚಾಗಲಿದೆ. ಮಾತು ಮತ್ತು ನಾದವಳಿಕೆಯಲ್ಲಿ ಮಾಧುರ್ಯವನ್ನು ಸೇರಿಸಿ. ಜೀವನದಲ್ಲಿ ಪ್ರಗತಿಯ ಹಾದಿಗಳು ತೆರೆಯಲಿವೆ. ಕೌಟುಂಬಿಕ ವಿಷಯಗಳಲ್ಲಿ ಗಂಭೀರತೆಯನ್ನು ಕಾಪಾಡಿಕೊಳ್ಳಿ. ಆಸ್ತಿ ವ್ಯವಹಾರಗಳಲ್ಲಿ ಪ್ರಗತಿ ಕಂಡು ಬರಲಿದೆ. 

ಇದನ್ನೂ ಓದಿ- June Lucky Zodiac Signs: ಜೂನ್‌ ಆರಂಭವಾಗುತ್ತಿದ್ದಂತೆ ಬದಲಾಗಲಿದೆ ʻಈʼ ರಾಶಿ ಚಹ್ನೆಗಳ ಭವಿಷ್ಯ! ಕೈ ಸೇರಲಿದೆ ಅದೃಷ್ಟ.. ಜೀವನದಲ್ಲಿ ಹಠಾತ್ ಆರ್ಥಿಕ ಲಾಭ  

ಧನು ರಾಶಿಯವರ ಭವಿಷ್ಯ (Sagittarius Horoscope):  
ಪ್ರಮುಖ ಕ್ಷೇತ್ರಗಳಲ್ಲಿ ಪ್ರಭಾವಶಾಲಿಯಾಗಿ ಉಳಿಯುತ್ತೀರಿ. ಉದ್ಯಮ ಮತ್ತು ವ್ಯವಹಾರದಲ್ಲಿ ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತೀರಿ. ಅಗತ್ಯ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ. ನಿಮ್ಮಲ್ಲಿ ನಾಯಕತ್ವದ ಸಾಮರ್ಥ್ಯ ಸುಧಾರಿಸುತ್ತದೆ. 

ಮಕರ ರಾಶಿಯವರ ಭವಿಷ್ಯ (Capricorn Horoscope):  
ಕೆಲಸಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಸಂಘಟನೆಗೆ ಮಹತ್ವ ನೀಡಿ. ಸರಾಗತೆ ಮತ್ತು ಸರಳತೆಯಿಂದ ಮುಂದುವರೆಯಿರಿ. ಕಠಿಣ ಪರಿಶ್ರಮ ಮತ್ತು ಸಮರ್ಪಣೆಯೊಂದಿಗೆ ಕೆಲಸ ಮಾಡುವುದು ಲಾಭದಾಯಕವಾಗಿದೆ.  ದುರಾಸೆ ಮತ್ತು ಪ್ರಲೋಭನೆಗಳನ್ನು ತಪ್ಪಿಸಿ. 

ಕುಂಭ ರಾಶಿಯವರ ಭವಿಷ್ಯ (Aquarius Horoscope):  
ಪ್ರಮುಖ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ. ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡುವಿರಿ. ಹಿರಿಯರ ಸಲಹೆಯಂತೆ ಎಚ್ಚರಿಕೆಯಿಂದ ಮುಂದುವರೆಯಿರಿ. ಹೊಸ ಕೆಲಸಗಳಲ್ಲಿ ಹಿಂಜರಿಕೆಯಿಲ್ಲದೆ ಮುಂದುವರೆಯಿರಿ. 

ಮೀನ ರಾಶಿಯವರ ಭವಿಷ್ಯ (Pisces Horoscope): 
ಇಂದು ನಮ್ರತೆ ಮತ್ತು ಬುದ್ಧಿವಂತಿಕೆಯಿಂದ ವರ್ತಿಸುವುದರಿಂದ ಹೆಚ್ಚು ಪ್ರಯೋಜನವನ್ನು ಪಡೆಯುವಿರಿ. ವೈಯಕ್ತಿಕ ವಿಷಯಗಳಿಗೆ ಹೆಚ್ಚಿನ ಮಾನ್ಯತೆ ನೀಡಿ. ಉದ್ಯೋಗ ಸ್ಥಳದಲ್ಲಿ ಉತ್ಸಾಹಭರಿತ ವಾತಾವರಣ ಇರಲಿದೆ. 

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News