)
Guruvara Dina Bhavishya In Kannada: ಶ್ರೀ ಶಾಲಿವಾಹನ ಶಕೆ 1947, ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಸೌರ ಹೇಮಂತ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ, ಅಷ್ಟಮಿ ತಿಥಿ, ಗುರುವಾರದ ಈ ದಿನ ಶ್ರವಣ ನಕ್ಷತ್ರ, ಶೂಲ ಯೋಗ, ಬಾಲವ ಕರಣ ಇರಲಿದೆ. ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯೋಣ.
ಮೇಷ ರಾಶಿಯವರ ಭವಿಷ್ಯ (Aries Horoscope):
ಇಂದು ನೀವು ನಿಮ್ಮ ಮಕ್ಕಳಿಂದ ಶುಭವಾರ್ತೆ ನಿರೀಕ್ಷಿಸಬಹುದು. ಪ್ರಮುಖ ಕೆಲಸಗಳಲ್ಲಿ ಆತುರತೆ ತಪ್ಪಿಸಿ, ಸಣ್ಣ ನಿರ್ಲಕ್ಷ್ಯವೂ ಕೂಡ ಭಾರೀ ನಷ್ಟವನ್ನು ಉಂಟು ಮಾಡಬಹುದು. ವ್ಯಾಪಾರದಲ್ಲಿ ಹೊಸ ಆಲೋಚನೆಗಳು ನಿಮ್ಮನ್ನು ಕಾಡಬಹುದು.
ವೃಷಭ ರಾಶಿಯವರ ಭವಿಷ್ಯ (Taurus Horoscope):
ಇಂದು ನಿಮ್ಮ ಸುತ್ತಲಿನ ವಾತಾವರಣ ಸಕಾರಾತ್ಮಕವಾಗಿ ಕೂಡಿರಲಿದೆ. ಈ ಹಿಂದೆ ಮಾಡಿರುವ ಹೂಡಿಕೆಗಳು ಅಧಿಕ ಲಾಭವನ್ನು ತರಲಿವೆ. ಇಂದು ನಿಮ್ಮ ಆತ್ಮೀಯರೊಬ್ಬರು ನಿಮ್ಮಿಂದ ಸಹಾಯವನ್ನು ಆಶಿಸಬಹುದು. ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಸಿಗಲಿದೆ. ಸಂಗಾತಿಯೊಂದಿಗೆ ಸುಮಧುರ ಕ್ಷಣಗಳನ್ನು ಕಳೆಯುವಿರಿ.
ಮಿಥುನ ರಾಶಿಯವರ ಭವಿಷ್ಯ (Gemini Horoscope):
ನಿಮ್ಮ ಪ್ರಮುಖ ಕೆಲಸಗಳಿಗೆ ಕೌಟುಂಬಿಕ ಬೆಂಬಲ ದೊರೆಯಲಿದೆ. ನಿಮ್ಮ ಭವಿಷ್ಯದ ಯೋಜನೆಗಳಿಗೆ ತಯಾರಿ ನಡೆಸಲು ಸೂಕ್ತ ಸಮಯವಾಗಿದೆ. ಉದ್ಯೋಗದಲ್ಲಿ ಹೊಸ ಅವಕಾಶಗಳು ನಿಮ್ಮನ್ನು ಉನ್ನತೀಕರಿಸಿದೆ. ಬರಹಗಾರರಿಗಿಂದು ಉತ್ತೇಜನ ದೊರೆಯಲಿದೆ.
ಕರ್ಕಾಟಕ ರಾಶಿಯವರ ಭವಿಷ್ಯ (Cancer Horoscope):
ಇಂದು ಭವಿಷ್ಯಕ್ಕಾಗಿ ಉಳಿತಾಯಕ್ಕೆ ಯೋಜಿಸಬಹುದು. ಮಕ್ಕಳೊಂದಿಗೆ ಆಹ್ಲಾದಕರ ಕ್ಷಣಗಳನ್ನು ಆನಂದಿಸುವಿರಿ. ಕಲಿಕೆಗೆ ಉತ್ತೇಜನ ದೊರೆಯಲಿದೆ. ವೈವಾಹಿಕ ಬದುಕಿನಲ್ಲಿ ಸಾಮರಸ್ಯ ಮೂಡಲಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಯ ಸಾಧಿಸುವರು.
ಸಿಂಹ ರಾಶಿಯವರ ಭವಿಷ್ಯ (Leo Horoscope):
ಈ ದಿನ ಅದೃಷ್ಟ ನಿಮ್ಮ ಪಾಲಿಗಿದೆ. ಹಳೆಯ ಸ್ನೇಹಿತರೊಂದಿಗೆ ಸುಂದರ ಕ್ಷಣಗಳನ್ನು ಅನುಭವಿಸುವಿರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಸರಿದು ಸಂಬಂಧಗಳು ಬಲಗೊಳ್ಳಲಿವೆ. ಪ್ರಮುಖ ಕೆಲಸಗಳಲ್ಲಿ ಪೋಷಕರ ಮಾರ್ಗದರ್ಶನದೊಂದಿಗೆ ಮುಂದುವರೆಯಿರಿ.
ಕನ್ಯಾ ರಾಶಿಯವರ ಭವಿಷ್ಯ (Virgo Horoscope):
ಈ ರಾಶಿಯ ವಿದ್ಯಾರ್ಥಿಗಳಿಗೆ ಇಂದು ಯಶಸ್ಸು ದೊರೆಯಲಿದೆ. ಉದ್ಯಮಿಗಳು ದೊಡ್ಡ ಆರ್ಡರ್ ನಿರೀಕ್ಷಿಸಬಹುದು. ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯುವ ಸಮಯ. ನವವಿವಾಹಿತರು ಇಂದು ಸಂಜೆ ವಿಹಾರಕ್ಕೆ ಯೋಜಿಸಬಹುದು.
ತುಲಾ ರಾಶಿಯವರ ಭವಿಷ್ಯ (Libra Horoscope):
ಸಮಾಜದಲ್ಲಿ ಇಂದು ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. ನಿಮ್ಮ ನೆಟ್ವರ್ಕ್ ವಿಸ್ತರಿಸಲು ಅನುಕೂಲಕರ ಅವಧಿ ಇದಾಗಿದೆ. ಹೋದಲ್ಲೆಲ್ಲಾ ಯಶಸ್ಸು ಕೈ ಹಿಡಿಯಲಿದೆ. ಇಂದು ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಮನ್ನಣೆ ದೊರೆಯಲಿದೆ.
ವೃಶ್ಚಿಕ ರಾಶಿಯವರ ಭವಿಷ್ಯ (Scorpio Horoscope):
ಇಂದು ನೀವು ಆಹ್ಲಾದಕರ ಸಮಯವನ್ನು ಆನಂದಿಸುವಿರಿ. ಮನೆಯಲ್ಲಿ ಧನಾತ್ಮಕ ಶಕ್ತಿ ಇರಲಿದೆ. ದಂಪತಿಗಳು ಪ್ರವಾಸಕ್ಕೆ ತೆರಳಲು ಯೋಜಿಸಬಹುದು. ವಿದ್ಯಾರ್ಥಿಗಳು ಶುಭ ಸುದ್ದಿ ನಿರೀಕ್ಷಿಸಬಹುದು. ಕೆಲಸದಲ್ಲಿ ಬಡ್ತಿ, ವೇತನ ಹೆಚ್ಚಳ ಸಾಧ್ಯತೆ ಇದೆ.
ಧನು ರಾಶಿಯವರ ಭವಿಷ್ಯ (Sagittarius Horoscope):
ಬಹಳ ದಿನಗಳಿಂದ ಬಾಕಿ ಉಳಿದಿರುವ ಕೆಲಸಗಳು ಇಂದು ಪೂರ್ಣಗೊಳ್ಳಲಿವೆ. ನಿರುದ್ಯೋಗಿಗಳಿಗೆ ಕನಸಿನ ಉದ್ಯೋಗ ದೊರೆಯುವ ಅವಕಾಶಗಳಿವೆ. ಕುಟುಂಬದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಣಕಾಸಿನ ವಿಚಾರದಲ್ಲಿ ಇಂದು ಧನಾತ್ಮಕ ದಿನವನ್ನು ಕಾಣುವಿರಿ.
ಮಕರ ರಾಶಿಯವರ ಭವಿಷ್ಯ (Capricorn Horoscope):
ಇಂದು ಕೆಲವು ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಲು ನಿಮಗೆ ಹೆಚ್ಚಿನ ಸಮಯ ಬೇಕಾಗಬಹುದು. ಕುಟುಂಬದಲ್ಲಿ ಬಾಂಧವ್ಯ ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಪ್ರತಿ ಕೆಲಸಕ್ಕೂ ಸಾಥ್ ನೀಡಲಿದ್ದಾರೆ. ಕುಟುಂಬದಲ್ಲಿ ಬಾಂಧವ್ಯ ಬಲಗೊಳ್ಳುತ್ತದೆ. ಹಣದ ಮೂಲಗಳು ಹೆಚ್ಚಾಗಲಿದೆ.
ಕುಂಭ ರಾಶಿಯವರ ಭವಿಷ್ಯ (Aquarius Horoscope):
ಈ ದಿನ ನೀವು ನಿಮ್ಮ ಕೋಪವನ್ನು ನಿಯಂತ್ರಿಸಿದರೆ ಒಳಿತು. ಹಳೆಯ ಸ್ನೇಹಿತರನ್ನು ಭೇಟಿಯಾಗುವಿರಿ. ಮನೆಯಲ್ಲಿ ಆಹ್ಲಾದಕರ ವಾತಾವರಣವು ನಿಮ್ಮ ಸಂತೋಷವನ್ನು ಹೆಚ್ಚಿಸಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಅಗತ್ಯ ನೆರವು ದೊರೆಯಲಿದೆ.
ಮೀನ ರಾಶಿಯವರ ಭವಿಷ್ಯ (Pisces Horoscope):
ಕೆಲಸದಲ್ಲಿ ಇಂದು ಹೊಸತನ್ನು ಕಲಿಯಲು ಪ್ರಯತ್ನಿಸಿ. ಇದು ನಿಮಗೆ ಭವಿಷ್ಯದಲ್ಲಿ ಉತ್ತಮ ಫಲಿತಾಂಶವನ್ನು ನೀಡಲಿದೆ. ವ್ಯಾಪಾರದಲ್ಲಿ ನಿರೀಕ್ಷಿತ ಫಲಗಳನ್ನು ಪಡೆಯುವಿರಿ. ಕುಟುಂಬದಲ್ಲಿ ಅನಾವಶ್ಯಕ ವಾದ-ವಿವಾದಗಳನ್ನು ತಪ್ಪಿಸಿ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.